ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ. ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನೆರೆಗಲ್ಲನಿಂದ ತವರು ಮನೆಯಾಗಿರುವ ಶಿರಗುಪ್ಪಿಗೆ ಬಂದಿದ್ದ ಬಸವ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್ ತನಿಖೆಯ ನಂತರವೇ ಆತ್ಮಹತ್ಯೆಗೆ …
Read More »ವಿಧಾನಸೌಧದ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಯೋಗ ಕಾರ್ಯಕ್ರಮ
ಬೆಂಗಳೂರು : 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಆಯುಷ್ಯ ಇಲಾಖೆಯಿಂದ ಇಂದು ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ “ಯೋಗ-ವಸುದೈವ ಕುಟುಂಬಕ್ಕಾಗಿ” ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾತನಾಡಿದ ರಾಜ್ಯಪಾಲರು ಯೋಗದ ಮಹತ್ವವನ್ನ ತಿಳಿಸಿದರು. ” ನಮ್ಮ ಸಂಸ್ಕೃತಿಯಲ್ಲಿ ಯೋಗಕ್ಕೆ ತನ್ನದೇ ಆದ ಹೆಸರಿದೆ. ಯೋಗದ ಮಹತ್ವ ಕುರಿತು ನಮ್ಮ ಹಳೆ ಗ್ರಂಥಗಳಲ್ಲಿ ಉಲ್ಲೇಖವಿದೆ. ಯೋಗಭ್ಯಾಸದಿಂದ ಭೌತಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆ ಆಗುತ್ತದೆ. …
Read More »ಪ್ರಧಾನಿ ಮೋದಿ ಇಂದು ವಿಶ್ವಸಂಸ್ಥೆ ಕಚೇರಿಯಲ್ಲಿ ವಿಶ್ವಯೋಗ ದಿನವನ್ನು ಆಚರಣೆ
ನವದೆಹಲಿ: ಪ್ರಧಾನಿ ಮೋದಿ ಇಂದು ವಿಶ್ವಸಂಸ್ಥೆ ಕಚೇರಿಯಲ್ಲಿ ವಿಶ್ವಯೋಗ ದಿನವನ್ನು ಆಚರಣೆ ಮಾಡಲಿದ್ದಾರೆ. ಪ್ರಾಚೀನ ಭಾರತೀಯ ಆಚರಣೆಯ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಯುಎನ್ ಕೇಂದ್ರ ಕಚೇರಿ ಸೇರಿದಂತೆ ವಿಶ್ವಾದ್ಯಂತ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಗೃಹ ಸಚಿವ ರಾಜನಾಥ್ ಸಿಂಗ್ ಅವರು ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಸ್ವದೇಶಿ ನಿರ್ಮಿತ ವಿಮಾನವಾಹಕ ನೌಕೆ INS ವಿಕ್ರಾಂತ್‌ನಲ್ಲಿ ಯೋಗ ಪ್ರದರ್ಶನ ನೀಡಲಿದ್ದಾರೆ. ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್, ನೌಕಾ ಕಲ್ಯಾಣ ಮತ್ತು …
Read More »ಭಾರಿ ಮಳೆ: ರಸ್ತೆಗಳು ಜಲಾವೃತ
ದಾವಣಗೆರೆ : ಕಳೆದ ಹಲವು ದಿನಗಳಿಂದ ಮುನಿಸಿಕೊಂಡಿದ್ದ ಮಳೆರಾಯ ಕೊನೆಗೂ ಕೃಪೆ ತೋರಿದ್ದಾನೆ. ನಿನ್ನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಾದಂತ್ಯ ಧಾರಾಕಾರ ಮಳೆ ಸುರಿದಿದ್ದು, ಇಡೀ ಪಟ್ಟಣ ಅಸ್ತವ್ಯಸ್ತವಾಗಿತ್ತು. ಚನ್ನಗಿರಿ ಪಟ್ಟಣದಲ್ಲಿ ಸತತ ಒಂದು ಗಂಟೆಗಳ ಕಾಲ ಸುರಿದ ಮಳೆಯಿಂದ ಕೆಲ ರಸ್ತೆಗಳು ದ್ವೀಪದಂತಾಗಿದ್ದವು. ಮಳೆ ಅವಾಂತರ : ನಿನ್ನೆ ಸುರಿದ ಮಳೆ ಚನ್ನಗಿರಿಯಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಉದ್ಯೋಗಿಗಳು, ಶಾಲಾ ಕಾಲೇಜಿನ ಮಕ್ಕಳು ಮನೆ ಸೇರಲು ಪರದಾಡಿದರು. ರಸ್ತೆಗಳ ಮೇಲೆ ಭಾರಿ …
Read More »ಮುಂದಿನ ತಿಂಗಳಿನಿಂದ ವಿದ್ಯುತ್ ಬಿಲ್ ಬರಲ್ಲ, ಅರ್ಜಿ ಸಲ್ಲಿಕೆ ಮಾತ್ರ ಕಡ್ಡಾಯ: ಡಿಕೆಶಿ
ಬೆಂಗಳೂರು: ರಾಜ್ಯ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳ ಪೈಕಿ ಒಂದಾದ ‘ಗೃಹ ಜ್ಯೋತಿ’ಗೆ ಅರ್ಜಿ ಸಲ್ಲಿಸಲು ನಾಗರಿಕರು ಧಾವಂತಪಡಬೇಕಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೋಮವಾರ ಸಲಹೆ ನೀಡಿದ್ದಾರೆ. ಗೃಹಬಳಕೆ ಗ್ರಾಹಕರಿಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್ ಪೂರೈಕೆಗೆ ಇಂಧನ ಇಲಾಖೆ ಆದೇಶ ಹೊರಡಿಸಿದೆ. ನಿಗದಿತ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಭಾನುವಾರದಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಹಲವು ಜಿಲ್ಲೆಗಳಲ್ಲಿ ಸರ್ವರ್ ಸಮಸ್ಯೆಯಿಂದ ಅರ್ಜಿ ಸಲ್ಲಿಕೆಗೆ ತೊಡಕಾಗಿತ್ತು. …
Read More »ಉಚಿತ ಪ್ರಯಾಣಕ್ಕೆ ಹೊಸ ರೂಲ್ಸ್; ಸಾರಿಗೆ ಸಚಿವರು ಕೊಟ್ಟ ಶಾಕ್ ಏನು?
ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆ ರಾಜ್ಯದಲ್ಲಿ ಕೆಲವು ಗೊಂದಲಗಳು ಉಂಟಾಗಿದ್ದವು. ತಳ್ಳಾಟ, ನೂಕಾಟ ಸೇರದಂತೆ ಜಡೆ ಜಗಳ ಸಹ ನಡೆದಿದೆ. ಕೆಲವು ಭಾಗಗಳಲ್ಲಿ ತಳ್ಳಾಟ, ನೂಕಾಟದಿಂದ ಬಸ್ ಬಾಗಿಲು, ಕಿಟಕಿಯ ಸರಪಳಿ ಕಿತ್ತುಕೊಂಡು ಬಂದಿದೆ. ಈ ಎಲ್ಲಾ ಬೆಳವಣಿಗೆಯನ್ನು ಗಮನಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉಚಿತ ಪ್ರಯಾಣಕ್ಕೆ ಕೆಲವು ಮಾರ್ಗಸೂಚಿ ಪ್ರಕಟಿಸುವ ಸುಳಿವು ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಈ ಉಚಿತ …
Read More »ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 ಐಎಎಸ್ ಅಧಿಕಾರಿ’ಗಳ ವರ್ಗಾವಣೆ |
ಬೆಂಗಳೂರು : ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಐಎಎಸ್ ಅಧಿಕಾರಿ ಜಾವೇದ್ ಅಖ್ತರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೆಡಿಕಲ್ …
Read More »30ರ ವ್ಯಕ್ತಿಗೆ 13 ತಿಂಗಳ ಮೃತ ಮಗುವಿನ ಮೂತ್ರಪಿಂಡ ಕಸಿ: ಫೋರ್ಟಿಸ್ ಆಸ್ಪತ್ರೆ ವೈದ್ಯರಿಂದ ವಿಶ್ವದಲ್ಲೇ ಅಪರೂಪದ ಚಿಕಿತ್ಸೆ!
ಬೆಂಗಳೂರು: ಕೇವಲ 13 ತಿಂಗಳ ಮಗುವಿನ ಎರಡೂ ಮೂತ್ರಪಿಂಡವನ್ನು 30 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ “ರೋಬೋಟಿಕ್ ಎನ್- ಬ್ಲಾಕ್” ವಿಧಾನದ ಮೂಲಕ ಕಸಿ ಮಾಡಲಾಗಿದ್ದು, ಈ ಪ್ರಕರಣ ವಿಶ್ವದಲ್ಲಿಯೇ ಅತೀ ಅಪರೂಪದ್ದಾಗಿದೆ. ಫೋರ್ಟಿಸ್ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಹಿರಿಯ ನಿರ್ದೇಶಕ ಮೋಹನ್ ಕೇಶವಮೂರ್ತಿ, ಡಾ. ಶ್ರೀಹರ್ಷ ಹರಿನಾಥ ಅವರ ತಂಡವು ಅಪರೂಪದ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಡಾ. ಕೇಶವಮೂರ್ತಿ, 30 ವರ್ಷದ …
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ ಹೊಸ ಬಜೆಟ್ ಮಂಡನೆಗೆ ಸಿದ್ಧತೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ ಹೊಸ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ. 2023-24 ಸಾಲಿನ ಹೊಸ ಬಜೆಟ್ಗೆ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಐದು ಗ್ಯಾರಂಟಿಗಳನ್ನು ಜಾರಿ ಮಾಡಿರುವ ಸಿದ್ದರಾಮಯ್ಯ ಈ ಬಾರಿ ಬಜೆಟ್ನಲ್ಲಿ ಹೆಚ್ಚಿನ ಗ್ಯಾರಂಟಿ ಆದಾಯ ಸಂಗ್ರಹಿಸುವತ್ತ ಚಿತ್ತ ನೆಟ್ಟಿದ್ದಾರೆ. ಅಷ್ಟಕ್ಕೂ ಕಳೆದ ಎರಡು ತಿಂಗಳಲ್ಲಿ ರಾಜ್ಯ ಬೊಕ್ಕಸ ಸೇರಿರುವ ಸ್ವಂತ ತೆರಿಗೆ ಏನಿದೆ ಎಂಬ ವರದಿ ಇಲ್ಲಿದೆ. ಬಿಜೆಪಿಯನ್ನು ಸೋಲಿಸಿ ಭರ್ಜರಿ ಜಯದೊಂದಿಗೆ ಕಾಂಗ್ರೆಸ್ ಸರ್ಕಾರ …
Read More »ನೇಣಿಗೆ ಶರಣಾದ ಸವಿತಾ ನಾಯ್ಕರ್
ನವನಗರದಲ್ಲಿ ಇರುವ ಪಂಚಾಕ್ಷರಿ ನಗರದ ನಿವಾಸಿ ಆದ ಸವಿತಾ ನಾಯ್ಕರ್ ಅನ್ನೋ ಗೃಹಿಣಿ ನೇಣಿಗೆ ಶರಣಾದ ಘಟನೆ ನಡೆದಿದೆ. ಮಧ್ಯಾನ 2.30 ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಘಟನೆಗೆ ಕೌಟುಂಬಿಕ ಕಲಹ ಎಂದು ತಿಳಿದುಬಂದಿದೆ. ಸಾವಿಗೀಡಾದ ಮಹಿಳೆಯ ಗಂಡ ಕೆ ಎಸ್ ಆರ್ ಪಿ ಪೊಲೀಸ ಸಿಬ್ಬಂದಿಯು ದಿನನಿತ್ಯ ಕುಡಿದು ಬಂದು ಹೆಂಡತಿಯ ಜೊತೆ ಜಗಳವಾಡುತ್ತಿದ್ದ ಎಂದು ಸವಿತಾಳ ತಾಯಿ …
Read More »