ವಿಜಯಪುರ: ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಬಸ್ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದ ಹಿನ್ನಲೆಯಲ್ಲಿ ಮಹಿಳೆಯರು ಕುಟುಂಬ ಸಮೇತ ಪ್ರವಾಸಿ ತಾಣಗಳತ್ತ ದೌಡಾಯಿಸುತ್ತಿದ್ದಾರೆ. ವಿಜಯಪುರದ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆಗೆ ಭಾನುವಾರ ಮಹಿಳೆಯರ ದಂಡೇ ಹರಿದು ಬಂದಿದೆ. ಇದರಿಂದ ಗೋಳಗುಮ್ಮಟ ಹಾಗೂ ಇಬ್ರಾಹಿಂ ರೋಜಾ ವೀಕ್ಷಣೆಗೆ ಟಿಕೆಟ್ಗಾಗಿ ನೂಕುನುಗ್ಗಲು ಉಂಟಾಗಿತ್ತು. ಬೆಳಗ್ಗೆ 8 ಗಂಟೆಯಿಂದ ಮಹಿಳೆಯರು ತಮ್ಮ ಮಕ್ಕಳ ಜತೆ ಆಗಮಿಸಿ ಗೋಳಗುಮ್ಮಟ ವೀಕ್ಷಣೆ ಮಾಡಲು ಮುಗಿಬಿದ್ದಿದ್ದರು. ಬೆಳಗ್ಗೆ 10 ಗಂಟೆಯಿಂದ ಸಂಜೆ …
Read More »ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರಿದರು. ಬೆಳಗಾವಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಆಹಾರ ನಿಗಮ (ಎಫ್‌ಸಿಐ)ನವರು ಮೊದಲು ಕೊಡುತ್ತೇವೆಂದು ಹೇಳಿ ಈಗ ವಿತ್‌ಡ್ರಾ ಮಾಡಿಕೊಂಡಿದ್ದಾರೆ. ರಾಜ್ಯದ ಜನರು ಯೋಚನೆ ಮಾಡಬೇಕಾಗಿಲ್ಲ. ನಾವು ಏನು ಭರವಸೆ ಕೊಟ್ಟಿದ್ದೇವೋ ಅದನ್ನು ಈಡೇರಿಸುತ್ತೇವೆ. ಜಾರ್ಖಂಡ್, ತೆಲಂಗಾಣ, ಪಂಜಾಬ್ ರಾಜ್ಯಗಳ ಜತೆ ಚರ್ಚೆ ಆಗುತ್ತಿದೆ. …
Read More »ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವಂತೆ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಮನವಿ
ರಾಯಚೂರು ಜಿಲ್ಲೆಗೆ ಏಮ್ಸ್ ಮಂಜೂರು ಮಾಡುವಂತೆ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ಆರೋಗ್ಯ ಮತ್ತ ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಮನ್ಸೂಖ್ ಮಂಡವೀಯ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಯಚೂರು ಜಿಲ್ಲೆಗೆ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಇದ್ದು ಆರ್ಥಿಕ ಭೌಗೋಳಿಕವಾಗಿ ಸೇರಿದಂತೆ ಹಿಂದುಳಿದ ಜಿಲ್ಲೆಯಾಗಿದೆ. ರಾಯಚೂರಿಗೆ ಮಂಜೂರು ಅವಶ್ಯಕತೆಗಳನ್ನು ಈಗಾಗಲೇ ಸ್ಥಳೀಯ ಜನಪ್ರತಿನಿಧಿ ಹಾಗೂ ಸಣ್ಣ ನೀರಾವರಿ ಸಚಿವ ಬೋಸರಾಜು …
Read More »ಮಾನವ ಸಂಪನ್ಮೂಲ ನಮ್ಮ ದೇಶದ ಅತಿ ದೊಡ್ಡ ಶಕ್ತಿ : ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್
ನವದೆಹಲಿ : ಮಾನವ ಸಂಪನ್ಮೂಲ ನಮ್ಮ ದೇಶದ ಅತಿದೊಡ್ಡ ಶಕ್ತಿಯಾಗಿದೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಜನರ ಸಾಮರ್ಥ್ಯದ ಮೇಲೆ ಅಪಾರ ನಂಬಿಕೆ ಇತ್ತು. ಇಂದು ದೇಶದ 1.4 ಬಿಲಿಯನ್ ನಾಗರೀಕರನ್ನು ಸಶಕ್ತಗೊಳಿಸುವುದು ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಾತ್ಮಕಗೊಳಿಸುವುದು ನಮ್ಮ ಆದ್ಯತೆ ಆಗಬೇಕು ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅಭಿಪ್ರಾಯಪಟ್ಟರು. ಇಲ್ಲಿನ ಅಸೋಸಿಯೇಟೆಡ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಆಫ್ ಇಂಡಿಯಾ (ASSOCHAM) ಆಯೋಜಿಸಿದ್ದ ನೇತಾಜಿ …
Read More »ಪ್ರತಾಪ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ : ತನ್ವೀರ್ ಸೇಠ್
ಮೈಸೂರು : ಸಂಸದ ಪ್ರತಾಪಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಲಿ. ಬಳಿಕ ಅದರ ಅನುಭವವನ್ನು ನಮಗೆ ಬಂದು ಹೇಳಲಿ ಎಂದು ಶಾಸಕ ತನ್ವೀರ್ ಸೇಠ್ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆ ಜಾರಿಯಿಂದ ಮುಸ್ಲಿಂ ಕುಟುಂಬಗಳಲ್ಲಿ ಒಡಕು ಉಂಟಾಗುತ್ತದೆ. ಮುಸ್ಲಿಮರಿಗೆ ಎರಡು ಮೂರು ಹೆಂಡತಿಯರಿರುತ್ತಾರೆ. ಆಗ ಯಾರನ್ನು ಮನೆಯ ಯಜಮಾನಿ ಎಂದು ಗುರುತಿಸುತ್ತಿರಾ ಎಂದಿದ್ದ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಪ್ರತಾಪ್ …
Read More »ಪತ್ನಿ ಹತ್ಯೆಗೆ ನಾಡ ಪಿಸ್ತೂಲು ಖರೀದಿಸಿದ್ದ ವ್ಯಕ್ತಿ
ಚಿಕ್ಕೋಡಿ : ಕಳೆದ 15 ದಿನಗಳ ಹಿಂದೆಯಷ್ಟೇ ಡಿವೋರ್ಸ್ ನೀಡಿದ್ದ ವ್ಯಕ್ತಿ ವಿಚ್ಛೇದಿತ ಹೆಂಡತಿಯನ್ನು ಕೊಲೆ ಮಾಡಲು ಮಹಾರಾಷ್ಟ್ರದಲ್ಲಿ ನಾಡ ಪಿಸ್ತೂಲು ಖರೀದಿಸಿದ್ದ. ಈ ವ್ಯಕ್ತಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಂಧಿತನನ್ನು ಚಿಕ್ಕೋಡಿ ಪಟ್ಟಣದ ನಿವಾಸಿ ಸಚಿನ್ ಬಾಬಾ ಸಾಹೇಬ್ ರಾಯಮಾನೆ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಸಚಿನ್ ಕಳೆದ 15 ದಿನಗಳ ಹಿಂದೆಯಷ್ಟೇ ತನ್ನ ಪತ್ನಿ ಹರ್ಷಿತಾಗೆ ವಿಚ್ಛೇದನ ನೀಡಿದ್ದ. ತನ್ನ ಹೆಂಡತಿಗೆ ಬೇರೊಬ್ಬರ ಜೊತೆ ಸಂಬಂಧ ಇದೆ ಎಂದು …
Read More »ಪರಿಚಯ – ಪ್ರಣಯ, ದೋಖಾ ಆರೋಪ: ಕನ್ನಡದ ಸಹ ನಟಿಯ ಬಂಧನ
ಶಿವಮೊಗ್ಗ: ಕನ್ನಡ ಚಿತ್ರರಂಗದ ಸಹ ನಟಿ ಉಷಾ ಅಲಿಯಾಸ್ ಉಷಾ ರವಿಶಂಕರ್ ಅವರನ್ನು ವಂಚನೆ ಪ್ರಕರಣದಲ್ಲಿ ಶಿವಮೊಗ್ಗದ ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ನಟಿ ಉಷಾ ಅವರು ಸುಮಾರು 6.50 ಲಕ್ಷ ರೂನಷ್ಟು ಹಣ ಪಡೆದು ವಾಪಸ್ ಮಾಡದೇ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗದ ಶರವಣನ್ ಎಂಬುವರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಖಾಸಗಿ ದೂರಿನ ಮೇರೆಗೆ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸರು ಉಷಾ ಅವರನ್ನು ಬಂಧಿಸಿದ್ದಾರೆ. ಶರವಣನ್ ಎಂಬವವರು ಧಾರಾವಾಹಿ …
Read More »140 ಕೋಟಿ ಬಾಚಿದ ‘ಆದಿಪುರುಷ್’: ಮೊದಲ ದಿನವೇ 100 ಕೋಟಿ ಗಡಿ ದಾಟಿದ ಪ್ರಭಾಸ್ರ ಸಿನಿಮಾ
ಬಾಹುಬಲಿ 2, ಸಾಹೋ ಸಿನಿಮಾ ನಂತರ ‘ಆದಿಪುರುಷ್’ ಮೊದಲ ದಿನವೇ 100 ಕೋಟಿ ರೂ. ಗಡಿ ದಾಟಿದ ಪ್ರಭಾಸ್ ಅಭಿನಯದ ಮೂರನೇ ಸಿನಿಮಾವಾಗಿದೆ. ದಕ್ಷಿಣ ಸಿನಿ ರಂಗದ ಪ್ರಭಾಸ್ ಮತ್ತು ಬಾಲಿವುಡ್ ಬಹುಬೇಡಿಕೆ ನಟಿ ಕೃತಿ ಸನೋನ್ ಅಭಿನಯದ ಪೌರಾಣಿಕ ಚಲನಚಿತ್ರ ಆದಿಪುರುಷ್ ಜೂನ್ 16ರಂದು (ನಿನ್ನೆ, ಶುಕ್ರವಾರ) ಅದ್ಧೂರಿಯಾಗಿ ತೆರೆ ಕಂಡಿದೆ. ಮಿಶ್ರ ಪ್ರತಿಕ್ರಿಯೆ ಪಡೆದಿರುವ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ. ವಿಶ್ವಾದ್ಯಂತ ಪ್ಯಾನ್ ಇಂಡಿಯಾ ಮಟ್ಟದಲ್ಲಿ …
Read More »ಅಕ್ಕಳಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ ಸಹೋದರನನ್ನು ಸುಟ್ಟು ಹಾಕಿದ ಹಂತಕರು!
ಬಾಪಟ್ಲಾ, ಆಂಧ್ರಪ್ರದೇಶ: 10ನೇ ತರಗತಿ ಓದುತ್ತಿದ್ದ ಬಾಲಕನೊಬ್ಬನ ಮೇಲೆ ಯುವಕನೊಬ್ಬ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿರುವ ಘಟನೆ ಬಾಪಟ್ಲಾ ಜಿಲ್ಲೆಯ ಚೆರುಕುಪಲ್ಲಿ ತಾಲೂಕಿನ ರಾಜೋಲು ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿತ್ತು. ಈ ಘಟನೆ ಕುರಿತು ಕೆಲವೊಂದು ವಿಷಯಗಳನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ. ಚೆರುಕುಪಲ್ಲಿ ತಾಲೂಕಿನ ಉಪ್ಪಳ ಅಮರನಾಥ್ (14) ಅವರ ತಂದೆ ಬಾಲ್ಯದಲ್ಲಿಯೇ ತೀರಿಕೊಂಡಿದ್ದು, ತಾಯಿ, ಸಹೋದರಿ, ತಾತನೊಂದಿಗೆ ವಾಸವಾಗಿದ್ದಾರೆ. ರಾಜೋಲು ಪಂಚಾಯಿತಿ ರೆಡ್ಲಪಾಲೇನಿ ನಿವಾಸಿ ಪಾಮು ವೆಂಕಟೇಶ್ವರ ರೆಡ್ಡಿ ಅಮರನಾಥ್ …
Read More »ಮಕ್ಕಳ ಅನುಕೂಲಕ್ಕೆ ಪಠ್ಯ ಬದಲಾಯಿಸಿದರೆ ತಪ್ಪೇನು? ಗೀತಾ ಶಿವರಾಜ್ಕುಮಾರ್
ಮೈಸೂರು: ರಾಜ್ಯ ಸರ್ಕಾರವು ಪಠ್ಯ ಪರಿಷ್ಕರಣೆಗೆ ಮುಂದಾಗಿದ್ದು, ಮಕ್ಕಳ ಅನುಕೂಲಕ್ಕೆ ತಕ್ಕಂತೆ ಪಠ್ಯ ಬದಲಾಯಿಸಿದರೆ ಅದರಲ್ಲಿ ತಪ್ಪೇನು? ಎಂದು ಕಾಂಗ್ರೆಸ್ ನಾಯಕಿ ಗೀತಾ ಶಿವರಾಜ್ಕುಮಾರ್ ಹೇಳಿದರು. ಈ ಮೂಲಕ ಸರ್ಕಾರದ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಒಳ್ಳೆಯ ವಿಚಾರಗಳು ಮಾತ್ರ ಇರಬೇಕು. ಈ ಕಾರಣಕ್ಕಾಗಿ ಪಠ್ಯಪುಸ್ತಕ ಬದಲಾವಣೆ ಆದರೆ ಒಳ್ಳೆಯದು ಎಂದರು. ಒಂದೊಂದು ಸರ್ಕಾರ ಒಂದೊಂದು ರೀತಿಯಲ್ಲಿ ಪಠ್ಯ ಬದಲಾವಣೆ ಮಾಡುವ ಕ್ರಮದಿಂದ ಮಕ್ಕಳಲ್ಲಿ ಗೊಂದಲ …
Read More »