Breaking News

ರಾಷ್ಟ್ರೀಯ

ಗೃಹ ಜ್ಯೋತಿ: ಬಾಡಿಗೆದಾರರು ವಾಸದ ವಿಳಾಸಕ್ಕೆ ಆಧಾರ್ ಲಿಂಕ್​ ಮಾಡುವುದು ಕಡ್ಡಾಯ: ಮತ್ತೆ ಗೊಂದಲ?

ಬೆಂಗಳೂರು : ಗೃಹ ಜ್ಯೋತಿ ಯೋಜನೆಯಡಿ ಫಲಾನುಭವಿಗಳ ಸಂಬಂಧ ಏರ್ಪಟ್ಟ ಗೊಂದಲಗಳ ಬಗ್ಗೆ ಸ್ಪಷ್ಟೀಕರಣ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಬಾಡಿಗೆದಾರರು ತಮ್ಮ ವಾಸದ ಮನೆ ವಿಳಾಸಕ್ಕೆ ಆಧಾರ್ ಸಂಖ್ಯೆ ಜೋಡಣೆ ಮಾಡುವ ಷರತ್ತು ಹಾಕಿದೆ. ಆದರೆ, ಈ ಸ್ಪಷ್ಟೀಕರಣದ ಷರತ್ತು ಇದೀಗ ಬಾಡಿಗೆದಾರರಲ್ಲಿ ಮತ್ತಷ್ಟು ಗೊಂದಲ ಉಂಟಾಗುವಂತೆ ಮಾಡಿದೆ. ಉಚಿತ 200 ಯೂನಿಟ್ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಬಗ್ಗೆ ಫಲಾನುಭವಿಗಳಲ್ಲಿ ಸಾಕಷ್ಟು ಅನುಮಾನ, ಗೊಂದಲ ಏರ್ಪಟ್ಟಿತ್ತು.‌ ಈ …

Read More »

ಹಿಂದೆ ನಡೆದ ಅಕ್ರಮಗಳ ತನಿಖೆಗಾಗಿ ಎಸ್‌ಐಟಿ ರಚನೆ?:

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ನೇಮಕಾತಿ ಅಕ್ರಮಗಳ ತನಿಖೆಗೆ ಎಸ್‌ಐಟಿ ರಚಿಸಿವ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ. ಆ ಮೂಲಕ ಬಿಜೆಪಿ ಸರ್ಕಾರದ ಹಗರಣಗಳ ಆರೋಪಗಳನ್ನು ತನಿಖೆಗೆ ಒಳಪಡಿಸಿ ಬಿಜೆಪಿಯನ್ನು ಮತ್ತಷ್ಟು ಕಟ್ಟಿ ಹಾಕಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಭೆಯಲ್ಲಿ ಎಸ್​​​ಐಟಿ ರಚಿಸುವ ಬಗ್ಗೆ ಸಮಾಲೋಚನೆ ನಡೆದಿದೆ. ಪಿಎಸ್‌ಐ ನೇಮಕಾತಿ ಅಕ್ರಮ, ವಿವಿಧ ನೇಮಕಾತಿ ಅಕ್ರಮಗಳ ತನಿಖೆಗೆ …

Read More »

ಮಂಡ್ಯದಲ್ಲಿ ಅಂಬಿ ಪುತ್ರನ ಭರ್ಜರಿ ಬೀಗರೂಟ: 50 ಸಾವಿರ ಮಂದಿಗೆ ಸಿದ್ಧತೆ, 7 ಟನ್ ಮಟನ್, 7 ಟನ್ ಚಿಕನ್!

ಮಂಡ್ಯ: ಜೂನ್​ 5 ರಂದು ದಾಂಪತ್ಯಕ್ಕೆ ಕಾಲಿರಿಸಿದ ದಿವಂಗತ ರೆಬಲ್​ ಸ್ಟಾರ್ ಅಂಬರೀಶ್​ ಪುತ್ರ ಅಭಿಷೇಕ್​ ಅಂಬರೀಶ್​ ಮತ್ತು ಅವಿವಾ ಬಿದ್ದಪ್ಪ ಬೀಗರ ಔತಣಕೂಟ ನಾಳೆ ಸಕ್ಕರೆನಾಡು ಮಂಡ್ಯದ ಗೆಜ್ಜಲಗೆರೆ ಕಾಲೋನಿ ಬಳಿ ನಡೆಯಲಿದೆ. ಎಷ್ಟೇ ಸಾವಿರ ಜನ ಬಂದ್ರೂ ಊಟದ ವ್ಯವಸ್ಥೆ ಮಾಡಲು ಸಕಲ ಸಿದ್ಧತೆ ಮಾಡಲಾಗುತ್ತಿದೆ. ಅಂಬರೀಶ್​ಗೆ ಪ್ರಿಯವಾದ ಮಂಡ್ಯ ಶೈಲಿಯ ಬಾಡೂಟವನ್ನು ನಾಳೆ ತಯಾರಿಸಲಾಗುತ್ತದೆ. ಸಿದ್ದತೆ ಪರಿಶೀಲನೆ ಬಳಿಕ ಮಾಹಿತಿ ನೀಡಿದ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, “ಬೆಳಗ್ಗೆ …

Read More »

ಪ್ರಯಾಣಿಕನ ₹5 ಲಕ್ಷ ಹಣ ಕದ್ದು ಕಾಲ್ಕಿತ್ತ ಕಳ್ಳನ ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿದ KSRTC ಸಿಬ್ಬಂದಿ!

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲನಾ ಸಿಬ್ಬಂದಿಯ ಸಮಯೋಚಿತ ಸಾಹಸ ಕಾರ್ಯ ಮತ್ತು ಧೈರ್ಯದಿಂದಾಗಿ ಪ್ರಯಾಣಿಕನ 5 ಲಕ್ಷ ರೂಪಾಯಿ ಹಣ ಮರಳಿ ಸಿಕ್ಕಿದೆ. ಹಣ ಕದ್ದು ಓಡುತ್ತಿದ್ದ ಕಳ್ಳನನ್ನು ಬಸ್‌ ಚಾಲಕ ಮತ್ತು ನಿರ್ವಾಹಕ ಇಬ್ಬರೂ ಬೆನ್ನಟ್ಟಿ ಹಿಡಿದಿದ್ದು, ಮೆಚ್ಚುಗೆಗೆ ಕಾರಣವಾಗಿದೆ. ಜುಲೈ 14ರಂದು ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4ರ ಕೆಎ-57 ಎಫ್ 3975 ಸಂಖ್ಯೆಯ ಬೆಂಗಳೂರು- ತಿರುನಲ್ಲಾರ್ ಮಾರ್ಗದ ಬಸ್ಸಿನ ಆಸನ ಸಂಖ್ಯೆ 17- 18 …

Read More »

‘ಪುಕ್ಸಟ್ಟೆ ಅಕ್ಕಿ ಕೊಡುವಂತೆ ನಾವು ಕೇಳಿಲ್ಲ’- ಕೇಂದ್ರದ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಮೈಸೂರು : “ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ತಾರತಮ್ಯವನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ, ಹೋರಾಟ ಮಾಡಲು ಕಾರ್ಯಕ್ರಮ ರೂಪಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಅವರು, “ಕೇಂದ್ರಕ್ಕೆ ಅಕ್ಕಿ ಕೊಡುವಂತೆ ನಾವು ಪುಕ್ಸಟ್ಟೆ ಕೇಳಿಲ್ಲ. ನೀವು ಯಾವ ರೀತಿ ಅಕ್ಕಿ ಕೊಡುತ್ತಿದ್ದಿರೋ ಅದೇ …

Read More »

ಹೊರ ರಾಜ್ಯಗಳಿಂದ ಅಕ್ಕಿ ತರಲು ತೀರ್ಮಾನ : ಜುಲೈ 1ಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ಪ್ರಯತ್ನ

ಬೆಂಗಳೂರು : ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಹೊರರಾಜ್ಯಗಳಿಂದ ತರಲು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಯೋಜನೆಗೆ ಅಗತ್ಯವಾದ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಒದಗಿಸಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿದ್ದರಾಮಯ್ಯ ತಮ್ಮ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯನ್ನು ಜುಲೈ ಒಂದರಂದೇ ಜಾರಿಗೆ ತರಲು ಎಲ್ಲ ಕಸರತ್ತು ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಗೆ ಅಗತ್ಯವಾದ ಅಕ್ಕಿ ಯಾವ ಯಾವ …

Read More »

ಪಂಚಮಸಾಲಿ ಮೀಸಲಾತಿ ವಿಚಾರ: ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಆಡಳಿತಾತ್ಮಕ ಸಭೆ ಕರೆದು ತೀರ್ಮಾನಿಸಲಿ

ಬೆಳಗಾವಿ: ಈ ಬಾರಿ ನಮ್ಮ ಪಂಚಮಸಾಲಿ ಸಮಾಜ ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ನ್ಯಾಯ ಕೊಡಿಸುವ ವಿಶ್ವಾಸವಿದೆ‌. ಆ ನಿಟ್ಟಿನಲ್ಲಿ ಆದಷ್ಟು ಬೇಗನೆ ಮುಖ್ಯಮಂತ್ರಿಗಳು ಆಡಳಿತಾತ್ಮಕ ಸಭೆ ಕರೆದು ತಮ್ಮ ಜೊತೆ ಮಾತುಕತೆ ನಡೆಸಬೇಕು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಇಂದು ನಗರದ ಗಾಂಧಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ …

Read More »

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಧರ್ಮ ಸಂಕಟ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಧರ್ಮ ಸಂಕಟ ಎದುರಾಗಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂದು ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳು ಹಕ್ಕೊತ್ತಾಯ ಮಂಡಿಸಿವೆ. ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿಂದು ಬೃಹತ್ ಸಭೆ ನಡೆಸಿದ ಮಠಾಧೀಶರು, ಎಲ್ಲ ವೀರಶೈವ ಲಿಂಗಾಯತರನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿದರು. ಮಠಾಧೀಶರ ಸಭೆಯ ನೇತೃತ್ವವನ್ನು ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ವಹಿಸಿದ್ದರು. ಕಾಶಿ ಪೀಠದ ಚಂದ್ರಶೇಖರ …

Read More »

ಶುಭ ಶುಕ್ರವಾರ.. ನಾಳೆಯಿಂದ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಅವಕಾಶ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಈ ಬಾರಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಇದೀಗ ತಾನು ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ. ಮೊದಲ ಗ್ಯಾರಂಟಿಯಾಗಿ ಮಹಿಳೆಯರಿಗೆ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದೆ. ಕಳೆದ ಭಾನುವಾರ (ಜೂನ್ 11) ದಿಂದ ಇದು ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮಿ ಯೋಜನೆಗೆ ಮುಂದಾಗಿದೆ. …

Read More »

ಬಿಟ್ ಕಾಯಿನ್ ಹಗರಣ ಮರು ತನಿಖೆ ಮಾಡುತ್ತೇವೆ- ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಚಿವರು ಮಾತನಾಡಿದರು. ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನವಾಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನವಾಗಿರುವುದು ಒಳ್ಳೆಯದು ಎಂದರು. ಸುರ್ಜೇವಾಲ ಅವರು ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಅದು ಅಧಿಕೃತ ಸಭೆ ಆಗಿರಲಿಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ್ದರು. ಆ …

Read More »