Breaking News

ರಾಷ್ಟ್ರೀಯ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮುಂಗಾರು ಮಳೆಯ ಅಭಾವ ಹಾಗೂ ಬರಗಾಲದಿಂದ ರೈತರ ಬದುಕು ತತ್ತರಿಸಿ ಹೋಗಿದೆ. ಬರ ಪರಿಹಾರದ ಮೊತ್ತ ಒಂದು ಎಕರೆಗೆ 50 ಸಾವಿರ ರೂ. ದಂತೆ ಪರಿಹಾರ ಧನ ಕೊಡಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯಲ್ಲಿರುವ ಪ್ರತಿಯೊಂದು ಗ್ರಾಮಕ್ಕೆ ಕುಡಿಯಲು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ನೀರಿನ ವ್ಯವಸ್ಥೆಯನ್ನು …

Read More »

ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ

ಮದುವೆಯಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ ಮಾಡಿ ಕಳೆದ ಮೂರು ತಿಂಗಳ ಹಿಂದೆ ನನ್ನ ಪತಿ ಕಾಣೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿ ಈಗ ಖಾಕಿಗೆ ಲಾಕ್ ಆದ ಘಟನೆ ನಡೆದಿದೆ. ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಪತಿಯನ್ನೇ ಗೆಳೆಯನೊಂದಿಗೆ ಸೇರಿಕೊಂಡು ಕೊಲೆ ಮಾಡಿ ಕಳೆದ ಮೂರು ತಿಂಗಳು ಹಿಂದೆ ನನ್ನ ಪತಿ ರಮೇಶ ಕಾಂಬಳೆ ಕಾಣೆಯಾಗಿದ್ದಾನೆ ಎಂದು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ …

Read More »

‘ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ?’: ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಗೊಳಿಸಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ವಿದ್ಯುತ್​ ದರ ಹೆಚ್ಚಳವಾಗಿರುವ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ವೇಳೆ ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ, ಬಿಕ್ಕಟ್ಟಿಗೆ ಸಿಲುಕಿರುವ ಐಟಿ ಮತ್ತು ಇಎಸ್‌ಡಿಎಂ ವಲಯಗಳ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ …

Read More »

ಮಂತ್ರಾಲಯದಿಂದ ವಾಪಸಾಗುತ್ತಿದ್ದ ಖಾಸಗಿ ಬಸ್​ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಾಯ

ರಾಯಚೂರು : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಹೊಲಕ್ಕೆ ನುಗ್ಗಿರುವ ಘಟನೆ ಜಿಲ್ಲೆಯ ಮಾನವಿ ಪಟ್ಟಣ ಹೊರವಲಯದ ಸಿಂಧನೂರು ರಸ್ತೆಯ ನಂದಿಹಾಳ ಗ್ರಾಮದಲ್ಲಿ ಇಂದು ನಡೆದಿದೆ. ಅಪಘಾತದಲ್ಲಿ ಸುಮಾರು 25ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ಕುರುಬರಹಳ್ಳಿಯ ಚಾಲಕರ ಸಂಘದವರು ಖಾಸಗಿ ಬಸ್‌ನಲ್ಲಿ ಆಗಮಿಸಿದ್ದರು. ಇಂದು ಗುರುರಾಯರ ದರ್ಶನ ಪಡೆದು ಬೆಂಗಳೂರಿಗೆ ಮರಳುತ್ತಿದ್ದರು. ನಂದಿಹಾಳ ಗ್ರಾಮದಲ್ಲಿ …

Read More »

670 ಸಹಾಯಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಾ ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಭ ಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 607 ಜ್ಯೂನಿಯರ್​ ಅಸಿಸ್ಟಂಟ್​, ಎಸ್​ಡಿಎ ಮತ್ತು ಅಸಿಸ್ಟೆಂಟ್​ ಹುದ್ದೆ ಭರ್ತಿಗೆ ಕೆಇಎ ಹೊಸ ಅಧಿಸೂಚನೆ ಪ್ರಕಟಿಸಿದೆ. …

Read More »

ಬಸ್ ಇಲ್ಲದೆ ಪರದಾಟ ; ಜೆಸಿಬಿಯಲ್ಲಿಯೇ ಶಾಲೆಗೆ ತೆರಳಿದ ವಿದ್ಯಾರ್ಥಿಗಳು.

ಕೊಪ್ಪಳ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ಸಮರ್ಪಕ ಬಸ್‌ ವ್ಯವಸ್ಥೆ ಇಲ್ಲದ ಕಾರಣ ಪ್ರೌಢಶಾಲೆ ವಿದ್ಯಾರ್ಥಿಗಳು ಜೆಸಿಬಿ ಯಂತ್ರದಲ್ಲಿ ಕುಳಿತು ಶಾಲೆಗೆ ತೆರಳಿದ ಘಟನೆ ನಡೆದಿದೆ. ಸಮವಸ್ತ್ರ ಧರಿಸಿದ್ದ ಹತ್ತಾರು ವಿದ್ಯಾರ್ಥಿಗಳು ಕೊಪ್ಪಳ-ಕುಷ್ಟಗಿ ರಾಜ್ಯ ಹೆದ್ದಾರಿಯಲ್ಲಿ ಜೆಸಿಬಿಯ ಹಿಂದಿನ ಬಕೆಟ್‌ ಮತ್ತು ಕ್ಯಾಬಿನ್ ಒಳಗೆ ಕುಳಿತು ಶಾಲೆಗೆ ತೆರಳಿದರು. ಶಾಖಾಪುರ ಕ್ರಾಸ್‌ ಸಮೀಪ ವಿದ್ಯಾರ್ಥಿಗಳು ನಿಂತಿದ್ದರೂ ಕುಷ್ಟಗಿಯಿಂದ ಕೊಪ್ಪಳಕ್ಕೆ ಹೋಗುವ ಸಾರಿಗೆ ಬಸ್‌ಗಳು ನಿಲ್ಲುವುದಿಲ್ಲ. ಬಹುತೇಕ ಬಸ್‌ಗಳು …

Read More »

ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ.

ಬೆಳಗಾವಿ : ಬೆಳಗಾವಿ ಜಿಲ್ಲೆಯ ಯರಗಟ್ಟಿ (Yaragatti) ತಾಲೂಕಿನ ಹಲಕಿ ಗ್ರಾಮದ ಸಮೀಪ ಹೆಂಡತಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಆರೋಪದ ಮೇಲೆ ಯುವಕನೊಬ್ಬನನ್ನು ಆಕೆಯ ಪತಿ ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ರಮೇಶ್ ಗುಂಜಗಿ(24) ಕೊಲೆಯಾದ ಯುವಕನಾಗಿದ್ದು, ಯಲ್ಲಪ್ಪ ಕಸೊಳ್ಳಿ ಎಂಬಾತ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದ ನಿವಾಸಿಯಾಗಿರುವ ರಮೇಶ್ ಗುಂಜಗಿ, ಎರಡು ತಿಂಗಳ ಹಿಂದೆ ಮನೆ ಪಕ್ಕದ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದನು. ಈ ವಿಷಯ ತಿಳಿದ …

Read More »

ಸ್ಮಶಾನ ಭೂಮಿ ನೀಡುವಂತೆ ರಸ್ತೆ ಮಧ್ಯೆ ಶವ ವಿಟ್ಟು ಪ್ರತಿಭಟನೆ

ಧಾರವಾಡ: ಸ್ಮಶಾನ ಭೂಮಿ ನೀಡುವಂತೆ ಶವ ವಿಟ್ಟು ಆಕ್ರೋಶ ಹೊರ ಹಾಕಿರುವ ಘಟನೆ ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ನಡೆದಿದೆ. ತಡವಾಗಿ ಬೆಳಕಿಗೆ ಬಂದ ಪ್ರಕರಣವಾಗಿದ್ದು, ಹಲವಾರು ವರ್ಷಗಳಿಂದ ಸ್ಮಶಾನಕ್ಕೆ ಬೇಡಿಕೆಯಿಟ್ಟರೂ ಉಪಯೋಗವಾಗದೆ. ರಸ್ತೆ ಮಧ್ಯೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮದಲ್ಲಿ ಗಂಗವ್ವ ಬೆಳಹಾರ(65) ನಿಧನರಾಗಿದ್ದು, ಅಂತ್ಯಸಂಸ್ಕಾರಕ್ಕೆ ಜಾಗ ಸಿಗದೆ ಆಕ್ರೋಶಗೊಂಡಿದ್ದಾರೆ. ಇನ್ನೂ ಈ ವೇಳೆ ಸ್ಥಳಕ್ಕೆ ಪೊಲೀಸರ ಆಗಮಿಸಿ ಗ್ರಾಮಸ್ಥರ ಮನವೋಲಿಕೆ ಮಾಡಲು ಮುಂದಾಗಿದ್ದರು. ಈ ಮೊದಲಿದ್ದ ಖಾಸಗಿ …

Read More »

ಬೆಳಗಾವಿಯ ವ್ಯಾಕ್ಸಿನ್ ಡಿಪೋ ಪ್ರದೇಶದಲ್ಲಿ ಕಾಮಗಾರಿಗೆ 100 ಕೋಟಿ ವೆಚ್ಚ ಮಾಡಿದ್ದಾರೆ. ಆದ್ರೇ ಇದಕ್ಕೆ ಡಿಎಚ್‌ಒ ಅವರ ಅನುಮತಿಯನ್ನೇ ಪಡೆದಿಲ್ಲವಂತೆ.

Vaccine Depo Under Smart City: ಬೆಳಗಾವಿಯ ವ್ಯಾಕ್ಸಿನ್ ಡಿಪೋ ಪ್ರದೇಶದಲ್ಲಿ ಕಾಮಗಾರಿಗೆ 100 ಕೋಟಿ ವೆಚ್ಚ ಮಾಡಿದ್ದಾರೆ. ಆದ್ರೇ ಇದಕ್ಕೆ ಡಿಎಚ್‌ಒ ಅವರ ಅನುಮತಿಯನ್ನೇ ಪಡೆದಿಲ್ಲವಂತೆ. ವ್ಯಾಕ್ಸಿನ್ ಡಿಪೋ ಆರೋಗ್ಯ ಇಲಾಖೆಗೆ ಸೇರಿದ ಜಾಗ, ಆದರೆ ಅವರ ಅನುಮತಿಯನ್ನೇ ಪಡೆಯದೇ ಕಾಮಗಾರಿ ಮಾಡಿದ್ದಾರಂತೆ. ಬೆಳಗಾವಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳ ನಡುವೆ ಕಾಮಗಾರಿ ಫೈಟ್ ಶುರುವಾಗಿದೆ. ಅದು ಯಾವ ಹಂತಕ್ಕೆ ಹೋಗಿದೆ ಅಂದ್ರೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಆಗುವ …

Read More »

4 ದಿನದಲ್ಲಿ 12.51 ಲಕ್ಷ ಗ್ರಾಹಕರು ನೋಂದಣಿ: ಸಾರ್ವಜನಿಕರ ಅನುಕೂಲಕ್ಕೆ ಹೊಸ ಲಿಂಕ್ ಬಿಡುಗಡೆ!

ಗೃಹಜ್ಯೋತಿನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಸಂಜೆ ವೇಳೆಗೆ ಒಟ್ಟು 12.51 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್‌ ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಜೂನ್‌ 18ರಂದು ಆರಂಭಗೊಂಡಿದ್ದು, ತಾಂತ್ರಿಕ ದೋಷಗಳ ನಡುವೆಯೂ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ.   ಮೊದಲ ದಿನ- 96,305, 2ನೇ ದಿನ- 3,34,845 3ನೇ ದಿನ- 4,64,225 ಹಾಗೂ 4ನೇ ದಿನ 3.56 ಲಕ್ಷ ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. …

Read More »