Breaking News

ರಾಷ್ಟ್ರೀಯ

ಉಚಿತ ಪ್ರಯಾಣಕ್ಕೆ ಹೊಸ ರೂಲ್ಸ್; ಸಾರಿಗೆ ಸಚಿವರು ಕೊಟ್ಟ ಶಾಕ್ ಏನು?

ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾದ ಹಿನ್ನೆಲೆ ರಾಜ್ಯದಲ್ಲಿ ಕೆಲವು ಗೊಂದಲಗಳು ಉಂಟಾಗಿದ್ದವು. ತಳ್ಳಾಟ, ನೂಕಾಟ ಸೇರದಂತೆ ಜಡೆ ಜಗಳ ಸಹ ನಡೆದಿದೆ. ಕೆಲವು ಭಾಗಗಳಲ್ಲಿ ತಳ್ಳಾಟ, ನೂಕಾಟದಿಂದ ಬಸ್ ಬಾಗಿಲು, ಕಿಟಕಿಯ ಸರಪಳಿ ಕಿತ್ತುಕೊಂಡು ಬಂದಿದೆ. ಈ ಎಲ್ಲಾ ಬೆಳವಣಿಗೆಯನ್ನು ಗಮನಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉಚಿತ ಪ್ರಯಾಣಕ್ಕೆ ಕೆಲವು ಮಾರ್ಗಸೂಚಿ ಪ್ರಕಟಿಸುವ ಸುಳಿವು ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಈ ಉಚಿತ …

Read More »

ರಾಜ್ಯ ಸರ್ಕಾರ’ದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’14 ಐಎಎಸ್ ಅಧಿಕಾರಿ’ಗಳ ವರ್ಗಾವಣೆ |

ಬೆಂಗಳೂರು : ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ.   ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಐಎಎಸ್ ಅಧಿಕಾರಿ ಜಾವೇದ್ ಅಖ್ತರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೆಡಿಕಲ್ …

Read More »

30ರ ವ್ಯಕ್ತಿಗೆ 13 ತಿಂಗಳ ಮೃತ ಮಗುವಿನ ಮೂತ್ರಪಿಂಡ ಕಸಿ: ಫೋರ್ಟಿಸ್‌ ಆಸ್ಪತ್ರೆ ವೈದ್ಯರಿಂದ ವಿಶ್ವದಲ್ಲೇ ಅಪರೂಪದ ಚಿಕಿತ್ಸೆ!

ಬೆಂಗಳೂರು: ಕೇವಲ 13 ತಿಂಗಳ ಮಗುವಿನ ಎರಡೂ ಮೂತ್ರಪಿಂಡವನ್ನು 30 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ “ರೋಬೋಟಿಕ್‌ ಎನ್‌- ಬ್ಲಾಕ್‌” ವಿಧಾನದ ಮೂಲಕ ಕಸಿ ಮಾಡಲಾಗಿದ್ದು, ಈ ಪ್ರಕರಣ ವಿಶ್ವದಲ್ಲಿಯೇ ಅತೀ ಅಪರೂಪದ್ದಾಗಿದೆ. ಫೋರ್ಟಿಸ್‌ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಹಿರಿಯ ನಿರ್ದೇಶಕ ಮೋಹನ್ ಕೇಶವಮೂರ್ತಿ, ಡಾ. ಶ್ರೀಹರ್ಷ ಹರಿನಾಥ ಅವರ ತಂಡವು ಅಪರೂಪದ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಡಾ. ಕೇಶವಮೂರ್ತಿ, 30 ವರ್ಷದ …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ ಹೊಸ ಬಜೆಟ್ ಮಂಡನೆಗೆ ಸಿದ್ಧತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ ಹೊಸ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ. 2023-24 ಸಾಲಿನ‌ ಹೊಸ ಬಜೆಟ್​​ಗೆ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಐದು ಗ್ಯಾರಂಟಿಗಳನ್ನು ಜಾರಿ ಮಾಡಿರುವ ಸಿದ್ದರಾಮಯ್ಯ ಈ ಬಾರಿ ಬಜೆಟ್​​ನಲ್ಲಿ ಹೆಚ್ಚಿನ ಗ್ಯಾರಂಟಿ ಆದಾಯ ಸಂಗ್ರಹಿಸುವತ್ತ ಚಿತ್ತ ನೆಟ್ಟಿದ್ದಾರೆ. ಅಷ್ಟಕ್ಕೂ ಕಳೆದ ಎರಡು ತಿಂಗಳಲ್ಲಿ ರಾಜ್ಯ ಬೊಕ್ಕಸ ಸೇರಿರುವ ಸ್ವಂತ ತೆರಿಗೆ ಏನಿದೆ ಎಂಬ ವರದಿ ಇಲ್ಲಿದೆ. ಬಿಜೆಪಿಯನ್ನು ಸೋಲಿಸಿ ಭರ್ಜರಿ ಜಯದೊಂದಿಗೆ ಕಾಂಗ್ರೆಸ್ ಸರ್ಕಾರ …

Read More »

ನೇಣಿಗೆ ಶರಣಾದ ಸವಿತಾ ನಾಯ್ಕರ್

ನವನಗರದಲ್ಲಿ ಇರುವ ಪಂಚಾಕ್ಷರಿ ನಗರದ ನಿವಾಸಿ ಆದ ಸವಿತಾ ನಾಯ್ಕರ್ ಅನ್ನೋ ಗೃಹಿಣಿ ನೇಣಿಗೆ ಶರಣಾದ ಘಟನೆ ನಡೆದಿದೆ.   ಮಧ್ಯಾನ 2.30 ರ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಘಟನೆಗೆ ಕೌಟುಂಬಿಕ ಕಲಹ ಎಂದು ತಿಳಿದುಬಂದಿದೆ. ಸಾವಿಗೀಡಾದ ಮಹಿಳೆಯ ಗಂಡ ಕೆ ಎಸ್ ಆರ್ ಪಿ ಪೊಲೀಸ ಸಿಬ್ಬಂದಿಯು ದಿನನಿತ್ಯ ಕುಡಿದು ಬಂದು ಹೆಂಡತಿಯ ಜೊತೆ ಜಗಳವಾಡುತ್ತಿದ್ದ ಎಂದು ಸವಿತಾಳ ತಾಯಿ …

Read More »

ಬಿಜೆಪಿಯ ಸುಳ್ಳಿನ ಫ್ಯಾಕ್ಟರಿ ಬಂದ್ ಮಾಡುತ್ತೇವೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕಾಂಗ್ರೆಸ್ ನಾಯಕರುಗಳ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸುತ್ತಿರುವ ಆರೋಪದಡಿ ಬಿಜೆಪಿಯ ಮಾಹಿತಿ ತಂತ್ರಜ್ಞಾನ ವಿಭಾಗದ (ಐಟಿ ಸೆಲ್) ರಾಷ್ಟ್ರೀಯ ಸಂಚಾಲಕ ಅಮಿತ್ ಮಾಳವಿಯಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ದ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆಯನಿಮೇಟೆಡ್ ವೀಡಿಯೋ ಮೂಲಕ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದೆ ಎಂದು ಉಲ್ಲೇಖಿಸಿ, ರಾಹುಲ್ ಗಾಂಧಿಯವರ ವಿರುದ್ದ ವಿಡಿಯೋ ಹರಿಬಿಟ್ಟ ಬಗ್ಗೆ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ …

Read More »

ನೀರು ಬಿಡುವ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಜತೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನೀರು ಬಿಡುವುದಕ್ಕೆ ರೈತರಿಂದ ವ್ಯಕ್ತವಾಗಿರುವ ವಿರೋಧ ವಿಚಾರವಾಗಿ ಅಲ್ಲಿನ ಸರ್ಕಾರದ ಜತೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ನೀರು ಬಿಡಲು ಮಹಾರಾಷ್ಟ್ರ ರೈತರ ವಿರೋಧ ವಿಚಾರ ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಮಹಾರಾಷ್ಟ್ರದ ರೈತರ ಜೊತೆ ಮಾತನಾಡೋಕೆ ಆಗುತ್ತಾ? ಮಹಾರಾಷ್ಟ್ರ ಸಿಎಂ ಜೊತೆ ಮಾತನಾಡುತ್ತೇನೆ ಎಂದರು. ಇದೇ ವೇಳೆ, ಮಹದಾಯಿ ವಿಷಯದಲ್ಲಿ ಗೋವಾ …

Read More »

ಅನ್ನಭಾಗ್ಯ ಯೋಜನೆಗೆ ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ- ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್​ ನಾಯಕರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ ಎಂದು ಹೇಳಿದ್ದರು. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಅಕ್ಕಿ ವಿತರಣೆಯಲ್ಲಿ ಬಹಳ ಗೊಂದಲಗಳು ಸೃಷ್ಟಿಯಾಗಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್​ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ …

Read More »

ತಂದೆ ತಾಯಿಯ ಪ್ರೋತ್ಸಾಹ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಬೆಳಗಾವಿಯ ಈ ಪುಟಾಣಿಯೇ ಸಾಕ್ಷಿ.

ಬೆಳಗಾವಿ : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಮಾತಿನಂತೆ ತಂದೆ ತಾಯಿಯ ಪ್ರೋತ್ಸಾಹ ಇದ್ದರೆ ಏನು ಬೇಕಾದರೂ ಸಾಧನೆ ಮಾಡಬಹುದು ಎಂಬುದಕ್ಕೆ ಬೆಳಗಾವಿಯ ಈ ಪುಟಾಣಿಯೇ ಸಾಕ್ಷಿ. ಇಂಗ್ಲಿಷ್​ ರೈಮ್ಸ್ ಹೇಳುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ದಾಖಲೆ ಬರೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾಳೆ. ಹೌದು, ಬೆಳಗಾವಿಯ ಫುಲಬಾಗ ಗಲ್ಲಿಯ 2 ವರ್ಷ 11 ತಿಂಗಳ ಮಾನ್ವಿ ಭರತ್ ನಿಲಜಕರ್ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮೆರೆದ ಪುಟ್ಟ …

Read More »

400 ಹೆಕ್ಟೇರ್​ ಪ್ರದೇಶದಲ್ಲಿ ಬಿತ್ತಿದ್ದ ಹತ್ತಿ ಬೆಳೆ ನಾಶ: ಕೃಷಿ ತಜ್ಞರ ಭೇಟಿ, ಪರಿಶೀಲನೆ…

ಗಂಗಾವತಿ :ಕನಕಗಿರಿ ತಾಲೂಕಿನಲ್ಲಿ ಒಣ ಬೇಸಾಯದ ಮಂಗಾರು ಮಳೆಯ ಪೂರ್ವದಲ್ಲಿ ರೈತರು ನೂರಾರು ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆ ನಾಟಿ ಮಾಡಿದ್ದು, ಆದರೆ ಕಳಪೆ ಗುಣಮಟ್ಟದ ಬೀಜದಿಂದಾಗಿ ಹತ್ತಿ ಬೆಳೆ ನಾಶವಾಗುವ ಆತಂಕ ಎದುರಾಗಿದೆ.   ಕಳಪೆ ಬಿತ್ತನೆ ಬೀಜ ತಂದ ಆಪತ್ತು: ತಾಲೂಕಿನ ಚಿಕ್ಕಖೇಡಾ, ಹಿರೇಖ್ಯಾಡಾ, ಗುಡದೂರು, ಬಸರಿಹಾಳ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ರೈತರು ದೊಡ್ಡ ಪ್ರಮಾಣದಲ್ಲಿ ಹತ್ತಿ ಬೀಜ ಬಿತ್ತಿದ್ದಾರೆ. ಒಂದು ಕಡೆ ಕಳಪೆ ಬಿತ್ತನೆ ಬೀಜ ಮತ್ತೊಂದು …

Read More »