Breaking News

ರಾಷ್ಟ್ರೀಯ

ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಲಾಗುವುದು : H.K.ಪಾಟೀಲ್

ಹುಬ್ಬಳ್ಳಿ : ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸೋದ್ಯಮದ ಬೆಳವಣಿಗೆಗೆ ವಿಶೇಷ ಒತ್ತು ನೀಡಲಾಗುವುದು ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ ಹೇಳಿದ್ದಾರೆ. ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವಾಸೋದ್ಯಮ ಇಲಾಖೆ ಪ್ರಮುಖ ಇಲಾಖೆಗಳಲ್ಲಿ ಒಂದು. ಅದರಲ್ಲೂ ಉತ್ತರ ಕರ್ನಾಟಕಕ್ಕೆ ವಿಶೇಷ ಒತ್ತು ನೀಡುವ ಅಗತ್ಯ ಇದೆ. ಈ ಭಾಗದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣಗಳ ಬೆಳವಣಿಗೆಗೆ ನಿರೀಕ್ಷೆ ಮಟ್ಟದಲ್ಲಿ ಆದ್ಯತೆ ಸಿಕ್ಕಿಲ್ಲ. ಅದಕ್ಕೆ ಹಲವು ಕಾರಣಗಳಿವೆ. …

Read More »

ಹಾವೇರಿ ಗೋಲಿಬಾರ್​ಗೆ 16 ವರ್ಷ.

ಹಾವೇರಿ: ಇಂದಿಗೆ ಹಾವೇರಿಯಲ್ಲಿ ಗೋಲಿಬಾರ್ ನಡೆದು 16 ವರ್ಷ ಕಳೆದಿವೆ. ಈ ಹಿನ್ನೆಲೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಶ್ರಯದಲ್ಲಿ ನಗರದಲ್ಲಿ ನಡೆದ ರೈತ ಹುತಾತ್ಮ ದಿನಾಚರಣೆಯಲ್ಲಿ ರೈತರು ಭಾಗವಹಿಸುವ ಮೂಲಕ ಬಸ್ ನಿಲ್ದಾಣದ ಬಳಿ ಇರುವ ಹುತಾತ್ಮ ರೈತ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಈ ವೇಳೆ ವಿವಿಧ ರೈತ ಮುಖಂಡರು ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ ಗೌರವಾರ್ಪಣೆ ಸಲ್ಲಿಸಿದರು. 10 ಜೂನ್ 2008 ರ ಗೋಲಿಬಾರ್‌ನಲ್ಲಿ ಹುತಾತ್ಮರಾಗಿದ್ದ …

Read More »

ಬೆಳಗಾವಿಯಲ್ಲಿ ನೀರಿಗಾಗಿ‌ ಹಾಹಾಕಾರ: ಟ್ಯಾಂಕರ್ ಮೊರೆ ಹೋದ ಕುಂದಾನಗರಿಯ ಜನ..

ಬೆಳಗಾವಿ: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಜೀವ ಜಲಕ್ಕಾಗಿ ಕುಂದಾನಗರಿ ಜನ ಪರದಾಡುತ್ತಿದ್ದು, ನೀರಿಗಾಗಿ ಟ್ಯಾಂಕರ್​ಗಳ ಮೊರೆ ಹೋಗುತ್ತಿರುವುದು ಸಾಮಾನ್ಯವಾಗಿದೆ. ಇದೇ ಸ್ಥಿತಿ ಮುಂದುವರಿದರೆ ಮತ್ತಷ್ಟು ನೀರಿನ‌ ಸಮಸ್ಯೆ ಉದ್ಭವಿಸುವ ಸಾಧ್ಯತೆಯಿದೆ. ಇಷ್ಟೊತ್ತಿಗಾಗಲೇ ಮಳೆಗಾಲ ಆರಂಭವಾಗಿ ಜನರ ಮೊಗದಲ್ಲಿ ಮಂದಹಾಸ ಮೂಡಬೇಕಿತ್ತು. ಆದರೆ ಜೂನ್ 10 ದಾಟಿದ್ರೂ ಇನ್ನು ಮಳೆಯ ಸುಳಿವೇ ಸಿಗುತ್ತಿಲ್ಲ. ಇದರಿಂದ ಬೆಳಗಾವಿಯಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ನಗರದ ಬಹುತೇಕ ಪ್ರದೇಶಗಳಲ್ಲಿ ಎಂಟು ದಿನ ದಿನಗಳಿಗೊಮ್ಮೆ ನೀರು ಸರಬರಾಜು …

Read More »

13ನೇ ಫೋನ್‌ ಇನ್‌ ಕಾರ್ಯಕ್ರಮ: ಜನರ ಸಮಸ್ಯೆ ಆಲಿಸಿದ ಬೆಳಗಾವಿ ಡಿಸಿ, ಎಸ್​​ಪಿ

ಬೆಳಗಾವಿ: ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪೊಲೀಸ್​ ವರಿಷ್ಠಾಧಿಕಾರಿ ಸಂಜೀವ ಪಾಟೀಲ್ ನೇತೃತ್ವದಲ್ಲಿ 2022ರ ನವೆಂಬರ್‌ನಿಂದ ಈವರೆಗೆ 12 ಬಾರಿ ಫೋನ್‌ ಇನ್‌ ಕಾರ್ಯಕ್ರಮ ನಡೆದಿದ್ದು, ಇಂದು 13ನೇ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಡಿಸಿಪಿ ಶೇಖರ್ ಎಚ್.ಟಿ. ಕೂಡ ಭಾಗವಹಿಸಿದ್ದರು. ಜಿಲ್ಲೆಯ ವಿವಿಧೆಡೆಯಿಂದ 62 ಜನರು ಕರೆ ಮಾಡಿ, ತಮ್ಮ ಸಮಸ್ಯೆ ಹೇಳಿಕೊಂಡರು. ಕೆಲ ಜನರಿಗೆ ಸ್ಥಳದಲ್ಲೇ ಪರಿಹಾರವನ್ನು ಕೂಡ ಅಧಿಕಾರಿಗಳು ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ‌ ಕಚೇರಿಯಲ್ಲಿ …

Read More »

ಮದುವೆ ನಿಶ್ಚಯಕ್ಕೆ ಗ್ರಾಮಕ್ಕೆ ಬರುತ್ತಿದ್ದ ಯೋಧ ರೈಲಿನಿಂದ ಬಿದ್ದು ಸಾವು: ಕುಟುಂಬಸ್ಥರ ಆಕ್ರಂದನ

ಬೆಳಗಾವಿ: ವಿವಾಹ ಎಂಬುದು ಎಲ್ಲರಿಗೂ ಸಂತಸದ ಕ್ಷಣ. ವ್ಯಕ್ತಿಯ ಜೀವನದಲ್ಲಿ ಪ್ರಮುಖ ಘಟ್ಟ ಎಂದೇ ಪರಿಗಣಿಸಬಹುದು. ಏಕೆಂದರೆ ಜೀವನ ಸಂಗಾತಿಯನ್ನು ಪಡೆದು ಆಕೆಯೊಂದಿಗೆ ಮುಂದಿನ ಜೀವನ ಕಳೆಯುವುದು ಎಲ್ಲರಿಗೂ ಅವಿಸ್ಮರಣೀಯವೇ. ಆದರೆ ಇಂತಹ ಶುಭ ಕಾರ್ಯಕ್ಕೆಂದು ತೆರಳುವಾಗ ಮದುವೆ ಆಗಬೇಕಾದ ಹುಡುಗನೇ ನಿಧನನಾಧರೆ ಕುಟುಂಬಕ್ಕೆ ಅಂತಹ ದುಃಖವನ್ನು ಭರಿಸುವುದು ಕಷ್ಟ ಆಗುತ್ತದೆ. ಈ ರೀತಿಯ ಹೃದಯವಿದ್ರಾವಕ ಘಟನೆ ಒಂದು ಬೆಳಗಾವಿಯಲ್ಲಿ ನಡೆದಿದೆ. ಮದುವೆ ದಿನಾಂಕ ನಿಗದಿ ಮಾಡಲು ಸ್ವಗ್ರಾಮಕ್ಕೆ ಆಗಮಿಸುತ್ತಿದ್ದ ಯೋಧ …

Read More »

ಹಾವೇರಿಯ ಕರ್ಜಿಗಿಯಲ್ಲಿ ಕಳೆಗಟ್ಟಿದ ಕಾರಹುಣ್ಣಿಮೆ ಸಂಭ್ರಮ

ಹಾವೇರಿ : ಕಾರಹುಣ್ಣಿಮೆ ರೈತರ ಪಾಲಿನ ಸಂಭ್ರಮದ ಹಬ್ಬಗಳಲ್ಲೊಂದು. ಪ್ರತಿ ವರ್ಷ ಉತ್ತರ ಕನಾ೯ಟಕ ಭಾಗದ ರೈತರು ಕಾರಹುಣ್ಣಿಮೆ ಹಬ್ಬವನ್ನು ಅತ್ಯಂತ ಸಡಗರದಿಂದ ಆಚರಿಸುತ್ತಾರೆ. ಹಾವೇರಿಯ ಕರ್ಜಗಿ ಗ್ರಾಮದಲ್ಲೂ ಸಹ ಈ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಹಬ್ಬದ ಆಚರಣೆ ಹೇಗಿರುತ್ತದೆ? : ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸಕ್ಕೆ ಬ್ರಹ್ಮಲಿಂಗೇಶ್ವರ ಜಾತ್ರೆ ಎಂದೇ ಕರೆಯಲಾಗುತ್ತದೆ. ಮೊದಲ ದಿನ ಹೂನ್ನುಗ್ಗಿ ಆಚರಿಸಿದರೆ, ಕೊನೆಯ ಎರಡು ದಿನ ದೊಡ್ಡಕ್ಕಿ ಮತ್ತು ಸಣ್ಣಕ್ಕಿ ಬಂಡಿ ಓಡಿಸಲಾಗುತ್ತದೆ. …

Read More »

ಸಂವಿಧಾನ ಬದಲಿಸಲು ಬಂದವರನ್ನೇ ಬದಲಾಯಿಸಿದ್ದೇವೆ, 2024ರ ಲೋಕಸಭೆ ಚುನಾವಣೆಯಲ್ಲೂ ಇದು ಮರುಕಳಿಸಲಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಗ್ರಹ ಇಟ್ಟುಕೊಂಡು ವಿಚಾರಗಳನ್ನು ಕೊಲ್ಲುವುದು ಬಿಜೆಪಿ ಪರಿವಾರದ ಚಾಳಿ. ಸಂವಿಧಾನ ವಿರೋಧಿಸುವ ಬಿಜೆಪಿ, ಚುನಾವಣೆಗಾಗಿ ಅಂಬೇಡ್ಕರ್ ಪ್ರತಿಮೆ ಇಟ್ಟುಕೊಂಡು ಡ್ರಾಮಾ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ರಾಜ್ಯದ ದಲಿತ ಸಂಘಟನೆಗಳು ಟೌನ್ ಹಾಲ್‌ನಲ್ಲಿ ಇಂದು ಹಮ್ಮಿಕೊಂಡಿದ್ದ ಭೀಮ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ, ಆರ್ಥಿಕ ಅಸಮಾನತೆಯನ್ನು ತೊಡೆದು ಹಾಕದಿದ್ದರೆ ಈ ಸ್ವಾತಂತ್ರ್ಯ ಸೌಧವನ್ನು ದೇಶದ ಜನರೇ ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್‌ ಎಚ್ಚರಿಸಿದರು. ಜಾತಿ ಸಮಾಜಕ್ಕೆ …

Read More »

ದಾವಣಗೆರೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು

ದಾವಣಗೆರೆ : ಜಿಲ್ಲೆಯಜಗಳೂರು ತಾಲೂಕಿನಲ್ಲಿ ಇಂದು ಜೋರು ಮಳೆ ಸುರಿದಿದ್ದು, ಸಿಡಿಲು ಬಡಿದು ಇಬ್ಬರು ಅಸುನೀಗಿದ್ದಾರೆ. ಅಣಬೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗೊಲ್ಲರಹಟ್ಟಿ ಗ್ರಾಮದ ಕಾಟಲಿಂಗಪ್ಪ (42) ಹಾಗೂ ರಾಜು (32) ಮೃತರು. ಕಾಟಲಿಂಗ ಹಾಗು ರಾಜು ಸೇರಿ ಐವರು ಕೃಷಿ ಚಟುವಟಿಕೆಗಾಗಿ ಜಮೀನಿಗೆ ತೆರಳಿದ್ದರು. ಬೆಳಗ್ಗೆಯಿಂದ ಸಂಜೆಯತನಕ ಹತ್ತಿ ಬಿತ್ತುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಹಿಂದಿರುಗಬೇಕಿತ್ತು. ಇದೇ ಸಮಯಕ್ಕೆ ಸರಿಯಾಗಿ ಮಳೆ ಆರಂಭವಾಗಿದೆ. ಮಳೆಯಿಂದ ಆಶ್ರಯ …

Read More »

ಮಕ್ಕಳ ಜೀವದ ಜೊತೆ ಚೆಲ್ಲಾಟ: ಆಟೋ ಚಾಲಕರ ವಿರುದ್ಧ ಖಡಕ್ ಕ್ರಮಕ್ಕೆ ಮುಂದಾದ ಹು-ಧಾ ಪೊಲೀಸರು

ಹುಬ್ಬಳ್ಳಿ : ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿವೆ. ಮಕ್ಕಳನ್ನು ಶಾಲೆಗಳಿಗೆ ಬಿಡುವ ಮತ್ತು ಕರೆದುಕೊಂಡು ಬರುವ ಆಟೋ ರಿಕ್ಷಾ ಹಾಗೂ ಕ್ಯಾಬ್ ಚಾಲಕರು ಹಣದಾಸೆಗೆ ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಆರು ಮಂದಿ ಕೂರುವ ಆಸನದಲ್ಲಿ ಹತ್ತರಿಂದ ಹದಿನೈದು ಮಂದಿ, ಚಾಲಕನ ಅಕ್ಕಪಕ್ಕ ನಾಲ್ವರು, ಬೀಳುವ ಭಯದಲ್ಲಿ ಆಟೋವನ್ನು ಬಿಗಿಯಾಗಿ ಕಷ್ಟಪಟ್ಟು ಹಿಡಿದುಕೊಳ್ಳುವ ಮಕ್ಕಳು, ಎರಡೂ ಬಾಗಿಲ ಹೊರಗಡೆ ಬ್ಯಾಗ್‌ಗಳ ರಾಶಿ, ಉಸಿರುಗಟ್ಟುವ ವಾತಾವರಣದಲ್ಲಿ ಎಳೆ ಜೀವಗಳ ಪಯಾಣ. ಇದು ಶಾಲಾ ಮಕ್ಕಳ …

Read More »

ಮಗುವನ್ನು ಹತ್ಯೆ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ತುಮಕೂರು: ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡ್​​ನಿಂದ ಕೊಯ್ದು ಹತ್ಯೆ ಮಾಡಿದ ತಾಯಿ ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಜಿಲ್ಲೆಯ ಮಧುಗಿರಿ ಪಟ್ಟಣದ ತಿಪ್ಪಾಪುರ ಛತ್ರದ ಬಳಿ ನಿನ್ನೆ(ಶುಕ್ರವಾರ) ಈ ಘಟನೆ ನಡೆದಿದೆ. ಕ್ರಿತೀಶ್ (1) ಮೃತ ಮಗು. ಶ್ವೇತಾ (28) ಮಗು ಕೊಲೆ ಮಾಡಿದ ತಾಯಿ. ಮನೆಯಲ್ಲಿ ಆಟವಾಡುತ್ತಿದ್ದ ಮಗು ಕ್ರಿತೀಶ್ ಕೈಯನ್ನು ಶ್ವೇತಾ ಏಕಾಏಕಿ ಕೊಯ್ದಿದ್ದಾರೆ. ತೀವ್ರ ರಕ್ತ ಸ್ರಾವವಾಗಿ ಮಗು ಸ್ಥಳದಲ್ಲಿಯೇ ಸಾವನಪ್ಪಿದೆ. ಬಳಿಕ …

Read More »