ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕಚೇರಿಯಲ್ಲಿ ಅವರ ಸಹೋದರ, ವಿಧಾನ ಪರಿಷತ್ ಸದಸ್ಯ ಚೆನ್ನರಾಜ್ ಹಟ್ಟಿಹೊಳಿ ಮಾಧ್ಯಮದವರ ಜತೆ ದರ್ಪ ಪ್ರದರ್ಶಿಸಿದ್ದು ಟೀಕೆಗೆ ಗುರಿಯಾಗಿದೆ. ಇದೀಗ ಆ ವಿಚಾರವನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್‌ನ ಸಂಸ್ಕಾರವೇ ಇಷ್ಟು ಎಂದು ಟೀಕಿಸಿದೆ. ವಿಧಾನಸೌಧದ ಸಚಿವರ ಕಚೇರಿಯಲ್ಲಿ ಕುಳಿತು ಎಂಎಲ್ಸಿ ಚೆನ್ನರಾಜ್ ಹಟ್ಟಿಹೊಳಿ, ಗ್ಯಾರಂಟಿ ಯೋಜನೆಗಳ ಕುರಿತಾದ ಅನುಮಾನಗಳನ್ನು ಬಗೆಹರಿಸಿಕೊಳ್ಳುವುದಕ್ಕಾಗಿ ತೆರಳಿದ್ದ ಮಾಧ್ಯಮದವರ ಜತೆ ಅಹಂಕಾರದಿಂದ ವರ್ತಿಸಿದ್ದರು. ಚೆನ್ನರಾಜ್ …
Read More »ಪಿಂಚಣಿ ಪಡೆಯುತ್ತಿರುವ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆ ಸಿಗಲಿದೆ, ಅವರಿಗೆ ಪಿಂಚಣಿ ಮೊಟಕುಗೊಳಿಸುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪೈಕಿ ಪಿಂಚಣಿ ಸೌಲಭ್ಯ ಪಡೆದುಕೊಳ್ಳುವವರಿಗೆ ಅವರ ಪಿಂಚಣಿ ಮೊಟಕು ಮಾಡುವುದಿಲ್ಲ, ಈ ಬಗ್ಗೆ ಗೊಂದಲ ಬೇಡ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು. ವಿಕಾಸಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಂದಾಯ ಇಲಾಖೆಯ ಅಡಿಯಲ್ಲಿ 78 ಲಕ್ಷ ನಾನಾ ರೀತಿಯ ಜನರಿಗೆ ವಿವಿಧ ರೀತಿಯ ಪಿಂಚಣಿ ಸೌಲಭ್ಯ ಇದೆ. ಇದಕ್ಕಾಗಿ 10,411 ಕೋಟಿ ಈ ವರ್ಷ ಖರ್ಚು ಆಗುತ್ತದೆ. ಗೃಹ ಲಕ್ಷ್ಮೀ ಯೋಜನೆ …
Read More »ಹುಬ್ಬಳ್ಳಿ ಧಾರವಾಡ ನಡುವೆ ತಲೆಎತ್ತಲಿದೆ ಹೊಸ ಟೌನ್ ಶಿಪ್;
ಹುಬ್ಬಳ್ಳಿ:ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ ಸುಸಜ್ಜಿತ ರಸ್ತೆ, ಯುಜಿಡಿ, ನೀರು, ಪಾರ್ಕಿಂಗ್ ಹಾಗೂ ಉದ್ಯಾನ ಸೇರಿದಂತೆ ಅಗತ್ಯ ಮೂಲಸೌಲಭ್ಯವುಳ್ಳ ಮಾದರಿಯ ಟೌನ್‌ಶಿಪ್ ನಿರ್ಮಿಸಲು ಯೋಜಿಸಲಾಗಿದ್ದು, ಈ ಬಗ್ಗೆ ಈಗಾಗಲೇ ನಗರಾಭಿವೃದ್ಧಿ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ ಎಂದು ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದರು. ನಗರದ ‘ವಿಜಯ ಕರ್ನಾಟಕ’ ಕಚೇರಿಯಲ್ಲಿ ಸೋಮವಾರ ಶಿಕ್ಷಣ ತಜ್ಞರು, ಸಾಮಾಜಿಕ ಕಾರ್ಯಕರ್ತರು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಗಳೊಂದಿಗೆ ನಡೆದ ‘ಶಾಸಕರೊಂದಿಗೆ …
Read More »ಗೃಹ ಲಕ್ಷ್ಮಿ ಯೋಜನೆಗೆ ಮನೆಯೊಡತಿಯ ಮಗನ ತೆರಿಗೆ ಪಾವತಿ ಪರಿಗಣಿಸುವುದಿಲ್ಲ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆ ಪಡೆಯಲು ಮನೆಯೊಡತಿಯ ಮಗನ ತೆರಿಗೆ ಪಾವತಿ ಮಾಡುವುದನ್ನು ಪರಿಗಣಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮಗ ತೆರಿಗೆ ಪಾವತಿ ಮಾಡಿದರೆ ಗೃಹಲಕ್ಷ್ಮಿ ಯೋಜನೆ ಸಿಗುವುದಿಲ್ಲ ಎಂದು ಸಚಿವೆ ನಿನ್ನೆ ಗೊಂದಲದ ಹೇಳಿಕೆ ನೀಡಿದ್ದರು. ಇದಕ್ಕೆ ಸ್ಪಷ್ಟೀಕರಣ ನೀಡಿರುವ ಅವರು, ಮಗ ತೆರಿಗೆ ಪಾವತಿ ಮಾಡುವುದನ್ನು ಪರಿಗಣಿಸುವುದಿಲ್ಲ. ಗಂಡ ತೆರಿಗೆ ಪಾವತಿಸಿದರೆ ಪತ್ನಿಗೆ ಯೋಜನೆ ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಅರ್ಜಿ …
Read More »ಬೈಕ್ಗೆ ಲಾರಿ ಡಿಕ್ಕಿ..ಮೂವರ ಸಾವು
ಬಾಗಲಕೋಟೆ: ಬೈಕ್ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದಲ್ಲಿ ಇಂದು ಈ ಘಟನೆ ನಡೆದಿದೆ. ಮೃತರನ್ನು ರಕ್ಕಸಗಿ ಗ್ರಾಮದ ಬೈಕ್ ಸವಾರ ಶ್ರೀಕಾಂತ ಮಾದರ (39), ಶಾಂತವ್ವ ಕಟ್ಟಿಮನಿ (43) ಹಾಗೂ ಮಾಂತವ್ವ ಮುರಡಿ (75) ಎಂದು ಗುರುತಿಸಲಾಗಿದೆ. ಶ್ರೀಕಾಂತ ಅವರು ಇಬ್ಬರು ಮಹಿಳೆಯರನ್ನು ಬೈಕ್ನಲ್ಲಿ ಕರೆದುಕೊಂಡು ಹೋಗುವಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಲಾರಿ ಪಲ್ಟಿಯಾಗಿದೆ. …
Read More »ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿ ಇಂದು ಆದೇಶ
ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಜಿಲ್ಲೆಯ ಉಸ್ತುವಾರಿ ವಹಿಸಿಲ್ಲ. ಹಿರಿಯ ಸಚಿವ ಕೃಷ್ಣಭೈರೇಗೌಡ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಅವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ನೇಮಕಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಬಹುತೇಕ ಆಯಾ ಜಿಲ್ಲೆಯ ಸಚಿವರುಗಳನ್ನೇ ತವರು ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ಮತ್ತು ಬೆಳಗಾವಿ …
Read More »ಲಾರಿ ತಡೆದು ಹಣ ವಸೂಲಿ ಆರೋಪ ; ಎಎಸ್‌ಐ ಸೇರಿದಂತೆ ಇಬ್ಬರು ಪೊಲೀಸರು ಸಸ್ಪೆಂಡ್.!
ತುಮಕೂರು : ತುಮಕೂರು ಮತ್ತು ಶಿರಾ ನಡುವೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಓರ್ವ ಎಎಸ್‌ಐ ಸೇರಿ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ತುಮಕೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ ವಾಡ್ ಅವರು ಆದೇಶ ಹೊರಡಿಸಿದ್ದಾರೆ. ಕಳ್ಳಂಬೆಳ್ಳ ಠಾಣೆಯ ಎಎಸ್‌ಐ ಚಿದಾನಂದ ಸ್ವಾಮಿ ಹಾಗೂ ಪೊಲೀಸ್ ಜೀಪ್ ಚಾಲಕ ಚಿಕ್ಕಹನುಮಯ್ಯರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಇವರು ಹೆದ್ದಾರಿಯಲ್ಲಿ ಲಾರಿಗಳನ್ನು …
Read More »ಊಟಿಯಲ್ಲಿ ಕಾರು ಪಲ್ಟಿ.. ನರಸಿಂಹರಾಜ ವಿಧಾನಸಭಾ ಕ್ಷೇತ್ರ ಬಿಜೆಪಿ ಮುಖಂಡ ಇನ್ನಿಲ್ಲ
ಮೈಸೂರು/ಊಟಿ: ತಮಿಳುನಾಡಿನ ಊಟಿಯಲ್ಲಿ ಗುರುವಾರ ಕಾರು ಅಪಘಾತಕ್ಕೀಡಾಗಿ ಮೈಸೂರಿನ ಬಿಜೆಪಿ ಮುಖಂಡರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಮೃತ ವ್ಯಕ್ತಿ ಮೈಸೂರು ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸ್ವಾಮಿಗೌಡ ಎಂದು ಗುರುತಿಸಲಾಗಿದೆ. ಬುಧವಾರದಂದು ಸ್ವಾಮಿಗೌಡ ಅವರು ತಮ್ಮ ಸ್ನೇಹಿತ ಜಗದೀಶ ಗೌಡ ಅವರ ಕುಟುಂಬ ಜೊತೆ ತಮಿಳುನಾಡಿನ ಊಟಿ ಪ್ರವಾಸಕ್ಕೆ ತೆರಳಿದ್ದರು. ಕಾರಿನಲ್ಲಿ ಸ್ವಾಮಿಗೌಡ, ಜಗದೀಶ್ ಗೌಡ, ಆತನ ಪತ್ನಿ ಮತ್ತು ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು. …
Read More »ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಆರಂಭ.. ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಆಗಿದೆ : ಕುಮಾರಸ್ವಾಮಿ ಆರೋಪ
ಬೆಂಗಳೂರು : ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದಾರೆ. ಪಕ್ಷದ ಕಚೇರಿ ಜೆ ಪಿ ಭವನದಲ್ಲಿ ಇಂದು ವಿವಿಧ ಜಿಲ್ಲೆಗಳ ಮುಖಂಡರ ಆತ್ಮಾವಲೋಕನ ಸಭೆಯ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರವನ್ನು ಟೀಕೆ ಮಾಡುತ್ತಿದ್ದ ಇದೇ ಕಾಂಗ್ರೆಸ್ ನಾಯಕರು ಈಗ ಪ್ರತಿ ಹುದ್ದೆಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಹಿಂದಿನ …
Read More »ಮುಂಗಾರು ಮಳೆ ವಿಳಂಬ; ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕಡಿಮೆಯಾಗಿದೆ. ಬಿಸಿಲ ತಾಪಕ್ಕೆ ಬಹುತೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿಯುತ್ತಿದೆ. ಕಲ್ಯಾಣ ಕರ್ನಾಟಕ ಭಾಗದ ತುಂಗಭದ್ರಾ ಜಲಾಶಯವು ಬಹುತೇಕ ಖಾಲಿಯಾಗಿದೆ. ಇಲ್ಲಿನ ನೀರಿನ ಮಟ್ಟ ಡೆಡ್ ಸ್ಟೋರೇಜ್ ಹಂತ ತಲುಪಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ. ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಕೆಲವು ಜಿಲ್ಲೆಗಳಿಗೆ ಈ ಜಲಾಶಯದ ನೀರು ಅಗತ್ಯ. ರಾಜ್ಯದ ಹಲವು ಕಡೆ ಮಳೆಯಗುತ್ತಿದ್ದರೂ, ಈ ಭಾಗದಲ್ಲಿ ನಿರೀಕ್ಷಿತ …
Read More »