Breaking News

ರಾಷ್ಟ್ರೀಯ

ಹೊರ ರಾಜ್ಯಗಳಿಂದ ಅಕ್ಕಿ ತರಲು ತೀರ್ಮಾನ : ಜುಲೈ 1ಕ್ಕೆ ಅನ್ನಭಾಗ್ಯ ಯೋಜನೆ ಜಾರಿಗೆ ಪ್ರಯತ್ನ

ಬೆಂಗಳೂರು : ಅನ್ನಭಾಗ್ಯ ಯೋಜನೆಗೆ ಬೇಕಾದ ಅಕ್ಕಿಯನ್ನು ಹೊರರಾಜ್ಯಗಳಿಂದ ತರಲು ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಯೋಜನೆಗೆ ಅಗತ್ಯವಾದ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಒದಗಿಸಲು ಕೇಂದ್ರ ಸರ್ಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿದ್ದರಾಮಯ್ಯ ತಮ್ಮ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯನ್ನು ಜುಲೈ ಒಂದರಂದೇ ಜಾರಿಗೆ ತರಲು ಎಲ್ಲ ಕಸರತ್ತು ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಗೆ ಅಗತ್ಯವಾದ ಅಕ್ಕಿ ಯಾವ ಯಾವ …

Read More »

ಪಂಚಮಸಾಲಿ ಮೀಸಲಾತಿ ವಿಚಾರ: ಆದಷ್ಟು ಬೇಗ ಸಿಎಂ ಸಿದ್ದರಾಮಯ್ಯ ಆಡಳಿತಾತ್ಮಕ ಸಭೆ ಕರೆದು ತೀರ್ಮಾನಿಸಲಿ

ಬೆಳಗಾವಿ: ಈ ಬಾರಿ ನಮ್ಮ ಪಂಚಮಸಾಲಿ ಸಮಾಜ ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮಗೆ ನ್ಯಾಯ ಕೊಡಿಸುವ ವಿಶ್ವಾಸವಿದೆ‌. ಆ ನಿಟ್ಟಿನಲ್ಲಿ ಆದಷ್ಟು ಬೇಗನೆ ಮುಖ್ಯಮಂತ್ರಿಗಳು ಆಡಳಿತಾತ್ಮಕ ಸಭೆ ಕರೆದು ತಮ್ಮ ಜೊತೆ ಮಾತುಕತೆ ನಡೆಸಬೇಕು ಎಂದು ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಇಂದು ನಗರದ ಗಾಂಧಿ ಭವನದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ …

Read More »

ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಧರ್ಮ ಸಂಕಟ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಧರ್ಮ ಸಂಕಟ ಎದುರಾಗಿದೆ. ವೀರಶೈವ ಲಿಂಗಾಯತ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂದು ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳು ಹಕ್ಕೊತ್ತಾಯ ಮಂಡಿಸಿವೆ. ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿಂದು ಬೃಹತ್ ಸಭೆ ನಡೆಸಿದ ಮಠಾಧೀಶರು, ಎಲ್ಲ ವೀರಶೈವ ಲಿಂಗಾಯತರನ್ನು ಒಬಿಸಿ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿದರು. ಮಠಾಧೀಶರ ಸಭೆಯ ನೇತೃತ್ವವನ್ನು ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ವಹಿಸಿದ್ದರು. ಕಾಶಿ ಪೀಠದ ಚಂದ್ರಶೇಖರ …

Read More »

ಶುಭ ಶುಕ್ರವಾರ.. ನಾಳೆಯಿಂದ ಗೃಹ ಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಅವಕಾಶ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಈ ಬಾರಿ ನಡೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬರೋಬ್ಬರಿ 135 ಸ್ಥಾನಗಳೊಂದಿಗೆ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಇದೀಗ ತಾನು ಘೋಷಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದೆ. ಮೊದಲ ಗ್ಯಾರಂಟಿಯಾಗಿ ಮಹಿಳೆಯರಿಗೆ ಶಕ್ತಿ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿದೆ. ಕಳೆದ ಭಾನುವಾರ (ಜೂನ್ 11) ದಿಂದ ಇದು ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮಿ ಯೋಜನೆಗೆ ಮುಂದಾಗಿದೆ. …

Read More »

ಬಿಟ್ ಕಾಯಿನ್ ಹಗರಣ ಮರು ತನಿಖೆ ಮಾಡುತ್ತೇವೆ- ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಬಿಟ್ ಕಾಯಿನ್ ಹಗರಣವನ್ನು ಮರು ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಚಿವರು ಮಾತನಾಡಿದರು. ಬಿಜೆಪಿಯವರು ಈಗಲೇ ಕುಣಿದಾಡ್ತಿದ್ದಾರೆ. ನಮ್ಮ ಸರ್ಕಾರ ಬಂದು 20 ದಿನವಾಗಿದೆ ಅಷ್ಟೇ. ಅವರು ಸ್ವಲ್ಪ ಸಮಾಧಾನವಾಗಿರುವುದು ಒಳ್ಳೆಯದು ಎಂದರು. ಸುರ್ಜೇವಾಲ ಅವರು ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಅದು ಅಧಿಕೃತ ಸಭೆ ಆಗಿರಲಿಲ್ಲ. ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆ ನಡೆಸಿದ್ದರು. ಆ …

Read More »

ಬಿಜೆಪಿ ಮಹಾ ಜನಸಂಪರ್ಕ ಅಭಿಯಾನ: ದೇವೇಗೌಡರಿಗೆ ಕೇಂದ್ರ ಸರ್ಕಾರ, ಕ್ಷೇತ್ರದ ಸಾಧನೆಯ ವರದಿ ನೀಡಿದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ 9 ವರ್ಷಗಳ ಸೇವಾ ಅವಧಿಯಲ್ಲಿ ಮಾಡಿದ ಕಾರ್ಯಗಳು ಮತ್ತು 2019ರಿಂದ ಬೆಂಗಳೂರು ದಕ್ಷಿಣದಲ್ಲಿ ಮಾಡಿದ ಸಾಧನೆಗಳ ವರದಿಯನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೀಡಿದರು. ಇದೇ ವೇಳೆ ನಮೋ ವಿದ್ಯಾನಿಧಿ ಕಾರ್ಯಕ್ರಮದ ಅಡಿಯಲ್ಲಿ ಮಕ್ಕಳಿಗೆ ತಲಾ 10 ಸಾವಿರ ರೂಪಾಯಿ ಶಿಷ್ಯವೇತನವನ್ನು ಹೆಚ್.ಡಿ.ದೇವೇಗೌಡರ ಮೂಲಕ ವಿತರಣೆ ಮಾಡಿಸಿ ಗಮನ ಸೆಳೆದರು. ಸೂರ್ಯ ಅವರ ಈ ಭೇಟಿಯು ಮಹಾ …

Read More »

ತೊಗರಿ, ಉದ್ದು ಬೆಲೆ ಏರಿಕೆ: ದಾಸ್ತಾನಿಗರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಬೇಳೆ ಕಾಳುಗಳ ಬೆಲೆ ಏರಿಕೆ ನಿಯಂತ್ರಣ ವಿಷಯವಾಗಿ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಮಹತ್ವದ ನಿರ್ದೇಶನ ನೀಡಿದೆ. ಮುಖ್ಯವಾಗಿ, ತೊಗರಿ ಮತ್ತು ಉದ್ದು ಕಾಳುಗಳನ್ನು ಸಂಗ್ರಹಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಿದೆ. ಅಲ್ಲದೇ, ಈ ಬೇಳೆ ಕಾಳುಗಳ ಕಳಪೆ ಪೂರೈಕೆ ಮತ್ತು ಏರುತ್ತಿರುವ ಬೆಲೆ ಕಾರಣದಿಂದ ಅವುಗಳ ಮೇಲೆ ದಾಸ್ತಾನಿನ ಮೇಲೆ ಮಿತಿಗಳನ್ನು ಹೇರಲು ಕೇಂದ್ರ ಒತ್ತಾಯಿಸಿದೆ. ಬುಧವಾರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯು …

Read More »

ಶಕ್ತಿ ಯೋಜನೆಗೆ ಉತ್ತಮ‌ ಸ್ಪಂದನೆ: ವಾಯವ್ಯ ಸಾರಿಗೆಯಲ್ಲಿ ಜೂ.13ರಂದು ಪ್ರಯಾಣಿಸಿದ ಮಹಿಳೆಯರೆಷ್ಟು ಗೊತ್ತೇ?

ಹುಬ್ಬಳ್ಳಿ: ರಾಜ್ಯಾದ್ಯಂತ ಆರಂಭವಾಗಿರುವ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಯಡಿ ಜೂನ್ 13ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಬಸ್ಸುಗಳಲ್ಲಿ 11.09 ಲಕ್ಷ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ.2.72 ಕೋಟಿಗಳಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಗೆ ಸಾರ್ವಜನಿಕರಿಂದ ನಿರೀಕ್ಷೆಗೆ ಮೀರಿದ ಸ್ಪಂದನೆ ವ್ಯಕ್ತವಾಗಿದೆ. ಮೂರನೇ ದಿನ ಜೂನ್ 13 ಮಂಗಳವಾರ ವಾಯವ್ಯ ಕರ್ನಾಟಕ ರಸ್ತೆ …

Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ: ಮೂವರು ಸಾವು

ರಾಮನಗರ: ನೂತನ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಿಲ್ಲೆಯ ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಅಪಘಾತವಾಗಿದೆ. ಮೈಸೂರಿನಿಂದ ಬೆಂಗಳೂರು ಕಡೆಗೆ ವೇಗವಾಗಿ ಸಂಚರಿಸುತ್ತಿದ್ದ ಕಾರು ಓವರ್ ಟೇಕ್ ಮಾಡಲು ಲಾರಿಯ ಹಿಂಬದಿಗೆ ಗುದ್ದಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಒಂದೇ ಕುಟುಂಬದ 13 ವರ್ಷದ ಮಗು, 20 ವರ್ಷದ ಯುವತಿ ಹಾಗು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಚಾಲಕ …

Read More »

ಅನ್ನಭಾಗ್ಯ ಆರಂಭವಾಗುವುದು ಅನುಮಾನ, ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜು.1 ರಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಅನ್ನಭಾಗ್ಯ ಆರಂಭವಾಗುವುದು ಅನುಮಾನ ಎಂಬ ಅಭಿಪ್ರಾಯವನ್ನು ಸಿಎಂ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಶಕ್ತಿ ಭವನದಲ್ಲಿ ಇಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 5 ಗ್ಯಾರಂಟಿಗಳ ಪೈಕಿ ಒಂದನ್ನು ನಾವು ಈಗಾಗಲೇ ಜಾರಿ ಮಾಡಿದ್ದೇವೆ. ನಮ್ಮ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಸೇರಿದೆ. ಪ್ರತಿಯೊಬ್ಬರಿಗೆ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದೇವೆ ಎಂದು ತಿಳಿಸಿದರು. ಬಿಪಿಎಲ್, ಅಂತ್ಯೋದಯ ಕಾರ್ಡ್​ನವರಿಗೆ 10 …

Read More »