Breaking News

ರಾಷ್ಟ್ರೀಯ

ಯಡಿಯೂರಪ್ಪರನ್ನು ಕೆಳಗಿಳಿಸಬಾರದಿತ್ತು, ಶೆಟ್ಟರ್, ಈಶ್ವರಪ್ಪಗೆ ಟಿಕೆಟ್ ಕೋಡ್ಬೆಕಿತ್ತು: ಎಂ ಪಿ ರೇಣುಕಚಾರ್ಯ

ದಾವಣಗೆರೆ: ನಮ್ಮ ಸರ್ಕಾರದ ತಪ್ಪು ನಿರ್ಧಾರಗಳಿಂದ ನಾವು ಸೋತಿದ್ದೇವೆ, ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸ ಬಾರದಿತ್ತು. ಜಗದೀಶ್ ಶೆಟ್ಟರ್, ಕೆ ಎಸ್ ಈಶ್ವರಪ್ಪ ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡಬೇಕಿತ್ತು. ಈ ತಪ್ಪು ನಿರ್ಧಾರದಿಂದ ನಮಗೆ ಸೋಲಾಗಿದೆ ಎಂದು ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಚುನಾವಣೆಯಲ್ಲಿ ಪಕ್ಷ ತೆಗೆದುಕೊಂಡ ತಪ್ಪು ನಿರ್ಧಾರಗಳ ಬಗ್ಗೆ ಧ್ವನಿ ಎತ್ತಿದ್ದಾರೆ. ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ‌ ಸರ್ಕಾರಕ್ಕೆ …

Read More »

ಎಲ್ಲ ನಾಯಕರು ಮಾತಿನ ಮೇಲೆ ಹಿಡಿತ ಇಟ್ಟುಕೊಂಡು ಮಾತಾಡಬೇಕು ಎಂದು ಕಟೀಲ್ ಎಚ್ಚರಿಕೆ

ಮಂಗಳೂರು : ಯಾರೂ ಯಾವುದೇ ಹೇಳಿಕೆಗಳ‌ನ್ನು ನೀಡಬಾರದು. ಪಾರ್ಟಿಯ ಶಿಸ್ತು ಅನುಶಾಸನ ಪ್ರಕಾರವೇ ಎಲ್ಲರೂ ಕೆಲಸ ಮಾಡಬೇಕು. ಯಾರಾದರೂ ಹೇಳಿಕೆ ಕೊಟ್ಟರೆ ಶಿಸ್ತುಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ನಾಯಕತ್ವದ ಬಗ್ಗೆ ಪಕ್ಷದೊಳಗೆ ಅಪಸ್ವರ ವಿಚಾರದ ಬಗ್ಗೆ ಇಂದು ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯದಲ್ಲಿ ಸೋತ ಬಳಿಕ ರಾಜ್ಯ ಪ್ರವಾಸ ಕೈಗೊಂಡಿದ್ದೇನೆ. ಎಲ್ಲೂ ಗಲಾಟೆಗಳು ಆಗಿಲ್ಲ. ಎಲ್ಲ ಕಾರ್ಯಕರ್ತರು ಲೋಕಸಭಾ …

Read More »

ವಂದೇ ಭಾರತ್ ರೈಲಿನಲ್ಲೂ ಬೆಳಗಾವಿಗೆ ಅನ್ಯಾಯ

ಬೆಳಗಾವಿ: ಇಂದಿನಿಂದ ಬೆಂಗಳೂರು- ಹುಬ್ಬಳ್ಳಿ- ಧಾರವಾಡ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಿದೆ. ಆದರೆ ಬೆಳಗಾವಿವರೆಗೂ ವಂದೇ ಭಾರತ್ ರೈಲು ಓಡದೇ ಇರುವುದು ಇಲ್ಲಿನ ಜನರ ಅಸಮಾಧಾನಕ್ಕೆ ಕಾರಣವಾಗಿದೆ.   3 ತಿಂಗಳ ಹಿಂದೆಯಷ್ಟೇ ಬೆಳಗಾವಿಯಲ್ಲಿದ್ದ ರೇಷ್ಮೆ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಬೊಮ್ಮಾಯಿ ಸರ್ಕಾರ ಹಾವೇರಿಗೆ ಸ್ಥಳಾಂತರ ಮಾಡಿದೆ. ಉಡಾನ್ ಯೋಜನೆಯಡಿ ಅನೇಕ ವಿಮಾನ ಸೇವೆಗಳು ರದ್ದಾಗಿವೆ. ಅಲ್ಲದೇ ಹಲವಾರು ಯೋಜನೆಗಳು ಕೂಡ ಬೆಳಗಾವಿ ಕೈ ತಪ್ಪಿದೆ. ಈಗ …

Read More »

ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಕ್ಕೆ ಮತ್ತಷ್ಟು ಚುರುಕು ಮೂಡಿಸಲು ಹಿರಿಯ ಅಧಿಕಾರಿಗಳ ವರ್ಗಾವಣೆ ಕೈಗೊಂಡಿರುವ ಸರ್ಕಾರ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸೋಮವಾರ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.   ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ, ಎಂಡಿ, ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮ ಜೆ. ಅರುಣ್ ಚಕ್ರವರ್ತಿ -ಎಡಿಜಿಪಿ. ನಾಗರಿಕ ಜಾರಿ ನಿರ್ದೇಶನಾಲಯ ವಿಕಾಸ್ ಕುಮಾರ್ ವಿಕಾಶ್- …

Read More »

ವಂದೇ ಭಾರತ್ ಎಕ್ಸ್‌ಪ್ರೆಸ್‌ʼ ರೈಲುಗಳಿಗೆ ‘ಪ್ರಧಾನಿ ಮೋದಿ’ ಚಾಲನೆ

ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಏಕಕಾಲದಲ್ಲಿ ಐದು ವಂದೇ ಭಾರತ್ ಎಕ್ಸ್‌ಪ್ರೆಸ್‌(Vande Bharat Express) ರೈಲುಗಳಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಮತ್ತು ಹಟಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭೋಪಾಲ್ನಿಂದ ಮೋದಿ ಚಾಲನೆ ನೀಡಲಿದ್ದಾರೆ.    

Read More »

ಗ್ರಾಮ ಒನ್​ನಲ್ಲಿ ಯಾರಾದರೂ ಲಂಚ ಕೇಳಿದರೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್​

ರಾಮನಗರ: ನಮ್ಮನ್ನು ಜನ ಆಯ್ಕೆ ಮಾಡಿದ್ದಾರೆ. ಜನ ಸೇವೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಸರ್ಕಾರದ ಸೇವೆ ಮಾಡಲು ನೀವಿದ್ದಿರಿ. ರಾಜಕಾರಣಿಗಳು ಅಧಿಕಾರಿಗಳ ಬಳಿ ಜನ ಬರೋದು ಸಮಸ್ಯೆ ಬಗೆಹರಿಯದೇ ಇದ್ದಾಗ. ಆ ಸಮಸ್ಯೆ ಬಗೆಹರಿಸಬೇಕಾದ್ದು ನಮ್ಮ ಕರ್ತವ್ಯ. ಕಾನೂನು ಚೌಕಟ್ಟಿನೊಳಗೆ ಸಮಸ್ಯೆಗಳನ್ನು ಪರಿಹರಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ರಾಮನಗರ ಜಿಲ್ಲಾ ಪಂಚಾಯಿತಿಯಲ್ಲಿ ಇಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರವನ್ನು …

Read More »

ಮಧ್ಯಪ್ರದೇಶದಲ್ಲೂ ಪೇಸಿಎಂ ಪೋಸ್ಟರ್ ವಾರ್

ಭೋಪಾಲ್ (ಮಧ್ಯ ಪ್ರದೇಶ) : ಈ ವರ್ಷಾಂತ್ಯದಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಮಧ್ಯೆ ರಾಜಕೀಯ ಪಕ್ಷಗಳ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದ್ದು, ಇದೀಗ ಪೋಸ್ಟರ್ ವಾರ್​ನಿಂದಾಗಿ ರಾಜ್ಯದ ರಾಜಕೀಯ ಮತ್ತಷ್ಟು ರಂಗೇರುತ್ತಿದೆ. ಮಾಜಿ ಸಿಎಂ ಕಮಲ್ ನಾಥ್ ಮತ್ತು ಹಾಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರ ಚಿತ್ರಗಳಿರುವ ಆಕ್ಷೇಪಾರ್ಹ ಪೋಸ್ಟರ್‌ಗಳು ಅಲ್ಲಲ್ಲಿ ಕಾಣಿಸಿಕೊಂಡ ಮೂರು ದಿನಗಳ ನಂತರ, ಈಗ ಮತ್ತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ …

Read More »

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಸನ್ಮಾನಿಸಿದ ಸಚಿವರಾದ ಸತೀಶ್ ಜಾರಕಿಹೊಳಿ ಅವರು

ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಭೇಟಿಯಾಗಿ ಸನ್ಮಾನಿಸಿದರು.   ರಾಜ್ಯದಲ್ಲಿನ ರಸ್ತೆಗಳು ಹಾಗೂ ಮೇಲ್ಸೆತುವೆಗಳ ಮೇಲ್ದರ್ಜೆಗೆ ಏರಿಸುವುದು ಹಾಗೂ ವಿವಿಧ ನಗರಗಳಲ್ಲಿ ಬೈಪಾಸ್ ರಸ್ತೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ವಿವಿಧ ಯೋಜನೆಗಳ ಅನುಮೋದನೆ ಬಗ್ಗೆ ಕೂಡ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು.

Read More »

ಜುಲೈ 7ಕ್ಕೆ 3.25 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆಗೆ ಸಿದ್ಧತೆ.. ಪಂಚ ಗ್ಯಾರಂಟಿಗಾಗಿ ರಾಜಸ್ವ ಸಂಗ್ರಹದ ಟಾರ್ಗೆಟ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪಂಚ ಗ್ಯಾರಂಟಿ ಯೋಜನೆಗಳ ಕೇಂದ್ರೀಕೃತ ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ. ನಿರ್ಗಮಿತ ಬಿಜೆಪಿ ಸರ್ಕಾರ ಮಂಡಿಸಿದ ಬಜೆಟ್​ ಅನ್ನು ಅಲ್ಪ ಪರಿಷ್ಕೃರಣೆಯೊಂದಿಗೆ ಸಿಎಂ ಸಿದ್ದರಾಮಯ್ಯ ಅಂದಾಜು 3.25 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲು ತಯಾರಿ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ ಮಂಡನೆಗೆ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಜುಲೈ 7ಕ್ಕೆ ನೂತನ ಕಾಂಗ್ರೆಸ್ ಸರ್ಕಾರದ ಬಜೆಟ್ ಮಂಡನೆಯಾಗಲಿದೆ. ಈಗಾಗಾಲೇ ನಿರ್ಗಮಿತ ಬಿಜೆಪಿ ಸರ್ಕಾರ …

Read More »

ಜುಲೈ 2 ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ: ದೀಲಿಪ ಕುರಂದವಾಡೆ

ಜುಲೈ 2 ರಂದು ಬೆಳಗಾವಿ ನಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಆಚರಿಸಲಾಗುವದು ಎಂದು ಜಿಲ್ಲಾ ಅದ್ಯಕ್ಷ ದೀಲಿಪ ಕುರಂದವಾಡೆ ಹೇಳಿದರು.  ಬೆಳಗಾವಿ ನಗರದಲ್ಲಿ ಜರುಗಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಣಿ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡುತ್ತಾ ಬೆಳಗಾವಿ ನಗರದಲ್ಲಿ ಅಂತರಾಷ್ಟ್ರೀಯ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಮಟ್ಟದ ಪತ್ರಿಕಾ ದಿನಾಚಾರಣೆ ಆಚರಿಸುವ ಕುರಿತು ರೂಪ ರೆಷೆಗಳಂತೆ ಜಿಲ್ಲಾ ಮಟ್ಟದ …

Read More »