ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶ ಸಮರ್ಪಕವಾಗಿ ಜಾರಿಯಾಗದೇ ತಜ್ಞ ವೈದ್ಯರ ಕೊರತೆ ಮತ್ತು ಎಂಆರ್ಐ ಹಾಗೂ ಡಯಾಲಿಸಿಸ್ ಯಂತ್ರಗಳನ್ನು ತಾಲೂಕು ಆಸ್ಪತ್ರೆಗಳಲ್ಲಿ ಸಮರ್ಪಕವಾಗಿ ಅಳವಡಿಸದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಇದೇ ವೇಳೆ, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಮತ್ತು ನರ್ಸ್ಗಳ ಕೊರತೆ ತಗ್ಗಿಸಲು ವೇತನ ಹೆಚ್ಚಳ ಪರಿಶೀಲನೆಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಭಿಯಾನದ ಕೊರತೆಗಳನ್ನು ಗುರುತಿಸಿ ಮುಂದಿನ ಸಭೆ ವೇಳೆಗೆ …
Read More »ವಿದ್ಯುತ್ ಅವಘಡ: ನೂರಾರು ಎಲೆಕ್ಟ್ರಿಕ್ ಉಪಕರಣಗಳು ಸುಟ್ಟು ಭಸ್ಮ, ನಾಲ್ವರಿಗೆ ಗಂಭೀರ ಗಾಯ
ತುಮಕೂರು: ವಿದ್ಯುತ್ ಸ್ಪರ್ಶದಿಂದ ಗಂಭೀರವಾಗಿ ಗಾಯಗೊಂಡ ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದು, ನೂರಾರು ಮನೆಗಳ ವಿದ್ಯುತ್ ಉಪಕರಣಗಳು ಸುಟ್ಟು ಭಸ್ಮವಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಚಿಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿನ 11 ಕೆವಿ ವಿದ್ಯುತ್ ಸಾಮರ್ಥ್ಯದ ತಂತಿ ತುಂಡಾದ ಪರಿಣಾಮ ಅವಘಡ ಸಂಭವಿಸಿದೆ. ಗ್ರಾಮದ 70 ಮನೆಗಳಲ್ಲಿನ ವಿದ್ಯುತ್ ಉಪಕರಣಗಳು ಭಸ್ಮವಾಗಿದ್ದು, ನೂರಾರು ಮನೆಗಳ ವೈರಿಂಗ್ ಸೇರಿದಂತೆ ಗೃಹಪಯೋಗಿ ವಸ್ತುಗಳು, ವಿದ್ಯುತ್ ಮೀಟರ್ಗಳು ಸುಟ್ಟು ಭಸ್ಮವಾಗಿವೆ. ಲಕ್ಷಾಂತರ ರೂಪಾಯಿ ಬೆಲೆ …
Read More »ಕಳಪೆ ಬೀಜ ವಿತರಣೆ ಕಂಡು ಬಂದರೆ ಅಧಿಕಾರಿಗಳೇ ಹೊಣೆ : ಸಚಿವ ಚೆಲುವರಾಯಸ್ವಾಮಿ
ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿದ್ದು, ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಅಧಿಕಾರಿಗಳ ವಿಭಾಗಮಟ್ಟದ ಸಭೆಯ ಅಧ್ಯಕ್ಷತೆ …
Read More »ಮಹಿಳೆಯರ ‘ಉಚಿತ ಪ್ರಯಾಣ’ಕ್ಕೆ ಇನ್ಮುಂದೆ ‘ಒರಿಜಿನಲ್ ಐಡಿ’ ಬೇಕಿಲ್ಲ -KSRTC ಆದೇಶ
ಬೆಂಗಳೂರು: ಶಕ್ತಿ ಯೋಜನೆಯ ( Shakti Scheme ) ಅಡಿಯಲ್ಲಿ ಮಹಿಳೆಯರು ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸಲು ಒರಿಜಿನಲ್ ಐಡಿ ಕಾರ್ಡ್ ( Original ID ) ಏನೂ ಬೇಕಿಲ್ಲ. ನಕಲು ಪ್ರತಿ ಇದ್ದರೂ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂಬುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾರ್ಪಾಡು ಆದೇಶದಲ್ಲಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ( Karnataka State …
Read More »DCM ಡಿಕೆ ಶಿವಕುಮಾರ್’ಗೆ ತಾತ್ಕಾಲಿಕ ರಿಲೀಫ್: ಏಕಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ವಿಚಾರ ಸಂಬಂಧ, ಇಂದು ಹೈಕೋರ್ಟ್ ವಿಭಾಗೀಯ ಪೀಠದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡುವ ಮೂಲಕ, ತಾತ್ಕಾಲಿಕ ರಿಲೀಫ್ ಅನ್ನು ಡಿಕೆಶಿಗೆ ನೀಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಿಬಿಐ ತನಿಖೆಗೆ ತಡೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠಕ್ಕೆ ಏಕ ಸದಸ್ಯ ಪೀಠ ವಜಾಗೊಳಿಸಿತ್ತು. ಈ ಸಂಬಂಧ ಹೈಕೋರ್ಟ್ ಮತ್ತೊಂದು ನ್ಯಾಯಪೀಠಕ್ಕೆ …
Read More »ಉತ್ತರಕನ್ನಡ ಜಿಲ್ಲೆಯಲ್ಲಿ ಮಲ್ಲಿ ಸ್ಪೆಷಾಲಿಟಿ ಆಸ್ಪತ್ರೆ ಮಾಡಲು ಚಾಲನೆ: ಸಚಿವ ಮಂಕಾಳು ವೈದ್ಯ
ಬೆಂಗಳೂರು : ಈ ಹಿಂದೆ ನಾವು ಅಧಿಕಾರದಲ್ಲಿದ್ದಾಗ ಕಾರವಾರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ ಮಾಡಲಾಗಿದೆ. ಅಲ್ಲಿಯೇ 350 ಬೆಡ್ ವ್ಯವಸ್ಥೆ ಇದ್ದು, ಸದ್ಯಕ್ಕೆ ತುರ್ತಾಗಿ ಮಲ್ಟಿ ಸ್ಪೆಷಾಲಿಟಿ ಅಗತ್ಯ ಇರುವುದರಿಂದ ಅಲ್ಲಿಯೇ ಇನ್ನೂ 100 ಬೆಡ್ ಹೆಚ್ಚಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಆಗಬೇಕಾದ ಅಗತ್ಯತೆ ಹಿನ್ನೆಲೆಯಲ್ಲಿ ಈಗಾಗಲೇ ಮೆಡಿಕಲ್ ಕಾಲೇಜಿನಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಾಡಲು ಚಾಲನೆ ನೀಡಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ. …
Read More »NCP ನಾಯಕ ಶರದ್ ಪವಾರ್‌ಗೆ ಜೀವ ಬೆದರಿಕೆ: ಐಟಿ ಉದ್ಯೋಗಿಯ ಬಂಧನ
ಮುಂಬೈ (ಮಹಾರಾಷ್ಟ್ರ): ಎನ್‌ಸಿಪಿ ನಾಯಕ ಶರದ್ ಪವಾರ್‌ಗೆ ಸಾಮಾಜಿಕ ಮಾಧ್ಯಮದಲ್ಲಿ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಮುಂಬೈ ಕ್ರೈಂ ಬ್ರಾಂಚ್ ಪುಣೆಯ ವ್ಯಕ್ತಿಯನ್ನು ಬಂಧಿಸಿದೆ. ಆರೋಪಿಯನ್ನು ಸಾಗರ್ ಬರ್ವೆ(34 ) ಎಂದು ಗುರುತಿಸಲಾಗಿದೆ. ಆತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಜೂ 13ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳು …
Read More »ಕೆಂಪು ಸಮುದ್ರದಲ್ಲಿ ಶಾರ್ಕ್ ದಾಳಿ ಬಳಿಕ ಮತ್ತೊಂದು ದುರಂತ.. ದೋಣಿಗೆ ಬೆಂಕಿ, ಬ್ರಿಟಿಷ್ ಪ್ರವಾಸಿಗರು ನಾಪತ್ತೆ!
ಕೈರೋ: ಭಾನುವಾರ ಈಜಿಪ್ಟ್‌ನ ಕೆಂಪು ಸಮುದ್ರದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಗೆ ಬೆಂಕಿ ಹೊತ್ತಿಕೊಂಡಿದೆ. ದೋಣಿಯಲ್ಲಿ ಹಲವಾರು ಬ್ರಿಟಿಷ್ ಪ್ರವಾಸಿಗರು ಪ್ರಯಾಣಿಸುತ್ತಿದ್ದು, ಅವರಲ್ಲಿ ಮೂವರು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಸಮುದ್ರದಲ್ಲಿ ಮೂವರು ನಾಪತ್ತೆ: ಈಜಿಪ್ಟಿನ ಕೆಂಪು ಸಮುದ್ರದಲ್ಲಿ ದುರಂತ ಘಟನೆಯೊಂದು ಸಂಭವಿಸಿದೆ. ಸಮುದ್ರದಲ್ಲಿ ಪ್ರಯಾಣಿಸುತ್ತಿದ್ದ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಬ್ರಿಟಿಷ್ ಪ್ರವಾಸಿಗರು ನಾಪತ್ತೆಯಾಗಿದ್ದಾರೆ (British tourists missing). ಸುದ್ದಿ ತಿಳಿದಾಕ್ಷಣ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಕಾಣೆಯಾದ ಮೂವರು ಪ್ರವಾಸಿಗರಿಗಾಗಿ ಶೋಧ ಕಾರ್ಯಾಚರಣೆ …
Read More »ವಿದೇಶಿ ಯೂಟ್ಯೂಬರ್ಗೆ ಬೆಂಗಳೂರಿನಲ್ಲಿ ಕಿರುಕುಳ ಆರೋಪ; ಆರೋಪಿ ಬಂಧನ
ಬೆಂಗಳೂರು: ಅತಿಥಿ ದೇವೋಭವ ಎಂಬ ಪರಿಕಲ್ಪನೆಯನ್ನ ಅತ್ಯಂತ ಗೌರವದಿಂದ ಆಚರಿಸುವ ದೇಶ ಭಾರತ. ಭಾರತದ ಯೂಟ್ಯೂಬರ್ಗಳು ಗಡಿ ದಾಟಿ ವಿಶ್ವದ ಮೂಲೆ ಮೂಲೆ ಪರಿಚಯಿಸುತ್ತಿರುವ ಈ ದಿನಗಳಲ್ಲಿ ಭಾರತೀಯರನ್ನ ಅಲ್ಲಿನ ಜನ ಬರಮಾಡಿಕೊಳ್ಳುವ ರೀತಿಯೂ ಸಹ ಅತಿಥಿ ದೇವೋಭವದ ಪರಿಕಲ್ಪನೆಯನ್ನ ಮತ್ತೊಮ್ಮೆ ನೆನಪಿಸುತ್ತಿದೆ. ಆದರೆ, ಅತಿಥಿ ಸತ್ಕಾರದಲ್ಲಿ ಸದಾ ಮುಂದು ಎನಿಸುವ ನಮ್ಮದೇ ರಾಜ್ಯದ, ರಾಜಧಾನಿ ಬೆಂಗಳೂರಿನಲ್ಲಿ ಇದಕ್ಕೆ ತದ್ವಿರುದ್ಧ ಎನಿಸುವ ಘಟನೆಯೊಂದು ನಡೆದಿದೆ ಎಂದು ಆರೋಪಿಸಲಾಗಿದೆ. ಬೆಂಗಳೂರನ್ನ ಸುತ್ತಾಡಲು ಬಂದಿದ್ದ …
Read More »ಗುಜರಾತ್: ಬಿಪೊರ್‌ಜಾಯ್ ತೀವ್ರಗೊಂಡಿ ಚಂಡಮಾರುತ
ಮಹಾರಾಷ್ಟ್ರ/ಗುಜರಾತ್: ಬಿಪೊರ್‌ಜಾಯ್ ಚಂಡಮಾರುತ ಇಂದು ತೀವ್ರಗೊಂಡಿದೆ. ಇದರಿಂದ ಮುಂಬೈ ಮತ್ತು ಗುಜರಾತ್ ಕರಾವಳಿಯಲ್ಲಿ ಅಲೆಗಳ ಉಬ್ಬರವಿಳಿತ ಹೆಚ್ಚಾಗಿದೆ. ಚಂಡಮಾರುತದ ಆರ್ಭಟಕ್ಕೆ ಕಡಲಿನ ಅಲೆಗಳು ದಡಕ್ಕೆ ಬಂದು ಅಪ್ಪಳಿಸುತ್ತಿವೆ. ಚಂಡಮಾರುತ ಮುಂದಿನ ದಿನಗಳಲ್ಲಿ ಗುಜರಾತ್ ಮತ್ತು ಪಾಕಿಸ್ತಾನದ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಸೌರಾಷ್ಟ್ರ ಮತ್ತು ಗುಜರಾತ್‌ನ ಕಚ್ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ನೀಡಿದೆ. ಈ ವಾರಾಂತ್ಯದಲ್ಲಿ ಮತ್ತು ಸೋಮವಾರ ಬೆಳಗ್ಗೆ ಕರಾವಳಿ ನಗರಗಳಾದ ಮುಂಬೈ ಮತ್ತು …
Read More »
Laxmi News 24×7