Breaking News

ರಾಷ್ಟ್ರೀಯ

ಪರಪ್ಪನ ಅಗ್ರಹಾರ ಜೈಲಲ್ಲಿರುವ ಕೊಲೆ ಆರೋಪಿಯಿಂದ ಹಿರಿಯೂರಿನ ಉದ್ಯಮಿಗೆ ಜೀವ ಬೆದರಿಕೆ

ಚಿತ್ರದುರ್ಗ, ಏಪ್ರಿಲ್ 15: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿರುವ (Parappana Agrahara Jail) ಕೊಲೆ ಆರೋಪಿಯೊಬ್ಬ ಚಿತ್ರದುರ್ಗದ (Chitradurga) ಹಿರಿಯೂರಿನ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ (Death threat) ಹಾಕಿರುವ ಆರೋಪ ಕೇಳಿಬಂದಿದೆ. ತುಮಕೂರಿನ ಮಾಜಿ ಮೇಯರ್ ಗಡ್ಡ ರವಿ ಕೊಲೆ ಪ್ರಕರಣದ ಆರೋಪಿ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ, ಹಿರಿಯೂರಿನ ಉದ್ಯನಿ ಅರ್ಜುನ್ ಸಿಂಗ್​ಗೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪವಿದೆ. ಸಹಚರರನ್ನು ಕಳುಹಿಸಿ ಬೆದರಿಕೆ ಹಾಕಿಸಿದ್ದಲ್ಲದೆ, ನಿರಂತರವಾಗಿ ವಾಯ್ಸ್ ಕಾಲ್, ಮೆಸೇಜ್​ಗಳ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಅರ್ಜುನ್ ಸಿಂಗ್​ ಆರೋಪಿಸಿದ್ದಾರೆ. …

Read More »

5 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು, ಏಪ್ರಿಲ್ 15: ಸಿಸಿಬಿ (CCB) ಮಾದಕವಸ್ತು ನಿಗ್ರಹದಳ ಬೆಂಗಳೂರಿನಲ್ಲಿ (Bengaluru) ನಡೆಸಿದ ಕಾರ್ಯಾಚರಣೆಯಲ್ಲಿ 5 ಕೋಟಿ ರೂ. ಮೌಲ್ಯದ ಡ್ರಗ್ಸ್ (Drugs) ಜಪ್ತಿ ಮಾಡಲಾಗಿದೆ. ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಒಂದು ಪ್ರಕರಣದಲ್ಲಿ 3.5 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು, ಬಂಧಿತನ ಬಳಿಯಿದ್ದ 30 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಜತೆಗೆ, ಮತ್ತೊಂದು ಪ್ರಕರಣದಲ್ಲಿ 1.5 ಕೋಟಿ ರೂ. ಮೌಲ್ಯದ ಸುಮಾರು 1 ಕೆಜಿ ಎಂಡಿಎಂಎ ಡ್ರಗ್ ವಶಪಡಿಸಿಕೊಳ್ಳಲಾಗಿದೆ. ಈ ಹಿಂದೆ …

Read More »

ಜಾತಿ ಜನಗಣತಿಯ ಸತ್ಯ ಮಿತ್ಯಗಳು.:ಲೇಖಕರು .ಜಿ.ಬಿ.ಪಾಟೀಲ.ಬೆಂಗಳೂರು.

ಜಾತಿ ಜನಗಣತಿಯ ಸತ್ಯ ಮಿತ್ಯಗಳು. ಓದುವ ಮುಂಚೆ: ಮೊದಲನೆಯದಾಗಿ ಬಾಬಾಸಾಹೇಬರ ಜಯಂತಿಯ ಶುಭಾಶಯಗಳು. ಅವರಿಗೆ ಶರಣು ಶರಣಾರ್ತಿ. ನಮ್ಮ ದೇಶದಲ್ಲಿ ಕೊನೆಯ ಜಾತಿಗಣತಿಯಾಗಿದ್ದು ೧೯೩೧ ಬ್ರಿಟಿಷರ ಆಡಳಿತದ ಕಾಲದಲ್ಲಿ. ಸ್ವಾತಂತ್ರ್ಯದ ನಂತರ ಇದು ಬೇಕಿಲ್ಲ ಎಂದಿದ್ದರು ನಮ್ಮ ಹಿರಿಯರು. ಇತ್ತೀಚಿನ ದಿನಗಳಲ್ಲಿ ಸರಕಾರಿ ಮೀಸಲಾತಿಯನ್ನು ಎಲ್ಲರೂ ಕೇಳುತ್ತಿದ್ದು ಅರ್ಹ ಪಲಾನುಭಾವಿಗಳು ಯಾರು? ಎಂಬ ಪ್ರಶ್ನೆಗೆ ಜಾತಿಗಣತಿ ಬೇಕೇಬೇಕು ಎನ್ನುತ್ತಿವೆ ಎಲ್ಲ ಸಮಾಜಗಳು. ಎಲ್ಲರ ಬೇಡಿಕೆಯನ್ನು ಮನ್ನಿಸುತ್ತ ಕಳೆದ ಅವಧಿಯಲ್ಲಿ ಮುಖ್ಯಮಂತ್ರಿ …

Read More »

ಸಂವಿಧಾನಕ್ಕೆ ಅಪಚಾರ ಆರೋಪ: ಸಚಿವ ಕೆಎನ್​ ರಾಜಣ್ಣ ವಿರುದ್ಧ ದಾಖಲಾಯ್ತು ದೂರು

ಬೆಂಗಳೂರು, ಏಪ್ರಿಲ್​ 14: ಸಂವಿಧಾನಕ್ಕೆ ಅಪಚಾರವೆಸಗಿದ್ದಾರೆ ಎಂದು ಆರೋಪಿಸಿ ಸಚಿವ ಕೆ.ಎನ್.ರಾಜಣ್ಣ (K. N. Rajanna) ವಿರುದ್ಧ ನಗರದ ಜೆ.ಸಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಎಂಬುವವರಿಂದು ದೂರು ನೀಡಲಾಗಿದೆ. ಪ್ರಮಾಣವಚನ ಸ್ವೀಕಾರ ವೇಳೆ ಗೌಪ್ಯತೆ ಕಾಪಾಡುತ್ತೇನೆ ಅಂದಿದ್ದರು. ಆದರೆ ಸಚಿವರಾಗಿ ಸದನದಲ್ಲಿ ಹನಿಟ್ರ್ಯಾಪ್ (Honeytrap) ವಿಚಾರ ಪ್ರಸ್ತಾಪಿಸಿದ್ದಾರೆ. ಆ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಚಿವ ರಾಜಣ್ಣ ನಮ್ಮ ಬಳಿ ಸಿಡಿ ಇದೆ ಅಂತ ಹೇಳಿದ್ದಾರೆ. …

Read More »

ಬಾವಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಶವ ಪತ್ತೆ

ಚಾಮರಾಜನಗರ: ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಬಾವಿಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಶವ ಪತ್ತೆಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ಸುಶೀಲ (30) ಮತ್ತು 8 ವರ್ಷದ ಮಗ, 11 ವರ್ಷದ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾಡುಹೊಲ ಗ್ರಾಮದ ಸುಶೀಲ ಅವರ ಮನೆಗೆ ಸುಶೀಲರ ತಮ್ಮ ಮಾದೇವ ಆಗಮಿಸಿ …

Read More »

ಇದು ಜಾತಿ ಗಣತಿ ಅಲ್ಲ; ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ವಿಚಾರ ತಿಳಿಯಲು ಮಾಡಿದ ಸಮೀಕ್ಷೆ- ಬಸವರಾಜ ರಾಯರೆಡ್ಡಿ

ಕೊಪ್ಪಳ: ರಾಜ್ಯ ಸರ್ಕಾರ ಏಪ್ರಿಲ್ 17ರಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಬೇಕೆಂದಿರುವುದು ಜಾತಿ ಗಣತಿಯ ಕುರಿತಲ್ಲ. ಇದು ಜಾತಿಗಣತಿ ಅಲ್ಲ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ವಿಚಾರ ತಿಳಿಯಲು ಮಾಡಿದ ಸಮೀಕ್ಷೆ. ಅದರಲ್ಲಿ ಜಾತಿ ಕಾಲಂ‌ ಸೇರಿಸಲಾಗಿದೆ ಅಷ್ಟೇ. ಇದು ಕೂಡ ಸ್ವಾಗತಾರ್ಹ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು. ಕೊಪ್ಪಳದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಅತ್ಯಂತ ವೈಜ್ಞಾನಿಕವಾಗಿದೆ. ಶಿಕ್ಷಕರು ಮನೆ ಮನೆಗೆ ಹೋಗಿ ಗಣತಿ ಮಾಡಿದ್ದಾರೆ. …

Read More »

ಶಿವರಾಮ್ ಹೆಬ್ಬಾರ್​ ಅವರನ್ನು ನಾವು ಕೈ ಬಿಟ್ಟಿದ್ದೇವೆ: ಆರ್.ಅಶೋಕ್

ಬೆಂಗಳೂರು: ಶಾಸಕ ಶಿವರಾಮ್ ಹೆಬ್ಬಾರ್​​ಗೂ ನಮ್ಮ ಪಕ್ಷಕ್ಕೂ ಮುಗಿದ ಅಧ್ಯಾಯ. ಅವರು ಈಗ ನಮ್ಮ ಪಕ್ಷದವರಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದನದಲ್ಲಿ ನಾವು ಪ್ರತಿಭಟನೆ ಮಾಡುತ್ತಿದ್ದರೆ, ಹೆಬ್ಬಾರ್ ಅವರು ಕುಳಿತೇ ಇರುತ್ತಾರೆ. ಅವರನ್ನು ನಾವು ಕೈ ಬಿಟ್ಟಿದ್ದೇವೆ. ಶಿವರಾಮ್‌ ಹೆಬ್ಬಾರ್‌ಗೂ, ಬಿಜೆಪಿಗೂ ಸಂಬಂಧವಿಲ್ಲ ಎಂದರು. ಜಾತಿ ಗಣತಿ ವರದಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯನವರು ಟೋಪಿ ಹಾಕಿಕೊಂಡು ಏಕೆ …

Read More »

ಪಿಯು ಪರೀಕ್ಷೆಯಲ್ಲಿ ಫೇಲ್, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಬಾಗಲಕೋಟೆ : ಪಿಯು ಪರೀಕ್ಷೆಯಲ್ಲಿ ಫೇಲ್, ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಲೋಕಾಪುರ ಪಟ್ಟಣದಲ್ಲಿ ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಪಿಯುಸಿ ವಾಣಿಜ್ಯ ವಿಭಾಗದ ಅಕೌಂಟೆನ್ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದು ಅದಕ್ಕಾಗಿ ಮನನೊಂದು ವಿದ್ಯಾರ್ಥಿ ಮಹೇಶ ಬಸಪ್ಪ ತೇಲಿ ಲೋಕಾಪುರದಲ್ಲಿರುವ ಅಕ್ಕ ಸಾವಿತ್ರಿ ಅವರ ಮನೆಯ ಮಹಡಿ ಮೇಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ

Read More »

ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ ಸಂವಿಧಾನವನ್ನು, ಇದರ ಜಾರಿಯನ್ನು ವಿರೋಧಿಸಿದ್ದವರೇ ಇವರು: ಸಿ.ಎಂ ಸಿದ್ದರಾಮಯ್ಯ ವ್ಯಂಗ್ಯ

ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ ಸಂವಿಧಾನವನ್ನು, ಇದರ ಜಾರಿಯನ್ನು ವಿರೋಧಿಸಿದ್ದವರೇ ಇವರು: ಸಿ.ಎಂ ಸಿದ್ದರಾಮಯ್ಯ ವ್ಯಂಗ್ಯ ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ: ಸಿ.ಎಂ ಸಿದ್ದರಾಮಯ್ಯ ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಅಪಪ್ರಚಾರ ಮಾಡುತ್ತಿದ್ದಾರೆ: ಸಿಎಂ 8300 ಕೋಟಿ scsp/tsp ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ: ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ …

Read More »

ಬಳ್ಳಾರಿ: ಮಲಗಿರುವಾಗ ನಾಗರ ಹಾವು ಕಡಿದು 10ನೇ ತರಗತಿ ಬಾಲಕಿ ಸಾವು

ಬಳ್ಳಾರಿ: ಮಲಗಿದ್ದಾಗ ನಾಗರ ಹಾವು ಕಡಿದು 10ನೇ ತರಗತಿ ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಬಳ್ಳಾರಿ ತಾಲೂಕಿನ ಹೊಸ ಮೋಕಾ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. 15 ವರ್ಷದ ಬಾಲಕಿ ಶ್ರಾವಣಿ ಹಾವು ಕಡಿತದಿಂದ ಮೃತಪಟ್ಟವಳು. ಬಾಲಕಿಯು ಹೊಸ ಮೋಕಾ ಗ್ರಾಮದ ಲಕ್ಷ್ಮಣ ಹಾಗೂ ಶೇಕಮ್ಮ ದಂಪತಿಯ ಮಗಳಾಗಿದ್ದಳು. ಶ್ರಾವಣಿ ಮೋಕಾ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ರಾತ್ರಿ ಮಲಗಿರುವಾಗ ಬಾಲಕಿಗೆ ಮೂರು ಸಲ ನಾಗರ ಹಾವು ಕಚ್ಚಿದೆ. …

Read More »