ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಲಜೀವನ್ ಮಿಷನ್ ಯೋಜನೆಯ ಪ್ರಗತಿಯ ಕುರಿತಂತೆ ಮತ್ತು ಇಂದಿರಾ ಕ್ಯಾಂಟೀನ್ ನಿರ್ವಹಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯ ಮುಖ್ಯಾಂಶ ಇಂತಿದ್ದು, ರಾಜ್ಯದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು. ರಾಜ್ಯದಲ್ಲಿ ಮುಂಗಾರು ಜೂನ್ 10ರಂದು ಪ್ರಾರಂಭವಾಗಿದೆ. ಜೂನ್ 1ರಿಂದ 11ರವರೆಗಿನ ಮಾಹಿತಿ …
Read More »ಮಹಾರಾಷ್ಟ್ರದ ನಾಸಿಕ್ನಲ್ಲಿ ಭೀಕರ ರಸ್ತೆ ಅಪಘಾತ
ನಾಸಿಕ್: ಮಹಾರಾಷ್ಟ್ರದ ನಾಸಿಕ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಲ್ಲಿಯ ಶಿರಡಿ- ಭರವೀರ್ ಹೆದ್ದಾರಿಯಲ್ಲಿ ಭಾನುವಾರ ಮಧ್ಯರಾತ್ರಿ ಕಾರು ದುರಂತದಲ್ಲಿ ನಾಲ್ವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ. ರಜಾಕ್ ಅಹ್ಮದ್ ಶೇಖ್, ಸತ್ತಾರ್ ಶೇಖ್ ಲಾಲ್ ಶೇಖ್, ಸುಲ್ತಾನ್ ಸತ್ತಾರ್ ಶೇಖ್, ಫಿಯಾಜ್ ದಗುಭಾಯಿ ಶೇಖ್ ಮೃತರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋವಾ ಕಾರಿನಲ್ಲಿದ್ದ ಪ್ರಯಾಣಿಕರು ಹಜ್ ಯಾತ್ರೆಗೆಂದು ಮುಂಬೈನಿಂದ ಹೊರಟು ಶಿರಡಿಗೆ ವಾಪಸಾಗುತ್ತಿದ್ದರು. ಭಾನುವಾರ ಮಧ್ಯರಾತ್ರಿ …
Read More »ರಾಜ್ಯಾದ್ಯಂತ ಮೊದಲ ದಿನವೇ 5.71 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಶಕ್ತಿ ಯೋಜನೆಗೆ ಮೊದಲ ದಿನವೇ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿ ಖುಷಿಯಾಗಿ ಸ್ವೀಕಾರ ಮಾಡಿದ್ದಾರೆ. ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಶಕ್ತಿ ಯೋಜನೆಯಡಿ ಸುಮಾರು 5 ಲಕ್ಷದ 71 ಸಾವಿರಕ್ಕೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಯೋಜನೆ ಜಾರಿಗೊಂಡ ಬೆನ್ನಲ್ಲೇ ಸಾಕಷ್ಟು ಮಹಿಳೆಯರು ಉಚಿತ …
Read More »ಭೀಕರ ರಸ್ತೆ ಅಪಘಾತ : ಗ್ರಾ.ಪಂ.ಸದಸ್ಯ ಸಾವು, ಮೂವರು ಗಂಭೀರ.!
ಮೈಸೂರು : ಮೈಸೂರಿನ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಸಮೀಪ ಸಾರಿಗೆ ಸಂಸ್ಥೆ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟವರು ಹುಣಸೂರು ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಭಾಸ್ಕರ್ (42) ಎಂದು ತಿಳಿದುಬಂದಿದೆ. ಪತ್ನಿ ರಮ್ಯಾ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಸ್ಕರ್ ಅವರು ತಮ್ಮ …
Read More »Electricity Bill : ಏಪ್ರಿಲ್ನಿಂದಲೇ ವಿದ್ಯುತ್ ದರ ಪ್ರತಿ ಯೂನಿಟ್‌ಗೆ 70 ಪೈಸೆ ಹೆಚ್ಚಳ.. ಜೂನ್ ಬಿಲ್‌ನಲ್ಲಿ ಹಿಂಬಾಕಿ ವಸೂಲಿ: ಕೆಇಆರ್ಸಿ ಸ್ಪಷ್ಟನೆ
ಬೆಂಗಳೂರು: ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 70 ಪೈಸೆ ಏರಿಕೆ ಮಾಡಿರುವ ಹಿನ್ನೆಲೆ ಬೆಸ್ಕಾಂ ಜೂನ್ ತಿಂಗಳಿನಲ್ಲಿ ವಿದ್ಯುತ್ ಬಳಕೆಯ ಬಿಲ್‌ನಲ್ಲಿ ಪರಿಷ್ಕತ ಶುಲ್ಕವನ್ನು ನಮೂದಿಸಲಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(ಕೆ.ಇ.ಆರ್.ಸಿ) ಸ್ಪಷ್ಟಪಡಿಸಿದೆ. ವಿದ್ಯುತ್ ದರ ಪರಿಷ್ಕರಣೆ ಆದೇಶ ಏಪ್ರಿಲ್ನಿಂದ ಪೂರ್ವನ್ವಯವಾಗುವುದರಿಂದ ಬಿಲ್‌ನಲ್ಲಿ ಆ ತಿಂಗಳ ಹಿಂಬಾಕಿಯನ್ನು ನೀಡಲಾಗಿದೆ. ಹಾಗೆಯೇ ಆದೇಶದ ಪ್ರಕಾರ 2 ಶ್ರೇಣಿಗಳಲ್ಲಿ ವಿದ್ಯುತ್ ಶುಲ್ಕವನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಹಕರು ಬಳಸುವ ಮೊದಲ 100 ಯೂನಿಟ್ ವಿದ್ಯುತ್‌ಗೆ ಪ್ರತಿ …
Read More »ಉಚಿತವಾಗಿ ಪ್ರಯಾಣಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿದ ತಾಯಿ.. ಬಹುಕಾಲ ನೆನಪಿನಲ್ಲಿ ಉಳಿಯುವ ಚಿತ್ರವಿದು ಎಂದ ಸಿಎಂ
ಬೆಂಗಳೂರು: ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ (Shakti Scheme, Free bus travel for women) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಚಾಲನೆ ನೀಡಿದ್ದು, ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಇನ್ನು ಯೋಜನೆ ಜಾರಿಯಾದ ಬಳಿಕ ವೃದ್ಧೆಯೊಬ್ಬರು ಮೊದಲ ಬಾರಿಗೆ ಬಸ್ನಲ್ಲಿ ಉಚಿತವಾಗಿ ಸಂಚರಿಸುವ ಮುನ್ನ ನಮಸ್ಕರಿಸಿ ಬಸ್ ಹತ್ತಿರುವ ಚಿತ್ರ ಗಮನ ಸೆಳೆಯುತ್ತಿದೆ. ಬಸ್ಗೆ ವೃದ್ಧೆ ನಮಸ್ಕರಿಸುವ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಅವರು …
Read More »ಮನೆಯಲ್ಲಿ ಮಲಗಿದ್ದ ದಂಪತಿಗೆ ಕಚ್ಚಿದ ನಾಗರಹಾವು – ಪತಿ ಸಾವು, ಪತ್ನಿ ಸ್ಥಿತಿ ಗಂಭೀರ
ಬೆಳಗಾವಿ: ದಂಪತಿಗೆ ನಾಗರಹಾವು ಕಚ್ಚಿದ ಪರಿಣಾಮ ಪತಿ ಮೃತಪಟ್ಟು, ಪತ್ನಿ ಸಾವು ಬದುಕಿನ ಮಧ್ಯ ಹೋರಾಡುತ್ತಿರುವ ಹೃದಯವಿದ್ರಾವಕ ಘಟನೆ ನಗರದ ಅನ್ನಪೂರ್ಣೇಶ್ವರಿ ನಗರದಲ್ಲಿಂದು ಬೆಳಗಿನ ಜಾವ ನಡೆದಿದೆ. ಬೈಲಹೊಂಗಲ ತಾಲೂಕಿನ ಸಾಣಿಕೊಪ್ಪ ಗ್ರಾಮದ ಸಿದ್ದಪ್ಪ ಚಿವಟಗುಂಡಿ (35) ಮೃತ ವ್ಯಕ್ತಿ. ಪತ್ನಿ ನಾಗವ್ವ (28) ಸ್ಥಿತಿ ಚಿಂತಾಜನಕವಾಗಿದೆ. ದಂಪತಿ ತಮ್ಮ ಮೂರು ಮಕ್ಕಳ ಸಮೇತ ಹೊಟ್ಟೆಪಾಡಿಗಾಗಿ ಸಾಣಿಕೊಪ್ಪದಿಂದ ಬೆಳಗಾವಿಗೆ ಬಂದು ನೆಲೆಸಿದ್ದರು. ಮೃತ ಸಿದ್ದಪ್ಪ ಅವರು ವಡಗಾವಿಯ ಕಟ್ಟಡ ಕಾಮಗಾರಿಯೊಂದರಲ್ಲಿ ವಾಚ್‍ಮನ್ …
Read More »ಕಾರಹುಣ್ಣಿಮೆಯಲ್ಲಿ ಎತ್ತು ಬೆದರಿಸುವ ಸ್ಪರ್ಧೆ, ಹತ್ತು ಜನರಿಗೆ ಗಾಯ
ವಿಜಯಪುರ: ಇನ್ನೇನು ಮುಂಗಾರು ಮಳೆ ಭೂಮಿಯನ್ನು ಸ್ಪರ್ಶ ಮಾಡುತ್ತಿದೆ. ಜೂನ್ ತಿಂಗಳು ಬಂತೆಂದರೆ ಮಳೆಗಾಲ ಆರಂಭ ಎಂದೇ ಲೆಕ್ಕ. ರೈತ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳಲು ಅಣಿಯಾಗುತ್ತಾನೆ. ಎತ್ತುಗಳನ್ನು ಹೊಲಕ್ಕೆ ಇಳಿಸಿ ದುಡಿಸುವ ಮುನ್ನ ಕಾರಹುಣ್ಣಿಮೆಯಲ್ಲಿ ಮನರಂಜನೆಗಾಗಿ ಎತ್ತು ಬೆದರಿಸುವ ಸ್ಪರ್ಧೆ ಆಡುವುದು ವಾಡಿಕೆಯಾಗಿ ಬೆಳೆದುಬಂದಿದೆ. ಮಳೆ ಆರಂಭವಾಗಿ ಹೊಲ ಊಳುವುದು, ಬಿತ್ತನೆ ಎಂದು ಕೆಲಸ ಆರಂಭವಾದರೆ ರೈತನಿಗೆ ಮನರಂಜನೆ ಎಂಬುದೇ ಇರುವುದಿಲ್ಲ. ಬಿಡುವಿಲ್ಲದ ಕೆಲಸಗಳಲ್ಲಿ ರೈತರು ತಮ್ಮನ್ನು ತೊಡಗಿಸಿಕೊಳ್ಳುತ್ತಾರೆ. ಹೀಗಾಗಿ ಕಾರಹುಣ್ಣಿಮೆ …
Read More »ಗ್ಯಾರಂಟಿ ಯೋಜನೆ ಬಗ್ಗೆ ಪ್ರತಿಪಕ್ಷ ಗೇಲಿ ಮಾಡಿಕೊಂಡೇ ಇರಲಿ, ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ: ಸಿಎಂ
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಪಕ್ಷ ಗೇಲಿ ಮಾಡಿಕೊಂಡೇ ಇರಲಿ ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಶಕ್ತಿ ಯೋಜನೆ ಜಾರಿ ಬಳಿಕ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ವಿರೋಧ ಪಕ್ಷದವರಿಗೆ ನಡುಕ ಹುಟ್ಟಿದೆ. ಅದಕ್ಕಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರು ಗೇಲಿ ಮಾಡಿಕೊಂಡೇ ಇರಲಿ. ನಾವು ಜನರ ಮಧ್ಯೆ ಇದ್ದು ಕೆಲಸ ಮಾಡುತ್ತೇವೆ ಎಂದು ಹೇಳಿದರು. ಬಡವರ, …
Read More »ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ
ಬೆಂಗಳೂರು: ಕರ್ನಾಟಕಕ್ಕೆ ಶನಿವಾರ ಮುಂಗಾರು ಮಳೆಯ ಪ್ರವೇಶವಾಗಿದ್ದು, ಮುಂದಿನ ಐದು ದಿನ ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಜೂನ್ 14ರವರೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 13ರ ವರೆಗೆ ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದೆ. ನೈರುತ್ಯ ಮುಂಗಾರು …
Read More »
Laxmi News 24×7