Breaking News

ರಾಷ್ಟ್ರೀಯ

ಹಿಂದಿನ ಸರ್ಕಾರದ ಹಗರಣಗಳ ತನಿಖೆ‌ ಮಾಡಿಸುತ್ತೇವೆ: ಎಂ ಬಿ ಪಾಟೀಲ್

ಕೊಪ್ಪಳ: ಈ ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಮಾಡಿರುವ ಪಿಎಸ್‌ಐ ಹಗರಣ, 40 ಪರ್ಸೆಂಟ್​​ ಹಗರಣ ಹಾಗೂ ಕೊರೊನಾ ಹಗರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್​ ಹೇಳಿದರು.   ಇಂದು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಅಧಿಕಾರಕ್ಕೆ ಬಂದ ದಿನದಿಂದ ಇಲ್ಲಿಯವರೆಗೂ ಗ್ಯಾರಂಟಿ ಯೋಜನೆಯ ಅನುಷ್ಠಾನಕ್ಕಾಗಿ ಕೆಲಸ ಮಾಡಿದ್ದೇವೆ. ಆದರೆ, ಇನ್ನು …

Read More »

ಯುವನಿಧಿ ಯೋಜನೆ ಜಾರಿಗೊಳಿಸಿ ಸರ್ಕಾರ ಆದೇಶ : ಷರತ್ತು ಮತ್ತು ನಿಬಂಧನೆಗಳು ಹೀಗಿವೆ..

ಬೆಂಗಳೂರು : ರಾಜ್ಯದ ಪದವೀಧರರು, ಡಿಪ್ಲೋಮಾ ಪಡೆದವರಿಗೆ ನಿರುದ್ಯೋಗ ಭತ್ಯೆ ನೀಡುವ ಕರ್ನಾಟಕ ಯುವ ನಿಧಿ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಯೋಜನೆ ಜಾರಿಗೆ ಅನುಮೋದನೆ ಸಿಕ್ಕಿರುವ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಯೋಜನೆ ಅನುಷ್ಠಾನಗೊಳಿಸಿ ಆದೇಶ ಹೊರಡಿಸಿದೆ.‌ ಅದರಂತೆ ರಾಜ್ಯದಲ್ಲಿ 2022-23ರಲ್ಲಿ ತೇರ್ಗಡೆಯಾದ ಪದವೀಧರ ಪ್ರತಿ ತಿಂಗಳು ರೂ.3,000, ಡಿಪ್ಲೋಮಾ ಶಿಕ್ಷಣ ಪಡೆದಿರುವ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1,500 ರಂತೆ ನಿರುದ್ಯೋಗ ಭತ್ಯೆ …

Read More »

KSRTC ನಡಿಬೇಕಲ್ಲ, ಗಂಡಸ್ರು ಟಿಕೆಟ್ ತಕೊಳ್ರಪ್ಪ.: ಡಿಕೆ ಶಿವಕುಮಾರ್

ರಾಮನಗರ: ಇದೇ ತಿಂಗಳು 11ರಿಂದ ಮಹಿಳೆಯರಿಗೆ ಉಚಿತ ಬಸ್ ಪಾಸ್ ಸಿಗಲಿದೆ. ಎಲ್ಲಿಗೆ ಬೇಕಾದರೂ ಹೋಗಿ, ಓಡಾಡಿ. ಆದರೆ ಗಂಡಸರು ಟಿಕೆಟ್ ತಗೆದುಕೊಂಡು ಓಡಾಡಿ. ಕೆಎಸ್‌ಆರ್ ಟಿಸಿ ನಡಿಯಬೇಕಲ್ಲ, ಅದಕ್ಕೆ ಗಂಡಸರು ಟಿಕೆಟ್ ತಕೊಳ್ರಪ್ಪ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.   ಕಬ್ಬಾಳು ಗ್ರಾಮದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಮುಂದಿನ ತಿಂಗಳಿನಿಂದ ಗೃಹಜ್ಯೋತಿ ಯೋಜನೆ ಆರಂಭವಾಗಲಿದೆ. …

Read More »

ಗೃಹ ಜ್ಯೋತಿ ಯೋಜನೆ ಘೋಷಣೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್.! ಜೂ. 1 ರಿಂದಲೇ ವಿದ್ಯುತ್ ದರ ಹೆಚ್ಚಳ

ಬೆಂಗಳೂರು: ಗೃಹಜ್ಯೋತಿ ಯೋಜನೆ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ದರ ಹೆಚ್ಚಳ ಶಾಕ್ ನೀಡಲಾಗಿದೆ. ಜೂನ್ 1 ರಿಂದಲೇ ಅನ್ವಯವಾಗುವಂತೆ ವಿದ್ಯುತ್ ದರ ಹೆಚ್ಚಳ ಮಾಡಲಾಗಿದೆ. ಪ್ರತಿ ಯೂನಿಟ್ ವಿದ್ಯುತ್ ದರ 70 ಪೈಸೆ ಹೆಚ್ಚಳ ಮಾಡಿ KERC ಆದೇಶ ಹೊರಡಿಸಿದೆ. ಮೇ 12ರಂದು KERC ವಿದ್ಯುತ್ ಪರಿಷ್ಕರಣೆ ಮಾಡಿತ್ತು. ವಿದ್ಯುತ್ ಸರಬರಾಜು ಕಂಪನಿಗಳಿಗೆ ನಷ್ಟದ ಕಾರಣ ನೀಡಿ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪರಿಷ್ಕೃತ ವಿದ್ಯುತ್ ದರ ಜೂ. 1 …

Read More »

ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರದ ಬಗ್ಗೆ ಮಾತನಾಡಿದ್ ಸಚಿವ ಕೆ ವೆಂಕಟೇಶ್ ಪ್ರಶ್ನೆ

ಮೈಸೂರು: ಗೋಹತ್ಯೆ ನಿಷೇಧಿಸಿ ಹಿಂದಿನ ಬಿಜೆಪಿ ಸರ್ಕಾರ ಕಾನೂನು ಜಾರಿಗೆ ತಂದಿತ್ತು. ಇದೀಗ ಕಾಂಗ್ರೆಸ್​ ಸರ್ಕಾರ ಈ ಕಾನೂನು ರದ್ದುಗೊಳಿಸುವ ನಿರ್ಧಾರ ಮಾಡಿದೆಯಾ ಎಂಬ ಪ್ರಶ್ನೆ ಉದ್ಬವಿಸಿದೆ. ಏಕೆಂದರೆ, ಈ ಬಾರಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ನ ನಾಯಕರು ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಕಾನೂನುಗಳನ್ನು ಪುನರ್​ ಪರಿಶೀಲಿಸುವ ಮಾತುಗಳನ್ನಾಡುತ್ತಿದ್ದಾರೆ. ಇದೀಗ ನೂತನ ಪಶು ಸಂಗೋಪನ ಸಚಿವರು ಸಹ ಇದೇ ದಾಟಿಯಲ್ಲಿ ಮಾತನಾಡಿದ್ದಾರೆ. “ಎಮ್ಮೆ ಕೋಣಗಳನ್ನು ಕಡಿದು ಹಾಕುವುದಾದರೇ …

Read More »

ಒಡಿಶಾ ರೈಲು ದುರಂತಕ್ಕೆ ಕಾರಣವೇನು.. ಹೊರಬಿತ್ತು ಪ್ರಾಥಮಿಕ ತನಿಖಾ ಮಾಹಿತಿ

ನವದೆಹಲಿ: ಒಡಿಶಾದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯ ಮಾಹಿತಿ ಹೊರಬಿದ್ದಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಮುಖ್ಯ ಮಾರ್ಗದ ಬದಲಿಗೆ ಲೂಪ್ ಲೈನ್‌ಗೆ ಪ್ರವೇಶಿಸಿ ಬಹಾನಗರ್ ಬಜಾರ್ ನಿಲ್ದಾಣದ ಮುಂದೆ ನಿಲ್ಲಿಸಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಈ ಕೋರಮಂಡಲ್ ಎಕ್ಸ್‌ಪ್ರೆಸ್ ಬೋಗಿಗಳು ಚದುರಿ ಪಕ್ಕದ ಹಳಿ ಮೇಲೆ ಬಿದ್ದಿವೆ. ಆ ಬೋಗಿಗಳಿಗೆ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ ಎಂದು ಪ್ರಾಥಮಿಕ …

Read More »

ಬಾಗಲಕೋಟೆಯಲ್ಲಿ ವರುಣನ ಆರ್ಭಟ: ನೇಕಾರರ ಮನೆಗಳಿಗೆ ಹಾನಿ.

ಬಾಗಲಕೋಟೆ: ಕಳೆದ ರಾತ್ರಿ ಸುರಿದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಹಲವು ನೇಕಾರರ ಮನೆಗಳಿಗೆ ಹಾನಿ ಉಂಟಾಗಿರುವ ಘಟನೆ ಜಿಲ್ಲೆಯ ರಬಕವಿ – ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣ ಸೇರಿದಂತೆ ವಿವಿಧೆಡೆ ನಡೆದಿದೆ. ಧಾರಾಕಾರವಾಗಿ ಸುರಿದ ಆಲಿಕಲ್ಲು ಮಳೆಯಿಂದಾಗಿ ಸಾಕಷ್ಟು ಹಾನಿ ಉಂಟಾಗಿದೆ. ನೇಕಾರರೇ ಹೆಚ್ಚಿನ ಸಂಖ್ಯೆಯಲ್ಲಿರುವ ಕೆಂಗೇರಿ ಮಡ್ಡಿ ಸೇರಿದಂತೆ ಇತರ ಪ್ರದೇಶದಲ್ಲಿ ಬೃಹದಾಕಾರದ ಮರಗಳು ನೇಕಾರರ ಮನೆಗಳ ಮೇಲೆ ಉರುಳಿ ಬಿದಿದ್ದರಿಂದ, ಮನೆ ಮತ್ತು ಆಸ್ತಿ- ಪಾಸ್ತಿಗೆ …

Read More »

ಕೌಟುಂಬಿಕ ಕಲಹ: ಪತ್ನಿ ಕೊಂದು ಪೊಲೀಸರಿಗೆ ಶರಣಾದ ಪತಿ

ಬೆಳಗಾವಿ: ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ ಬಳಿಕ ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ. ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಬಸವ್ವ ಹಣಮಂತ ಹಿಡಕಲ್(30) ಕೊಲೆಯಾದ ದುರ್ದೈವಿ. ಹಣಮಂತ ಸಿದ್ದಪ್ಪ ಹಿಡಕಲ್( 35) ಕೊಲೆ ಆರೋಪಿ. ಪ್ರಕರಣದ ವಿವರ: ಪತಿ ಹಣಮಂತ ಯಾವುದೇ ಕೆಲಸ ಮಾಡದೇ ಓಡಾಡಿಕೊಂಡಿದ್ದನಂತೆ. ಪತ್ನಿ ಬಸವ್ವ ಕೂಲಿ ಕೆಲಸ ಮಾಡಿ ಸಂಸಾರದ ಬಂಡಿ ಸಾಗಿಸುತ್ತಿದ್ದರು. ಪತಿ ಹಣಮಂತನಿಗೆ ನೀನು ಕೆಲಸ ಮಾಡುತ್ತಿಲ್ಲ …

Read More »

ಬೆಳಗಾವಿಯಲ್ಲಿ ವಾರ್ಡ್ ಸಮಿತಿ ರಚನೆ ವಿಳಂಬ: ನಾಗರಿಕರ ಅಸಮಾಧಾನ

ಬೆಳಗಾವಿ: ಮಹಾನಗರ ಪಾಲಿಕೆಯ ಪ್ರತಿಯೊಂದು ವಾರ್ಡ್‌ಗಳಲ್ಲಿ ರಚನಾತ್ಮಕವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದಕ್ಕಾಗಿ ‘ನಾಗರಿಕ ವಾರ್ಡ್ ಸಮಿತಿ’ ರಚಿಸಬೇಕೆಂಬ ಕಾನೂನಿದೆ. ಆದರೆ, ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪಾಲಿಕೆ ಸದಸ್ಯರು ಆಯ್ಕೆಯಾಗಿ 2 ವರ್ಷ ಕಳೆಯುತ್ತಾ ಬಂದರೂ ವಾರ್ಡ್ ಸಮಿತಿ ರಚನೆ ಆಗದೇ ಇರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯ ಆಡಳಿತದಲ್ಲಿ ನಾಗರಿಕರ ಸಹಭಾಗಿತ್ವದೊಂದಿಗೆ ವಾರ್ಡ್‌ಗಳಲ್ಲಿ ಪರಿಣಾಮಕಾರಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಕ್ಕೆ ‘ನಾಗರಿಕ ವಾರ್ಡ್ ಸಮಿತಿ’ ರಚಿಸಬೇಕು ಎಂಬ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ಸ್ ಕಾಯ್ದೆ …

Read More »

ಬದುಕು ಕೊಟ್ಟ ಕಾಲೇಜಿಗೆ ಬಂದು ಕಸ ಗುಡಿಸಿ, ಬೆಲ್​ ಬಾರಿಸಿದ ಶಾಸಕ ದೇವೇಂದ್ರಪ್ಪ- ವಿಡಿಯೋ

ದಾವಣಗೆರೆ: ಜಗಳೂರು ಕ್ಷೇತ್ರದ ನೂತನ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಅವರು ಜವಾನ ವೃತ್ತಿಯಿಂದ ಜೀವನ ಆರಂಭಿಸಿದವರು. ಇದೀಗ ಶಾಸಕ ವೃತ್ತಿ ಅಲಂಕರಿಸದ ಬಳಿಕ ತಾವು ಕೆಲಸ ಮಾಡ್ತಿದ್ದ ಕಾಲೇಜಿಗೆ ಆಗಮಿಸಿ, ಕೆಲಕಾಲ ಜವಾನ ವೃತ್ತಿಯನ್ನೇ ನಿಭಾಯಿಸಿ ಖುಷಿ ಪಟ್ಟರು. ಇಲ್ಲಿಯ ಅಮರ ಭಾರತಿ ವಿದ್ಯಾಕೇಂದ್ರದಲ್ಲಿ ದೇವೇಂದ್ರಪ್ಪ ಬದುಕು ಕಟ್ಟಿಕೊಂಡವರು. 30 ವರ್ಷಗಳ ಕಾಲ ಸಂಸ್ಥೆಯಲ್ಲಿ ಜವಾನನಾಗಿ ಕೆಲಸ ಮಾಡಿರುವ ಇವರು ಇಡೀ ಜಗಳೂರು ತಾಲೂಕಿಗೆ ಚಿರಪರಿಚಿತರು. ಜವಾನ ಕೆಲಸದಿಂದ …

Read More »