ಮುಂಬೈ: ಬಾಯಿಯ ಆರೋಗ್ಯವನ್ನು ಉತ್ತೇಜಿಸುವ ಮಹಾರಾಷ್ಟ್ರದ ಸ್ವಚ್ಚ ಮುಖ್ ಅಭಿಯಾನಕ್ಕೆ ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ ಅವರು ‘ನಗುವಿನ ರಾಯಭಾರಿ’ (ಸ್ಮೈಲ್ ಅಂಬಾಸಿಡರ್) ಆಗಿ ನೇಮಕಗೊಂಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರು ಮಂಗಳವಾರ ತೆಂಡೂಲ್ಕರ್ ಅವರೊಂದಿಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಿದರು. ಮುಂದಿನ ಐದು ವರ್ಷಗಳ ಕಾಲ ಬ್ಯಾಟಿಂಗ್ ದಿಗ್ಗಜ ತೆಂಡೂಲ್ಕರ್ ಪ್ರಚಾರದ ಬ್ರಾಂಡ್ ಅಂಬಾಸಿಡರ್ ಆಗಿರುತ್ತಾರೆ. ಸ್ವಚ್ಛ …
Read More »ಶಿಂದೆ ಬಣದ 22 ಶಾಸಕರು, 9 ಸಂಸದರು ಶೀಘ್ರ ರಾಜೀನಾಮೆ: ಉದ್ಧವ್ ಠಾಕ್ರೆ
ಮುಂಬೈ: ಶಿವಸೇನಾದ ಏಕನಾಥ್ ಶಿಂದೆ ಬಣದ 22 ಶಾಸಕರು ಮತ್ತು 9 ಸಂಸದರು ರಾಜೀನಾಮೆ ನೀಡಲಿದ್ದಾರೆ ಎಂದು ಶಿವಸೇನಾ ಉದ್ಧವ್ ಬಾಳಾಠಾಕ್ರೆ ಬಣದ(ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಹೇಳಿದ್ದಾರೆ. ಬಿಜೆಪಿಯ ಮಲತಾಯಿ ಧೋರಣೆಯಿಂದ ಉಸಿರುಗಟ್ಟಿದ ವಾತಾವರಣದಲ್ಲಿ ಬೇಸತ್ತಿರುವ ಅವರು, ಶಿಂದೆ ಬಣವನ್ನು ತೊರೆಯಲಿದ್ದಾರೆ ಎಂದು ಉದ್ಧವ್ ಹೇಳಿದ್ದಾರೆ. ಶಿವಸೇನಾ ಉದ್ಧವ್ ಬಾಳಾಠಾಕ್ರೆ ಬಣದ(ಯುಬಿಟಿ) ಮುಖವಾಣಿ ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ, ಬಿಜೆಪಿಯಿಂದ ಮಲತಾಯಿ ಧೋರಣೆ ಎದುರಿಸುತ್ತಿದ್ದೇವೆ ಎಂಬ ಶಿವಸೇನಾ ಸಂಸದ …
Read More »ಸಾರ್ವಜನಿಕ ಆಸ್ತಿ ಮಾರಿದ್ದೇ ಮೋದಿ ಸಾಧನೆ: ಖರ್ಗೆ ಟೀಕೆ
ನವದೆಹಲಿ: ‘ದೇಶದಲ್ಲಿನ ಸಾರ್ವಜನಿಕ ಆಸ್ತಿಗಳನ್ನು ತನ್ನ ಬಂಡವಾಳಶಾಹಿ ಸ್ನೇಹಿತರಿಗೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ. ಇದು ಅತಿದೊಡ್ಡ ದೇಶ ವಿರೋಧಿ ಕೃತ್ಯ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಂಬತ್ತು ವರ್ಷ ಅಧಿಕಾರ ಪೂರ್ಣಗೊಳಿಸಿರುವುದರ ವಿರುದ್ಧ ಬುಧವಾರವೂ ಖರ್ಗೆ ವಾಗ್ದಾಳಿ ಮುಂದುವರಿಸಿದ್ದಾರೆ. ಸಾರ್ವಜನಿಕ ಆಸ್ತಿಗಳನ್ನು ಮಾರಾಟ ಮಾಡುವುದು ದೇಶಕ್ಕೆ ದೊಡ್ಡ ಹಾನಿ. …
Read More »2 ತಿಂಗಳಲ್ಲಿ 40 ವೈದ್ಯಕೀಯ ಕಾಲೇಜುಗಳ ಮಾನ್ಯತೆ ರದ್ದು
ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಆಯೋಗದ (ಎನ್‌ಎಂಸಿ) ಮಾನದಂಡಗಳನ್ನು ಪಾಲಿಸದ ಆರೋಪದಿಂದ ಕಳೆದ ಎರಡು ತಿಂಗಳಲ್ಲಿ ದೇಶದಾದ್ಯಂತ ಸುಮಾರು 40 ವೈದ್ಯಕೀಯ ಕಾಲೇಜುಗಳು ಮಾನ್ಯತೆ ಕಳೆದುಕೊಂಡಿವೆ ಎಂದು ಮೂಲಗಳು ತಿಳಿಸಿವೆ. ತಮಿಳುನಾಡು, ಗುಜರಾತ್, ಅಸ್ಸಾಂ, ಪಂಜಾಬ್, ಆಂಧ್ರಪ್ರದೇಶ, ಪುದುಚೇರಿ ಮತ್ತು ಪಶ್ಚಿಮ ಬಂಗಾಳದ ನೂರಕ್ಕೂ ಹೆಚ್ಚು ಕಾಲೇಜುಗಳೂ ಇದೇ ಕ್ರಮ ಎದುರಿಸಲಿವೆ ಎಂದು ಆ ಮೂಲಗಳು ಮಾಹಿತಿ ನೀಡಿವೆ. ನಿಯಮಗಳ ಉಲ್ಲಂಘನೆ ಮತ್ತು ಸಿ.ಸಿ. ಟಿ.ವಿ ಕ್ಯಾಮೆರಾ ಅವಳವಡಿಕೆ, ಬಯೊಮೆಟ್ರಿಕ್ ಹಾಜರಾತಿ …
Read More »ವಿರೋಧ ಪಕ್ಷಗಳು ಒಂದಾದರೆ ಬಿಜೆಪಿ ಸೋಲು ಖಚಿತ: ರಾಹುಲ್ ಗಾಂಧಿ
ನವದೆಹಲಿ/ಸಾಂತಕ್ಲಾರ (ಅಮೆರಿಕ): ‘ಭಾರತದಲ್ಲಿನ ಒಂದು ಗುಂಪಿನ ಜನರು ಜಗತ್ತಿನಲ್ಲಿ ಎಲ್ಲವೂ ತಮಗೇ ತಿಳಿದಿದೆ. ದೇವರಿಗಿಂತಲೂ ಹೆಚ್ಚು ತಿಳಿವಳಿಕೆ ಇದೆ ಎಂದುಕೊಂಡಿದ್ದಾರೆ. ಇದೊಂದು ಕಾಯಿಲೆ. ನಮ್ಮ ಪ್ರಧಾನಿಯೂ ಇಂಥ ಪ್ರಭೇದದ ಜನರಲ್ಲಿ ಒಬ್ಬರು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದರು. ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಸಾಗರೋತ್ತರ ಭಾರತೀಯ ಕಾಂಗ್ರೆಸ್ ಮಂಗಳವಾರ ಆಯೋಜಿಸಿದ್ದ ‘ಪ್ರೀತಿಯ ಅಂಗಡಿ’ (ಮೊಹಬ್ಬತ್ ಕಿ ದುಕಾನ್) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿವಿಧ ಕ್ಷೇತ್ರಗಳು, ಸಂಘಟನೆಯವರು ಇದರಲ್ಲಿ ಭಾಗವಹಿಸಿದ್ದರು. …
Read More »ಬ್ರಿಜ್‌ಭೂಷಣ್ ಬಂಧನಕ್ಕೆ ಉತ್ತರಪ್ರದೇಶದಲ್ಲಿ ನಡೆದ ರೈತರ ಮಹಾಪಂಚಾಯತ್ ಒತ್ತಾಯ
ಲಖನೌ: ಕೆಲ ದಿನಗಳ ಹಿಂದೆ ದೆಹಲಿಯಲ್ಲಿ ಪ್ರತಿಭಟನಾ ಮೆರವಣಿಗೆ ವೇಳೆ ಖ್ಯಾತ ಕುಸ್ತಿಪಟುಗಳ ಜೊತೆ ಪೊಲೀಸರು ನಡೆದುಕೊಂಡ ರೀತಿಯನ್ನು ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ನಡೆದ ರೈತರ ಮಹಾಪಂಚಾಯತ್ ಟೀಕಿಸಿದೆ. ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿರುವ ಸಭೆ, ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿದೆ. ‘ನಮ್ಮ ಹೆಣ್ಣುಮಕ್ಕಳ(ಮಹಿಳಾ ಕುಸ್ತಿಪಟುಗಳು) ಜೊತೆ ನಾವು ದೃಢವಾಗಿ …
Read More »ಹತ್ತು ಗಣಕಯಂತ್ರ ನೀಡಿದ ಶಾಸಕ ವಿಶ್ವಾಸ್ ವೈದ್ಯ
ಸವದತ್ತಿ: ಶಿಕ್ಷಣ ಇಲಾಖೆಯ ‘ನಮ್ಮ ಶಾಲೆ ನಮ್ಮ ಕೊಡುಗೆ’ಯಡಿ ವಿದ್ಯಾರ್ಥಿಗಳಿಗೆ ಹತ್ತು ಗಣಕಯಂತ್ರ ನೀಡಿದ್ದೇನೆ. ವಿದ್ಯಾರ್ಥಿಗಳು ಇವುಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಹುದ್ದೆ ಹೊಂದವತ್ತ ಮುನ್ನಡೆಯಬೇಕು ಎಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು. ಇಲ್ಲಿನ ಶಾಸಕರ ಮಾದರಿ ಶಾಲೆಯಲ್ಲಿ ಬುಧವಾರ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಪಾಲಕರು ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಉತ್ತಮ ಶಿಕ್ಷಣ ನೀಡಲು ಶಿಕ್ಷಕರ …
Read More »B.S.Y.ಅವರನ್ನು ಭೇಟಿ ಮಾಡಿದ ಡಿ ಕೆ ಶಿ ಅವರು
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಗುರುವಾರ ಭೇಟಿ ಮಾಡಿದರು. ಯಡಿಯೂರಪ್ಪ ಅವರನ್ನು ಸನ್ಮಾನಿಸಿದ ಡಿ.ಕೆ.ಶಿವಕುಮಾರ, ಇದೊಂದು ಸೌಜನ್ಯದ ಭೇಟಿ ಎಂದಿದ್ದಾರೆ. ಯಡಿಯೂರಪ್ಪ ಅವರಿಗೆ ಶಾಲು, ಹಾರ ಹಾಕಿ ಸನ್ಮಾನಿಸಿದ ನಂತರ ಮಾಧ್ಯಮ ಪ್ರತಿನಿಧಿಗಳು ಹಾಗೂ ಅಲ್ಲಿದ್ದವರನ್ನೆಲ್ಲ ಹೊರಗೆ ಕಳಿಸಿ ಇಬ್ಬರೇ ಕೆಲಕಾಲ ಮಾತು ಕತೆ ನಡೆಸಿದರು.
Read More »ಮೇಕೆದಾಟು ಅಣೆಕಟ್ಟು ನಿರ್ಮಾಣ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಮಿಳುನಾಡು ವಿರೋಧ
ಚೆನ್ನೈ: ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅಧಿಕಾರದ ಗದ್ದುಗೆಗೇರಿದ ಕೆಲವೇ ದಿನಗಳಲ್ಲಿ ಕರ್ನಾಟಕ-ತಮಿಳುನಾಡು ನಡುವೆ ರಾಜಕೀಯ ಮೇಲಾಟಕ್ಕೆ ಕಾರಣವಾಗಿರುವ ಮೇಕೆದಾಟು ಯೋಜನೆಯೂ ಮುನ್ನೆಲೆಗೆ ಬಂದಿದೆ. ತಮಿಳುನಾಡಿನಲ್ಲಿ ಆಡಳಿತಾರೂಢ ಡಿಎಂಕೆ ಮತ್ತು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಗಳು ರಾಜಕೀಯ ಸೌಹಾರ್ದತೆ ಹೊಂದಿದ್ದರೂ ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ಮಾತ್ರ ಎರಡು ರಾಜ್ಯಗಳ ನಿಲುವು ಭಿನ್ನವಾಗಿದೆ. ಕರ್ನಾಟಕದ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು …
Read More »ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಇಳಿಕೆ: ಹೊಸ ದರ ಹೀಗಿದೆ..
ನವದೆಹಲಿ: ಪೆಟ್ರೋಲಿಯಂ ಮತ್ತು ತೈಲ ಮಾರುಕಟ್ಟೆ ಕಂಪನಿಗಳು ಶುಭ ಸುದ್ದಿ ನೀಡಿವೆ. ಎಲ್‌ಪಿಜಿ ಸಿಲಿಂಡರ್ ಬೆಲೆ ಪರಿಷ್ಕರಣೆಯಾಗಿದೆ. ಆದರೆ ಇದು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗೆ ಮಾತ್ರ ಅನ್ವಯ. ವರದಿಯ ಪ್ರಕಾರ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 83 ರೂಪಾಯಿ ಕಡಿಮೆಯಾಗಿದೆ. ಎಲ್ಲೆಲ್ಲಿ, ಎಷ್ಟು ಬೆಲೆ? ನವದೆಹಲಿಯಲ್ಲಿ ವಾಣಿಜ್ಯ ಗ್ಯಾಸ್ ಬೆಲೆ 83.5 ರೂಪಾಯಿ ಇಳಿಕೆಯಾಗಿದ್ದು, ಇದೀಗ ಹೊಸ ಬೆಲೆ 1,773 ರೂಪಾಯಿ ಇದೆ. ಕಳೆದ ತಿಂಗಳು ವಾಣಿಜ್ಯ ಅನಿಲ …
Read More »