ಹುಬ್ಬಳ್ಳಿ: ಇಲ್ಲಿನ ಕೇಶ್ವಾಪುರದ ಮಧುರಾ ಎಸ್ಟೇಟ್’ನಲ್ಲಿರುವ ಕಾಂಗ್ರೆಸ್ ಮುಖಂಡ ಜಗದೀಶ ಶೆಟ್ಟರ್ ನಿವಾಸಕ್ಕೆ ಬುಧವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಶೆಟ್ಟರ್ ಜೊತೆ ಉಪಹಾರ ಸೇವಿಸಿದ ಮುಖಂಡರು ಅರ್ಧ ತಾಸಿಗೂ ಹೆಚ್ಚು ಹೊತ್ತು ಗೋಪ್ಯ ಚರ್ಚೆ ನಡೆಸಿದರು. ಸಚಿವರಾದ ಲಕ್ಷ್ಮಿ ಹೆಬ್ಬಾಳಕರ, ಸತೀಶ ಜಾರಕಿಹೊಳಿ ಮತ್ತು ಶಾಸಕ ಎನ್.ಎಚ್. ಕೋನರಡ್ಡಿ ಇದ್ದರು. ‘ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪಕ್ಷದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು’ …
Read More »ಮಂಗಳವಾರ ಮನೆ ಕುಸಿದಿದ್ದು, ಬಾಲಕಿ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
ಕಾಗವಾಡ: ರಭಸದ ಮಳೆ, ಗಾಳಿಯಿಂದಾಗಿ ತಾಲ್ಲೂಕಿನ ಕವಲಗುಡ್ಡದ ಹೊರವಲಯದಲ್ಲಿ ಮಂಗಳವಾರ ಮನೆ ಕುಸಿದಿದ್ದು, ಬಾಲಕಿ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಮಾರುತಿ ಸನದಿ ಅವರಿಗೆ ಸೇರಿದ ಮನೆ ಕುಸಿದಿದ್ದರಿಂದ ಪುತ್ರಿ ಗೀತಾಂಜಲಿ(14) ಕಟ್ಟಡದ ಅವಶೇಷಗಳಡಿ ಸಿಲುಕಿದ್ದಳು. ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಅಸ್ವಸ್ಥಗೊಂಡ ಬಾಲಕಿಯನ್ನು ಚಿಕಿತ್ಸೆಗಾಗಿ ಅಥಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ತಂದೆ-ತಾಯಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಮೋಳೆ ಹೊರವಲಯದ ಭಡಕೆಯವರ ತೋಟದ ಹತ್ತಿರವಿರುವ ಶುದ್ಧ …
Read More »ಬಿತ್ತನೆಬೀಜ ವಿತರಣೆಗೆ ಸಚಿವ ಸತೀಶ ಜಾರಕಿಹೊಳಿ ಸೂಚನೆ
ಬೆಳಗಾವಿ: ಜಿಲ್ಲೆಯಲ್ಲಿ ಬುಧವಾರ (ಮೇ 31) ರೈತರಿಗೆ ಬಿತ್ತನೆಬೀಜ- ಗೊಬ್ಬರ ವಿತರಿಸಬೇಕು. ಆಯಾ ಶಾಸಕರ ಗಮನಕ್ಕೆ ತಂದು ವಿತರಣೆ ಕಾರ್ಯ ಆರಂಭಿಸಬೇಕು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೂಚನೆ ನೀಡಿದರು. ಜಿಲ್ಲೆಯ ಅಭಿವೃದ್ಧಿ ಕುರಿತು ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಬೀಜ ಖರೀದಿಗೆ ರೈತರು ದೂರ ಅಲೆಯುವುದನ್ನು ತಪ್ಪಿಸಲು ಆದಷ್ಟು ಸಮೀಪದಲ್ಲಿ ಬೀಜ ಲಭಿಸುವಂತೆ ಕ್ರಮ …
Read More »2,000 ನೆರವನ್ನು ಹಿರಿಯರಾದ ಅತ್ತೆಗೆ ಪ್ರಾಧಾನ್ಯ:ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ: ‘ಗೃಹ ಲಕ್ಷ್ಮೀ’ ಯೋಜನೆಯಡಿ ₹ 2,000 ನೆರವನ್ನು ಒಂದು ಮನೆಯಲ್ಲಿ ಅತ್ತೆಗೆ ಕೊಡಬೇಕೋ, ಸೊಸೆಗೆ ಕೊಡಬೇಕೋ ಎಂಬ ಬಗ್ಗೆ ಹಲವರು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ಮನೆಯಲ್ಲಿ ಹಿರಿಯರಾದ ಅತ್ತೆಗೆ ಪ್ರಾಧಾನ್ಯ ಕೊಡಬೇಕಾಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಮ್ಮ ಸಂಸ್ಕೃತಿಯಲ್ಲಿ ಅತ್ತೆಯೇ ಮನೆಯ ಯಜಮಾನಿ. ಹಾಗಾಗಿ, ಅತ್ತೆಗೆ ಈ ನೆರವು ಸಿಗಲಿದೆ’ …
Read More »ಬೆಳಗಾವಿ ಜಿಲ್ಲೆಯಾದ್ಯಂತ ಬುಧವಾರದಿಂದ ಪ್ರಸಕ್ತ ಸಾಲಿನ ತರಗತಿ ಆರಂಭ
ಬೆಳಗಾವಿ: ಜಿಲ್ಲೆಯಾದ್ಯಂತ ಬುಧವಾರದಿಂದ ಪ್ರಸಕ್ತ ಸಾಲಿನ ತರಗತಿ ಆರಂಭಗೊಂಡಿದ್ದು, ಮೊದಲ ದಿನವೇ ವಿದ್ಯಾರ್ಥಿಗಳು ಉತ್ಸಾಹದಿಂದ ಶಾಲೆಗಳತ್ತ ಹೆಜ್ಜೆ ಹಾಕಿದರು. ಜಿಲ್ಲೆಯ 4,015 ಪ್ರಾಥಮಿಕ, ,1,200 ಪ್ರೌಢ ಸೇರಿದಂತೆ 5,215 ಶಾಲೆಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಇಲ್ಲಿನ ಸರ್ಕಾರಿ ಸರ್ದಾರ್ಸ್ ಪ್ರೌಢಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಹೂವು ನೀಡಿ ಅದ್ಧೂರಿಯಾಗಿ ಬರಮಾಡಿಕೊಂಡರು. ಬೇಸಿಗೆ ರಜೆಯಿಂದಾಗಿ ವಿದ್ಯಾರ್ಥಿಗಳಿಲ್ಲದೆ ಭಣಗುಡುತ್ತಿದ್ದ ಶಾಲೆಯಂಗಳದಲ್ಲಿ ಮಕ್ಕಳ ಕಲರವ ಕಂಡುಬಂತು. ಕೆಲವೆಡೆ ಸಾಂಕೇತಿಕವಾಗಿ ಪಠ್ಯಪುಸ್ತಕ ವಿತರಿಸಲಾಯಿತು.
Read More »ಇಂದಿನಿಂದ ಸರ್ಕಾರಿ ಶಾಲೆ ಆರಂಭ: ಪಠ್ಯ ಪುಸ್ತಕ ವಿತರಣೆ ವಿಳಂಬ ಸಾಧ್ಯತೆ
ಬೆಂಗಳೂರು: ಶೈಕ್ಷಣಿಕ ವರ್ಷಾರಂಭವಾದ ಮೇ 29 ರಿಂದಲೇ ರಾಜ್ಯದಲ್ಲಿ ಖಾಸಗಿ ಶಾಲೆಗಳು ಆರಂಭಗೊಂಡಿದ್ದು, ಇಂದಿನಿಂದ ಎಲ್ಲ ಸರ್ಕಾರಿ ಶಾಲೆಗಳು ಶುರುವಾಗಲಿವೆ. ಶಾಲಾರಂಭಕ್ಕೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. 1 ರಿಂದ 10ನೇ ತರಗತಿವರೆಗೂ ಮೊದಲ ದಿನದಿಂದಲೇ ಸೇತುಬಂಧ ಕಾರ್ಯಕ್ರಮ ನಡೆಸಲು ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಆದರೆ ಪಠ್ಯ ಪುಸ್ತಕ ವಿತರಣೆ ವಿಳಂಬವಾಗಲಿದೆ. ಸರ್ಕಾರಿ ಮತ್ತು ಖಾಸಗಿ ಸೇರಿದಂತೆ ಒಟ್ಟು 62,229 ಶಾಲೆಗಳು ರಾಜ್ಯದಲ್ಲಿವೆ. ಇದರಲ್ಲಿ 25,278 ಕಿರಿಯ ಪ್ರಾಥಮಿಕ ಶಾಲೆಗಳಿದ್ದು, ಹಿರಿಯ …
Read More »ಸಾರಿಗೆ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಮುಕ್ತ ಅವಕಾಶ: ಷರತ್ತು ವಿಧಿಸಲ್ಲ ಎಂದ ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು : ಎಲ್ಲಾ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು. ಶಾಂತಿನಗರದ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಮಹಿಳಾ ಪ್ರಯಾಣಿಕರಿಗೆ ಬಸ್ ಪ್ರಯಾಣ ಉಚಿತ ಇರಲಿದೆ. ಎಲ್ಲ ಹೆಣ್ಣು ಮಕ್ಕಳು, ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ನಾಲ್ಕು ನಿಗಮಗಳ ಒಟ್ಟು ಆದಾಯ 8,946.85 ಕೋಟಿ ರೂ. ಇದೆ. ಒಟ್ಟು ಕಾರ್ಯಾಚರಣೆ ವೆಚ್ಚ 12,750.49 ಕೋಟಿ ರೂ. …
Read More »5 ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಅನುಷ್ಠಾನಕ್ಕೆ ತರಲು ಬದ್ಧವಾಗಿದೆ: ಜಮೀರ್ ಅಹ್ಮದ್ ಖಾನ್
ತುಮಕೂರು: ಚುನಾವಣೆ ವೇಳೆ ಕಾಂಗ್ರೆಸ್ ಭರವಸೆ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಈಗಾಗಲೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ ಇದಕ್ಕಾಗಿ ಪೂರಕವಾದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 5 ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಅನುಷ್ಠಾನಕ್ಕೆ ತರಲು ಬದ್ಧವಾಗಿದೆ ಎಂದರು. ಸಿದ್ದಗಂಗಾ ಮಠಕ್ಕೆ ನಾನು ಹೊಸದಾಗಿ ಬರ್ತಿಲ್ಲ. ನಾನು …
Read More »ಮೈಸೂರು ಅಪಘಾತ ದುರಂತ: ಸಂಗನಕಲ್ಲು ಗ್ರಾಮದಲ್ಲಿ ಸಾಮೂಹಿಕ ಅಂತ್ಯಕ್ರಿಯೆ
ಬಳ್ಳಾರಿ: ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕುರುಬೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ 9 ಜನರ ಮೃತದೇಹಗಳನ್ನು ಗ್ರಾಮದಲ್ಲಿ ಮಂಗಳವಾರ ಸಾಮೂಹಿಕವಾಗಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿವಿಧಾನಗಳ ಪ್ರಕಾರ ಒಂದೇ ಸಾಲಿನಲ್ಲಿ ಗುಂಡಿಗಳನ್ನು ಅಗೆದು, ಏಕಕಾಲದಲ್ಲಿ ಮೃತದೇಹಗಳನ್ನು ಮಣ್ಣು ಮಾಡಲಾಯಿತು. ಭೀಕರ ಅಪಘಾತದಲ್ಲಿ ಸಂದೀಪ್ (24), ಅವರ ತಂದೆ ಕೊಟ್ರೇಶ್ (45), ತಾಯಿ ಸುಜಾತಾ (40) ಒಂದು ಕುಟುಂಬದವರಾಗಿದ್ದರೆ, ಇನ್ನೊಂದು …
Read More »ಅಧಿಕಾರಿಗಳಿಗೆ ಜಾರಕಿಹೊಳಿ, ಹೆಬ್ಬಾಳಕರ್ ನೀಡಿದ ಎಚ್ಚರಿಕೆ ಸಂದೇಶ ಏನು?
ಯಾವುದೇ ಅಧಿಕಾರಿಗಳನ್ನು ಬದಲಿಸುವ ಉದ್ದೇಶ ನಮಗಿಲ್ಲ. ಆದರೆ ಹಿಂದಿನಂತೆ ಇದ್ದರೆ ಆಗುವುದಿಲ್ಲ. ಜನರು ಬಹಳ ನಿರೀಕ್ಷೆ ಇಟ್ಟು ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಸುಳ್ಳು ಹೇಳುತ್ತ ಕಾಲಕಳೆದರೆ ನಡೆಯುವುದಿಲ್ಲ. ನಮ್ಮ ಸ್ಪೀಡ್ ಗೆ ನೀವೂ ಓಡಬೇಕು. ಜಿಲ್ಲಾಧಿಕಾರಿಗಳ ಕೈಗೆ, ಶಾಸಕರ ಕೈಗೆ ಸಿಗದೆ ಓಡಾಡುವವರು ಈಗಲೇ ಹೊರಗೆ ಹೋಗಲು ಸಿದ್ಧತೆ ಮಾಡಿಕೊಳ್ಳಿ” ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ …
Read More »