ಬೆಂಗಳೂರು: ಕಳೆದ ಆರ್ಥಿಕ ವರ್ಷದ ಆದಾಯ ತೆರಿಗೆ ಪಾವತಿ ಮಾಡುವ ಸಮಯ ಬಂದಿದೆ. ಆದಾಯ ತೆರಿಗೆ ಇಲಾಖೆ ಈಗಾಗಲೇ ಪಾವತಿ ದಾಖಲಾತಿಗಳನ್ನು ಲಭ್ಯವಾಗುವಂತೆ ಮಾಡಿದೆ. ಈ ಹಿನ್ನಲೆ 2022-2023ರ ಆರ್ಥಿಕ ವರ್ಷದ ಆದಾಯ ತೆರಿಗೆ ಪಾವತಿಯಲ್ಲಿ ಯಾವುದೇ ತಪ್ಪುಗಳು ಆಗದಂತೆ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಅವಶ್ಯವಾಗಿದೆ. ಐಟಿ ಇಲಾಖೆಯ ಮಾಹಿತಿ ಅನುಸಾರ, ಜುಲೈ 31ರೊಳಗೆ ಲೆಕ್ಕ ಪರಿಶೋಧನೆಯ ಅಗತ್ಯವಿಲ್ಲದ ವ್ಯಕ್ತಿಗಳು ಜುಲೈ 31ರೊಳಗೆ ರಿಟರ್ನ್ಸ್ ಸಲ್ಲಿಸಬೇಕು. ಫಾರ್ಮ್ 16 ಅನ್ನು ಈಗಾಗಲೇ ಕೆಲವು …
Read More »ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನ ಕಳೆದಂತೆ ಬಿಸಿಲು ಕೆಂಡದಂತಾಗಿದೆ. ಗ್ರಾಮಗಳಲ್ಲಿ ನೀರಿನ ಕೊರತೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನ ಕಳೆದಂತೆ ಬಿಸಿಲು ಕೆಂಡದಂತಾಗಿದೆ. ಹೀಗಾಗಿ, ಅಂತರ್ಜಲ ಮಟ್ಟ ತಳ ತಲುಪಿದ್ದು, ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಗ್ರಾಮಗಳಲ್ಲಿ ನೀರಿನ ಕೊರತೆ ಎದುರಾಗಿರುವ ಕಾರಣ ಕೆಲವೆಡೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಿ ದಾಹ ತೀರಿಸುವ ಪರಿಸ್ಥಿತಿ ಬಂದೊದಗಿದೆ. ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿಂದ ಬೀಸಿಲಿನ ತಾಪಕ್ಕೆ ಜನ ನಿತ್ಯವೂ ಬಸವಳಿಯುತ್ತಿದ್ದಾರೆ. ಕಳೆದೆರಡು ದಿನದ ಹಿಂದೆ ಕೆಲ ಗಂಟೆಗಳ ಕಾಲ ಮಳೆ ಸುರಿದಿತ್ತಾದರೂ ಮತ್ತೆ …
Read More »ಸಂಸತ್ ಭವನದ ಉದ್ಘಾಟನೆ ವಿವಾದ: ಸಿಎಂ ಅರವಿಂದ್ ಕೇಜ್ರಿವಾಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲು
ನವದೆಹಲಿ: ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದ ಬಗ್ಗೆ ವಿವಾದ ಹೆಚ್ಚಾಗುತ್ತಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯದಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ಈಗ ವಿವಾದಕ್ಕೆ ಸಿಲುಕಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜಾತಿಯನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಆರೋಪದ ಮೇಲೆ ಅರವಿಂದ್ ಕೇಜ್ರಿವಾಲ್ ಮತ್ತು ಖರ್ಗೆ ಸೇರಿದಂತೆ ಇತರ ಕೆಲವು ನಾಯಕರ ವಿರುದ್ಧ ದೆಹಲಿಯ ಕೊನಾಟ್ …
Read More »ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಯಾರಿಗೆ ಯಾವ ಖಾತೆ?*
ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದ್ದು, ಖಾತೆ ಹಂಚಿಕೆ ಕೂಡ ಮಾಡಲಾಗಿದೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಬಳಿಯಲ್ಲಿಯೇ ಹಣಕಾಸು, ಸಂಪುಟ ವ್ಯವಹಾರ ಹಾಗೂ ಗುಪ್ತಚರ ಇಲಾಖೆ ಉಳಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ- ಹಣಕಾಸು, ಸಂಪುಟ ವ್ಯವಹಾರ, ಗುಪ್ತಚರ ಇಲಾಖೆ ಡಿಸಿಎಂ ಡಿ.ಕೆ.ಶಿವಕುಮಾರ್ – ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಡಾ.ಜಿ.ಪರಮೇಶ್ವರ್ – ಗೃಹ ಖಾತೆ ಹೆಚ್.ಕೆ.ಪಾಟೀಲ್ – ಕಾನೂನು ಮತ್ತು …
Read More »ಸುಭದ್ರ ಸರ್ಕಾರಕ್ಕೆ ಎದೆಗಾರಿಕೆಯ ಮುನ್ನುಡಿ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗಾಗಿ ಸಂಪೂರ್ಣ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, “ನಾಡಿನ ಜನತೆ ಸುಭದ್ರ ಮತ್ತು ಸ್ವಚ್ಚ ಆಡಳಿತಕ್ಕಾಗಿ ನಮಗೆ ಪೂರ್ಣ ಬಹುಮತ ನೀಡಿದ್ದಾರೆ. ಜನರ ನಿರೀಕ್ಷೆಯಂತೆ ಸರ್ಕಾರ ನಡೆಯಲಿದೆ” ಎಂದು ವಾಗ್ದಾನ ಮಾಡಿದ್ದರು. ಈ ವಾಗ್ದಾನದ ಮೊದಲ ಹೆಜ್ಜೆಯಾಗಿ ಸಂಪೂರ್ಣ ಸಂಪುಟ ಹೆಚ್ಚಿನ ಭಿನ್ನಾಭಿಪ್ರಾಯಗಳು ಇಲ್ಲದ ರೀತಿಯಲ್ಲಿ ಅಸ್ತಿತ್ವಕ್ಕೆ ಬಂದಿದೆ. ಏಕ …
Read More »ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಸ್ವಾಗತಿಸಲು ಇಡೀ ಬೆಳಗಾವಿ ಮಹಾನಗರ ಸಜ್ಜ
ರಾಜ್ಯ ಕಾಂಗ್ರೆಸ್ ನೇತೃತ್ವದ ಸರಕಾರದ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳಕರ್ ಸಚಿವರಾದ ನಂತರ ಮೊದಲ ಬಾರಿಗೆ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಒಟ್ಟಾಗಿ ಆಗಮಿಸುತ್ತಿರುವ ಸಚಿವ ದ್ವಯರನ್ನು ಸ್ವಾಗತಿಸಲು ಇಡೀ ಬೆಳಗಾವಿ ಮಹಾನಗರ ಸಜ್ಜಾಗಿದ್ದು, ವಿಮಾನ ನಿಲ್ದಾಣದಿಂದಲೇ ಬೃಹತ್ ರ್ಯಾಲಿ ಮೂಲಕ ನಗರಕ್ಕೆ ಕರೆತರಲು ಕಾರ್ಯಕರ್ತರು, ಅಭಿಮಾನಿಗಳು ನಿರ್ಧರಿಸಿದ್ದಾರೆ. ಮೇ 20ರಂದು ಸತೀಶ್ ಜಾರಕಿಹೊಳಿ ಹಾಗೂ ಮೇ 27ರಂದು ಲಕ್ಷ್ಮೀ ಹೆಬ್ಬಾಳಕರ್ ಸಂಪುಟ ದರ್ಜೆ …
Read More »ರಾಯಚೂರಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ರಾಯಚೂರು: ಸಿಂಧನೂರು ತಾಲೂಕಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ತೀವ್ರ ಅಸ್ವಸ್ಥಳಾಗಿದ್ದ ಸಂತ್ರಸ್ತೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೇ 23 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಆರೋಪಿಗಳು ಕೃತ್ಯದಲ್ಲಿ ಭಾಗಿಯಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಇನ್ನುಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ. ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಮೇ 23 ರಂದು ಈ ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತಾಡಪತ್ರಿ ಹೊಲೆದು ಜೀವನ ನಡೆಸುತ್ತಿದ್ದ ಗೃಹಿಣಿಯನ್ನು ಒತ್ತಾಯಪೂರ್ವಕವಾಗಿ ಆರೋಪಿ ಮಲ್ಲಪ್ಪ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಕನಸಗೇರಿ ಗ್ರಾಮದಲ್ಲಿ ಶ್ರೀ ವಿಠ್ಠಲ ರುಖುಮಾಯಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ನೂತನ ಸಚಿವರಾಗಿ ಹೆಚ್.ಕೆ.ಪಾಟೀಲ್,ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ
ಖಾನಾಪುರ: ತಾಲೂಕಿನ ಲಿಂಗನಮಠ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚುಂಚವಾಡ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಅನುಷ್ಠಾನಗೊಳ್ಳಲಿರುವ ಜಲಜೀವನ್ ಮೀಷನ್ ಕಾಮಗಾರಿಯಲ್ಲಿ ವಿಳಂಬ ಆಗುತ್ತಿರುವ ಕಾರಣ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಜೆಜೆಎಂ ಕಾಮಗಾರಿಯ ಅನುಷ್ಠಾನದಲ್ಲಿ ಇಲಾಖೆಯ ಅಧಿಕಾರಿಗಳ ಮತ್ತು ಗುತ್ತಿಗೆದಾರರ ನಿರ್ಲಕ್ಷ್ಯ ಖಂಡಿಸಿದ ಸ್ಥಳೀಯರು ಲಿಂಗನಮಠ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಚುಂಚವಾಡ ಗ್ರಾಮದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಜೆ.ಜೆ.ಎಂ ಕಾಮಗಾರಿಗೆ ಟೆಂಡರ್ …
Read More »ಮೊಬೈಲ್ ಫೋನ್ ಗಾಗಿ ಜಲಾಶಯವನ್ನೇ ಖಾಲಿ ಮಾಡಿಸಿದ ಅಧಿಕಾರಿ
ರಾಯಪುರ: ಕಳೆದುಕೊಂಡ ವಸ್ತುವಿನ ಮೇಲೆ ಅತಿಯಾದ ವ್ಯಾಮೋಹ ಏನನ್ನೂ ಮಾಡಿಸಬಹುದು ಎಂಬುದಕ್ಕೆ ಅಧಿಕಾರಿಯೊಬ್ಬರು ಸಾಕ್ಷಿಯಾಗಿದ್ದಾರೆ. ಛತ್ತೀಸ್ಗಢದ ಕಂಕೇರ್ ಜಿಲ್ಲೆಯ ಕೊಯಿಲಿಬೀಡಾ ಬ್ಲಾಕ್‌ನ ಖೇರ್ಕಟ್ಟಾ ಅಣೆಕಟ್ಟೆಯಲ್ಲಿ ನಡೆದಾಡುತ್ತಿದ್ದಾಗ ಕೈಯ್ಯಲ್ಲಿದ್ದ ಮೊಬೈಲ್ ಫೋನ್ ತಪ್ಪಿ ಜಲಾಶಯದಲ್ಲಿ ಬಿದ್ದಿದ್ದಕ್ಕೆ ಜಲಾಶಯವನ್ನೇ ಖಾಲಿ ಮಾಡಿಸಿರುವ ಅಧಿಕಾರಿ ಈಗ ಅಮಾನತುಗೊಂಡಿದ್ದಷ್ಟೇ ಅಲ್ಲ, ಆ ಭಾಗರ ರೈತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆಹಾರ ನಿರೀಕ್ಷಕ ರಾಜೇಶ್ ವಿಶ್ವಾಸ್ ಎಂಬುವವರು ಖೇರ್ಕಟ್ಟಾ ಅಣೆಕಟ್ಟೆ ಮೇಲೆ ಭಾನುವಾರ ಸಂಜೆ ವಾಯುವಿಹಾರ ನಡೆಸುತ್ತಿದ್ದರು. ಈ ವೇಳೆ …
Read More »