ರಾಯಚೂರು: ಕಲುಷಿತ ನೀರು ಸೇವಿಸಿ ಮಗು ಸಾವನ್ನಪ್ಪಿ, 30 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದ ಜನರು ಕಳೆದ ಎರಡು ದಿನಗಳ ಹಿಂದೆ ಕಲುಷಿತ ನೀರು ಸೇವಿಸಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ಘಟನೆಗೆ ಗ್ರಾ.ಪಂ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಅರಕೇರಾ, ದೇವದುರ್ಗ ಹಾಗೂ ರಾಯಚೂರಿನ ರಿಮ್ಸ್ನಲ್ಲಿ ಅನಾರೋಗ್ಯಪೀಡಿತರು ದಾಖಲಾಗಿದ್ದಾರೆ. ರೇಕಲಮರಡಿ ಗ್ರಾಮದ …
Read More »ಮಹಿಳಾ KAS ಅಧಿಕಾರಿಗೆ ಸಹೋದರನಿಂದಲೇ ಜೀವ ಬೆದರಿಕೆ: ಪ್ರಕರಣ ದಾಖಲು
ಬೆಂಗಳೂರು : ಕರ್ನಾಟಕ ಆಡಳಿತ ಸೇವೆ (ಕೆಎಎಸ್) ಮಹಿಳಾ ಅಧಿಕಾರಿಗೆ ಸ್ವಂತ ಸಹೋದರನೇ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧಿಕಾರಿ ಡಾ. ಮೈತ್ರಿ ನೀಡಿರುವ ದೂರಿನನ್ವಯ ಅವರ ಸಹೋದರ ಡಾ.ಸಂಜಯ್ ವಿರುದ್ಧ ಹಲ್ಲೆ, ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಾಗಿದೆ. ಜಯನಗರದಲ್ಲಿ ತಮ್ಮ ಕುಟುಂಬದೊಂದಿಗೆ ಡಾ. ಮೈತ್ರಿ ವಾಸವಿದ್ದು, ಸಹೋದರ ಡಾ. ಸಂಜಯ್ ಪ್ರತ್ಯೇಕವಾಗಿ ವಾಸವಿದ್ದರು. ಎರಡು ವರ್ಷಗಳಿಂದ ತಾನು …
Read More »ಕರೆಂಟ್ ಬಿಲ್ ಕಟ್ಬೇಡಿ, ಬಸ್ ಟಿಕೆಟ್ ತಗೋಬೇಡಿ: ಜನರಿಗೆ ಆರ್. ಅಶೋಕ್ ಕರೆ
ಬೆಂಗಳೂರು: ಗ್ಯಾರಂಟಿಗಳ ಜಾರಿಗೆ ನೀಡಿದ್ದ ಸಮಯ ಮುಗಿದಿದ್ದು ಇನ್ಮುಂದೆ ಯಾರೂ ರಾಜ್ಯದಲ್ಲಿ ವಿದ್ಯುತ್ ಬಿಲ್ ಕಟ್ಟಬಾರದು, ಮಹಿಳೆಯರು ಬಸ್ ಟಿಕೆಟ್ ಪಡೆಯಬಾರದು ಎಂದು ನಾಡಿನ ಜನತೆಗೆ ಬಿಜೆಪಿ ನಾಯಕ ಆರ್. ಅಶೋಕ್ ಕರೆ ನೀಡಿದ್ದಾರೆ. ಯಾವುದೇ ಷರತ್ತುಗಳಿಲ್ಲದೆ ಗ್ಯಾರಂಟಿ ಜಾರಿ ಮಾಡಬೇಕು, ಭರವಸೆ ವೇಳೆ ಷರತ್ತು ಇರಲಿಲ್ಲ, ಈಗಲೂ ಷರತ್ತು ಬೇಡ, ಷರತ್ತು ಹಾಕಿದರೂ ನಮ್ಮ ಹೋರಾಟ ಇರಲಿದೆ, ರಾಜ್ಯ ಪ್ರವಾಸ ಮಾಡಿ ಸರ್ಕಾರಕ್ಕೆ ಚಳಿ ಜ್ವರ ಬಿಡಿಸಲಿದ್ದೇವೆ ಎಂದು ಎಚ್ಚರಿಕೆ …
Read More »ಸಿಎ ಬಿಟ್ಟು ಕೃಷಿಗಿಳಿದ ವಿದ್ಯಾರ್ಥಿನಿ: ಮೆಣಸಿನಕಾಯಿ ಬೆಳೆದು 6 ತಿಂಗಳಲ್ಲಿ 8 ಲಕ್ಷ ಆದಾಯ
ಬೆಳಗಾವಿ: ಕೃಷಿ ಎಂದರೆ ಮೂಗು ಮುರಿಯುವವರ ಮಧ್ಯ ಇಲ್ಲೋಬ್ಬ ವಿದ್ಯಾವಂತ ಯುವತಿಯೋರ್ವರು 30 ಗುಂಟೆ ಜಮೀನಿನಲ್ಲಿ ಕೇವಲ ಆರು ತಿಂಗಳಲ್ಲೇ ಮೆಣಸಿನಕಾಯಿ ಬೆಳೆದು ಬರೊಬ್ಬರಿ 8 ಲಕ್ಷ ರೂ. ಗಳಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಹೌದು ಬೆಳಗಾವಿ ತಾಲೂಕಿನ ಜಾಫರವಾಡಿ ಗ್ರಾಮದ ನಿಕಿತಾ ವೈಜು ಪಾಟೀಲ (26) ಎಂಬ ಯುವತಿಯೇ ಕೃಷಿಯಲ್ಲಿ ಸಾಧನೆ ಮಾಡುತ್ತಿರುವ ಯುವತಿ. ತಮ್ಮ 30 ಗುಂಟೆ ಜಮೀನಿನಲ್ಲಿ ನವಲ್ ಭಟಕಾ ತಳಿಯ ಮೆಣಸಿನಕಾಯಿ ಬೆಳೆದಿರುವ ನಿಕಿತಾ …
Read More »ನೀರು ಪೂರೈಕೆಗೆ ಹಣ ಬಿಡುಗಡೆ ಮಾಡದ ಜಿಲ್ಲಾಡಳಿತ: ಸಗಣಿ, ಗೋಮೂತ್ರದಲ್ಲಿ ಸ್ನಾನಮಾಡಿ ಗ್ರಾ ಪಂ ಅಧ್ಯಕ್ಷರ ಪ್ರತಿಭಟನೆ
ಶಿವಮೊಗ್ಗ: ಕುಡಿವ ನೀರು ಪೂರೈಕೆಗೆ ಹಣ ಬಿಡುಗಡೆಯಾಗದ ಹಿನ್ನೆಲೆ ನಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಮಲಕರ ಶೆಟ್ಟಿ ಎಂಬುವವರು ಸಗಣಿ ಹಾಗೂ ಗೋಮೂತ್ರದಲ್ಲಿ ಸ್ನಾನ ಮಾಡುವ ಮೂಲಕ ಜಿಲ್ಲಾಡಳಿತದ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಕಮಲಕರ ಶೆಟ್ಟಿ ಹೊಸನಗರ ತಾಲೂಕು ಪಂಚಾಯಿತಿ ಮುಂಭಾಗ ಪ್ರತಿಭಟನ ರೂಪದಲ್ಲಿ ಸಗಣಿ ಹಾಗೂ ಗೋಮೂತ್ರದಲ್ಲಿ ಸ್ನಾನ ಮಾಡಿ ಜಿಲ್ಲಾಡಳಿತದ ವಿರುದ್ದ ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. …
Read More »ತಾಕತ್ತಿದ್ದರೆ ಆರ್ಎಸ್ಎಸ್, ಬಜರಂಗದಳ ನಿಷೇಧಿಸಲಿ: ಬೊಮ್ಮಾಯಿ
ಬೆಂಗಳೂರು: ಆರ್ಎಸ್ಎಸ್ ಮತ್ತು ಬಜರಂಗದಳ ನಿಷೇಧ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ತುಷ್ಟೀಕರಣಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಹಿಂದೆಯೂ ಆರ್ಎಸ್ಎಸ್ ಅನ್ನು ನಿಷೇಧ ಮಾಡುವ ಕೆಲಸ ನಡೆದಿತ್ತು. ಅವರನ್ನು ಜನತೆ ಮನೆಗೆ ಕಳಿಸಿದ್ದಾರೆ. ಸಂಘ ಪರಿವಾರವನ್ನು ನಿಷೇಧ ಮಾಡುವ ಶಕ್ತಿ ಯಾರಿಗೂ ಇಲ್ಲ. ಅವರಿಗೆ ತಾಕತ್ತಿದ್ದರೆ ಆರ್ಎಸ್ಎಸ್ ಮತ್ತು ಬಜರಂಗದಳವನ್ನು ನಿಷೇಧಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಗೆ ಮಾಜಿ ಸಿಎಂ ಬಸವರಾಜ …
Read More »ಮೇ 29ರಿಂದ ಸರ್ಕಾರಿ ಶಾಲೆಗಳು, ಪ್ರೌಢಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್
ಬೆಂಗಳೂರು: ಮೇ 29ರಿಂದ ಸರ್ಕಾರಿ ಶಾಲೆಗಳು, ಪ್ರೌಢಶಾಲೆಗಳು ಪುನರಾರಂಭ ಹಿನ್ನೆಲೆಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿ ಬಳಸದಂತೆ ಶಿಕ್ಷಣ ಇಲಾಖೆ ವಾರ್ನಿಂಗ್ ನೀಡಿದೆ. ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಎಚ್ಚರವಹಿಸಿ, ಶಾಲೆಗಳು ಆರಂಭವಾಗುವ ಮೊದಲೇ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸರ್ಕಾರಿ ಶಾಲಾ ಶಿಕ್ಷಕರಿಗೆ ಆದೇಶ ನೀಡಿದೆ. ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ ಈಗಾಗಲೇ ಆರಂಭವಾಗಿದೆ. ಶಾಲಾ ಕೊಠಡಿ, ಕಾಂಪೌಂಡ್, ಶೌಚಾಲಯಗಳನ್ನು ಪರಿಶಿಲಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಉಪನಿರ್ದೇಶಕರ ಗಮನಕ್ಕೆ ತರಬೇಕು. …
Read More »ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ : ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಸಚಿವರ ಪಟ್ಟಿ ಬಹುತೇಕ ಫೈನಲ್ ಆಗಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವಂತೆ ಹೇಳಿದ್ದೇನೆ. ಕನಿಷ್ಠ ಹತ್ತು ಜನರಿಗೆ ಅವಕಾಶ ಕೊಡಬೇಕು ಎಂದಿದ್ದೇನೆ. ಅದರಂತೆ ಈಬಾರಿ ಹೊಸಬರಿಗೂ ಅವಕಾಶ ಸಿಗಲಿದೆ ಎಂದರು. ಯಾರೆಲ್ಲ …
Read More »ಮೂರ್ನಾಲ್ಕು ತಿಂಗಳಿಂದ ಸಿಗದ ಸಂಬಳ: ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಸಿಡಿದೆದ್ದ ಆಶಾ ಕಾರ್ಯಕರ್ತೆಯರು
ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳಿಂದ ಸಂಬಳ ನೀಡದಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಒಟ್ಟು 42 ಸಾವಿರ ಆಶಾ ಕಾರ್ಯಕರ್ತೆಯರು ಇದ್ದಾರೆ. ಬಿರು ಬಿಸಲು, ಕೊರೆವ ಚಳಿ ಲೆಕ್ಕಿಸದೆ ಇವರು ಕೆಲಸ ಮಾಡುತ್ತಾರೆ. ಆದರೆ ಸುಮಾರು 3-4 ತಿಂಗಳಿಂದ ಸಂಬಳವಿಲ್ಲದೆ ಪರದಾಡುವಂತಾಗಿದೆ ಎಂದು ಎಐಟಿಯುಸಿ (ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್) ತೀವ್ರ ಬೇಸರ ವ್ಯಕ್ತಪಡಿಸಿದೆ. ರಾಜ್ಯ ಸರ್ಕಾರ ನೀಡುವ ಗೌರವ ಧನ …
Read More »ವಿಜಯಪುರದಲ್ಲಿ ಹಿಟ್ & ರನ್ ಪ್ರಕರಣ: ಅತ್ತೆ-ಅಳಿಯ ಸಾವು, ಇಬ್ಬರು ಮಕ್ಕಳಿಗೆ ಗಾಯ
ವಿಜಯಪುರ: ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಅಪರಾಧ ಘಟನೆಗಳು ನಡೆದಿವೆ. ಒಂದು ಪ್ರಕರಣದಲ್ಲಿ ಟಿಪ್ಪರ್ ಚಾಲಕನ ಅತಿವೇಗದ ಚಾಲನೆಗೆ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ವೇಳೆ, ಮಕ್ಕಳಿಬ್ಬರು ಗಾಯಗೊಂಡಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಬೇಸಗೆ ರಜೆಗೆಂದು ಮನೆಗೆ ಬಂದಿದ್ದ ಮಗಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸುದ್ದಿಯ ವಿವರ ಇಲ್ಲಿದೆ. ಅಪಘಾತದಲ್ಲಿ ಅತ್ತೆ-ಅಳಿಯ ಸಾವು: ಬೈಕ್ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ಗುರುವಾರ …
Read More »