ಚೆನ್ನೈ: ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಪಂದ್ಯದ ವೇಳೆ ಮೈದಾನದಲ್ಲಿ ಮಾಡುವ ಚಾಣಾಕ್ಷ ತಂತ್ರಗಳು ಒಂದೆರಡಲ್ಲ. ಅವುಗಳು ಎದುರಾಳಿ ತಂಡವನ್ನು ಸೋಲಿನ ದವಡೆಗೆ ಸಿಲುಕಿಸುತ್ತವೆ. ಆದರೆ, ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ತಂಡದ ಬೌಲರ್ಗಾಗಿ ನಾಲ್ಕು ನಿಮಿಷ ಆಟವನ್ನು ಬೇಕಂತಲೇ ನಿಲ್ಲಿಸಿದ್ದರು. ಧೋನಿ ತಳೆದ ಈ ನಿರ್ಧಾರ ಚರ್ಚೆಗೀಡು ಮಾಡಿದೆ. ಇದು ದೋನಿಯದ್ದಲ್ಲ, ಅಂಪೈರ್ಗಳ ತಪ್ಪು ಎಂದು ಹಿರಿಯ ಕ್ರಿಕೆಟಿಗ ಸುನೀಲ್ ಗವಾಸ್ಕರ್ ಟೀಕಿಸಿದ್ದಾರೆ. ಏನಾಯ್ತು?: ಗುಜರಾತ್ ವಿರುದ್ಧದ ಪಂದ್ಯದಲ್ಲಿ 16 ನೇ …
Read More »ತುಮಕೂರು: ನಿಂತಿದ್ದ ಬಸ್ ಗೆ ಟಿಟಿ ಡಿಕ್ಕಿ: ಇಬ್ಬರು ಸಾವು
ತುಮಕೂರು: ಶಾಲಾ ಕಾಲೇಜುಗಳಿಗೆ ಬೇಸಿಗೆ ರಜೆ ಇರುವ ಹಿನ್ನೆಲೆ ಈ ಅವಧಿಯಲ್ಲಿ ಬಹುತೇಕ ಜನರು ತಮ್ಮ ತಮ್ಮ ಕುಟುಂಬಸ್ಥರೊಂದಿಗೆ ಪ್ರವಾಸ ಕೈಗೊಳ್ಳುವುದು ಸಹಜ. ಅಂತೆಯೇ ರಾಯಚೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದ 11 ಜನರಿಗೆ ಮಾರ್ಗಮಧ್ಯೆ ಜವರಾಯ ಅಡ್ಡಿಯಾಗಿದ್ದಾನೆ. ರಸ್ತೆಯಲ್ಲಿ ನಿಂತಿದ್ದ ಬಸ್ಗೆ ಟಿಟಿ ವಾಹನ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದ ಡಿ. ಹೊಸಹಳ್ಳಿ ಬಳಿ ನಡೆದಿದೆ. ಮೃತರನ್ನು ವೀರೇಶ್ (30) …
Read More »ನೂತನ ಶಾಸಕರಿಗೆ ಮೂರು ದಿನಗಳ ತರಬೇತಿ ಶಿಬಿರ: ಸ್ಪೀಕರ್ ಯು ಟಿ ಖಾದರ್
ಮಂಗಳೂರು: ರಾಜ್ಯ ವಿಧಾನಸಭೆಗೆ ಆಯ್ಕೆಯಾದ ಹೊಸ ಶಾಸಕರಿಗೆ ಮೂರು ದಿನಗಳ ಕಾಲ ಟ್ರೈನಿಂಗ್ ಕ್ಯಾಂಪ್ ಆಯೋಜಿಸಲಾಗುವುದು ಎಂದು ನೂತನವಾಗಿ ಆಯ್ಕೆಯಾದ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಹೇಳಿದರು. ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಶೇ.70ರಷ್ಟು ಹೊಸ ಶಾಸಕರು ಈ ಬಾರಿಯ ಸದನದಲ್ಲಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿನ ನಿಯಮಗಳೇನು?. ಅದನ್ನು ಹೇಗೆ ಪಾಲನೆ ಮಾಡಬೇಕು, ವಿಧಾನಸಭೆಯ ಚರ್ಚೆಯಲ್ಲಿ ಗೌರವ ಹೆಚ್ಚಿಸಿಕೊಂಡು …
Read More »ಪೂರ್ಣ ಪ್ರಮಾಣದ ಸಂಪುಟ ರಚನೆಗೊಳ್ಳದ ಹೊರತು, ಸಚಿವರಿಗೆ ಖಾತೆ ಹಂಚಿಕೆಗೆ ಒಪ್ಪದ ಕಾಂಗ್ರೆಸ್ ಹೈಕಮಾಂಡ್
ಬೆಂಗಳೂರು: ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗದ ಹೊರತು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿರುವ ಸಿಎಂ ಮತ್ತು ಡಿಸಿಎಂ ಸೇರಿದಂತೆ ಹಾಲಿ ಎಂಟು ಜನ ಸಚಿವರುಗಳಿಗೆ ಯಾವುದೇ ಖಾತೆ ಹಂಚಿಕೆ ಮಾಡಲು ತನ್ನ ಒಪ್ಪಿಗೆ ನೀಡದಿರುವ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿದೆ. ದೆಹಲಿಯಲ್ಲಿ ಬುಧವಾರದಿಂದ ಮಂತ್ರಿಮಂಡಲ ವಿಸ್ತರಣೆ ಸಂಬಂಧ ಸರಣಿ ಸಭೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿ ಪಕ್ಷದ ಹೈಕಮಾಂಡ್ ನಡೆಸುತ್ತಿದ್ದಾರೆ. ಪೂರ್ಣ ಪ್ರಮಾಣದ ಮಂತ್ರಿ …
Read More »ಅಶ್ವತ್ಥನಾರಾಯಣ ವಿರುದ್ಧ ಮತ್ತೊಮ್ಮೆ F.I.R.
ಮೈಸೂರು : ಟಿಪ್ಪು ಸುಲ್ತಾನ್ ಹೊಡೆದು ಹಾಕಿದ ರೀತಿಯಲ್ಲೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಸಾರ್ವಜನಿಕ ಸಭೆಯಲ್ಲಿ ಹೇಳಿಕೆ ನೀಡಿದ್ದ ಅಂದಿನ ಸಚಿವ ಅಶ್ವತ್ಥನಾರಾಯಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿ 12ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ಅಶ್ವತ್ಥನಾರಾಯಣ ಇಂತಹ ಹೇಳಿಕೆ ನೀಡಿದ್ದರು. ಫೆ.17ರಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಅವರ ವಿರುದ್ಧ ದೂರು ನೀಡಿದ್ದರೂ ಕ್ರಮವಾಗಿರಲಿಲ್ಲ. ಹಾಗಾಗಿ ಬುಧವಾರ ದೇವರಾಜ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ ಮತ್ತೊಮ್ಮೆ ದೂರು …
Read More »ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ: ಹಿಂಡಲಗಾ ಜೈಲಿನ ಕೈದಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಎನ್‌ಐಎ
ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಎನ್‌ಐಎ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ. ಜಯೇಶ್ ಪೂಜಾರಿ ಎಂಬ ಆರೋಪಿ ಕೊಲೆ ಪ್ರಕರಣವೊಂದರಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಬಂಧಿಯಾಗಿದ್ದ. ಮೊದಲಿಗೆ ಜ.14ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕುವುದರ ಜೊತೆಗೆ 10 ಕೋಟಿ ರೂ. ಹಣಕ್ಕೆ ಬೇಡಿಕೆ ಹಾಕಿದ್ದ. ಇದಾದ ಬಳಿಕ ಮಾರ್ಚ್ …
Read More »ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ
ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿ ಯುವಕ ತೋಟದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತ ಯುವಕ ಶಿವಪ್ಪಾ ಬಾಬು ಕಿವಡಿ (28) ಎಂದು ತಿಳಿದುಬಂದಿದೆ. ಈತ ತಮ್ಮ ತೋಟದಲ್ಲಿ ಸಂಶಯಾಸ್ಪದ ರೀತಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಅಥಣಿ ಸಿಪಿಐ, ಐಗಳಿ ಪೊಲೀಸ್ ಠಾಣೆಯ ಪಿಎಸ್ಐ ಪರಿಶೀಲನೆ ನಡೆಸಿದರು. …
Read More »ಇಂದು ಸಂಜೆ ವೇಳೆಗೆ ಸಚಿವ ಸಂಪುಟ ವಿಸ್ತರಣೆ ಅಂತಿಮವಾಗುವ ಸಾಧ್ಯತೆ?
ನವದೆಹಲಿ: ದೆಹಲಿಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತು ಗರಿಗೆದರಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಈಗಾಗಲೇ 8 ಸಚಿವರು ಮಾತ್ರ ಪ್ರಮಾಣವಚನ ಸ್ವೀಕರಿಸಿದ್ದು, ಇನ್ನುಳಿದ ಸಚಿವರ ಆಯ್ಕೆ ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಸರಣಿ ಸಭೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ …
Read More »ಇದು ರಿವರ್ಸ್ ಗೇರ್ ಸರ್ಕಾರ: ಬೊಮ್ಮಾಯಿ
ಹುಬ್ಬಳ್ಳಿ: ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಕಾಂಗ್ರೆಸ್ ಗೆ ಅಧಿಕಾರವಿದೆ. ಏನು ಮಾಡುತ್ತಾರೆ ನೋಡೋಣ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ, ನಾವು ಎಲ್ಲವನ್ನು ಬದಲಾಯಿಸುತ್ತೇವೆ ಎಂಬುದು ದುರಂಹಂಕಾರದ ಮಾತು. ಇದು ರಿವರ್ಸ್ ಗೇರ್ ಸರ್ಕಾರ. ಕಾಂಗ್ರೆಸ್ ಗ್ಯಾರಂಟಿಗಳಲ್ಲೂ ರಿವರ್ಸ್ ಹೊಡೆಯುತ್ತಿದೆ ಎಂದು ಕಿಡಿಕಾರಿದರು. ನಾವು ಮಾಡಿದ ಜನಪರ ಕಾನೂನಿನಲ್ಲೂ ರಿವರ್ಸ್ ಹೋಗುತ್ತಿದ್ದಾರೆ. ಇದರ ಪರಿಣಾಮಗಳು ಜನರಿಗೆ ಅರ್ಥವಾಗುತ್ತದೆ. ಇದೊಂದು ರಿವರ್ಸ್ ಗೇರ್ ಸರ್ಕಾರ, ಸೇಡಿನ …
Read More »ಭೀಕರ ಅಪಘಾತ; ಪಿಡಿಒ ಸ್ಥಳದಲ್ಲೇ ದುರ್ಮರಣ
ಧಾರವಾಡ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯರಿಕೊಪ್ಪ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಣ್ಣೂರು ನಿವಾಸಿ ಶಿವಾನಂದ ಹಡಪದ ಮೃತ ಪಿಡಿಒ. ಹಾವೇರಿ ಜಿಲ್ಲೆಯ ಶಿರಬಡಗಿ ಗ್ರಾಮ ಪಂಚಾಯತ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »
Laxmi News 24×7