ಬೆಂಗಳೂರು : ಪರಿಶಿಷ್ಟ ಜಾತಿಗಳ ವರ್ಗೀಕರಣ (ಒಳ ಮೀಸಲಾತಿ) ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಅಧ್ಯಕ್ಷ ರವಿಮಾಕಳಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತಾಮನಾಥ ಹೆಗಡೆ ಅವರಿದ್ದ ರಜಾಕಾಲದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ …
Read More »ಕಲಬುರಗಿ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ಗೆ ಡಿಜಿಸಿಎ ಅನುಮತಿ
ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದಲ್ಲಿ ರಾತ್ರಿ ಸಮಯ ವಿಮಾನಗಳ ಲ್ಯಾಂಡಿಂಗ್‌ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಅನುಮತಿ ನೀಡಿದೆ. ಈವರೆಗೆ ನಿಲ್ದಾಣ ಮುಂಜಾನೆಯಿಂದ ಸಂಜೆಯವರೆಗೆ ಮಾತ್ರ ಕಾರ್ಯ ನಿರ್ವಹಿಸುತ್ತಿತ್ತು. ವಿಮಾನ ನಿಲ್ದಾಣ ನಿರ್ದೇಶಕರ ಪ್ರತಿಕ್ರಿಯೆ: “ರನ್ ವೇ 27 ರ ಸಮೀಪದಲ್ಲಿ ಯಾವುದೇ ಸಂಭಾವ್ಯ ಎತ್ತರದ ನಿರ್ಬಂಧಗಳಿಲ್ಲದ ಕಾರಣ ಡಿಜಿಸಿಎ ರಾತ್ರಿ ಲ್ಯಾಂಡಿಂಗ್‌ಗೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಈ ರನ್‍ವೇ ಥ್ರೆಶೋಲ್ಡ್ ಶಿಫ್ಟ್ ಕೈಗೊಳ್ಳಲು ಸೂಚಿಸಿದೆ. ರಾತ್ರಿ ಲ್ಯಾಂಡಿಂಗ್‍ಗೆ ಅನುಮತಿ ಪಡೆಯಲು ಶ್ರಮಿಸಿದ …
Read More »ಕ್ರೂಸರ್ ಟ್ರಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ
ವಿಜಯಪುರ : ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಸಮೀಪ ಯಲ್ಲಮ್ಮ ದೇವಿ ದರ್ಶನ ಮಾಡಿಕೊಂಡು ವಾಪಸ್ ಊರಿಗೆ ಹೋಗುತ್ತಿದ್ದ ಕ್ರೂಸರ್ ಹಾಗೂ ಕಟ್ಟಿಗೆಯನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕ್ರೂಸರ್ ನಲ್ಲಿದ್ದ ರೇವಣಸಿದ್ದ ಜಾತಗೊಂಡ (14) ಹಾಗೂ ಅಮಸಿದ್ದ ಬಂಡೆ (27) ಸ್ಥಳದಲ್ಲಿ ಮೃತಪಟ್ಟಿದ್ದಾರೆ. 6ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಇಂಡಿ ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. …
Read More »ಗ್ಯಾರಂಟಿಗೆ ಬದ್ಧ: AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್
ಬೆಂಗಳೂರು: ಕರ್ನಾ ಟಕದ ಮಹಾಜನತೆ ಕಾಂಗ್ರೆಸ್‌ಗೆ ಅಭೂತಪೂರ್ವ ಗೆಲುವು ಕೊಟ್ಟಿದ್ದು, ನಾವು ಕೊಟ್ಟ ಗ್ಯಾರಂಟಿ ಯೋಜನೆ ಗಳನ್ನು ಈಡೇರಿಸುತ್ತೇವೆ. ಅದು ನಮ್ಮ ಬದ್ಧತೆಯೂ ಹೌದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೆಸರಿನ ಅಧಿಕೃತ ಘೋಷಣೆಗೆಂದು ದಿಲ್ಲಿಯ ಎಐಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂತನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆಯ್ಕೆಯಲ್ಲಿ ಸ್ವಲ್ಪ ತಡವಾಗಿದೆ. ಕರ್ನಾಟಕದಲ್ಲಿ ನಮ್ಮದು ಬಲಿಷ್ಠ ನಾಯಕತ್ವ. ಪ್ರತಿಯೊಬ್ಬರದೂ …
Read More »26/11 ಪಾತಕಿ ತಹಾವ್ವುರ್ ಭಾರತಕ್ಕೆ ಗಡಿಪಾರು: ಅಮೆರಿಕ ಕೋರ್ಟ್ ಮಹತ್ವದ ಆದೇಶ
ನ್ಯೂಯಾರ್ಕ್/ನವದೆಹಲಿ: 2008ರ ಮುಂಬೈನಲ್ಲಿ ಪಾಕಿಸ್ತಾನ ಪ್ರೇರಿತ ಉಗ್ರ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ನ್ಯಾಯಾಲಯ ಅನುಮತಿ ನೀಡಿದೆ. ಇದು ಭಾರತಕ್ಕೆ ಮಹತ್ವದ ಕಾನೂನು ಜಯ ಎಂದು ಬಣ್ಣಿಸಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಆಹ್ವಾನ ಮೇರೆಗೆ ಜೂ.22ರಂದು ಪ್ರಧಾನಿ ನರೇಂದ್ರ ಮೋದಿ ಅವರ ಮೊದಲ ಅಧಿಕೃತ ಅಮೆರಿಕ ಭೇಟಿ ಹಿನ್ನೆಲೆಯಲ್ಲಿ ಈ ತೀರ್ಪು ಮಹತ್ವ ಪಡೆದಿದೆ. ಅಮೆರಿಕದ …
Read More »V.T.U.ಅಂತರ ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟ’
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ “ರಜತ ಮಹೋತ್ಸವ” ಅಂಗವಾಗಿ ೨೦೨೩ ಮೇ ೨೧ನೇ ರಿಂದ ೨೪ನೇ ರವರಿಗೆ ರಂದು ‘೨೪ ನೇ ವಿಟಿಯು ಅಂತರ ಕಾಲೇಜು ರಾಜ್ಯ ಮಟ್ಟದ ಅಥ್ಲೆಟಿಕ್ ಕೂಟ’ ವನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರ ಉದ್ಘಾಟನಾ ಸಮಾರಂಭ ರವಿವಾರ, ದಿನಾಂಕ ೨೧.೦೫.೨೦೨೩ ರಂದು ಬೆಳಗ್ಗೆ ೯ ಗಂಟೆಗೆ ವಿ.ತಾ.ವಿ.ಯ ಮೈದಾನದಲ್ಲಿ ಜರುಗುವುದು. ಉದ್ಘಾಟನಾ ಸಮಾರಂಭಕ್ಕೆ ಅಂತ ರಾಷ್ಟ್ರೀಯ ಕ್ರೀಡಾಪಟು ಒಲಿಂಪಿಕ್ ಕ್ರೀಡೆಯಲ್ಲಿ ಭಾಗವಹಿಸಿದ ಹಾಗೂ …
Read More »‘ವರುಣಾ ತಂದೆ ಪಾಲಿಗೆ ಲಕ್ಕಿ ಕ್ಷೇತ್ರ’: ನಿಜವಾಯ್ತು ತಂದೆ ಬಗ್ಗೆ ಡಾ ಯತೀಂದ್ರ ನುಡಿದಿದ್ದ ಭವಿಷ್ಯ
ಮೈಸೂರು: ವರುಣಾ ಕ್ಷೇತ್ರದಿಂದ ತಂದೆ ಸ್ಪರ್ಧೆ ಮಾಡಿದರೆ ಮತ್ತೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ. ವರುಣಾ ತಂದೆ ಪಾಲಿನ ಅದೃಷ್ಟದ ಕ್ಷೇತ್ರ ಎಂದು ಭವಿಷ್ಯ ನುಡಿದಿದ್ದ ಮಗ ಯತೀಂದ್ರ ಸಿದ್ದರಾಮಯ್ಯ ಮಾತು ಈಗ ನಿಜವಾಗಿದೆ. ಮೈಸೂರು ಜಿಲ್ಲೆಯ ಸಿದ್ದರಾಮನಹುಂಡಿಯ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದು, ಮೂರು ಬಾರಿಯೂ ಸಹ ಅಧಿಕಾರ ಸಿಕ್ಕಿದೆ. ಈಗ ಮತ್ತೆ ವರುಣಾದಿಂದ ಆಯ್ಕೆಯಾಗಿ. ಮತ್ತೆ ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿದ್ದಾರೆ. ಮಗನ ಮಾತು …
Read More »ತುಳಜಾ ಭವಾನಿ ದೇವಸ್ಥಾನದಲ್ಲಿ ಭಕ್ತರಿಗೆ ಡ್ರೆಸ್ ಕೋಡ್ ಜಾರಿ
(ಮಹಾರಾಷ್ಟ್ರ) : ಜಿಲ್ಲೆಯ ತುಳಜಾ ಭವಾನಿ ದೇವಸ್ಥಾನದಲ್ಲಿ ಪಾಶ್ಚಿಮಾತ್ಯ ಉಡುಪುಗಳನ್ನು ನಿಷೇಧಿಸಲು ದೇವಸ್ಥಾನ ಆಡಳಿತ ಮಂಡಳಿ ನಿರ್ಧರಿಸಿದೆ. ಸಡಿಲವಾದ ಬಟ್ಟೆಗಳನ್ನು ಧರಿಸಿ ದೇವಿಯ ದರ್ಶನ ಮಾಡುವುದನ್ನು ನಿಷೇಧಿಸಲಾಗಿದೆ. ಭಾರತೀಯ ಸಂಸ್ಕೃತಿ ಮತ್ತು ನಾಗರಿಕತೆಯ ಅರಿವನ್ನು ಕಾಪಾಡಿಕೊಳ್ಳಲು ಆಡಳಿತ ಮಂಡಳಿ ಮನವಿ ಮಾಡಿದೆ. ಇಂದಿನಿಂದ ದೇವಸ್ಥಾನದಲ್ಲಿ ಅಸಭ್ಯ ಬಟ್ಟೆ ಧರಿಸಿ ಬರುವವರಿಗೆ ದೇಗುಲ ಪ್ರವೇಶವಿಲ್ಲ ಎಂಬ ಬೋರ್ಡ್ ಹಾಕಲಾಗಿದೆ. ಅಕ್ಟೋಬರ್ 2018 ರಲ್ಲಿ ನವರಾತ್ರಿ ಸಂದರ್ಭದಲ್ಲಿ ಕೊಲ್ಲಾಪುರ ಮಹಾಲಕ್ಷ್ಮಿ ದೇವಸ್ಥಾನದ ಬಗ್ಗೆ ಇದೇ …
Read More »ಸಮರ್ಥ ಪ್ರತಿಪಕ್ಷವಾಗಿ ನಾವು ಕಾರ್ಯ ನಿರ್ವಹಿಸುತ್ತೇವೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಎರಡು ಮೂರು ದಿನಗಳಲ್ಲಿ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಸಭೆ ನಡೆಸಲಿದ್ದು, ಸಭೆಯಲ್ಲೇ ಪ್ರತಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಇದೊಂದು ಸೋಲಿನಿಂದ ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ. ನಾವು ಮತ್ತೆ ರಾಜ್ಯದಲ್ಲಿ ಪುಟಿದೇಳುತ್ತೇವೆ. ಸಮರ್ಥ ಪ್ರತಿಪಕ್ಷವಾಗಿ ನಾವು ಕಾರ್ಯ ನಿರ್ವಹಿಸುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಆರ್. ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣಾ ಫಲಿತಾಂಶದ ಆರು ದಿನಗಳ ಬಳಿಕ ಸಿಎಂ ಆಗಿ ಸಿದ್ದರಾಮಯ್ಯ, …
Read More »ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಘಟಾನುಘಟಿ ನಾಯಕರಿಗೆ ಆಹ್ವಾನಿಸಿದ ಕಾಂಗ್ರೆಸ್.
ನವದೆಹಲಿ: ಮೇ 20ರಂದು ನಡೆಯಲಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭಕ್ಕೆ ಕಾಂಗ್ರೆಸ್ ಸಮಾನ ಮನಸ್ಕ ಪಕ್ಷಗಳ ನಾಯಕರನ್ನು ಗುರುವಾರ ಆಹ್ವಾನಿಸಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಘಟಾನುಘಟಿ ನಾಯಕರು ಯಾರು?: ಇತ್ತೀಚೆಗೆ ಮುಂಬೈನಲ್ಲಿ ಮಹಾರಾಷ್ಟ್ರ ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ …
Read More »