Breaking News

ರಾಷ್ಟ್ರೀಯ

ಬಾಲಕನ ಮೈಯಲ್ಲಿ ದೆವ್ವ ಇದೆ ಎಂದು ಮನ ಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಮಂತ್ರಿವಾದಿ

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಭಾಗದ ಶಿರಗೂರಿನಲ್ಲಿ ಅಸ್ವಸ್ಥ ಬಾಲಕನ ಮೈಯಲ್ಲಿ ದೆವ್ವ ಇದೆ ಎಂದು ಕುಟುಂಬಸ್ಥರನ್ನು ನಂಬಿಸಿ ಮಂತ್ರಿವಾದಿ ಓರ್ವ ಮನ ಬಂದಂತೆ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಮಿರಾಜ್​ ತಾಲ್ಲೂಕಿನ ಬಾಲಕ ಆರ್ಯನ್ ದೀಪಕ್​ ಲಂಡ್ಗೆ (14) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ಅಪ್ಪಾ ಸಾಹೇಬ್​ ಕಾಂಬ್ಲೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಹಿನ್ನೆಲೆ : …

Read More »

ನಿಮ್ಮ ತಕ್ಕಡಿ ಸಮವಾಗಿರಲಿ’: ನೂತನ ಸ್ಪೀಕರ್​ಗೆ ಮಾಜಿ ಸಿಎಂ ಬೊಮ್ಮಾಯಿ‌ ಸಲಹೆ

ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷರಾಗಿ ಶಾಸಕ ಯು.ಟಿ. ಖಾದರ್ ಅವಿರೋಧವಾಗಿ ಆಯ್ಕೆ ಆಗಿರುವುದಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿ, ‘ನಿಮ್ಮ ತಕ್ಕಡಿ ಸಮವಾಗಿ ಇರಲಿ’ ಎಂದು ಸಲಹೆ ನೀಡಿದರು. ವಿಧಾನಸಭೆಯಲ್ಲಿ ಇಂದು ನೂತನ ಸ್ಪೀಕರ್ ಆಯ್ಕೆಯ ಬಳಿಕ ಮಾತನಾಡಿದ ಅವರು, ‘ಕರ್ನಾಟಕದ ವಿಧಾನಮಂಡಲ ತನ್ನದೇ ಆದ ಘನತೆ ಹೊಂದಿದೆ. ಇಂತಹ ಮಹತ್ವದ ಸದನದ ಸಭಾಧ್ಯಕ್ಷರಾಗಿ ನೀವು ಆಯ್ಕೆಯಾಗಿರುವುದಕ್ಕೆ ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ. ನಿಮಗೆ 20 ವರ್ಷದ ರಾಜಕೀಯ …

Read More »

ಪುಟ್ಟ ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ದಂಪತಿ.!

ಪತಿ ಮತ್ತು ಪತ್ನಿ ಹಾಗೂ ಐದು ವರ್ಷದ ಬಾಲಕಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ನಡೆದಿದೆ. ಮೃತರು ಮೋಹನ್ ಪ್ರತಾಪ್ ಸಿಂಗ್ ದಂಗರ್ (30), ಪತ್ನಿ ಪೂಜಾ ದಂಗರ್ (25) ಮತ್ತು ಇವರ ಐದು ವರ್ಷದ ಪುತ್ರಿ ಎಂದು ವರದಿಯಿಂದ ತಿಳಿದು ಬಂದಿದೆ. ಕೃಷಿ ಮಾಡುತ್ತಿದ್ದ ಮೋಹನ್ ತಮ್ಮ ಕುಟುಂಬ ಸಮೇತ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಈ ದಂಪತಿ ಮೊದಲಿಗೆ ತಮ್ಮ …

Read More »

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೇಂದ್ರ ನಾಯಕರ ತಂತ್ರಗಾರಿಕೆಯೇ ಕಾರಣ : ಎಂ.ಪಿ.ರೇಣುಕಾಚಾರ್ಯ

ದಾವಣಗೆರೆ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೇಂದ್ರ ನಾಯಕರ ತಂತ್ರಗಾರಿಕೆಯೇ ಕಾರಣ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದ್ದಾರೆ. ಬಿಜೆಪಿ ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ರೇಣುಕಾಚಾರ್ಯ, ಒಳಮೀಸಲಾತಿಯಿಂದ 45 ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ. ಬಿಜೆಪಿ ಕೇಂದ್ರ ನಾಯಕರ ತಂತ್ರಗಾರಿಕೆಯೇ ಸೋಲಿಗೆ ಕಾರಣ ಎಂದಿದ್ದಾರೆ. ಕೇಂದ್ರ ನಾಯಕರು 72 ಹೊಸಬರಿಗೆ ಟಿಕೆಟ್ ನೀಡಿದ್ದರು. 72 ಹೊಸಬರ ಪೈಕಿ 42 ಜನರು ಚುನಾವಣೆಯಲ್ಲಿ ಸೋತಿದ್ದಾರೆ. ಈ ತಂತ್ರಗಾರಿಕೆ ನಮ್ಮ …

Read More »

ವಿಧಾನಸಭಾ ನೂತನ ಸ್ಪೀಕರ್ ಆಗಿ U.T. ಖಾದರ್ ಆಯ್ಕೆ

ಬೆಂಗಳೂರು: ವಿಧಾನಸಭಾ ನೂತನ ಸ್ಪೀಕರ್ ಆಗಿ ಮಾಜಿ ಸಚಿವ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ. ವಿಧಾನಸಭೆಯ ನೂತನ ಸ್ಪೀಕರ್ ಆಗಿ ಶಾಸಕ ಯು.ಟಿ.ಖಾದರ್ ಅವಿರೋಧವಾಗಿ ಆಯ್ಕೆಯಾಗಿದ್ದು, ಹಂಗಾಮಿ ಸ್ಪೀಕರ್ ಆರ್.ವಿ.ದೇಶಪಾಂಡೆ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೂತನ ಸಭಾಪತಿ ಯು.ಟಿ.ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದರು. 5 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು.ಟಿ.ಖಾದರ್ ಅತ್ಯಂತ ಉತ್ಸಾಹಿ ಹಾಗೂ ಸಕ್ರಿಯ ರಾಜಕಾರಣಿ. ನನ್ನ ಸರ್ಕಾರದ ಅವಧಿಯಲ್ಲಿ ಹಿಂದೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದೀರಿ. ಸದನದಲ್ಲಿ …

Read More »

ಸಿದ್ದರಾಮಯ್ಯ,D.K. ಶಿವಕುಮಾರ ಶಾಸಕರಿಗೆ ಮಹತ್ವದ ಸೂಚನೆ ನೀಡಿದರು

ಬೆಂಗಳೂರು: ಕರ್ನಾಟಕದ 15ನೇ ವಿಧಾನಸಭೆಯ ಕೊನೆಯ ದಿನವಾದ ಇಂದು 16ನೇ ವಿಧಾನಸಭೆಯ ಸಭಾಧ್ಯಕ್ಷರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಯು.ಟಿ.ಖಾದರ್ ಅವರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಭೆಯಲ್ಲಿ ಶಾಸಕರುಗಳಿಗೆ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಹತ್ವದ ಸೂಚನೆ ನೀಡಿದರು. ರಾಜ್ಯದ ಜನತೆ ಅಪಾರ ನಿರೀಕ್ಷೆಗಳ ಜತೆಗೆ ನಮಗೆ ಅಪಾರ …

Read More »

ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಂಗಳೂರು: ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡುತ್ತಿದ್ದೀರಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಕಾಂಗ್ರೆಸ್ ನಾಯಕರ ಭ್ರಮೆ. ನಮ್ಮ ಪೊಲೀಸ್ ಇಲಾಖೆ ದೇಶದಲ್ಲಿಯೇ ಹೆಸರುವಾಸಿಯಾಗಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ, ನಿನ್ನೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಗೃಹ ಇಲಾಖೆ, ಪೊಲೀಸರ ನೈತಿಕ ಸ್ಥೈರ್ಯ ತುಂಬುವ ಕೆಲಸ ಮಾಡುವ ಬದಲು ನೈತಿಕ ಸ್ಥೈರ್ಯ ಕುಗ್ಗಿಸುವ ಮಾತನಾಡಿದ್ದಾರೆ. ಇಂತಹ …

Read More »

ಮುಂಗಾರು ಪೂರ್ವ ಮಳೆ ಅವಾಂತರಕ್ಕೆ ರಾಜ್ಯದಲ್ಲಿ ಈವರೆಗೆ 52 ಮಂದಿ ಸಾವು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂಗಾರು ಪೂರ್ವ ಮಳೆ ಅವಾಂತರಕ್ಕೆ ರಾಜ್ಯಾದ್ಯಂತ 52 ಮಂದಿ ಸಾವನ್ನಪ್ಪಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಪ್ರಕೃತಿ ವಿಕೋಪ ಸಂಬಂಧ ಮುಂಜಾಗ್ರತಾ ಕ್ರಮ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಡಿಸಿ, ಸಿಇಒಗಳ ಜೊತೆ ವಿಡಿಯೋ ಸಂವಾದ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಏಪ್ರಿಲ್​​ಗೆ ಪ್ರಿ ಮಾನ್ಸೂನ್ ಮಳೆ ಶುರುವಾಗುತ್ತೆ. ಈ ಬಾರಿ ವಾಡಿಕೆಗಿಂತ ಶೇ.10 ರಷ್ಟು ಹೆಚ್ಚು ಮಳೆಯಾಗಿದೆ. ಈವರೆಗೆ 52 ಜನ ಸತ್ತಿದ್ದಾರೆ. 331 …

Read More »

ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಅರಭಾವಿ ಮಠ(ತಾ.ಮೂಡಲಗಿ)- ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ ಗಳಿಸುವ ಮೂಲಕ ಯುಪಿಎಸ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅರಭಾವಿ ನೆಲದ ಶೃತಿ …

Read More »

ಮುಂಗಾರು ಶುರುವಾಗ್ತಾ ಇದೆ. ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು

ಬೆಂಗಳೂರು: ಮುಂಗಾರು ಶುರುವಾಗ್ತಾ ಇದೆ. ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳು, ನಾನು ಕೇವಲ ಸೂಚನೆ ಕೊಡೋದಿಲ್ಲ. ಎಚ್ಚರಿಕೆ ಕೊಡ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ ಎಂದು ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿಗಳ ಸೂಚನೆಗಳು: ರಾಜ್ಯದ ಕೆಲವು ಭಾಗದಲ್ಲಿ ಮಳೆ ಪ್ರಾರಂಭ, ಬಿತ್ತನೆ ಪ್ರಾರಂಭ. ಜೂನ್‌ ನಲ್ಲಿ ಮುಂಗಾರು …

Read More »