ಬೆಂಗಳೂರು : 2020ರ ಆಗಸ್ಟ್ 11ರಂದು ಬೆಂಗಳೂರು ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಎನ್‌ಐಎ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ರದ್ದು ಪಡಿಸುವಂತೆ ಕೋರಿ ಗಲಭೆಗೆ ಕಾರಣರಾಗಿದ್ದ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿದೆ. ಸಾರ್ವಜನಿಕ ಆಸ್ತಿ ನಷ್ಟ ಆರೋಪ ಸಂಬಂಧ ಎನ್‌ಐಎ ವಿಶೇಷ ನ್ಯಾಯಾಲಯಲ್ಲಿ ನಡೆಯುತ್ತಿರುವ ತನಿಖೆ ಮತ್ತು ಈ ಸಂಬಂಧದ ಆರೋಪ ಪಟ್ಟಿಯನ್ನು ರದ್ದು ಪಡಿಸುವಂತೆ ಕೋರಿ ಮೊಹಮ್ಮದ್ …
Read More »ಡಿಕೆಶಿ, ಸಿದ್ದರಾಮಯ್ಯ ಜೊತೆ ಖರ್ಗೆ ಚರ್ಚೆ; ನೂತನ ಸಿಎಂ ಘೋಷಣೆ ಸಾಧ್ಯತೆ..
ನವದೆಹಲಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆ ಕುರಿತು ಕಾಂಗ್ರೆಸ್ನಲ್ಲಿ ಭಾರಿ ಚರ್ಚೆಗಳು ನಡೆಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಬೆಂಗಳೂರಿನಲ್ಲಿ ರಾಜ್ಯದ ಮುಖ್ಯಮಂತ್ರಿ ಯಾರು ಎಂಬುದನ್ನು ಘೋಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಸಮಾಲೋಚಿಸಿದ ನಂತರ ಖರ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕರ್ನಾಟಕ ಸಿಎಂ ಸ್ಥಾನದ ಕುರಿತು ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಕಾಂಗ್ರೆಸ್ ಅಧ್ಯಕ್ಷರು …
Read More »ಸರ್ಕಾರಿ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ
(ಉತ್ತರಪ್ರದೇಶ): ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸರ್ಕಾರಿ ಶಾಲಾ ಶಿಕ್ಷಕನನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆರೋಪಿ ಶಿಕ್ಷಕನು ಕನಿಷ್ಠ 18 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ತಿಳಿದುಬಂದಿದೆ. ಘಟನೆಯ ನಂತರ ವಿದ್ಯಾರ್ಥಿನಿಯರು ಶಾಲೆಗೆ ಬರುವುದನ್ನು ನಿಲ್ಲಿಸಿದ್ದು, ಈ ಹಿನ್ನೆಲೆ ಸರ್ಕಾರಿ ಶಾಲೆಯ ಹಾಜರಾತಿ ಕನಿಷ್ಠ ಶೇ.35ಕ್ಕಿಂತ ಕಡಿಮೆಯಾಗಿದೆ ಎಂದು ತಿಳಿದುಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, ಶಹಜಹಾನ್ ಪುರದ ದಾದ್ರಾಲ್ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದೆ. …
Read More »ಸಿಇಟಿ-2023 ಅರ್ಜಿ ತಿದ್ದುಪಡಿಗೆ ಕೊನೆಯ ಅವಕಾಶ
ಬೆಂಗಳೂರು: ಸಿಇಟಿ ಪರೀಕ್ಷೆ 2023ಕ್ಕೆ ಆನ್ ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿನ ಮಾಹಿತಿ ತಿದ್ದುಪಡಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಟ್ಟಕಡೆಯ ಅವಕಾಶ ನೀಡಿದೆ. ಕೆಇಎ ಕಾಯನಿರ್ವಾಹಕ ನಿರ್ದೇಶಕಿ ರಮ್ಯಾ ಅವರು ಮಂಗಳವಾರ ಪತ್ರಿಕಾ ಹೇಳಿಕೆಯಲ್ಲಿ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು 21-05-2023 ರ ಸಂಜೆ 6ರಿಂದ 24-05-2023 ರ ರಾತ್ರಿ 11.59 ರವರೆಗೆ ಮಾಹಿತಿ ತಿದ್ದುಪಡಿ ಮಾಡಬಹುದು ಎಂದಿದ್ದಾರೆ. ಸಿಇಟಿ-2023 ರ ಫಲಿತಾಂಶ ಪ್ರಕಟಿಸುವ ಮುನ್ನ ಇದು ತಿದ್ದುಪಡಿಗೆ ಕೊನೆಯ …
Read More »ಸ್ಕೂಟರ್ ನಲ್ಲಿ ಅಪ್ಪಿಕೊಂಡು, ಮುದ್ದಾಡಿದ ಜೋಡಿ; ವಿಡಿಯೋ ವೈರಲ್
ದೆಹಲಿ: ದಿಲ್ಲಿ ಮೆಟ್ರೋದಲ್ಲಿ ಕಳೆದ ಕೆಲ ದಿನಗಳ ಹಿಂದೆ ಜೋಡಿಯೊಂದು ಲಿಪ್ ಲಾಕ್ ಮಾಡಿದ ವಿಡಿಯೋ ವೈರಲ್ ಆಗಿತ್ತು. ಇದೀಗ ದಿಲ್ಲಿ ಮತ್ತೊಂದು ಅಂಥದ್ದೇ ವಿಚಾರದಲ್ಲಿ ಸುದ್ದಿಯಾಗಿದೆ. ಆದರೆ ಈ ಬಾರಿ ಸ್ಕೂಟರ್ ನಲ್ಲಿ ಪ್ರಯಾಣಿಸಿದ ಜೋಡಿಯಿಂದಾಗಿ. ದಿಲ್ಲಿಯ ರಸ್ತೆಯಲ್ಲಿ ಸ್ಕೂಟರ್ ನಲ್ಲಿ ಜೋಡಿಯೊಂದು ಹೋಗುವಾಗ ಹುಡುಗ ಒಂದು ಕೈಯಲ್ಲಿ ಸ್ಕೂಟರ್ ಚಲಾಯಿಸುತ್ತ ಇನ್ನೊಂದು ಕೈಯಲ್ಲಿ ಯುವತಿಯನ್ನು ಅಪ್ಪಿಕೊಂಡು ಮುದ್ದಾಡಿದ್ದಾನೆ. ಈ ವಿಡಿಯೋವನ್ನು ಕಾರಿನಲ್ಲಿ ಹೋಗುತ್ತಿದ್ದವರು ಸೆರೆ ಹಿಡಿದ್ದಾರೆ. ಶಾಲು …
Read More »ಐಟಿ ವೆಬ್‌ಸೈಟ್‌ಗೆ ಕನ್ನ ಹಾಕಿ ಭಾರೀ ವಂಚನೆ
ಬೆಂಗಳೂರು: ಆದಾಯ ತೆರಿಗೆ ಇಲಾಖೆಯ(ಐಟಿ) ವೆಬ್‌ಸೈಟ್ ಹ್ಯಾಕ್ ಮಾಡಿಕೊಂಡು ತೆರಿಗೆದಾರರ ಆದಾಯ ತೆರಿಗೆ ಮರುಪಾವತಿಯನ್ನು ನಕಲಿ ಖಾತೆ ತೆರೆದು ತನ್ನ ಖಾತೆಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದ ಆರೋಪಿಯನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆ ಹಿರಿಸಾವೆ ಮೂಲದ ದಿಲೀಪ್ ರಾಜೇಗೌಡ (32) ಬಂಧಿತ ಆರೋಪಿ. ಈತನ ವಿರುದ್ಧ ಕರ್ನಾಟಕ, ಮಹಾರಾಷ್ಟ್ರ, ಗೋವಾ, ತೆಲಂಗಾಣದಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಧಾರವಾಡದಲ್ಲಿ ಬಂಧಿಸಲಾಗಿದೆ. ಈತನಿಂದ ಕೆಲ ಡಿಜಿಟಲ್ ಹಾಗೂ ಇತರೆ ಸಾಕ್ಷ್ಯಗಳನ್ನು …
Read More »ಸಂವಹನ ಕೌಶಲ ಅತೀ ಮುಖ್ಯ: ಸಲೀಂ ಹವಾಲ್ದಾರ
ಉಗರಗೋಳ: ಎಸ್‌ಎಸ್‌ಎಲ್‌ಸಿ ನಂತರ ಅನೇಕ ಆಯ್ಕೆಗಳಿವೆ. ಸಮರ್ಪಕ ಮಾರ್ಗದರ್ಶನ ಮತ್ತು ಜ್ಞಾನದ ಕೊರತೆಯಿಂದ ಮಕ್ಕಳು ಗೊಂದಲದಲ್ಲಿ ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳದಂತೆ ಪಾಲಕರು ಎಚ್ಚರವಹಿಸಬೇಕು ಎಂದು ಇಸ್ರೋ ವಿಜ್ಞಾನಿ ಸಲೀಮ್ ಹವಾಲ್ದಾರ ಹೇಳಿದರು. ಇಲ್ಲಿನ ಬಸವಜ್ಯೋತಿ ಪ್ರಾಥಮಿಕ ಶಾಲಾ ಆವರಣದಲ್ಲಿ ರವಿವಾರ ಜರುಗಿದ ಎಸ್‌ಎಸ್ ಎಲ್‌ಸಿ ಆಯ್ತು, ಮುಂದೆ- ಎಂಬ ವಿಷಯ ಕುರಿತ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಅವರು ಮಾತನಾಡಿದರು. ತಂತ್ರಜ್ಞಾನ ಯುಗದಲ್ಲಿ ಸಂವಹನ ಕೌಶಲ ಅತಿ ಮುಖ್ಯವಾಗಿದೆ. …
Read More »ಸುಳ್ಳು ಸುದ್ದಿ ಹರಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದಡಿ.ಕೆ.ಶಿ
ನವದೆಹಲಿ: ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರ ಕ್ಷಣ ಕ್ಷಣಕ್ಕೂ ಕಗ್ಗಂಟಾಗುತ್ತಿದ್ದು, ಸಿಎಂ ಹುದ್ದೆಗಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ನಡೆದಿದೆ. ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನ ಎಲ್ಲಾ ನಾಯಕರನ್ನು ಭೆಟಿಯಾಗುತ್ತೇನೆ. ಮೊದಲು ಖರ್ಗೆ ಅವರನ್ನು ಭೇಟಿಯಾಗುತ್ತೇನೆ ಎಂದರು. ಕಾಂಗ್ರೆಸ್ ಪಕ್ಷ ನನಗೆ ತಾಯಿಯಿದ್ದಂತೆ. ಹೈಕಮಾಂಡ್ ಇದೆ, 135 ಶಾಸಕರು ಆಯ್ಕೆಯಾಗಿದ್ದೇವೆ. …
Read More »ಸಿಎಂ ಸ್ಥಾನಕ್ಕೆ ಪರಮೇಶ್ವರ ಅವರನ್ನೂ ಪರಿಗಣಿಸಿ:ಬೃಹತ್ ಪ್ರತಿಭಟನೆ
ತುಮಕೂರು: ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ, ಜಿ. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕೆಂದು ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕೆಂದು ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ದಲಿತ ಸಮುದಾಯದ ವ್ಯಕ್ತಿ ಒಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಪೋಸ್ಟರ್ಗಳನ್ನು ಹಿಡಿದು ಕಾರ್ಯಕರ್ತರು ಒತ್ತಾಯಿಸಿದರು. ತುಮಕೂರು ನಗರದ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು ಭದ್ರಮ್ಮ ವೃತ್ತದ …
Read More »ಏಕಾಏಕಿ ಹೊತ್ತಿ ಉರಿದ ಕಾರು.!
ಬೆಳಗಾವಿ : ಬೆಳಗಾವಿಯ ಆರ್‌ಪಿಡಿ ವೃತ್ತದ ಸಮೀಪ ನಿನ್ನೆ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಮೂಲದ ಕುಟುಂಬ ಖಾನಾಪುರ ತಾಲೂಕಿನ ಅಸೋಗಾದಿಂದ ಸ್ವಗ್ರಾಮಕ್ಕೆ ವಾಪಸ್ಸಾಗುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಟಿಳಕವಾಡಿಯ ಆರ್‌ಪಿಡಿ ವೃತ್ತದ ಮಾರ್ಗವಾಗಿ ಬರುತ್ತಿದ್ದಾಗ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ತಕ್ಷಣ ಎಚ್ಚೆತ್ತ ಚಾಲಕ ಕಾರು ನಿಲ್ಲಿಸಿ ಕಾರಿನಲ್ಲಿದ್ದವರನ್ನು ಕೆಳಗಿಳಿಸಿದ್ದಾನೆ. …
Read More »