Breaking News

ರಾಷ್ಟ್ರೀಯ

ನಾಳೆ ಕೌಂಟಿಂಗ್​ಗೆ ಬೆಳಗಾವಿ ಜಿಲ್ಲಾಡಳಿತ ಸಕಲ ಸಿದ್ಧತೆ: ಆರ್​ಪಿಡಿ ಕಾಲೇಜು ಸುತ್ತ ಪೊಲೀಸ್ ಸರ್ಪಗಾವಲು..

ಬೆಳಗಾವಿ: ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಮತ ಎಣಿಕೆಗೆ ಕ್ಷಣಗಣನೆ ಶುರುವಾಗಿದೆ. ರಾಜ್ಯದಲ್ಲೇ ಎರಡನೇ ಅತೀ ಹೆಚ್ಚು ಮತಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಮತ ಎಣಿಕೆಗೆ ಎಲ್ಲ ರೀತಿಯ ಸಿದ್ಧತೆ ನಡೆದಿದ್ದು, ಮತ ಎಣಿಕೆ ನಡೆಯಲಿರುವ ನಗರದ ರಾಣಿ ಪಾರ್ವತಿದೇವಿ ಕಾಲೇಜಿನ ಸ್ಟ್ರಾಂಗ್ ರೂಮ್​ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪೊಲೀಸ್ ಅಧಿಕಾರಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ದೊಡ್ಡ …

Read More »

ಚುನಾವಣಾ ಫಲಿತಾಂಶಕ್ಕೆ ಸಿದ್ಧತೆ: ರಾಜ್ಯಾದ್ಯಂತ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ 3 ಹಂತದ ಬಿಗಿ ಭದ್ರತೆ

ಮೇ 10ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳಲಿದ್ದು, ಇದಕ್ಕಾಗಿ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಬೆಂಗಳೂರು: ಮೇ 10ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳಲಿದ್ದು, ಇದಕ್ಕಾಗಿ ಚುನಾವಣಾ ಆಯೋಗ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ರಾಜ್ಯದ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇವಿಎಂ ಮತ್ತು ವಿವಿಪ್ಯಾಟ್ಗಳನ್ನು ಇರಿಸಲಾಗಿರುವ ಎಲ್ಲಾ ಸ್ಟ್ರಾಂಗ್ ರೂಮ್ಗಳಲ್ಲಿ ಪೊಲೀಸರೊಂದಿಗೆ ಅರೆಸೇನಾ ಪಡೆಗಳು ಕಾವಲು ಕಾಯುತ್ತಿವೆ. …

Read More »

ಷರತ್ತು ಒಪ್ಪಿದ್ರೆ ಮೈತ್ರಿಗೆ ಸಿದ್ಧ; ಸಂದೇಶ ರವಾನಿಸಿದ ಮಾಜಿ ಸಿಎಂ HDK

ಬೆಂಗಳೂರು:ಈ ಬಾರಿ ಅತಂತ್ರ ಫಲಿತಾಂಶ ಸಾಧ್ಯತೆಯೂ ಇರುವುದರಿಂದ ಮೈತ್ರಿ ಸರ್ಕಾರ ರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ನಮ್ಮ ಷರತ್ತುಗಳಿಗೆ ಒಪ್ಪಿದರೆ ಮೈತ್ರಿಗೆ ಸಿದ್ಧ ಎಂಬ ಸಂದೇಶ ರವಾನಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಕುಮಾರಸ್ವಾಮಿ, ನಮಗೆ 50 ಸೀಟ್ ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನಮ್ಮ ಷರತ್ತು ಈಡೇರಿಸುವ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ ಎಂದು ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರಗಳಡಿ ಎರಡು ಬಾರಿ ಮುಖ್ಯಮಂತ್ರಿಯಾದಾಗ ಕುಮಾರಸ್ವಾಮಿ …

Read More »

ಫಲಿತಾಂಶಕ್ಕೆ ಕೌಂಟ್ ಡೌನ್ ಆರಂಭ B.S.Y.ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ ಬೊಮ್ಮಾಯಿ

ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕೌಂಟ್ ಡೌನ್ ಆರಂಭವಾಗಿದ್ದು ರಾಜಕೀಯ ಪಕ್ಷಗಳ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದು, ಸರ್ಕಾರ ರಚನೆ ವಿಚಾರವಾಗಿ ರಣತಂತ್ರ ರೂಪುಸುತ್ತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಹೈ ವೋಲ್ಟೇಜ್ ಮೀಟಿಂಗ್ ನಡೆಸಿರುವ ಬೆನ್ನಲ್ಲೇ ಇತ್ತ ಬಿಜೆಪಿ ಪಾಳಯದಲ್ಲಿಯೂ ಚಟುವಟಿಕೆ ಚುರುಕುಗೊಂಡಿದ್ದು, ತೆರೆ ಮರೆಯಲ್ಲಿ ತಂತ್ರ ಹೆಣೆಯುತ್ತಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಹತ್ವದ ಚರ್ಚೆ …

Read More »

ಕೇಂದ್ರ ಸರಕಾರ‌ದ ವಿರುದ್ಧ ಕೇಜ್ರಿಗೆ ಜಯ: ಎಂಟು ವರ್ಷಗಳ ಅಧಿಕಾರ ಸಂಘರ್ಷ ಮುಕ್ತಾಯ

ಹೊಸದಿಲ್ಲಿ: ಪೊಲೀಸ್‌-ಕಾನೂನು ಸುವ್ಯವಸ್ಥೆ, ಜಮೀನು-ಕಟ್ಟಡ ಇಲಾಖೆಯನ್ನು ಬಿಟ್ಟು ಉಳಿದ ಕಡೆ ದಿಲ್ಲಿಯ ಚುನಾಯಿತ ಸರಕಾರ‌ದ್ದೇ ನಿರ್ಧಾರ… ಹೀಗೆಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯ ಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಐವರು ಸದಸ್ಯರ ಸಾಂವಿಧಾನಿಕ ಪೀಠ ಗುರುವಾರ ತೀರ್ಪು ನೀಡಿದೆ. ದಿಲ್ಲಿ ಸರಕಾ ರ‌ಕ್ಕೆ ಸೇವಾ ಇಲಾಖೆಗಳಲ್ಲೂ ಯಾವುದೇ ಅಧಿಕಾರ ಇಲ್ಲವೆಂದು ನ್ಯಾ|ಎ.ಕೆ. ಸಿಕ್ರಿ ಮತ್ತು ನ್ಯಾ|ಅಶೋಕ್‌ ಭೂಷಣ್‌ ನೇತೃತ್ವದ ನ್ಯಾಯಪೀಠ 2019ರಲ್ಲಿ ನೀಡಿದ್ದ ತೀರ್ಪನ್ನು ಒಪ್ಪಲು ಕೂಡ ನ್ಯಾಯಪೀಠ ನಿರಾಕರಿಸಿದೆ. ಇದರ ಜತೆಗೆ ಸರಕಾರ‌ ಕೈಗೊಳ್ಳುವ …

Read More »

CBSE 12ನೇ ತರಗತಿ ಫಲಿತಾಂಶ ಪ್ರಕಟ: ಶೇ.87.33 ವಿದ್ಯಾರ್ಥಿಗಳು ಉತ್ತೀರ್ಣ

ಹೊಸದಿಲ್ಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಶುಕ್ರವಾರ 12ನೇ ತರಗತಿಯ ಫಲಿತಾಂಶ ಪ್ರಕಟಿಸಿದೆ. ಈ ಬಾರಿ ಶೇಕಡಾ 87.33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಿಬಿಎಸ್‌ಇಯ 10 ನೇ ತರಗತಿ ಬೋರ್ಡ್ ಪರೀಕ್ಷೆಯು ಫೆಬ್ರವರಿ 15ರಿಂದ ಮಾರ್ಚ್ 21 ರವರೆಗೆ ನಡೆದಿದ್ದರೆ, 12 ನೇ ತರಗತಿ ಬೋರ್ಡ್ ಪರೀಕ್ಷೆಗಳು ಫೆಬ್ರವರಿ 15 ರಿಂದ ಏಪ್ರಿಲ್ 5ರವರೆಗೆ ನಡೆದಿತ್ತು.   ಈ ವರ್ಷದ ಜನವರಿ 2 14 ರ ನಡುವೆ 10 …

Read More »

ಹಾಡಹಗಲೇ ಅಟ್ಟಾಡಿಸಿ ಬಸ್ ಡ್ರೈವರ್ ಭೀಕರ ಹತ್ಯೆ

ಕಲಬುರಗಿ: ಹಾಡಹಗಲೇ ಬಸ್ ನಿಲ್ದಾಣದಲ್ಲಿ ಚಾಲಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೆಕೆಆರ್‌ಟಿಸಿ ಬಸ್ ಚಾಲಕ ನಾಗಯ್ಯಸ್ವಾಮಿ (45) ಹತ್ಯೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೂಲತಃ ಅಫಜಲಪುರ ತಾಲೂಕಿನ‌ ಮದರಿ ಗ್ರಾಮದ ನಾಗಯ್ಯಸ್ವಾಮಿ, ಸದ್ಯ ಕಲಬುರಗಿಯ ಮಹಾದೇವ ನಗರದಲ್ಲಿ ವಾಸವಿದ್ದರು. ಕಳೆದ 20 ವರ್ಷಗಳಿಂದ ಬಸ್ ಚಾಲಕನಾಗಿ‌ ಸೇವೆ ಸಲ್ಲಿಸುತ್ತಿದ್ದ ನಾಗಯ್ಯಸ್ವಾಮಿ ಅವರು ಕಲಬುರಗಿ ಡಿಪೋ ಸಂಖ್ಯೆ 3ರಲ್ಲಿ ಸೂಪರ್ ಮಾರ್ಕೆಟ್​ನಿಂದ …

Read More »

2024ರ ಚುನಾವಣೆಗೆ ಪ್ರತಿಪಕ್ಷಗಳಿಂದ ಒಗ್ಗಟ್ಟಿನ ಮಂತ್ರ: ಶರದ್ ಪವಾರ್, ಉದ್ಧವ್ ಠಾಕ್ರೆ ಭೇಟಿಯಾದ ನಿತೀಶ್ ಕುಮಾರ್

ಮುಂಬೈ: ಮುಂದಿನ ವರ್ಷದ ಲೋಕಸಭೆ ಚುನಾವಣೆಗೂ ಮುನ್ನ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಹಾಗೂ ಬಲಪಡಿಸುವ ಕುರಿತಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್​ಕುಮಾರ್ ಡಿಸಿಎಂ ತೇಜಸ್ವಿ ಯಾದವ್​ರೊಂದಿಗೆ ಗುರುವಾರ ಮುಂಬೈನಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಎನ್​​ಸಿಪಿ ರಾಷ್ಟ್ರೀಯ ನಾಯಕ ಶರದ್ ಪವಾರ್ ಅವರ ದಕ್ಷಿಣ ಮುಂಬೈನ ನಿವಾಸದಲ್ಲಿ ಜಂಟಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಆಡಳಿತ ದೇಶದ ಹಿತಾಸಕ್ತಿಗೆ ತಕ್ಕಂತೆ ಕೆಲಸ …

Read More »

ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಒಂದು ದಿನ ಬಾಕಿಯಿದ್ದು, ರಾಜ್ಯಾದ್ಯಂತ ಬೆಟ್ಟಿಂಗ್ ಭರಾಟೆ ಜೋರ

ತುಮಕೂರು: ವಿಧಾನಸಭಾ ಚುನಾವಣೆ ಫಲಿತಾಂಶಕ್ಕೆ ಒಂದು ದಿನ ಬಾಕಿಯಿದ್ದು, ರಾಜ್ಯಾದ್ಯಂತ ಬೆಟ್ಟಿಂಗ್ ಭರಾಟೆ ಜೋರಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ರಾಜಣ್ಣ ಪರ ಬೆಟ್ಟಿಂಗ್ ಕಟ್ಟಲು ಕಾಂಗ್ರೆಸ್ ಕಾರ್ಯಕರ್ತರು ಮುಕ್ತ ಆಹ್ವಾನ ನೀಡಿದ್ದಾರೆ. ಮಧುಗಿರಿ ತಾಲೂಕಿನ ಚೀಲನಹಳ್ಳಿಯಲ್ಲಿ ಜೆಡಿಎಸ್ ಪರ ದುಡ್ಡು ಕೊಟ್ಟೋರಿಗೆ ಕಾಂಗ್ರೆಸ್ ಕಾರ್ಯಕರ್ತರು 80 ಸಾವಿರಕ್ಕೆ 1 ಲಕ್ಷದಂತೆ ಬಾಜಿ ಕಟ್ಟಲು ಕಾರ್ಯಕರ್ತರು ಆಹ್ವಾನ ನೀಡಿದ್ದಾರೆ. ಕೆ ಎನ್ ರಾಜಣ್ಣ ಗೆದ್ದರೆ 80 ಸಾವಿರ, …

Read More »

ನೀವಿದ್ದಲ್ಲಿಂದಲೇ ಚುನಾವಣೆ ಫಲಿತಾಂಶ ವೀಕ್ಷಿಸಿ

ಬೆಂಗಳೂರು: ಕರ್ನಾಟಕ ವಿಧಾನ ಸಭೆಗೆ ಬುಧವಾರ ನಡೆದ ಚುನಾವಣೆಯ ಮತ ಎಣಿಕೆ ಶನಿವಾರ ನಡೆಯಲಿದೆ. 224 ಕ್ಷೇತ್ರಗಳಿಗೂ ಚುನಾವಣೆ ನಡೆದಿದ್ದು, ಪ್ರಮುಖ ರಾಜಕೀಯ ಪಕ್ಷಗಳೊಂದಿಗೆ ಹಲವು ಪಕ್ಷೇತರರೂ ಕಣದಲ್ಲಿದ್ದಾರೆ. ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಚುನಾವಣೆ ಫಲಿತಾಂಶಕ್ಕಾಗಿ ರಾಜ್ಯದ 7 ಕೋಟಿ ಜನರೂ ಖಾತರಿಂದ ಕಾಯುತ್ತಿದ್ದಾರೆ. ಆದರೆ ಕೆಲವರು ಪ್ರಯಾಣದಲ್ಲಿರುತ್ತಾರೆ. ಕೆಲವರು ಬೇರೆ ಬೇರೆ ಕೆಲಸದಲ್ಲಿರುತ್ತಾರೆ. ಅಂತವರು ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಯನ್ನು ಇದ್ದಲ್ಲಿಂದಲೇ ಪಡೆಯಲು …

Read More »