ಶಿರಸಿ: ಬಾವಿಗೆ ಬಿದ್ದು ಮೂವರು ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನ ಕಟ್ಟ ಗ್ರಾಮದಲ್ಲಿ ಘಟನೆ. ಗೋವಿಂದ ಸೋಮಯ್ಯ ಪೂಜಾರಿ, ಗಣೇಶ್ ರಾಮದಾಸ್ ಶೇಟ್, ಸುರೇಶ್ ನಾಯರ್ ಮೃತರು. ಬಾವಿಯಲ್ಲಿ ಬಿದ್ದ ಪಂಪ್ ಸೆಟ್ ತೆಗೆಯಲು ಬಾವಿಗೆ ಒಬ್ಬರು ಇಳಿದಿದ್ದರು ಆದರೆ, ವ್ಯಕ್ತಿ ಮೇಲಕ್ಕೆ ಬರದ ಕಾರಣ ರಕ್ಷಣೆಗೆ ಇಳಿದಿದ್ದ ಇಬ್ಬರು ಸೇರಿ ಮೂವರೂ ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
Read More »ಹೈದರಾಬಾದ್ನಲ್ಲಿ ಐಪಿಎಲ್ ಕ್ರಿಕೆಟ್ ಟೂರ್ನಿ ಸಂದರ್ಭದಲ್ಲಿ ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಮೂರು ಅಂತಾರಾಜ್ಯ ಕ್ರಿಕೆಟ್ ಬೆಟ್ಟಿಂಗ್ ಜಾಲಗಳನ್ನು ಪತ್ತೆ ಹಚ್ಚಲಾಗಿದೆ.
ಹೈದರಾಬಾದ್ (ತೆಲಂಗಾಣ): ತೆಲಂಗಾಣದ ಸೈಬರಾಬಾದ್ ಪೊಲೀಸರು ಏಕಕಾಲಕ್ಕೆ ಮೂರು ಅಂತಾರಾಜ್ಯ ಕ್ರಿಕೆಟ್ ಬೆಟ್ಟಿಂಗ್ ಜಾಲಗಳನ್ನು ಬೇಧಿಸಿದ್ದಾರೆ. ಐಪಿಎಲ್ ಕ್ರಿಕೆಟ್ ಟೂರ್ನಿ ಸಂದರ್ಭದಲ್ಲಿ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಆನ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಮೂರು ಗ್ಯಾಂಗ್‌ಗಳ ಏಳು ಜನರನ್ನು ಬಂಧಿಸಲಾಗಿದ್ದು, ಇನ್ನೂ ಮೂವರು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೈಬರಾಬಾದ್ ಪೊಲೀಸ್ ಕಮಿಷನರ್ ಸ್ಟೀಫನ್ ರವೀಂದ್ರ ಅವರೊಂದಿಗೆ ಶಂಶಾಬಾದ್ ಮತ್ತು ರಾಜೇಂದ್ರನಗರ ಡಿಸಿಪಿಗಳಾದ ನಾರಾಯಣ ರೆಡ್ಡಿ, ಜಗದೀಶ್ವರರೆಡ್ಡಿ, ಎಸ್‌ಒಟಿ ಡಿಸಿಪಿ …
Read More »ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸುಳಿವು, ದಿಢೀರ್ನೆ ವಿದೇಶಕ್ಕೆ ತೆರಳಿದ ಜೆಡಿಎಸ್ ನಾಯಕ ಕುಮಾರಸ್ವಾಮಿ, ಬಹುಮತದ ಸರ್ಕಾರ ರಚನೆ ವಿಶ್ವಾಸದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು.
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಮತದಾನ ಪೂರ್ಣವಾಗುತ್ತಿದ್ದಂತೆಯೇ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯಗಳಲ್ಲಿ ಅಧಿಕಾರ ಪಡೆಯುವ ಲೆಕ್ಕಾಚಾರ ಶುರುವಾಗಿದ್ದು,ಈ ನಡುವೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ದಿಢೀರ್ ವಿದೇಶಕ್ಕೆ ತೆರಳಿರುವುದು ವ್ಯಾಪಕ ಕುತೂಹಲಕ್ಕೆ ಕಾರಣವಾಗಿದೆ. ಈ ಬಾರಿ ಕರ್ನಾಟಕದಲ್ಲಿ ಮರಳಿ ಅಧಿಕಾರ ಹಿಡಿಯುವ ಲೆಕ್ಕಾಚಾರ ರಾಜ್ಯದ ಕೆಲ ಬಿಜೆಪಿ ನಾಯಕರಲ್ಲಿದ್ದರೂ,ಅತಂತ್ರ ವಿಧಾನಸಭೆಯ ಸಾಧ್ಯತೆಯನ್ನು ಕಂಡಿರುವ ಬಿಜೆಪಿ ವರಿಷ್ಠರು ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಕಸರತ್ತು ಆರಂಭಿಸಿದ್ದು, ಇದರ ಭಾಗವಾಗಿ ಕುಮಾರಸ್ವಾಮಿ …
Read More »ಶಿವಸೇನೆ ಪಕ್ಷದ ಹೆಸರು, ಚಿಹ್ನೆ ಹಂಚಿಕೆ ಕೇಸ್: ನಾಳೆ ಸುಪ್ರೀಂಕೋರ್ಟ್ನಿಂದ ಮಹತ್ವದ ತೀರ್ಪು
ನವದೆಹಲಿ: ಕಳೆದ ವರ್ಷ ಉಂಟಾದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ನಾಳೆ ಸುಪ್ರೀಂಕೋರ್ಟ್ನಲ್ಲಿ ಮಹತ್ವದ ತೀರ್ಪು ಹೊರ ಬೀಳಲಿದೆ. ಕೇಂದ್ರ ಚುನಾವಣಾ ಆಯೋಗವು ಶಿವಸೇನೆಯ ಬಿಲ್ಲು ಮತ್ತು ಬಾಣದ ಪಕ್ಷದ ಚಿಹ್ನೆ ಮತ್ತು ಪಕ್ಷದ ಹೆಸರಿಗೆ ಸರ್ವೋಚ್ಛ ನ್ಯಾಯಾಲಯ ತನ್ನ ಆದೇಶ ನೀಡಲಿದೆ. ಇದರಿಂದ ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ಬಣದಲ್ಲಿ ಯಾವುದು ನಿಜವಾದ ಶಿವಸೇನೆ ಎಂಬುವುದು ಇತ್ಯರ್ಥವಾಗಲಿದೆ. ಕಳೆದ ವರ್ಷ ಶಿವಸೇನೆ ನಾಯಕ ಏಕನಾಥ್ ಶಿಂಧೆ ಬಂಡಾಯದ ಬಾವುಟ …
Read More »ನಾಡಿದ್ದು ಚುನಾವಣಾ ತೀರ್ಪು.. ಸಿದ್ದರಾಮಯ್ಯ- ಸುರ್ಜೇವಾಲಾ ಮಹತ್ವದ ಮಾತುಕತೆ
ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಇಂದು ಶಿವಾನಂದವೃತ್ತ ಸಮೀಪ ಇರುವ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ್ದ ಸುರ್ಜೇವಾಲಾ ಅವರು ಮಾತುಕತೆ ನಡೆಸಿದರು. ಮತದಾನೋತ್ತರ ಸಮೀಕ್ಷೆ ಕಾಂಗ್ರೆಸ್ ಪರವಾಗಿದ್ದು, ಮುಂದಿನ ತಂತ್ರಗಾರಿಕೆ ಸಂಬಂಧ ಉಭಯ ನಾಯಕರು ಚರ್ಚಿಸಿದರು. ಬುಧವಾರ ರಾತ್ರಿಯೇ ಮೈಸೂರಿನಿಂದ ಸಿದ್ದರಾಮಯ್ಯ ವಾಪಸಾಗಿದ್ದು, ಖಾಸಗಿ ಹೋಟೆಲ್ನಲ್ಲಿ ಸುರ್ಜೇವಾಲಾ ಜತೆ ಚರ್ಚಿಸಿದ್ದಾರೆ ಎಂಬ ಮಾಹಿತಿ ಇದೆ. …
Read More »2615 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರ: ಸಣ್ಣಪುಟ್ಟ ಗಲಾಟೆ ಹೊರತುಪಡಿಸಿ ಶಾಂತಿಯುತ ಮತದಾನ; ಫಲಿತಾಂಶದತ್ತ ಎಲ್ಲರ ಚಿತ್ತ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಹುತೇಕ ಶಾಂತಿಯುತವಾಗಿ ನೆರವೇರಿತು. ಕೆಲವೆಡೆ ಮತಯಂತ್ರ ದೋಷ, ವಿ.ವಿ.ಪ್ಯಾಟ್ ಸಮಸ್ಯೆಗಳು ಎದುರಾದವಾದರೂ ಅಧಿಕಾರಿಗಳು ಕೂಡಲೇ ಪರ್ಯಾಯ ಕ್ರಮ ಕೈಗೊಂಡರು. 5,30,85,566 ಸಾಮಾನ್ಯ, 47,488 ಸೇವಾ ಮತದಾರರು ಸೇರಿ ಒಟ್ಟು 5,31,33,054 ಮಂದಿ ಮತದಾನದ ಹಕ್ಕು ಹೊಂದಿದ್ದು, ಶೇ.73 ಮತದಾನವಾಗಿದೆ. 2615 ಅಭ್ಯರ್ಥಿಗಳ ಭವಿಷ್ಯ ಇವಿಎಂನಲ್ಲಿ ಭದ್ರವಾಗಿವೆ. ಬೆಳಗ್ಗೆ ಮತದಾನ ನೀರಸವಾಗಿತ್ತು. ಹೊತ್ತು ಏರುತ್ತಿದ್ದಂತೆ ಮತಗಟ್ಟೆ ಬಳಿ ಮತದಾರರು ಸರತಿ ಸಾಲಿನಲ್ಲಿ ನಿಂತಿದ್ದು …
Read More »ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ
ಕಲಬುರಗಿ: ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ ಘಟನೆ ನಡೆದಿದೆ. ರಾಮು ರಾಠೋಡ್ (45) ಮೃತ. ಈತ ಬಿಜೆಪಿ ಕಾರ್ಯಕರ್ತನಾಗಿದ್ದ. ರಾಮು ರಾಠೋಡ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಾಮು ಅವರು ಸಲಗರ ಬಸಂತಪುರ ತಾಂಡಾ ನಿನಾಸಿಯಾಗಿದ್ದಾರೆ. ನಿನ್ನೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪೋಲಿಂಗ್ ಬೂತ್ ಏಜೆಂಟ್ ಆಗಿದ್ದರು. ನಿನ್ನೆ ಸಂಜೆವರಗೆ ಪೋಲಿಂಗ್ ಬೂತ್ ಏಜೆಂಟ್ …
Read More »ಸೇಬು ಬೆಳೆಯುವ ಬೆಳೆಗಾರರಿಗೆ ಕೇಂದ್ರ ಸರಕಾರ ಸಿಹಿ ಸುದ್ದಿ ನೀಡಿದೆ.
ಹೊಸದಿಲ್ಲಿ: ವಿದೇಶಿ ಸೇಬುಗಳ ಆಮದಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳುವ ಮೂಲಕ ದೇಶೀಯವಾಗಿ ಸೇಬು ಬೆಳೆಯುವ ಬೆಳೆಗಾರರಿಗೆ ಕೇಂದ್ರ ಸರಕಾರ ಸಿಹಿ ಸುದ್ದಿ ನೀಡಿದೆ. ಸೇಬುಗಳ ಆಮದು ನೀತಿಯಲ್ಲಿ ತಿದ್ದುಪಡಿ ತರುವ ಮೂಲಕ ಅಧಿಸೂಚನೆ ಹೊರಡಿಸಿರುವ ವಿದೇಶಿ ವ್ಯಾಪಾರ ನಿರ್ದೇಶನಾಲಯ ಉತ್ಪಾದನಾ ವೆಚ್ಚ, ಬೆಳೆ ವಿಮೆ, ಸರಕು ಸಾಗಣೆ ವೆಚ್ಚ ಸೇರಿ ಒಂದು ಕಿಲೋ ಸೇಬಿನ ಬೆಲೆ ಕೆಜಿಗೆ 50 ರೂ.ಗಿಂತ ಕಡಿಮೆ ಇದ್ದರೆ ಅದನ್ನು ಆಮದು ಮಾಡಿಕೊಳ್ಳುವಂತಿಲ್ಲ ಎಂದು ಅಧಿಸೂಚನೆಯಲ್ಲಿ …
Read More »ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ
ಚಿತ್ರದುರ್ಗ: ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿ ಕೆ.ಸಿ.ವೀರೇಂದ್ರ ಪಪ್ಪಿ, ರಘುರಾಮ ರೆಡ್ಡಿ ಹಾಗೂ ಬಿಜೆಪಿ ಅಭ್ಯರ್ಥಿ ಜಿ.ಎಚ್.ತಿಪ್ಪಾರೆಡ್ಡಿ ವಿರುದ್ಧ ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬುಧವಾರ ಮತದಾನ ಪ್ರಕ್ರಿಯೆ ಮುಕ್ತಾಯವಾಗುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ತಿಪ್ಪಾರೆಡ್ಡಿ ಕಾರಿನಲ್ಲಿ ಮತದಾನ ಕೇಂದ್ರದ ಕಾಂಪೌಂಡ್ ಒಳಗೆ ಬಂದಿದ್ದರು. ಇದಕ್ಕೆ ಕಾಂಗ್ರೆಸ್ ಅಭ್ಯರ್ಥಿ ವೀರೇಂದ್ರ ಪಪ್ಪಿ ಆಕ್ಷೇಪಿಸಿದ್ದರು. ಈ ಸಂಬಂಧ …
Read More »ಬಾವಮೈದುನನ್ನು ಕೊಲೆಗೈದ ಬಾವ.!
ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದುನರ ನಡುವಿನ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತರು ಜಮಾಲ್ ಎಂದು ತಿಳಿದುಬಂದಿದೆ. ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಆರೋಪಿಯಾಗಿದ್ದಾನೆ. ಸದ್ಯ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಿಬ್ಬರ ಮನೆಗಳು ಅಕ್ಕಪಕ್ಕದಲ್ಲಿದ್ದು ಸಣ್ಣ ಮಕ್ಕಳೊಳಗಿನ ವೈಮನಸ್ಸಿನ ವಿಚಾರವಾಗಿ ಇಂದು ಬೆಳಗ್ಗೆ ಜಮಾಲ್ ಮತ್ತು ಸುಹೈಬ್ ನಡುವೆ …
Read More »