Breaking News

ರಾಷ್ಟ್ರೀಯ

ಬೆಳಗಾವಿಯಲ್ಲಿ ಇಂದು ಮುಂಜಾನೆ ಸುರಿದ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಬೆಳಗಾವಿ: ಇಂದು ಬೆಳಗಿನ ಜಾವ ಸುರಿದ ಧಾರಾಕಾರ ಮಳೆಯಿಂದಾಗಿ ನಾಲ್ಕು ವಿದ್ಯುತ್ ಕಂಬಗಳು ನೆಲಕ್ಕುರುಳಿ, ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ಘಟನೆ ತಾಲೂಕಿನ ಕುರಿಹಾಳ ಗ್ರಾಮದಲ್ಲಿ ನಡೆದಿದೆ. ವೀರಭದ್ರೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ನೆರಳಿನ‌ ವ್ಯವಸ್ಥೆ ಕಲ್ಪಿಸಲು ನಿರ್ಮಿಸಿದ್ದ ತಗಡಿನ ಶೆಡ್ ಕೂಡ ಮುರಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಳಗಾವಿ ನಗರ ಸೇರಿ ಜಿಲ್ಲೆ ವಿವಿಧೆಡೆ ಬೆಳಗ್ಗೆಯಿಂದ ತುಂತುರು ಮಳೆ ಸುರಿಯುತ್ತಿದೆ. ಬಹುತೇಕ ಕಡೆ ಮೋಡ ಕವಿದ ವಾತಾವರಣವಿದೆ. ಮುರಿದು …

Read More »

ಮತದಾನ ಪ್ರಕ್ರಿಯೆ ಬುಧವಾರ ಮುಕ್ತಾಯಗೊಳ್ಳುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಬುಧವಾರ ಮುಕ್ತಾಯಗೊಳ್ಳುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಂಗಾಪುರಕ್ಕೆ ತೆರಳಿದ್ದಾರೆ. ಚನ್ನಪಟ್ಟಣ ಕ್ಷೇತ್ರದಿಂದ ಚುನಾವಣೆ ಕಣಕ್ಕಿಳಿದಿರುವ ಕುಮಾರಸ್ವಾಮಿ ಅವರ ಆರೋಗ್ಯ ಕೈಕೊಟ್ಟಿದ್ದು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯಲಿರುವ ಅವರ ಅಲ್ಲಿ ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ. ಕಳೆದ ಮೂರು ತಿಂಗಳುಗಳಿಂದ ಚುನಾವಣೆ ಪ್ರಚಾರ ಕಾರ್ಯದಲ್ಲಿ ಎಡೆಬಿಡದೆ ನಿರತರಾಗಿದ್ದ ಕುಮಾರಸ್ವಾಮಿ ಅವರು ಅನಾರೋಗ್ಯದಿಂದಾಗಿ 20 ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು ಅಲ್ಲಿಂದಲೇ …

Read More »

ಗಾಲಿ ಜನಾರ್ದನ ರೆಡ್ಡಿ ವಿರುದ್ಧ FIR ದಾಖಲ

ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ವಿರುದ್ಧ FIR ದಾಖಲಿಸಲಾಗಿದೆ. ರಾಜ್ಯ ವಿಧಾನಸಭೆಗೆ ಬುಧವಾರ ನಡೆದ ಚುನಾವಣೆಯ ಮತದಾನದ ವೇಳೆ ಜನಾರ್ದನ ರೆಡ್ಡಿಯವರು ಮತಗಟ್ಟೆ ಬಳಿ ಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ಅವರ ವಿರುದ್ಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗಂಗಾವತಿ ಕ್ಷೇತ್ರದ ಲಕ್ಷ್ಮೀ ಕ್ಯಾಂಪ್ ನ ನಿಷೇಧಿತ ಪ್ರದೇಶದಲ್ಲಿ ಜನಾರ್ದನ ರೆಡ್ಡಿ ಅವರು ನೀತಿ ಸಂಹಿತೆ ಉಲ್ಲಂಘಿಸಿ ತಮ್ಮ …

Read More »

ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲ

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ತಡರಾತ್ರಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅಡ್ಮಿಟ್ ಅಗಿದ್ದಾರೆ. ಕಿಡ್ನಿ ಸಮಸ್ಯೆಯಿಂದಾಗಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಸಿ.ಟಿ.ರವಿ ಅವರಿಗೆ ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.

Read More »

ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದ B.S.Y.

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಅಧಿಕಾರಕ್ಕೆ ಬಂದೇ ಬರುತ್ತದೆ ಯಾವುದೇ ಸಂಶಯವಿಲ್ಲ, ನನಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ. ನಮಗೆ ಕರ್ನಾಟಕದ ಜನರ ನಾಡಿಮಿಡಿತದ ಬಗ್ಗೆ ಗೊತ್ತಿದೆ. ಬಿಜೆಪಿಗೆ ಬಹುಮತ ಬರಲಿದೆ, ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳಿದರು.

Read More »

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ. ದಕ್ಷಿನ ಒಳನಾಡಿನ ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು,ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ …

Read More »

ವಿಧಾನಸಭೆ ಚುನಾವಣೆ ಮತದಾನ ಭರದಿಂದ ಸಾಗಿದ್ದು, ಮಧ್ಯಾಹ್ನ 1 ಗಂಟೆಯವರೆಗೆ ಶೇಕಡಾ 37.25 ರಷ್ಟು ಮತದಾನ ಆಗಿದೆ.

ಬೆಂಗಳೂರು: ವಿಧಾನಸಭೆ ಚುನಾವಣೆ ಮತದಾನ ಭರದಿಂದ ಸಾಗಿದ್ದು, ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಗೆ ತೆರಳುತ್ತಿದ್ಧಾರೆ. ಮಧ್ಯಾಹ್ನ 1 ಗಂಟೆಯವರೆಗೆ ಮತದಾರರು ಹಕ್ಕು ಚಲಾಯಿಸಿದ ಆಯಾ ಜಿಲ್ಲೆಗಳ ವಿವರ ಇಲ್ಲಿದೆ ನೋಡಿ.. 1 ಬಿಬಿಎಂಪಿ ಸೆಂಟ್ರಲ್​ 19.30% 29.41% 2 ಬಿಬಿಎಂಪಿ ಉತ್ತರ 18.34% 29.90% 3 ಬಿಬಿಎಂಪಿ ದಕ್ಷಿಣ 19.18% 30.68% 4 ಬಾಗಲಕೋಟೆ 23.44% 40.87% 5 ಬೆಂಗಳೂರು ಗ್ರಾಮಾಂತರ 20.23% 4016% 6 ಬೆಂಗಳೂರು ನಗರ 17.72% …

Read More »

ಕೈಕೊಟ್ಟ ಮತಯಂತ್ರಗಳು 9 ಮತಗಟ್ಟೆಗಳಲ್ಲಿ ಮತದಾನ ಸ್ಥಗಿತ

ಬೆಳಗಾವಿ: ಮತಯಂತ್ರಗಳಲ್ಲಿನ ತಾಂತ್ರಿಕ ದೋಷದಿಂದಾಗಿ ಜಿಲ್ಲೆಯ 9 ಮತಗಟ್ಟೆಗಳಲ್ಲಿ ಮತದಾನ ಪ್ಕ್ರಿಯೆ ಕೆಲ ಕಾಲ ಸ್ಥಗಿತಗೊಂಡು ವ್ಯತ್ಯಯ ಉಂಟಾಯಿತು. ಕಿತ್ತೂರು ಪಟ್ಟಣ, ದೇವಗಾಂವ, ಮೂಡಲಗಿ ಪಟ್ಟಣ, ಅರಬಾವಿ, ಕಾದ್ರೊಳ್ಳಿ, ನೇಸರಗಿ, ಉಳ್ಳಿಗೇರಿ, ಅಥಣಿ, ಗಳತಗಾ ಗ್ರಾಮಗಳಲ್ಲಿ ಮತಯಂತ್ರಗಳು ಕೈಕೊಟ್ಟ ಕಾರಣ ಮತದಾನ ಕೆಲ ಕಾಲ ಸ್ಥಗಿತಗೊಂಡಿತು. ಕಿತ್ತೂರು ಪಟ್ಟಣದಲ್ಲಿ ಎರಡೂವರೆ ತಾಸುಗಳ ಕಾಲ ಮತದಾನ ಸ್ಥಗಿತಗೊಂಡಿದ್ದು, ಉಳಿದ ಮತಗಟ್ಟೆಗಳಲ್ಲಿ ಅರ್ಧದಿಂದ ಒಂದು ತಾಸು ಕಾಲ ಮತದಾನ ಪ್ರಕ್ರಿಯೆ ನಿಂತುಹೋಯಿತು. ಇದರಿಂದಾಗಿ ಉತ್ಸಾಹದಿಂದ …

Read More »

ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ರಸ್ತೆಗೆ ಬಡಿದು, ಪುಡಿ ಪುಡಿ ಮಾಡಿ ಗ್ರಾಮಸ್ಥರ ಆಕ್ರೋಶ

ವಿಜಯಪುರ: ವಿಧಾನಸಭಾ ಚುನಾವಣಾ ಮತದಾನ ಒಂದೆಡೆ ಬಿರುಸುಗೊಂದಿದ್ದು, ಇನ್ನೊಂದೆಡೆ ವಿಜಯಪುರದ ಮಸಬಿನಾಳ ಗ್ರಾಮ ರಣಾಂಗಣವಾಗಿ ಮಾರ್ಪಟ್ಟಿದೆ. ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ರಸ್ತೆಗೆ ಬಡಿದು, ಪುಡಿ ಪುಡಿ ಮಾಡಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಅಧಿಕಾರಿಗಳು ಕಾಯ್ದಿರಿಸಿದ್ದ ಇವಿಎಂ, ವಿವಿಪ್ಯಾಟ್ ಯಂತ್ರಗಳನ್ನು ಕೊಂಡೊಯ್ಯುತ್ತಿದ್ದು. ಈ ವೇಳೆ ಮತದಾನ ಪ್ರಕ್ರಿಯೆಯನ್ನು ಅಧಿಕಾರಿಗಳು ಅರ್ಧಕ್ಕೆ ಸ್ಥಗಿತಗೊಳುಸುತ್ತಿದ್ದಾರೆ ಎಂದು ಗ್ರಾಮಸ್ಥರು ತಪ್ಪಾಗಿ ಭಾವಿಸಿ ಅಧಿಕಾರಿಗಳ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳ ವಾಹನವನ್ನು …

Read More »

ಜೋಶಿಮಠದ ಸುರಕ್ಷಿತ ವಲಯದ ಮನೆಗಳಲ್ಲೂ ಬಿರುಕು!

ಜೋಶಿಮಠ: ಉತ್ತರಾಖಂಡದ ಜೋಶಿಮಠದಲ್ಲಿ ಕೆಲವು ತಿಂಗಳ ಹಿಂದೆ ಭಾರೀ ಬಿರುಕುಗಳು ಕಾಣಿಸಿಕೊಂಡು, ಹಲವು ಮನೆಗಳು ಧ್ವಂಸಗೊಂಡಿದ್ದವು. ನೂರಾರು ಮಂದಿ ತಾಪತ್ರಯಕ್ಕೊಳಗಾಗಿದ್ದರು. ಇದೀಗ ಸುರಕ್ಷಿತ ವಲಯ ಎಂದು ಕರೆಸಿಕೊಂಡಿದ್ದ ಜಾಗಗಳಲ್ಲೂ ಬಿರುಕುಗಳು ಕಂಡು ಬಂದಿರು ವುದರಿಂದ ನಿವಾಸಿಗಳು ಆತಂಕಕ್ಕೊಳ ಗಾಗಿದ್ದಾರೆ.ಸದ್ಯದಲ್ಲೇ ಮುಂಗಾರು ಪ್ರವೇಶವಾಗುವ ಕಾರಣ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ.   ಈ ಹಿಂದೆ ಮಳೆ ಬಿದ್ದಾಗಲೇ ಮನೆಗಳಲ್ಲಿ ದೊಡ್ಡದೊಡ್ಡ ಬಿರುಕುಗಳು ಕಾಣಿಸಿಕೊಂಡಿದ್ದವು. ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟಿದ್ದ ಜ್ಯೋತಿರ್ಮಠದಲ್ಲೂ ಬಿರುಕುಗಳುಂಟಾಗಿದ್ದವು. ವಿಚಿತ್ರವೆಂದರೆ ಹಳದಿ ವಲಯ …

Read More »