ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಕ್ಷೇತ್ರದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದು, ನನಗೆ ಮೊದಲ ಸ್ಥಾನ ನೀಡಲಿದ್ದಾರೆ. ಆದರೆ, ವಿರೋಧ ಪಕ್ಷದ ಅಭ್ಯರ್ಥಿಗಳು ಎರಡನೇ ನಂಬರ್‌ಗೆ ಯಾರು ಬರುತ್ತಾರೆ ಎಂದು ಸ್ಪರ್ಧೆ ಮಾಡುತ್ತಿದ್ದಾರೆ. ಮೊದಲ ಸ್ಥಾನ ದೂರದ ಮಾತು. ನನ್ನನ್ನು ನೀವೇ ಮೊದಲ ಸ್ಥಾನದಲ್ಲಿ ಕೂರಿಸಿದ್ದಿರಿ. ನಾನು ಅದಕ್ಕೆ ಆಭಾರಿಯಾಗಿದ್ದೇನೆ. ತಾವೆಲ್ಲ ೨ನೇ ಸ್ಥಾನದವರ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಮೊದಲ ಸ್ಥಾನದಲ್ಲಿದ್ದವರಿಗೆ ಮತ್ತೊಮ್ಮೆ …
Read More »ಹೈವೋಲ್ಟೇಜ್ ಬಹಿರಂಗ ಪ್ರಚಾರ ಇಂದೇ ಕೊನೆ,
ಮೇ 10 ರಂದು ನಡೆಯಲಿರುವ ಚುನಾವಣಾ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ರಾಜ್ಯ ವಿಧಾನಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ, ರೋಡ್ ಶೋ ಹಾಗೂ ಸಮಾವೇಶಗಳ ಮೂಲಕ ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಈ ನಡುವೆ ಹೈವೋಲ್ಟೇಜ್ ಮತಪ್ರಚಾರ ಇಂದು ಅಂತ್ಯಗೊಳ್ಳಲಿದೆ. ರಾಜ್ಯದ ಮೂರು ಪ್ರಮುಖ ರಾಜಕೀಯ …
Read More »ವಿವಿದೆಡೆ ಮಾದಕವಸ್ತು ದಂಧೆಯಲ್ಲಿ ತೊಡಗಿದ್ದ ಸುಮಾರು 19 ಮಂದಿ ಮಾದಕ ದಂಧೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 7 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಬೆಂಗಳೂರು : ಮಾದಕ ದಂಧೆಕೋರರ ವಿರುದ್ಧ ಕಳೆದ ಒಂದು ತಿಂಗಳಿನಿಂದ ವಿಶೇಷ ಕಾರ್ಯಾಚರಣೆ ಕೈಗೊಂಡು ನೈಜೀರಿಯಾದ ಇಬ್ಬರು, ಐವರಿಕೋಸ್ಟ್ ದೇಶದ ಒಬ್ಬರು, ಕೇರಳದ 12 ಜನ, ಪಶ್ಚಿಮ ಬಂಗಾಳ ಹಾಗೂ ಆಂಧ್ರಪ್ರದೇಶದ ಓರ್ವ ಮತ್ತು ಬೆಂಗಳೂರಿನ ಇಬ್ಬರು ಡ್ರಗ್ ಪೆಡ್ಲರ್‌ಗಳ ಸಹಿತ ಒಟ್ಟು 19 ಜನ ಡ್ರಗ್ ಪೆಡ್ಲರ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 7,06,00,000 ರೂ. ಮೌಲ್ಯದ ನಿಷೇಧಿತ ಮಾದಕ ವಸ್ತುಗಳಾದ 6 ಕೆ.ಜಿ ಹ್ಯಾಶಿಶ್ ಆಯಿಲ್, 51.89 ಕೆ.ಜಿ …
Read More »ವಿಧಾನಸಭಾ ಚುನಾವಣೆ: ಭದ್ರತೆಗೆ ಒಂದೂವರೆ ಲಕ್ಷಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಬಹಿರಂಗ ಪ್ರಚಾರಕ್ಕೆ ಇನ್ನೂ ಕೆಲವೇ ಗಂಟೆಗಳು ಬಾಕಿಯಿದ್ದು, ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಂತಿಮ ಹಂತದ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮೇ 10ರಂದು 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಪಾರದರ್ಶಕವಾಗಿ ಚುನಾವಣೆ ನಡೆಸಲು ಹಾಗೂ ಅಹಿತಕರ ಘಟನೆ ನಡೆಯಂತೆ ಮುಂಜಾಗ್ರತ ಕ್ರಮ ಕೈಗೊಂಡಿರುವ ರಾಜ್ಯ ಪೊಲೀಸ್ ಇಲಾಖೆಯು ಕೇಂದ್ರಿಯ ಪಡೆ, ಅನ್ಯ ರಾಜ್ಯಗಳ ಪೊಲೀಸರು ಸೇರಿದಂತೆ ಒಟ್ಟು 1.56 ಲಕ್ಷ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಿದೆ. …
Read More »ಯುವ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆ
ಕಲಬುರಗಿ : ಯುವ ಪ್ರೇಮಿಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕಮಲಾಪುರ್ ತಾಲೂಕಿನ ಡೊಂಗರಗಾಂವ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಅಕ್ಷತಾ ಭರಣಿ (19) ಹಾಗೂ ಪಾಂಡುರಂಗ್ ಕಿಣ್ಣಿ(20) ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ. ಯುವ ಪ್ರೇಮಿಗಳ ಸಾವಿಗೆ ಕಾರಣ ತಿಳಿದುಬಂದಿಲ್ಲ. ಮೇಲ್ನೋಟಕ್ಕೆ ಕುಟುಂಬಸ್ಥರ ವಿರೋಧದಿಂದ ಸಾವಿಗೆ ಶರಣಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. …
Read More »ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ರ್ಯಾಂಕ್:DDPI ಅಭಿನಂದನೆ
ಬೆಳಗಾವಿ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿರು ಸವದತ್ತಿಯ ಅನುಪಮಾ ಶ್ರೀಶೈಲ ಹಿರೇ ಹೊಳಿ ಹಾಗೂ ಸಾಧನೆಗೈದ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಅಭಿನಂದಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, 2023 ರ ಎಸ್. ಎಸ್ ಎಲ್ ಸಿ . ಪರಿಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆಗಳು. ಸೌದತ್ತಿ …
Read More »141 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಡಿ.ಕೆ.ಶಿ.
ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕೇವಲ 2 ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳ ನಾಯಕರು ಮತದಾರರ ಮನವೊಲಿಸಲು ಕೊನೇ ಹಂತದ ಕಸರತ್ತು ನಡೆಸಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದರೆ, ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಈಬಾರಿ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಲಿದೆ ಎಂದು ಕಮಲ ನಾಯಕರು ಹೇಳುತ್ತಿದ್ದಾರೆ. ವಿಧಾನಸಭಾ ಚುನಾವನೆಯಲ್ಲಿ ಕಾಂಗ್ರೆಸ್ 141 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ …
Read More »ನಮಗೆ ಮಾತ್ರ ನೋಟೀಸ್ ನೀಡಿದ್ದು ಯಾಕೆ?
ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಕಾಂಗ್ರೆಸ್ ಜಾಹೀರಾತು ಪ್ರಕಟಿಸಿರುವ ವಿಚರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಚುನಾವಣಾ ಆಯೋಗ ನೋಟೀಸ್ ನೀಡಿರುವ ವಿಚಾರವಾಗಿ ಮಾತನಾಡಿರುವ ಡಿ.ಕೆ.ಶಿವಕುಮಾರ್, ನಮಗೆ ನೀಡಿರುವ ನೋಟೀಸ್ ಗೆ ನಾನು ಉತ್ತರ ಕೊಟ್ಟಿದ್ದೇನೆ. ಈಗ ಆಧಾರವೇನು ಎಂದು ಕೇಳಿದ್ದಾರೆ. ಬಿಜೆಪಿ ನಾಯಕರ ಹೇಳಿಕೆ ಮೇಲೆಯೇ ನಾವು ಪ್ರಚಾರ ಮಾಡಿದ್ದೇವೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಚುನಾವಣಾ ಆಯೋಗಕ್ಕೆ ಉತ್ತರ ನೀಡಿದ ಬಳಿಕ …
Read More »ಪ್ರಧಾನಿ ಮೋದಿ ಬಗ್ಗೆ ಶರದ್ ಪವಾರ್ ಹೇಳಿದ್ದೇನು?
ಮುಂಬೈ: ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿರುವ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಧಾರ್ಮಿಕ ಘೋಷಣೆಗಳನ್ನು ನೀಡಿರುವುದು ನನಗೆ ಆಶ್ಚರ್ಯ ತಂದಿದೆ. ನಾವು ಜಾತ್ಯತೀತತೆಯ ಪರಿಕಲ್ಪನೆಯನ್ನು ಒಪ್ಪಿಕೊಂಡಿದ್ದೇವೆ. ಆದರೆ ಚುನಾವಣೆಯಲ್ಲಿ ಧರ್ಮ …
Read More »ಮೋದಿ 20 ಬಾರಿ ಬಂದರೂ ಗೆಲ್ಲುವುದಿಲ್ಲ: ಸಿದ್ದರಾಮಯ್ಯ
ಪಿರಿಯಾಪಟ್ಟಣ: ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಕಂಡರೆ ಭಯ. ಹಾಗಾಗಿ ಮೇಲಿಂದ ಮೇಲೆ ಕರ್ನಾಟಕಕ್ಕೆ ಬರುತ್ತಿದ್ದು, ಇನ್ನೂ ಇಪ್ಪತ್ತು ಬಾರಿ ಬಂದರೂ ಬಿಜೆಪಿಗೆ ಸೋಲು ಕಟ್ಟಿಟ್ಟಬುತ್ತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರನ್ನು ಖರೀದಿಸಿ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದು ಸರಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಮಾಡಿ ಭ್ರಷ್ಟಾಚಾರದಲ್ಲಿ ಮುಳುಗಿಸಿಟ್ಟಿದ್ದಾರೆ. ರಾಜ್ಯಕ್ಕೆ ಮೋದಿ ಕೊಡುಗೆ …
Read More »