Breaking News

ರಾಷ್ಟ್ರೀಯ

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ರಾಯಚೂರು, ಏಪ್ರಿಲ್​ 20: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ಮಂತ್ರಾಲಯ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಿವಾರ ಹಾಕಿಕೊಳ್ಳೋದು ಧರ್ಮ ಮತ್ತು ಸಂಪ್ರದಾಯದ ಸಂಕೇತವಾಗಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಯ ಜನಿವಾರ ತೆಗೆಸಿರುವುದು ಖಂಡನೀಯವಾಗಿದೆ. ಸಂವಿಧಾನದಲ್ಲಿ ಅವರವರ ಸಂಪ್ರದಾಯ ಆಚರಿಸುವ ಅವಕಾಶ ಇದೆ. ದೇಶದ ಸಂವಿಧಾನದ ಬಗ್ಗೆ ಮಾತನಾಡುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಸಂವಿಧಾನದ ವಿಚಾರ ಹರಣ ಕೆಲಸವಾಗುತ್ತಿದೆ. ಈ ದ್ವಂದ್ವ ನಿಲುವು ಖಂಡನೀಯ …

Read More »

ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ

ಬೀದರ್ : ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ …

Read More »

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ* *ಸಾಮಾಜಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇರಲು ಹೇಗೆ ಸಾಧ್ಯ: ಆರ್.ಅಶೋಕ್ ಆರೋಪಕ್ಕೆ ಸಿಎಂ ತಿರುಗೇಟು* ಬೆಳಗಾವಿ : ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. …

Read More »

ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು

ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ: ಸಿ.ಎಂ ಸಿದ್ದರಾಮಯ್ಯ ಕರೆ* *ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು: ಸಿ.ಎಂ* *ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ ಹುಷಾರು: ಕಾಳಿದಾಸ, ವಾಲ್ಮೀಕಿ ಪ್ರಸಂಗ ಉದಾಹರಿಸಿ ಎಚ್ಚರಿಸಿದ ಸಿಎಂ* ತುಮಕೂರು ಏ19: ಹಿಂದೆ ಸಂಸ್ಕೃತ ಕಲಿಯುವವರಿಗೆ, …

Read More »

ಮಡಸನಾಳ ಕೆರೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ*

ಮಡಸನಾಳ ಕೆರೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ* : ಬೇಸಿಗೆ ಬಿಸಿಲಿನ ತಾಪದ ನಡುವೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ನಡುವೆ ವಿಜಯಪುರ ತಾಲ್ಲೂಕಿನ ಮಡಸನಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಕೆರೆಗೆ ನೀರು ಹರಿಸುವಂತೆ ರೈತರು ಒತ್ತಾಯ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಕನ್ನೂರು ಹಾಗೂ ಮಡಸನಾಳ ಗ್ರಾಮದ ರೈತರು ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ. ಜನ, ಜಾನುವಾರುಗಳು ಕುಡಿಯುವ ನೀರಿಗೆ ಪರಿತಪಿಸುವಂತಾಗಿದ್ದು, …

Read More »

ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ.

ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ…… ಜನಿವಾರ ಶಿಕ್ಷಣ ಸಂಸ್ಥೆಯ ಹೆಸರು ಹಾಳು ಮಾಡಿತ್ತಾ?- ಹಿಂದೂ ಕಾರ್ಯಕರ್ತ ಶಿವಾನಂದ ಪ್ರಶ್ನೆ : ಬೀದರ್ ಹಾಗೂ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಕೊರಳಲ್ಲಿದ್ದ ಜನಿವಾರವನ್ನು ತೆಗೆಯಿಸಿದ ನಡೆಯನ್ನು ಖಂಡಿಸಿ ಹಾಗೂ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡದಲ್ಲಿ, ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು.‌ ಧಾರವಾಡ ನಗರದ ವಿವೇಕಾನಂದ ವೃತದಿಂದ ಜುಬ್ಲಿ ವೃತದವರೆಗೆ …

Read More »

ರಿಕ್ಕಿ ರೈ ಮೇಲೆ ಗುಂಡಿನ ದಾಳಿ

ರಾಮನಗರ: ದಿವಂಗತ ಮುತ್ತಪ್ಪ ರೈ ಅವರ ಕಿರಿಯ ಪುತ್ರ ರಿಕ್ಕಿ ರೈ ಅವರ ಮೇಲೆ ದುಷ್ಕರ್ಮಿ ಗುಂಡಿನ ದಾಳಿ ನಡೆಸಿರುವ ಘಟನೆ ಶುಕ್ರವಾರ ರಾತ್ರಿ ಬಿಡದಿ ಬಳಿ ನಡೆದಿದೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಕ್ಕಿ ಸದ್ಯಕ್ಕೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಕಾರು ಚಾಲಕ ಬಸವರಾಜು ನೀಡಿರುವ ದೂರಿನ ಮೇರೆಗೆ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ಸೇರಿದಂತೆ ನಾಲ್ವರ ವಿರುದ್ಧ ಎಫ್​​ಐಆರ್​ ದಾಖಲಾಗಿದೆ. ಚಾಲಕ ನೀಡಿದ ದೂರಿನಲ್ಲಿ …

Read More »

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ

ವಿದ್ಯಾಸಿರಿ ಯೋಜನೆಯ ಮೊತ್ತ ಎರಡು ಸಾವಿರ ರೂಪಾಯಿಗೆ ಹೆಚ್ಚಳ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮಡಿವಾಳ ಮತ್ತು …

Read More »

ಕೊನೆಗೂ ಬೆಳಗಾವಿಗರ ಬಹುಪ್ರತೀಕ್ಷಿತ ನೂತನವಾಗಿ ಮಾರ್ಡನ್ ಮಾರ್ಕೆಟಾಗಿ ರೂಪುಗೊಂಡ ಕಲಾಮಂದಿರ

ಕೊನೆಗೂ ಬೆಳಗಾವಿಗರ ಬಹುಪ್ರತೀಕ್ಷಿತ ನೂತನವಾಗಿ ಮಾರ್ಡನ್ ಮಾರ್ಕೆಟಾಗಿ ರೂಪುಗೊಂಡ ಕಲಾಮಂದಿರದ ಲೋಕಾರ್ಪಣೆಗೆ ಮೂಹೂರ್ತ ಫಿಕ್ಸ್ ಆಗಿದೆ. , ಬೆಳಗಾವಿ ಟಿಳಕವಾಡಿಯಲ್ಲಿರುವ ಕಲಾಮಂದಿರಕ್ಕೆ ಹೊಸ ರೂಪವನ್ನು ನೀಡಲಾಗಿದ್ದು, ಮಾರ್ಡನ್ ಮಾರ್ಕೆಟಾಗಿ ಕಲಾಮಂದಿರ ಪರಿವರ್ತನೆಗೊಂಡಿದೆ. ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ನಿರ್ಮಾಣ ಕಾರ್ಯ ಮುಗಿದಿದ್ದು, ಕೊನೆಗೂ ಲೋಕಾರ್ಪಣೆಗೆ ಮೂಹೂರ್ತ ಫಿಕ್ಸ್ ಆಗಿದೆ. ಇದೇ ಏಪ್ರೀಲ್ 20 ರಂದು ಬೆಳಿಗ್ಗೆ 11:30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ

Read More »

ತಾರಕಕ್ಕೇರಿದ ಪಂಚಮಸಾಲಿ ಸ್ವಾಮೀಜಿ — ಕಾಶಪ್ಪನವರ ಕಾದಾಟ

ಬಾಗಲಕೋಟೆ : ತಾರಕಕ್ಕೇರಿದ ಪಂಚಮಸಾಲಿ ಸ್ವಾಮೀಜಿ — ಕಾಶಪ್ಪನವರ ಕಾದಾಟ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷನಾಗಿ ಸ್ವಾಮೀಜಿಗೆ ಸೆಡ್ಡು ಹೊಡೆದ ಕಾಶಪ್ಪನವರ ಪಂಚಮಸಾಲಿ ಪೀಠಕ್ಕೆ ಪರ್ಯಾಯ ಸ್ವಾಮೀಜಿ ನೇಮಕ ವಿಚಾರ ಚರ್ಚೆ ಮುನ್ನಲೆಯ ಮಧ್ಯೆ ಪಂಚಮಸಾಲಿ ಟ್ರಸ್ಟ್ ಗೆ ನೂತನ ಅಧ್ಯಕ್ಷರಾಗಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ ಶಾಸಕ ವಿಜಯಾನಂದ ಕಾಶಪ್ಪನವರ ಹಾಗೂ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮೀಜಿ …

Read More »