ಬೆಳಗಾವಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಈಗಾಗಲೇ ಪ್ರಬಲ ರಾಜಕೀಯ ಪಕ್ಷಗಳು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿ ಎಲ್ಲರ ಹುಬ್ಬೇರಿಸುವಂತೆ ಮಾಡಿವೆ. ಈ ನಡುವೆ ಬೆಳಗಾವಿ ಜಿಲ್ಲೆಯ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾವು ಯಾರಿಗೂ ಕಮ್ಮಿ ಇಲ್ಲ ಎಂಬಂತೆ ವಿನೂತನ ರೀತಿ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮತದಾರರ ಗಮನ ಸೆಳೆದಿದ್ದಾರೆ. ಹೌದು, ಅರಭಾವಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ್ ಕ್ಷೇತ್ರದ …
Read More »ತನ್ನ ಸರ್ವಿಸ್ 303 ರೈಪಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾನಸ್ಟೇಬಲ್
ಕಲಬುರಗಿ: ಜಿಲ್ಲೆಯ ಚಿತ್ತಾಪುರ(Chittapur) ಪಟ್ಟಣದಲ್ಲಿ ಕಾನಸ್ಟೇಬಲ್ಲೊಬ್ಬ ತನ್ನ ಸರ್ವಿಸ್ 303 ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿತ್ತಾಪುರ ಪಟ್ಟಣದ ತಹಶಿಲ್ದಾರ್ ಕಚೇರಿಯ ಮಹಡಿ ಮೇಲೆ ಹೋಗಿ 34 ವರ್ಷದ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚುನಾವಣೆ ಕರ್ತವ್ಯದಲ್ಲಿದ್ದ ಮಲ್ಲಿಕಾರ್ಜುನ, ಇಂದು(ಮೇ.4) ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲತ ಜಿಲ್ಲೆಯ ಶಹಬಾದ್ ಪಟ್ಟಣದ ನಿವಾಸಿಯಾಗಿದ್ದ ಮಲ್ಲಿಕಾರ್ಜುನ, ಕಳೆದ ಕೆಲ ವರ್ಷಗಳಿಂದ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದ್ರೆ ಇದೀಗ ಏಕಾಎಕಿ ಆತ್ಮಹತ್ಯೆ …
Read More »ಕೋಲಾರ: ದಾಖಲೆಯಿಲ್ಲದ ಕಂತೆ ಕಂತೆ ಹಣ ವಶಕ್ಕೆ
ಕೋಲಾರ: ಕೆ.ಜಿ.ಎಫ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದಾಖಲೆಯಿಲ್ಲದೇ ಸಂಗ್ರಹಿಸಿಡಲಾಗಿದ್ದ 4 ಕೋಟಿಗೂ ಹೆಚ್ಚು ಹಣವನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಹಂಚಾಳ ಬಳಿ ಇರುವ ಜಿಯೋನ್ ಹಿಲ್ಸ್ ಗಾಲ್ಫ್ ರೆಸಾರ್ಟ್‌ನ ವಿಲ್ಲಾ ಇರಿಸಿದ್ದ ಕಂತೆ ಕಂತೆ ಹಣವನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ ಅನ್ನುವವರಿಗೆ ಸೇರಿದ ವಿಲ್ಲಾ ಇದಾಗಿದ್ದು, ಖಚಿತ ಮಾಹಿತಿ ಮೇರೆಗೆ ಕೆಜಿಎಫ್ ಎಸ್ಪಿ ಧರಣಿದೇವಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಜಿಯೋನ್ ಹಿಲ್ಸ್ ಗಾಲ್ಫ್ …
Read More »ಈ ವರ್ಷದ ಮೊದಲ ಚಂದ್ರ ಗ್ರಹಣ ಶುಕ್ರವಾರ
ಬೆಂಗಳೂರು: ಈ ವರ್ಷದ ಮೊದಲ ಚಂದ್ರ ಗ್ರಹಣ ಶುಕ್ರವಾರ ಸಂಭವಿಸಲಿದೆ. ಆದ್ರೆ ಭಾರತದಲ್ಲಿ ಈ ಚಂದ್ರ ಗ್ರಹಣ ದರ್ಶನವಾಗುವುದಿಲ್ಲ. ಈ ವರ್ಷದ ಪ್ರಥಮ ಸೂರ್ಯ ಗ್ರಹಣ ಸಂಭವಿಸಿ 15 ದಿನ ಕಳೆದಿದೆ. ಇದರ ಬೆನ್ನಲ್ಲೇ ಚಂದ್ರ ಗ್ರಹಣ ಸಹ ಸಂಭವಿಸುತ್ತಿದೆ. ವೈಶಾಖ ಮಾಸದ ಹುಣ್ಣಿಮೆ ಆಗಿದ್ದು, ಈ ಸಂದರ್ಭ ಚಂದ್ರ ಗ್ರಹಣ ನಡೆಯಲಿದೆ. ಪೆನಂಬ್ರಲ್ ಚಂದ್ರ ಗ್ರಹಣ: ಈ ವರ್ಷದ ಮೊದಲ ಸೂರ್ಯ ಗ್ರಹಣವು ಭಾರತದಲ್ಲಿ ಗೋಚರಿಸಲಿಲ್ಲ. ಈಗ ವರ್ಷದ ಮೊದಲ ಚಂದ್ರ …
Read More »ರಾಜ್ಯದಲ್ಲಿ ಈವರೆಗೆ 87,501 ಜನರಿಂದ ಮನೆಯಿಂದಲೇ ಮತದಾನ: ಮುಖ್ಯಚುನಾವಣಾಧಿಕಾರಿ
ಬೆಂಗಳೂರು: ರಾಜ್ಯದಲ್ಲಿ ಈವರೆಗೆ 87,501 ಮಂದಿ 80 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ವಿಕಲಚೇತನರು ಮನೆಯಿಂದಲೇ ಮತದಾನ ಮಾಡಿದ್ದಾರೆ. ಒಟ್ಟು ಶೇ.87.92 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 80 ವರ್ಷಕ್ಕಿಂತ ಮೇಲ್ಪಟ್ಟವರು 80,250 ನೋಂದಾಯಿಸಿಕೊಂಡಿದ್ದು, ಈ ಪೈಕಿ 70,540 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಒಟ್ಟು ಶೇ.87.90ರಷ್ಟು ಮತದಾನವಾಗಿದೆ. 19,279 ವಿಕಲಚೇತನ ಮತದಾರರು ನೋಂದಾಯಿಸಿಕೊಂಡಿದ್ದು, 16,961 ಮತದಾರರು ಮತ ಚಲಾಯಿಸಿದ್ದಾರೆ. ಶೇ.87.98 ರಷ್ಟು ಮತದಾನವಾಗಿದೆ. ಮನೆಯಿಂದಲೇ ಮತದಾನ ಮಾಡಲು 99,529 …
Read More »ಜೆಡಿಎಸ್ ಭದ್ರಕೋಟೆಯಲ್ಲಿ ಯಡಿಯೂರಪ್ಪ ಅಬ್ಬರ.. ಬಿಜೆಪಿ ಅಭ್ಯರ್ಥಿ ಪರ ತವರಿನಲ್ಲಿ ಮತಬೇಟೆ
ಮಂಡ್ಯ : ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಇಂದು ಮಾಜಿ ಸಿಎಂ ಯಡಿಯೂರಪ್ಪ ಅಬ್ಬರದ ಪ್ರಚಾರ ನಡೆಸಿದರು. ಬಿಎಸ್ವೈ ಹುಟ್ಟೂರು ಕೆ. ಆರ್ ಪೇಟೆ ತಾಲ್ಲೂಕಿನ ಬೂಕನಕೆರೆಯಲ್ಲಿ ಬಿಜೆಪಿ ಪ್ರಚಾರ ಸಭೆ ನಡೆಸಿದರು. ಪ್ರಚಾರ ಸಭೆಗೂ ಮುನ್ನವೇ ಪಟ್ಟಣದ ಹೆಲಿಪ್ಯಾಡ್ ಬಳಿಯಿಂದ ಕಾರ್ಯಕರ್ತರು ಬೃಹತ್ ಬೈಕ್ ರ್‍ಯಾಲಿ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು. ಬಿಎಸ್ವೈ ವೇದಿಕೆಗೆ ಆಗಮಿಸುತ್ತಿದ್ದಂತೆಯೇ ಗ್ರಾಮ ದೇವತೆ ಗೋಗಾಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ತಮ್ಮ ಹುಟ್ಟೂರಿನ …
Read More »ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿಮತಯಾಚಿಸಿ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಿ ಜನಸೇವೆಗೆ ಮತ್ತೊಮ್ಮೆ ಅವಕಾಶ ನೀಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು. ತಾಲ್ಲೂಕಿನ ಕುಲಗೋಡ ಗ್ರಾಮದಲ್ಲಿ ಚುನಾವಣೆ ಪ್ರಚಾರದ ನಿಮಿತ್ಯ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ಧಿ ಆಧಾರದ ಮೇಲೆ ಮತ ಯಾಚನೆ ಮಾಡುತ್ತಿರುವುದಾಗಿ ತಿಳಿಸಿದರು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ …
Read More »ಬಜರಂಗದಳ ಬ್ಯಾನ್ ಮಾಡುವುದು ಮೂರ್ಖತನದ ಪರಮಾವಧಿ : ಬಿ ವೈ ವಿಜಯೇಂದ್ರ
ಬಾಗಲಕೋಟೆ : ಈಗಾಗಲೇ ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದೆ. ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಬ್ಯಾನ್ ಮಾಡುವುದಾಗಿ ಹೇಳಿ ಕಾಂಗ್ರೆಸ್ ಪಕ್ಷ ಇಡೀ ದೇಶದಲ್ಲಿಯೇ ಬ್ಯಾನ್ ಆಗುವ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯ ಮುಧೋಳ ಪಟ್ಟಣಕ್ಕೆ ಬಿಜೆಪಿ ಪರ ಪ್ರಚಾರಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಜರಂಗದಳ ಬ್ಯಾನ್ ಮಾಡುವುದಾಗಿ ಹೇಳಿ ಕಾಂಗ್ರೆಸ್ …
Read More »ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತನ ನಿವಾಸದ ಮೇಲೆ ಐಟಿ ದಾಳಿ
ಧಾರವಾಡ : ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ವಿನಯ ಕುಲಕರ್ಣಿ ಆಪ್ತ ಪ್ರಶಾಂತ್ ಕೇಕರೆ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜಿಲ್ಲೆಯ ಸಪ್ತಾಪುರ ಬಡಾವಣೆಯ ಕೃಷಿ ಪಾರ್ಕ್‌ನಲ್ಲಿರುವ ಕೇಕರೆ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕಳೆದ ಬಾರಿಯ ಚುನಾವಣೆ ಸಂದರ್ಭದಲ್ಲಿಯೂ ಪ್ರಶಾಂತ್ ಕೇಕರೆ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಚುನಾವಣೆ ಹೊತ್ತಿನಲ್ಲಿ …
Read More »ಬಜರಂಗದಳ ನಿಷೇಧ ಯಾರಿಂದಲೂ ಸಾಧ್ಯವಿಲ್ಲ:B,S.Y.
ಬೆಂಗಳೂರು: ”ಬಜರಂಗದಳ ನಿಷೇಧ ಮಾಡಲು ಯಾವನಿಂದಲೂ ಸಾಧ್ಯವಿಲ್ಲ, ಕಾಂಗ್ರೆಸ್‌ನವರು ಹುಚ್ಚುಹುಚ್ಚಾಗಿ ಮಾತನಾಡುತ್ತಿದಾರೆ, ಜನ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ” ಎಂದು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕೃತ ನಿವಾಸ ಕಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜರಂಗದಳ ನಿಷೇಧ ಮಾಡುವುದಾಗಿ ಕಾಂಗ್ರೆಸ್ ಮೂರ್ಖ ನಿರ್ಧಾರ ತಗೊಂಡಿದೆ. ಕಾಂಗ್ರೆಸ್ನವರ ಈ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಬಜರಂಗದಳವನ್ನು ಯಾವನಿಂದಲೂ ಬ್ಯಾನ್ ಮಾಡೋಕೆ ಸಾಧ್ಯ ಇಲ್ಲ ಹುಚ್ಚುಚ್ಚರ ತರ ಆಡುತ್ತಿರುವ …
Read More »