Breaking News

ರಾಷ್ಟ್ರೀಯ

ಕಾಂಗ್ರೆಸ್ 50 ಜನರ ಮನೆಗಳ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡುವ ಸಾಧ್ಯತೆ ಇದೆ.ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಕಾಂಗ್ರೆಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಮೂವರು ಮುಖಂಡರನ್ನು ಟಾರ್ಗೆಟ್ ಮಾಡಲಾಗಿದೆ.ಮುಖಂಡರ ಮನೆಗಳ ಮೇಲೆ ಲೋಕಾಯುಕ್ತ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸುವ ಮಾಹಿತಿ ಇದೆ. ನಮ್ಮ ಪಕ್ಷದ ಮುಖಂಡರ ಶಕ್ತಿ ತಡೆಯುವ ಪ್ರಯತ್ನ ನಡೆದಿದೆ ಎಂದು ದೂರಿದ್ದಾರೆ. ಸುಮಾರು 50 …

Read More »

ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ.

ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲಾರ, ಚನ್ನಪಟ್ಟಣ ಬೃಹತ್​​ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಮೈಸೂರಿಗೆ ತೆರಳಿ ಮೆಗಾ ರೋಡ್​​ ಶೋ ನಡೆಸಲಿದ್ದಾರೆ. ಕೋಲಾರ/ಮೈಸೂರು: ರಾಜ್ಯದಲ್ಲಿ ಚುನಾವಣೆಯ ಕಾವು‌ ದಿನೇ ದಿನೇ ಹೆಚ್ಚಾಗುತ್ತಿದ್ದು, ಅಭ್ಯರ್ಥಿಗಳ ಪರ ಮತಯಾಚನೆ‌ ಮಾಡಲು ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಲಗ್ಗೆಯಿಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಹ ಮೈಸೂರು, ರಾಮನಗರ, ಚಿನ್ನದ‌ ನಾಡು ಕೋಲಾರಕ್ಕೆ ಭೇಟಿ ನೀಡಿ ಚುನಾವಣೆಯ ರಣಕಹಳೆಯನ್ನು ಮೊಳಗಲಿಸಲು ಮುಂದಾಗಿದ್ದಾರೆ. …

Read More »

ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸೋಲುತ್ತೆ ಪರೋಕ್ಷವಾಗಿ ಒಪ್ಪಿಕೊಂಡ್ರಾ ಜಗ್ಗೇಶ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಮಯ ಹತ್ತಿರವಾದಂತೆ ರಾಜ್ಯ ಚುನಾವಣಾ ಕಣ ರಂಗೇರಿದೆ. ಸಿದ್ದರಾಮಯ್ಯರನ್ನು ವರುಣಾದಲ್ಲಿ ಸೋಲಿಸಲು ಬಿಜೆಪಿ ಎಲ್ಲಾ ಅಸ್ತ್ರಗಳನ್ನು ಪ್ರಯೋಗಿಸಲು ಮುಂದಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಪರವಾಗಿ ನಟ, ಬಿಜೆಪಿ ನಾಯಕ ಜಗ್ಗೇಶ್ ಮತಯಾಚನೆ ಮಾಡಲಿದ್ದಾರೆ.ವರುಣಾದಲ್ಲಿ ಬಿಜೆಪಿ ಪರವಾಗಿ ಮತಯಾಚನೆಗೆ ತೆರಳುವ ಸಂದರ್ಭದಲ್ಲಿ ಮಾತನಾಡಿದ ಜಗ್ಗೇಶ್ ವಿ ಸೋಮಣ್ಣ ಕಾರ್ಯವೈಖರಿಯನ್ನು ಹಾಡಿ ಹೊಗಳಿದರು. ಸೋಮಣ್ಣ ತಮ್ಮ ಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ, …

Read More »

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಂದು ಕಲಘಟಗಿ ಮತ್ತು ಅಳ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ರೋಡ್​ ಶೋ

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಂದು ಕಲಘಟಗಿ ಮತ್ತು ಅಳ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಗರಾಜ ಛಬ್ಬಿ ಪರ ಭರ್ಜರಿ ರೋಡ್​ ಶೋ ನಡೆಸಿ ಮತಯಾಚಿಸಿದರು. ಹುಬ್ಬಳ್ಳಿ: ರಾಜ್ಯ ಹಾಗೂ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರಗಳಿಂದ ಮಾತ್ರ ಕರ್ನಾಟಕದ ಅಭಿವೃದ್ಧಿ ಸಾಧ್ಯ. ಹೀಗಾಗಿ ಮತ್ತೊಮ್ಮೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರವನ್ನು ಡಬಲ್ ವೇಗದಿಂದ ಅಧಿಕಾರಕ್ಕೆ ತರಲು ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ …

Read More »

ಸಿದರಾಮಯ್ಯಗೆ ಸೋಮಣ್ಣ ಸವಾಲು ವರುಣಾದಲ್ಲಿ ಕ್ಷೇತ್ರದಲ್ಲಿ ನೀವು ಮಾಡಿರುವ ಅಭಿವೃದ್ಧಿಯನ್ನು ಇಬ್ಬರೂ ನೋಡೋಣ ಬನ್ನಿ

ಒಂದು ದಿನ ಅಲ್ಲ, ದಿನವೂ ಪ್ರಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಹತಾಶರಾಗಿದ್ದಾರೆ. ಈ ರಾಜ್ಯದ ಮಾಜಿ ಸಿಎಂಗೆ ಮುಜುಗರವಾಗಬಾರದೆಂದು ಸಹಿಸಿಕೊಂಡಿದ್ದೇನೆ – ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ. ಚಾಮರಾಜನಗರ: ವರುಣಾದ ರಸ್ತೆಗಳು, ಕ್ಷೇತ್ರದಲ್ಲಿ ಅವ್ಯವಸ್ಥೆ ಹೇಗಿದೆ ಎಂದು ಸಿದ್ದರಾಮಯ್ಯ ಒಂದು ಬಾರಿ ಕ್ಷೇತ್ರದಲ್ಲಿ ಓಡಾಡಲಿ ಎಂದು ಸಿದ್ದು ಎದುರಾಳಿ, ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು. ಚಾಮರಾಜನಗರದಲ್ಲಿ ಪ್ರಚಾರ ನಡೆಸುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಸಿದ್ದರಾಮಯ್ಯ ಒಂದು ಬಾರಿ ಕ್ಷೇತ್ರದಲ್ಲಿ ಓಡಾಡಲಿ. ಅದೆಷ್ಟು ಚೆನ್ನಾಗಿ …

Read More »

ಕಾಶಿಯ ಜಂಗಮವಾಡಿ ಮಠಕ್ಕೆ ಹೆಚ್ಚಿನ ಬೇಡಿಕೆ

ಭಾರತವು ನಂಬಿಕೆಯ ದಾರದಿಂದ ಬಂಧಿತವಾಗಿದೆ. ಈ ದಾರದ ಒಂದು ತುದಿ ಉತ್ತರ ಭಾರತದಲ್ಲಿದ್ದರೆ ಇನ್ನೊಂದು ತುದಿ ದಕ್ಷಿಣ ಭಾರತದಲ್ಲಿದೆ. ವಾರಣಾಸಿಯ ಜಂಗಮವಾಡಿ ಮಠ ಇದಕ್ಕೆ ಉದಾಹರಣೆಯಾಗಿದ್ದು, ಇದು ವೀರಶೈವ ಲಿಂಗಾಯತರೊಂದಿಗೆ ಸಂಬಂಧ ಹೊಂದಿದೆ. ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವಾಗ ಕಾಶಿಯ ಜಂಗಮವಾಡಿ ಮಠಕ್ಕೆ ಹೆಚ್ಚಿನ ಮಹತ್ವ ಬಂದಿದೆ.ವಾರಣಾಸಿ (ಉತ್ತರಪ್ರದೇಶ): ಧಾರ್ಮಿಕ ಕ್ಷೇತ್ರವಾದ ಕಾಶಿ ಅತ್ಯಂತ ಪುರಾತನ ನಗರ. ಈ ಪ್ರಾಚೀನ ನಗರವಾದ ಬನಾರಸ್‌ನಲ್ಲಿ ಇಂತಹ ಅನೇಕ ಮಠಗಳು ಮತ್ತು ದೇವಾಲಯಗಳಿವೆ. ಇದು …

Read More »

ಕರ್ನಾಟಕ ಸೇರಿದಂತೆ ಇಡೀ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು.

‘ಆಡಳಿತಾರೂಢ ಬಿಜೆಪಿ ಯಾವ ವಿಚಾರ ಇಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ಬರೀ ಭಾವನಾತ್ಮಕ ವಿಚಾರ ಇಟ್ಟುಕೊಂಡು, ಧರ್ಮಾಧಾರಿತ ರಾಜಕಾರಣವನ್ನು ಬಿಜೆಪಿ ಮಾಡುತ್ತಿದ್ದು, ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಿಲ್ಲ” ಎಂದು ವಿಧಾನ ಪರಿಷತ್ ಎಚ್. ವಿಶ್ವನಾಥ್ ಗರಂ ಆದರು.  ವಿಧಾನ ಪರಿಷತ್ ಎಚ್. ವಿಶ್ವನಾಥ್ ಮಾತನಾಡಿದರು. ಮೈಸೂರು: ”ಪದೇ ಪದೆ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರೇ, ನೀವು ರಾಜ್ಯಕ್ಕೆ ನೀಡಿರುವ ಕೊಡುಗೆಯಾದರು ಏನು? ಲಜ್ಜೆಗೆಟ್ಟ ಕರ್ನಾಟಕದ ಬಿಜೆಪಿಯನ್ನು ಮೊದಲು ಸರಿಮಾಡಿ. …

Read More »

ಬೆಂಗಳೂರಿನಲ್ಲಿ ಇಂದು ಪ್ರಧಾನಿ ಮೋದಿ ರೋಡ್ ಶೋ: ಹಲವೆಡೆ ರಸ್ತೆ ನಿರ್ಬಂಧ.. ಪರ್ಯಾಯ ರಸ್ತೆಗಳನ್ನ ಬಳಸುವಂತೆಸಂಚಾರಿ ಪೊಲೀಸರು ಮನವಿ ವಾಹನ ಸವಾರರಿಗೆ

ಪ್ರಧಾನಿ ಮೋದಿ ಅವರು ವಿಧಾನ ಸಭೆ ಚುನಾವಣೆ ಪ್ರಯುಕ್ತ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಹೀಗಾಗಿ ಭದ್ರತಾ ಕಾರಣಕ್ಕಾಗಿ ಹಲವು ಪ್ರದೇಶಗಳಲ್ಲಿ ರಸ್ತೆ ಸಂಚಾರಕ್ಕೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಹಿನ್ನೆಲೆ ಇಂದು ನಗರದ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧವಿರಲಿದೆ.ಮಧ್ಯಾಹ್ನ 2 ರಿಂದ ಸಂಜೆ 7.30ರವರೆಗೆ ಕೆಲ ರಸ್ತೆಗಳಲ್ಲಿ ನಿರ್ಬಂಧವಿರಲಿದ್ದು, ಪರ್ಯಾಯ ರಸ್ತೆಗಳನ್ನ ಬಳಸುವಂತೆ ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.ಯಾವ ರಸ್ತೆಗಳಲ್ಲಿ …

Read More »

ಹಲವು ವರ್ಷಗಳಿಂದಲೂ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗವನ್ನು ಉಳಿಸಿಕೊಳ್ಳುವುದೇ ಜೆಡಿಎಸ್​ಗೆ ದೊಡ್ಡ ಸವಾಲಾಗಿದೆ.

ಹಲವು ವರ್ಷಗಳಿಂದಲೂ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗವನ್ನು ಉಳಿಸಿಕೊಳ್ಳುವುದೇ ಜೆಡಿಎಸ್​ಗೆ ದೊಡ್ಡ ಸವಾಲಾಗಿದೆ.ಬೆಂಗಳೂರು: ಹಳೇ ಮೈಸೂರು ಭಾಗದಲ್ಲಿ ಕಳೆದ ಬಾರಿ ಜೆಡಿಎಸ್​ ಭರ್ಜರಿ ಗೆಲುವು ಗಳಿಸಿತ್ತು. ಆದರೆ, ಈ ಬಾರಿ ಜೆಡಿಎಸ್​ಗೆ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಪ್ರಬಲ ಪೈಪೋಟಿ ಎದುರಾಗಿದೆ.ಹಾಗಾಗಿ ಭದ್ರಕೋಟೆ ಉಳಿಸಿಕೊಳ್ಳುವುದು ಜೆಡಿಎಸ್​ಗೆ ಸವಾಲಾಗಿದೆ ಎಂದೇ ಹೇಳಬಹುದು. ಹೆಚ್​ಡಿ ದೇವೇಗೌಡ ಹಾಗೂ ಹೆಚ್​ಡಿ ಕುಮಾರಸ್ವಾಮಿ ಅವರು ಮತದಾರರನ್ನು ಸೆಳೆಯುವ ಪ್ರಮುಖ ನಾಯಕರು. ಆದ್ರೆ ದೇವೇಗೌಡರಿಗೆ ಆರೋಗ್ಯ ಸಮಸ್ಯೆ ಇರುವುದರಿಂದ …

Read More »

ಯತ್ನಾಳ್ ಹೇಳಿಕೆಗೆಲ್ಲಾ ಉತ್ತರ ಕೊಡಲ್ಲ: ಮಲ್ಲಿಕಾರ್ಜುನ‌ ಖರ್ಗೆ ಮೋದಿ, ಶಾ, ನಡ್ಡಾ ಹೇಳಿಕೆಗಳಿಗೆ ಉತ್ತರಿಸುತ್ತೇನೆ

ಬಿಜೆಪಿ ಸರ್ಕಾರ ಲೂಟೋ ಔರ್ ಬಾಟೋ ಸರ್ಕಾರ ಆಗಿದೆ. ಈ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದೆ ಎಂದು ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು. ಬೆಂಗಳೂರು: ಮೋದಿ ಸಾಹೇಬ್ರು, ನಡ್ದಾ ಸಾಹೇಬ್ರು, ಅಮಿತ್ ಶಾ ಸಾಹೇಬ್ರು ಹೇಳಿಕೆ ಕೊಟ್ರೆ, ಅದಕ್ಕೆ ಪ್ರತಿಕ್ರಿಯೆ ಕೊಡ್ತೇನೆ, ಯತ್ನಾಳ್ ಹೇಳಿಕೆಗೆಲ್ಲಾ ನಾನು ಉತ್ತರ ಕೊಡಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ‌ ಖರ್ಗೆ ತಿಳಿಸಿದ್ದಾರೆ. ಬಸವನಗುಡಿ ಕೈ ಅಭ್ಯರ್ಥಿ ಪರ ಪ್ರಚಾರ ನಡೆಸಿ ಬಳಿಕ …

Read More »