Breaking News

ರಾಷ್ಟ್ರೀಯ

ಯತ್ನಾಳ್ ಹೇಳಿಕೆಗೆಲ್ಲಾ ಉತ್ತರ ಕೊಡಲ್ಲ: ಮಲ್ಲಿಕಾರ್ಜುನ‌ ಖರ್ಗೆ ಮೋದಿ, ಶಾ, ನಡ್ಡಾ ಹೇಳಿಕೆಗಳಿಗೆ ಉತ್ತರಿಸುತ್ತೇನೆ

ಬಿಜೆಪಿ ಸರ್ಕಾರ ಲೂಟೋ ಔರ್ ಬಾಟೋ ಸರ್ಕಾರ ಆಗಿದೆ. ಈ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದೆ ಎಂದು ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು. ಬೆಂಗಳೂರು: ಮೋದಿ ಸಾಹೇಬ್ರು, ನಡ್ದಾ ಸಾಹೇಬ್ರು, ಅಮಿತ್ ಶಾ ಸಾಹೇಬ್ರು ಹೇಳಿಕೆ ಕೊಟ್ರೆ, ಅದಕ್ಕೆ ಪ್ರತಿಕ್ರಿಯೆ ಕೊಡ್ತೇನೆ, ಯತ್ನಾಳ್ ಹೇಳಿಕೆಗೆಲ್ಲಾ ನಾನು ಉತ್ತರ ಕೊಡಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ‌ ಖರ್ಗೆ ತಿಳಿಸಿದ್ದಾರೆ. ಬಸವನಗುಡಿ ಕೈ ಅಭ್ಯರ್ಥಿ ಪರ ಪ್ರಚಾರ ನಡೆಸಿ ಬಳಿಕ …

Read More »

ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ ಆಗಮನ… ಎರಡು ದಿನ ಭರ್ಜರಿ ಪ್ರಚಾರ.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯ ಆಗಮಿಸಿ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ. ಎರಡು ದಿನಗಳ ಈ ಪ್ರವಾಸ ಮುಗಿದ ಎರಡು ದಿನದಲ್ಲಿ ಪ್ರಧಾನಿ ಮೋದಿ ಮೇ.3ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ.ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು 11 ದಿನಗಳಷ್ಟೇ ಬಾಕಿ ಉಳಿದಿದೆ.ಮತದಾರರ ಒಲಿಸಿಕೊಳ್ಳು ಎಲ್ಲ ಪಕ್ಷಗಳು ಕಸರತ್ತು ನಡೆಸುತ್ತಿವೆ. ಈ ಪೈಕಿ ಆಡಳಿತಾರೂಢ ಬಿಜೆಪಿ ಪ್ರಚಾರವನ್ನು ಚುರುಕುಗೊಳಿಸಿದ್ದು, ಈಗಾಗಲೇ ಕೇಂದ್ರ ಮತ್ತು ರಾಜ್ಯ ನಾಯಕರು ಅಭ್ಯರ್ಥಿಗಳ ಪರ ಮತ …

Read More »

ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ: ಅಭ್ಯರ್ಥಿಗಳ ಪರ ಮತಬೇಟೆ

ಕಲಬುರಗಿ ಹಾಗೂ ಯಾದಗಿರಿಯಲ್ಲಿ ಸಿಎಂ ಬೊಮ್ಮಾಯಿ ಶುಕ್ರವಾರ ಅದ್ಧೂರಿ ರೋಡ್ ಶೋ ನಡೆಸಿದರು. ಅಭ್ಯರ್ಥಿಗಳಾದ ತೆಲ್ಕೂರ ಹಾಗೂ ಅಮೀನರೆಡ್ಡಿ ಪರವಾಗಿ ಮತಯಾಚನೆ ಮಾಡಿದರು.ಕಲಬುರಗಿ/ಯಾದಗಿರಿ: ‘ಮೋದಿ ಎಂದರೆ ವಿಷವನ್ನು ನುಂಗಿ ಇಡೀ ದೇಶದ ಹಿತ ಬಯಸುವ ನೀಲಕಂಠನಿದ್ದಂತೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಶುಕ್ರವಾರ ಸೇಡಂ ಪಟ್ಟಣದಲ್ಲಿ ಅಭ್ಯರ್ಥಿ ರಾಜಕುಮಾರ್​ ಪಾಟೀಲ್ ತೆಲ್ಕೂರ ಪರವಾಗಿ ಬೃಹತ್ ರೋಡ್ ಶೋ ಮೂಲಕ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕರ …

Read More »

ಡಿಕೆಶಿ ಭದ್ರಕೋಟೆಯಲ್ಲಿ ತ್ರಿಕೋನ ಸ್ಪರ್ಧೆ!

ರಾಮನಗರದ ಕನಕಪುರದಲ್ಲಿ ಈ ಬಾರಿ ಘಟಾನುಘಟಿ ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದು, ಅವರ ಕುರಿತಾದ ಸಂಪೂರ್ಣ ಸ್ಟೋರಿ ಇಲ್ಲಿದೆ ನೋಡಿ.. ದಶಕಗಳಿಂದ ವಿರೋಧಿಗಳಿಲ್ಲದೇ ಪಾರುಪತ್ಯ ಸಾಧಿಸಿದ್ದ ಡಿಕೆಶಿಗೆ ಟಕ್ಕರ್ ಕೊಡಲು ಬಿಜೆಪಿಯಿಂದ ಸಚಿವ ಆರ್.ಅಶೋಕ್ ಕಣದಲ್ಲಿದ್ದಾರೆ. ಹಾಗೆಯೇ ಸ್ಥಳೀಯ ಜೆಡಿಎಸ್​ ಅಭ್ಯರ್ಥಿಯಾದ ನಾಗರಾಜ್ ಸಂಪ್ರದಾಯಿಕ ಮತಗಳನ್ನು ಸೆಳೆದರೇ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟರೂ ಅಚ್ಚರಿ ಪಡಬೇಕಿಲ್ಲ. ಕನಕಪುರ ಬಂಡೆ ಸೋಲಿಸಲು ಬಿಜೆಪಿ ರಣತಂತ್ರ: ಈ ಬಾರಿ ಕನಕಪುರ ಕ್ಷೇತ್ರದಲ್ಲಿ ಡಿ.ಕೆ ಶಿವಕುಮಾರ್ ಅವರು …

Read More »

ಗೆರೆ ದಾಟಿ ನೀನು ಬರಂಗಿಲ್ಲ, ನಾನು ಬರಲ್ಲ?

ರಾಮನಗರ: ಜೋಡೆತ್ತುಗಳ ಮಧ್ಯೆ ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕನಕಪುರ ಕ್ಷೇತ್ರಕ್ಕೆ ಮಾಜಿ ಸಿಎಂ HDK ಹೋಗುತ್ತಿಲ್ಲ, ಚನ್ನಪಟ್ಟಣಕ್ಕೆ ಡಿ.ಕೆ.ಶಿವಕುಮಾರ್ ಕಾಲಿಡುತ್ತಿಲ್ಲ ಏಕೆ ಎಂದು ಬಿಜೆಪಿ ಗರಂ ಆಗಿದೆ. ಇದನ್ನ ಜನರ ಎದುರು ಸಾಬೀತು ಮಾಡಲು ಬಿಜೆಪಿ ಸಕಲ ಸಿದ್ಧತೆ ನಡೆಸಿದಂತೆ ಕಾಣುತ್ತಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ. ಎಲ್ಲರಿಗೂ ಗೊತ್ತಿರುವಂತೆ ಕನಕಪುರ ಮತ್ತು ಚನ್ನಪಟ್ಟಣ ಭಾಗದಲ್ಲಿಜೆಡಿಎಸ್ಬಲವಾಗಿದೆ. ಜೆಡಿಎಸ್ ಬಿಟ್ಟರೆ ಕಾಂಗ್ರೆಸ್ ಮಾತ್ರ ಅವರ ವಿರುದ್ಧ …

Read More »

ಬೆಚ್ಚಿಬೀಳಿಸುವಂತಿದೆ ಈ ವಿಡಿಯೋ: ಹಾಡಹಗಲೇ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಉತ್ತರಪ್ರದೇಶ ಮಿರ್ಜಾಪುರದ ಕಾಲೇಜೊಂದರಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋ ವೈರಲ್ ಆಗಿದೆ.ಟ್ವಿಟರ್ ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ಸಾಮಾಜಿಕ ಜಾಲತಾಣ ಬಳಕೆದಾರರಾದ ಅರುಣೇಶ್ ಯಾದವ್ ಅವರು “ಅತ್ಯಾಚಾರಿಗಳಿಗೆ ಮುಕ್ತ ಹಸ್ತ ನೀಡಿರುವುದು ನಮ್ಮ ರಾಜ್ಯದ ದುರದೃಷ್ಟಕರ ಘಟನೆ. ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನ ಈ ವೀಡಿಯೊ ವೈರಲ್ ಆಗುತ್ತಿದೆ. ಶಿಕ್ಷಕರೊಬ್ಬರು ಬಲವಂತವಾಗಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ವಿಡಿಯೋವನ್ನ ಉತ್ತರಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮ …

Read More »

ರಾಜ್ಯದಲ್ಲಿ ಇಂದು, ನಾಳೆ ಮೋದಿ ಹವಾ: 2 ದಿನದಲ್ಲಿ 8 ಕಡೆ ಬಿರುಗಾಳಿ ಪ್ರಚಾರ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರ ಭರಾಟೆ ಬಾರಿ ಜೋರಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಪ್ರಚಾರ ಆರಂಭವಾಗಲಿದೆ. ಇಂದು ಬೀದರ್ ಗೆ ಆಗಮಿಸಲಿರುವ ಪ್ರಧಾನಿ ಮೋದಿ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಗಾವಿ ಜಿಲ್ಲೆ ಕುಡಚಿ ಹಾಗೂ ವಿಜಯಪುರದಲ್ಲಿ ನಡೆಯುವ ಸಮಾವೇಶಗಳಲ್ಲಿ ಭಾಗವಹಿಸಲಿರುವ ಮೋದಿ ಸಂಜೆ ಬೆಂಗಳೂರಿನ ಸುಂಕದಕಟ್ಟೆ ಸಮೀಪ ರೋಡ್ ಶೋ ನಡೆಸಿ ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಂಗಳೂರಿನಿಂದ ಕೋಲಾರಕ್ಕೆ ತೆರಳಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನಂತರ …

Read More »

ಬಿಜೆಪಿ ಸರ್ಕಾರ ಲೂಟೋ ಔರ್ ಬಾಟೋ ಸರ್ಕಾರ ಆಗಿದೆ. ಈ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರವಾಗಿದೆ ಎಂದು ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.

ಬೆಂಗಳೂರು: ಮೋದಿ ಸಾಹೇಬ್ರು, ನಡ್ದಾ ಸಾಹೇಬ್ರು, ಅಮಿತ್ ಶಾ ಸಾಹೇಬ್ರು ಹೇಳಿಕೆ ಕೊಟ್ರೆ, ಅದಕ್ಕೆ ಪ್ರತಿಕ್ರಿಯೆ ಕೊಡ್ತೇನೆ, ಯತ್ನಾಳ್ ಹೇಳಿಕೆಗೆಲ್ಲಾ ನಾನು ಉತ್ತರ ಕೊಡಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ‌ ಖರ್ಗೆ ತಿಳಿಸಿದ್ದಾರೆ. ಬಸವನಗುಡಿ ಕೈ ಅಭ್ಯರ್ಥಿ ಪರ ಪ್ರಚಾರ ನಡೆಸಿ ಬಳಿಕ ಮಾತನಾಡಿದ ಅವರು, ಸೋನಿಯಾ ಗಾಂಧಿ ಬಗ್ಗೆ ಯತ್ನಾಳ್ ವಿಷ ಕನ್ಯೆ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಯಾರೋ ಯತ್ನಾಳ್ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡಲ್ಲ. ಯತ್ನಾಳ್ ರಾಜ್ಯ ಮಟ್ಟದ ನಾಯಕ …

Read More »

ಗಾಂಧಿ ಅವರ ಮಾನನಷ್ಟ ಮೊಕದ್ದಮೆಯ ವಿಚಾರಣೆ ಏ.29 ರಂದು ಗುಜರಾತ್ ಹೈಕೋರ್ಟ್​ನಲ್ಲಿ ನಡೆಯಲಿದೆ.

ರಾಹುಲ್ ಗಾಂಧಿ ಅವರ ಮಾನನಷ್ಟ ಮೊಕದ್ದಮೆಯ ವಿಚಾರಣೆ ಏ.29 ರಂದು ಗುಜರಾತ್ ಹೈಕೋರ್ಟ್​ನಲ್ಲಿ ನಡೆಯಲಿದೆ. ಮೋದಿ ಉಪನಾಮದ ಬಗ್ಗೆ ನೀಡಿದ ಹೇಳಿಕೆಯ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿ ಎಂದು ಕೆಳಹಂತದ ನ್ಯಾಯಾಲಯ ಈಗಾಗಲೇ ತೀರ್ಪು ನೀಡಿದೆ. ನವದೆಹಲಿ : ಗುಜರಾತ್ ಹೈಕೋರ್ಟ್ ರಾಹುಲ್ ಗಾಂಧಿ ಅವರ ಮಾನನಷ್ಟ ಮೊಕದ್ದಮೆಯ ಬಗ್ಗೆ ನಾಳೆ ಅಂದರೆ ಏಪ್ರಿಲ್ 29 ರಂದು ವಿಚಾರಣೆ ನಡೆಸಲಿದೆ. ರಾಹುಲ್ ಗಾಂಧಿ ಅವರ ಅರ್ಜಿಯನ್ನು ಸೂರತ್ ಸೆಷನ್ಸ್ ಕೋರ್ಟ್ …

Read More »

ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ಬರಲ್ಲ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕರ್ತರಿಗೆ ಸುಳ್ಳು ಹೇಳಿ ಪ್ರಚಾರ ಮಾಡಲು ತಿಳಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ರಾಯಚೂರು: ಕಾಂಗ್ರೆಸ್ ಗ್ಯಾರಂಟಿಯ ಬಗ್ಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಬಿಜೆಪಿ ಕಾರ್ಯಕರ್ತರ ಜೊತೆ ನಡೆದ ಆನ್ ಲೈನ್​ ಸಮಾವೇಶದಲ್ಲಿ ಹಗುರವಾಗಿ ಮಾತನಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕಾರ್ಡ್​ನ ಭರವಸೆಗಳು ಈಡೇರಿಸಲು ಆಗಲ್ಲ ಎಂದು ಹತಾಶೆಗೊಂಡು ಈ …

Read More »