Breaking News

ರಾಷ್ಟ್ರೀಯ

ಅಮಿತ್ ಶಾ ಈ ಜಿಲ್ಲೆಗಳಲ್ಲಿ ಎರಡು ದಿನ ಅಬ್ಬರದ ಪ್ರಚಾರ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದಿನಿಂದ ಎರಡು ದಿನಗಳ ಕಾಲ ರಾಜ್ಯದಲ್ಲಿ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.ಇಂದು ಧಾರವಾಡ, ಗದಗ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆಸಿದ್ರೇ, ನಾಳೆ ಉಡುಪಿ, ಮಡಿಕೇರಿ, ಮಂಗಳೂರಿನಲ್ಲಿ ಅರ್ಭಟ ಮೆರೆಯಲಿದ್ದಾರೆ.   ಈ ಕುರಿತಂತೆ ಅಧಿಕೃತ ಪ್ರವಾಸದ ವಿವರವನ್ನು ಬಿಜೆಪಿಯಿಂದ ಬಿಡುಗಡೆ ಮಾಡಲಾಗಿದ್ದು, ದಿನಾಂಕ 28-04-2023ರಂದು ನವದೆಹಲಿಯಿಂದ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಧಾರವಾಡದ ಅಣ್ಣಿಗೇರಿಗೆ ಹೆಲಿಕ್ಯಾಪ್ಟರ್ …

Read More »

ಚುನಾವಣಾ ಅಕ್ರಮ : ರಾಜ್ಯಾದ್ಯಂತ 286 ಕೋಟಿ ರೂ. ಮೌಲ್ಯದ ನಗದು, ವಸ್ತುಗಳು ಜಪ್ತಿ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ರಾಜ್ಯಾದ್ಯಂತ ಈವರೆಗೆ 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಗುರುವಾರ ಒಂದೇ ದಿನ ವಿವಿಧ ತನಿಖಾ ಸಂಸ್ಥೆಗಳು 4.60 ಕೋಟಿ ರೂ. ನಗದನ್ನು ಜಪ್ತಿ ಮಾಡಿವೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ರಾಜ್ಯದಲ್ಲಿ ಒಟ್ಟು 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ 1.91 ಕೋಟಿ …

Read More »

ಕಾಂಗ್ರೆಸ್ ಅಧ್ಯಕ್ಷ ಡಿಕೆಶಿ ಗೂಂಡಾಗಿರಿ ಮಾಡುತ್ತಿದ್ದರು: ಶಾಸಕ ಯತ್ನಾಳ್ ವಾಗ್ದಾಳಿ

ಬೆಳಗಾವಿ : ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್​ ಗೂಂಡಾಗಿರಿ ಮಾಡ್ತಿದ್ದರು. ಈಗ ಅವರ ನಡೆ ನುಡಿ ನೋಡಿದ್ರೆ ಭಯ ಬರುತ್ತೆ. ಅಂಥವರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೂರು ನೀಡಿದ್ದಾರೆ. ಡಿ. ಕೆ ಶಿವಕುಮಾರ್ ನಡವಳಿಕೆ ನೋಡಿದರೆ ಈಗಲೇ ಜನರಿಗೆ ಭಯದ ವಾತಾವರಣ ಇದೆ. ಇನ್ನು ಅವರು ಮುಖ್ಯಮಂತ್ರಿ ಆದರೆ ಗತಿ ಏನು? ಇಂಥವರಿಗೆ ಅಮಿತ್ ಶಾ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ವಿಜಯಪುರ ಬಿಜೆಪಿ‌ …

Read More »

ಬಿಜೆಪಿಯವರ ವಾರಂಟಿಯೇ ಮುಗಿದಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ರಾಯಚೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್​​ ಘೋಷಿಸಿರುವ ಗ್ಯಾರಂಟಿ ಕಾರ್ಡ್​ ಎಕ್ಸ್​ಪೈರಿ ಆಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಬಿಜೆಪಿಯವರ ವಾರಂಟಿಯೇ ಮುಗಿದಿದೆ ಎಂದು ತಿರುಗೇಟು ನೀಡಿದ್ದಾರೆ.   ಜಿಲ್ಲೆಯ ಮಾನವಿ ಪಟ್ಟಣಕ್ಕೆ ಕಾಂಗ್ರೆಸ್ ಅಭ್ಯರ್ಥಿ ಜಿ.ಹಂಪಯ್ಯ ನಾಯಕ ಪರವಾಗಿ ಪ್ರಚಾರಕ್ಕೆ ಆಗಮಿಸಿದ ವೇಳೆ ಹೆಲಿಪ್ಯಾಡ್​​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಳೆದ ಬಾರಿ ಚುನಾವಣೆಯಲ್ಲಿ 600 ಭರವಸೆಗಳನ್ನು ನೀಡಿದ್ದರು. ಇದರಲ್ಲಿ ಇವರು …

Read More »

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಬರೆಯುವವರಿಗೂ ಸಿಇಟಿ ಪರೀಕ್ಷೆಗೆ ಅವಕಾಶ..!

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಮೇ 20 ಹಾಗೂ 21ರಂದು ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam) ನಡೆಯಲಿದ್ದು, ಪಿಯುಸಿ ಪೂರಕ ಪರೀಕ್ಷೆ ಬರೆಯಲು ಉದ್ದೇಶಿಸಿರುವವರು ಕೂಡ ಸಿಇಟಿ ಪರೀಕ್ಷೆ ಬರೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಸಿಇಟಿ ಪರೀಕ್ಷೆ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ, ಮೇ 20 ಮತ್ತು …

Read More »

‘ಶಿವಾಜಿ ಸುರತ್ಕಲ್ 2’ಗೆ ಐಪಿಎಸ್ ಅಧಿಕಾರಿಗಳಿಂದ ಬಹುಪರಾಕ್

ನಟ ರಮೇಶ್ ಅರವಿಂದ್ ಅಭಿನಯದ ಶಿವಾಜಿ ಸುರತ್ಕಲ್ 2 ಸಿನಿಮಾ ವೀಕ್ಷಿಸಿದ ರಾಜ್ಯದ ಗಣ್ಯ ವ್ಯಕ್ತಿಗಳು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟ ರಮೇಶ್ ಅರವಿಂದ್ ಡಿಟೆಕ್ಟಿವ್‌ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಶಿವಾಜಿ ಸುರತ್ಕಲ್ 2 ದಿ ಮಿಸ್ಟೀರಿಯಸ್ ಕೇಸ್ ಆಫ್ ಮಾಯಾವಿ’ ಚಲನಚಿತ್ರವು ಎರಡು ವಾರಗಳ ಯಶಸ್ವಿ ಓಟದ ನಂತರ ಭರದಿಂದ ಮೂರನೇ ವಾರಕ್ಕೆ ಕಾಲಿಡುತ್ತಿದೆ. ಸಂಭ್ರಮದ ವಿಚಾರ ಏನೆಂದರೆ ಹಲವು ಉನ್ನತ ಮಟ್ಟದ ಸಾಧಕರು ಚಿತ್ರವನ್ನು ನೋಡಿ ಅಪಾರ ಮೆಚ್ಚುಗೆ …

Read More »

ಹು-ಧಾ ಮಹಾನಗರ ಪಾಲಿಕೆ ಮಾಜಿ ಮೇಯರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

ಹುಬ್ಬಳ್ಳಿ : ರಾಜ್ಯದಲ್ಲಿ ಚುನಾವಣಾ ದಿನಾಂಕ ಘೋಷಣೆಯಾದಾಗಿನಿಂದ ಆಯಾ ಪಕ್ಷಗಳ ಮುಖಂಡರ ಪಕ್ಷಾಂತರ ಪರ್ವ ಜೋರಾಗಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಜಗದೀಶ್​ ಶೆಟ್ಟರ್​ ಅವರು ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದರು. ಇದರ ಬೆನ್ನಲ್ಲೇಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಾಜಿ ಮೇಯರ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಪ್ರಕಾಶ ಕ್ಯಾರಕಟ್ಟಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ನಗರದ ಕುಸುಗಲ್ ರಸ್ತೆಯಲ್ಲಿನ ಶ್ರೀನಿವಾಸ್ ಗಾರ್ಡನ್​ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …

Read More »

ಜಸ್ಟ್ 25 ಸಾವಿರ‌ ರೂ. ಕೊಡಿ : ಮತದಾರರ ಡಿಟೈಲ್ಸ್ ಕೊಡ್ತೇವೆ ಎಂದಿದ್ದ ಅನಾಮಧೇಯ ಕಂಪನಿ ವಿರುದ್ಧ ಕೇಸ್

ಬೆಂಗಳೂರು : ಮತದಾರರ ವೈಯಕ್ತಿಕ ಮಾಹಿತಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಚಿಲುಮೆ ಸಂಸ್ಥೆಯ ಅವ್ಯವಹಾರ ಮರೆಯಾಗುವ‌ ಮುನ್ನವೇ ಮತ್ತೊಂದು ಕಂಪೆನಿಯು ಇದೇ‌ ಮಾದರಿಯಲ್ಲಿ ಮಾಹಿತಿ ಪಡೆದು ಚುನಾವಣಾ ಅಭ್ಯರ್ಥಿಗಳಿಗೆ ಅನಾಮಧೇಯ ಕಂಪೆನಿಯು ಮಾರಾಟ ಮಾಡುತ್ತಿರುವ ಜಾಲ ಬೆಳಕಿಗೆ ಬಂದಿದೆ.   25 ಸಾವಿರ ಕೊಟ್ಟರೆ‌ ಸಾಕು ನಿಮ್ಮ ಕ್ಷೇತ್ರದಲ್ಲಿ ಮತದಾರರ ಮಾಹಿತಿಯನ್ನು ನಾವು ನಿಮಗೆ ಕೊಡುತ್ತೇವೆ.‌ ಇಲ್ಲಿ ಲಕ್ಷಾಂತರ ಮತದಾರರ ಮಾಹಿತಿಯನ್ನು ಕೇವಲ 25 ಸಾವಿರಕ್ಕೆ ಮಾರಾಟ ಮಾಡುವುದಾಗಿ ಹೇಳಿದ್ದ ಅನಾಮಧೇಯ ವೆಬ್​ಸೈಟ್​ …

Read More »

ವಿಷದ ಹಾವಿಗೆ ಪ್ರಧಾನಿ ಮೋದಿಯವರನ್ನು ಹೋಲಿಸಿದ ಮಲ್ಲಿಕಾರ್ಜುನ ಖರ್ಗೆ

ಗದಗ: ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ವಾಕ್ಪ್ರಹಾರ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರನ್ನು ವಿಷದ ಹಾವಿಗೆ ಹೋಲಿಕೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನರೇಗಲ್ ನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರು ವಿಷದ ಹಾವು ಇದ್ದಂತೆ. ಹಾವಿನ ವಿಷ ಸ್ವಲ್ಪ ತಾಗಿದರೂ ಸತ್ತು ಹೋಗ್ತಾರೆ. ಹಾಗಾಗಿ ರಾಜ್ಯಕ್ಕೆ ನುಗ್ಗಿರುವ ವಿಷದ ಹಾವು …

Read More »

ಚುನಾವಣೆ ನಡೆಸುತ್ತಿರುವುದುಚುನಾವಣಾ ಆಯೋಗವೋ? BJP ಪಕ್ಷವೋ? : ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು:ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದುಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಚೆ ಬಿಜೆಪಿ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಅಭ್ಯರ್ಥಿಗಳು ಹಾಗೂ ಚುನಾವಣೆ ಏಜಂಟರಿಗೆ ಬರೆದ ಪತ್ರದ ಕುರಿತು ಪ್ರಸ್ತಾಪಿಸಿ ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ? ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಪ್ರಶ್ನಿಸಿದ್ದಾರೆ. …

Read More »