Breaking News

ರಾಷ್ಟ್ರೀಯ

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಬೇಕು: B.S.Y.

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಯಾಚಿಸಬೇಕು: ಬಿಎಸ್ ವೈ ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವರುಣಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸಿದ್ದರಾಮಯ್ಯನವರು ಲಿಂಗಾಯುತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ, ಅವರು ರಾಜ್ಯದ ಜನರಿಗೆ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕ್ಷಮೆ ಯಾಚಿಸುವಂತೆ ಸಿದ್ದರಾಮಯ್ಯನವರಿಗೆ ಒತ್ತಾಯಿಸಿದರು.

Read More »

ಯೋಗಿ ಆದಿತ್ಯನಾಥ ಅವರಿಗೆಜೀವ ಬೆದರಿಕೆ

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಕರೆ ಬಂದಿದ್ದು ಅವರ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ. 112 ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆ ಕರೆ ಮಾಡಿದ್ದು ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಕರೆ ಮಾಡಿದ ವ್ಯಕ್ತಿ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಒಂದು ವಾರದ ಹಿಂದಷ್ಟೇ ಯೋಗಿ ಆದಿತ್ಯನಾಥ ಅವರಿಗೆ ವ್ಯಕ್ತಿಯೊಬ್ಬ ಜಾಲತಾಣದಲ್ಲಿ ಜೀವಬೆದರಿಕೆ ಒಡ್ಡಿದ್ದು ಆತನನ್ನು …

Read More »

ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ್ ವಿಧಿವಶ

ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ್ ವಿಧಿವಶರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಇನಾಮದಾರ್, ಮಣಿಆಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

Read More »

ಮ್ಮ ಸರ್ಕಾರ ಬಂದ್ರೆ ಕಬ್ಬಿಗೆ ಏಕರೂಪ ದರ ನಿಗದಿ: ರಾಹುಲ್ ಗಾಂಧಿ ಭರವಸೆ

ಬೆಳಗಾವಿ: ”ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದರೆ, ಕಬ್ಬಿಗೆ ಏಕರೂಪದ ದರ ನಿಗದಿ ಮಾಡಲಾಗುವುದು. ಅದು ಈಗಿರುವ ದರಕ್ಕಿಂತ ಅತಿ ಹೆಚ್ಚಾಗಿರುತ್ತದೆ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರವಸೆ ನೀಡಿದರು. ರಾಮದುರ್ಗ ಪಟ್ಟಣದಲ್ಲಿ ಸೋಮವಾರ ರೈತರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ”ಕಬ್ಬು ಬೆಳೆ ದರ ಹೆಚ್ಚಳ ಮಾತ್ರವಲ್ಲ, ನಿಮ್ಮ ಸಮಸ್ಯೆಗಳ ಪರಿಹಾರಕ್ಕಾಗಿಯೂ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ. ರೈತರ ಆದಾಯ ದ್ವಿಗುಣ ಮಾಡಲು ಯತ್ನಿಸುತ್ತೇವೆ” ಎಂದರು. ”ಸಕ್ಕರೆ ಕಾರ್ಖಾನೆಗಳು ಕಬ್ಬಿಗೆ …

Read More »

ಸಿದ್ದರಾಮಯ್ಯ ಹೇಳಿಕೆಯಿಂದ ಮತ ಬರುತ್ತೆ ಅಂತಾದರೆ ಬಿಜೆಪಿಯವರು ಕೆಲಸ ಮಾಡಿಲ್ಲ ಎಂದರ್ಥ: ಮಲ್ಲಿಕಾರ್ಜುನ ಖರ್ಗೆ

ಮಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾತಿನಿಂದ ಬಿಜೆಪಿಗೆ ಮತ ಬರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.   ನಗರದ ಮೇರಿಹಿಲ್​ನಲ್ಲಿರುವ ಹೆಲಿಪ್ಯಾಡ್​ನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಹೇಳಿಕೆಯಿಂದ ಬಿಜೆಪಿಗೆ ಮತ ಬರುತ್ತದೆ ಎಂದರೆ ಇಲ್ಲಿಯವರೆಗೆ ಬಿಜೆಪಿಯವರು ಕೆಲಸಮಾಡಿಲ್ಲ ಎಂದು ಅರ್ಥ. ಅವರು ಕೆಲಸದಿಂದ ಬರುತ್ತದೆ ಎಂದು ಹೇಳಿಲ್ಲ. ಸಿದ್ದರಾಮಯ್ಯ ಅವರ ಹೇಳಿಕೆಯಿಂದ ಮತ …

Read More »

16 ಕ್ಷೇತ್ರಗಳಲ್ಲಿ 16ಕ್ಕೂ ಅಧಿಕ ಅಭ್ಯರ್ಥಿಗಳು ಸ್ಪರ್ಧೆ: ಆ ಕ್ಷೇತ್ರಗಳಲ್ಲಿ ಎರಡೆರಡು ಮತಯಂತ್ರ ಬಳಕೆ

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 16 ಕ್ಷೇತ್ರಗಳಲ್ಲಿ 16ಕ್ಕೂ ಹೆಚ್ಚಿನ ಅಭ್ಯರ್ಥಿಗಳು ಸ್ಪರ್ಧಿಸಲಿರುವ ಕಾರಣ ಆ ಕ್ಷೇತ್ರಗಳಲ್ಲಿ ಎರಡೆರಡು ಇವಿಎಮ್​ಗಳನ್ನು ಬಳಸಲಾಗುತ್ತಿದೆ. ಬೆಂಗಳೂರು: ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ 16 ಕ್ಷೇತ್ರಗಳಲ್ಲಿ 2 ಮತಯಂತ್ರಗಳನ್ನು ಬಳಸಲಾಗುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ನಾಮಪತ್ರ ಹಿಂಪಡೆಯಲು ಸೋಮವಾರ ಕೊನೆಯ ದಿ‌ನವಾಗಿತ್ತು. ಅದರಂತೆ ಸೋಮವಾರ 517 ಅಭ್ಯರ್ಥಿಗಳು ತಮ್ಮ ನಾಮಪತ್ರ ವಾಪಸು ಪಡೆದು ಕಣದಿಂದ ಹಿಂದೆ ಸರಿದ್ದಾರೆ. ಆ ಮೂಲಕ ಸದ್ಯ ಕಣದಲ್ಲಿ ಒಟ್ಟು 2,613 …

Read More »

ಮೋದಿ, ಯೋಗಿಯಿಂದ ನಡೆಯಲಿದೆ ರಾಜ್ಯದಲ್ಲಿ ಚುನಾವಣಾ ಪ್ರಚಾರ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಕಣ ರಂಗೇರಿದ್ದು, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಆಗಮಿಸುತ್ತಿದ್ದು, ರೋಡ್ ಶೋ, ಸಾರ್ವಜನಿಕ ಸಭೆ, ಮನೆ ಮನೆ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಏಪ್ರಿಲ್ 29 ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಿಗದಿಯಾಗಿದೆ. ನಗರದ ಮಾಗಡಿ ರಸ್ತೆ ನೈಸ್ ಜಂಕ್ಷನ್ ನಿಂದ ಸುಂಕದಕಟ್ಟೆ ತನಕ …

Read More »

ಸಂಸತ್ತಿನಲ್ಲಿ ನನಗೆ ಕಣ್ಣೀರು ಹಾಕಿಸಿದ ವ್ಯಕ್ತಿಗೆ ನಾನು ಕಣ್ಣೀರು ತರಿಸಬೇಕು

ತುಮಕೂರು: ಸಂಸತ್ತಿನಲ್ಲಿ ಕಣ್ಣೀರು ಹಾಕಿಸಿದ ನಾಯಕನಿಗೆ ಕಣ್ಣೀರು ತರಿಸಿದರಷ್ಟೇ ತನ್ನ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಹೇಳಿದರು. ಜಿಲ್ಲೆಯ ಮಧುಗಿರಿಯಲ್ಲಿ ಮಾತನಾಡಿದ ಅವರು, ನಾನು ಹಿಂದೆ ನಡೆದಿದ್ದನ್ನು ಮೆಲುಕು ಹಾಕಿ ನೋಡಲೂ ಹೋಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದುಕೊಂಡಿರಲಿಲ್ಲ. ಚುನಾವಣಾ ರಾಜಕೀಯ ಸಾಕಾಗಿದೆ ಅಂತಾ ಹಿಂದೆಯೇ ಹೇಳಿದ್ದೆ. ತುಮಕೂರಿನ ಕೆಲವು ಮುಖಂಡರು ನನ್ನನ್ನು ಬಲಿಪಶು ಮಾಡಿದ್ರು ಅಂತಾ ಹೇಳಲ್ಲ. ಅವರ ಹೆಸರು ಕೂಡ …

Read More »

ತಮ್ಮ ಕ್ಷೇತ್ರದ ಜನರಿಗೆ ಬಾಂಡ್‌ ಪೇಪರ್ ವಿತರಿಸಿದ ಅಭ್ಯರ್ಥಿ

ಬೆಂಗಳೂರು : ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾದ ಅಶ್ವತ್‌ ಕುಮಾರ್‌ ತಮ್ಮ ಕ್ಷೇತ್ರದ ಮತದಾರರಿಗೆ ಪ್ರಚಾರದ ಕರಪತ್ರ ಹಂಚುವ ಬದಲು ಬಾಂಡ್‌ ಪೇಪರ್‌ ಹಂಚುತ್ತಿದ್ದಾರೆ. ಈ ಮೂಲಕ ತಮ್ಮನ್ನ ಆಯ್ಕೆ ಮಾಡಿದ್ರೆ ನಿಮಗೆ ನಾನೇನು ಮಾಡಿಕೊಡ್ತೇನೆ ಅನ್ನೋದನ್ನ ಬಾಂಡ್‌ ಪೇಪರ್‌ನಲ್ಲಿ ಮುದ್ರಿಸಿ ಅದ್ರಲ್ಲಿ ತಮ್ಮ ಸಹಿ ಹಾಕಿ ಎಲ್ಲರಿಗೂ ವಿತರಿಸುತ್ತಿದ್ದಾರೆ. ಅಲ್ಲದೇ ಇದಕ್ಕೆ ತಪ್ಪಿ ನಡೆದ್ರೆ ಮತದಾರರು ಪಕ್ಷದ ವರಿಷ್ಠರಿಗೆ ದೂರು ನೀಡಬಹುದು. ಶಿಸ್ತುಕ್ರಮಕ್ಕೆ ಬದ್ಧನಾಗಿದ್ದು, …

Read More »

65 ಲಕ್ಷ ರೂಪಾಯಿ ವಶಪಡಿಸಿಕೊಂಡ ಪೊಲೀಸ್​​​​ ಅಧಿಕಾರಿಗಳು

ಗೋಕಾಕ : ಕೆಎಸ್‌ಆರ್​ಟಿಸಿ ಬಸ್​ನಲ್ಲಿ ಯಾವುದೇ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಣವನ್ನು ಪೊಲೀಸ್​​​​ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ರಾತ್ರಿ ನಡೆದಿದೆ   ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪರಾನಟ್ಟಿ ಚಕ್ ಪೋಸ್ಟ್​ನಲ್ಲಿ ದಾಖಲೆ ಇಲ್ಲದ 65 ಲಕ್ಷ ರೂಪಾಯಿ ಹಣವನ್ನು ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕೆಎಸ್‌ಆರ್​ಟಿಸಿ ಬಸ್ ಬೆಳಗಾವಿಯಿಂದ ಔರಾದಗೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ಹಣ ಪತ್ತೆಯಾಗಿದೆ.ಚುನಾವಣಾ ಪೊಲೀಸ್​ ಅಧಿಕಾರಿಗಳು ಬಸ್ ತಪಾಸಣೆ …

Read More »