Breaking News

ರಾಷ್ಟ್ರೀಯ

ಕೈ ಹಿಡಿದ ವಿಶ್ವನಾಥ್ ಪಾಟೀಲ್; ಆಣೆಕಟ್ಟು ಒಡೆದು ನೀರು ಹರಿದು ಬರುತ್ತಿರುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ; ಡಿ.ಕೆ ಶಿವಕುಮಾರ್

ಬೆಂಗಳೂರು: ‘ಬಿಜೆಪಿ ಪಕ್ಷದ ಆಣೆಕಟ್ಟು ಒಡೆದಿದ್ದು, ಅದರ ನಾಯಕರೆಲ್ಲರೂ ನೀರಿನಂತೆ ಹರಿದು ಬರುತ್ತಿರುವುದಕ್ಕೆ ಮೂರು ಬಾರಿ ಶಾಸಕರಾಗಿದ್ದ ವಿಶ್ವನಾಥ್ ಪಾಟೀಲ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವುದೇ ಸಾಕ್ಷಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿಗೆ ಕುಟುಕಿದ್ದಾರೆ ಸದಾಶಿವನಗರ ನಿವಾಸದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಬಿಜೆಪಿ ನಾಯಕ ಶಿವಾನಂದ ಪಾಟೀಲ್, ಅರವಿಂದ ಚೌಹಾಣ್ ಸೇರಿದಂತೆ ಅನೇಕ ನಾಯಕರನ್ನು ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಸಂವಹನ …

Read More »

ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಸವದತ್ತಿ: ಭಾರೀ ಕುತೂಹಲ ಕೆರಳಿಸಿದ್ದ ಸವದತ್ತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಅಂಗೀಕಾರವಾಗಿದೆ. ರತ್ನಾ ಮಾಮನಿ 2018ರ ಹಳೆಯ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಆಪ್ ಅಭ್ಯರ್ಥಿ ಬಾಪುಗೌಡ ಪಾಟೀಲ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ವಿಚಾರಣೆ ಆರಂಭವಾಗಿತ್ತು. ವಿಚಾರಣೆಯ ನಂತರ ಚುನಾವಣಾಧಿಕಾರಿ ಡಾ.ರಾಜೀವ ಕೊಲೇರ್ ತೀರ್ಪು ನೀಡಿದ್ದಾರೆ.

Read More »

ಲಂಚ ಪಡೆಯುತ್ತಿದ್ದ ಆರೋಗ್ಯ ಅಧೀಕ್ಷಕನ ಬಂಧನ

ಚೆನ್ನೈ: ನರ್ಸಿಂಗ್ ವಿದ್ಯಾರ್ಥಿಗಳನ್ನು ತರಬೇತಿಗೆ ಕಳುಹಿಸಲು ಲಂಚ ಪಡೆದಿದ್ದ ಆರೋಗ್ಯ ಅಧೀಕ್ಷಕರೊಬ್ಬರನ್ನು ಬಂಧಿಸಲಾಗಿದೆ. ತಮಿಳುನಾಡಿನ ವೆಲ್ಲೂರಿನಲ್ಲಿ ಈ ಘಟನೆ ನಡೆದಿದೆ. ವಿಜಿಲೆನ್ಸ್‌ ಗೆ ಬಂದ ನರ್ಸಿಂಗ್ ಸಂಸ್ಥೆಯೊಂದರ ದೂರು ಆಧರಿಸಿ ಜಿಲ್ಲಾ ಆರೋಗ್ಯ ಅಧೀಕ್ಷಕ ಕೃಷ್ಣಮೂರ್ತಿ ಅವರನ್ನು ಬಂಧಿಸಲಾಗಿದೆ. ಎಲ್ಲ ನರ್ಸಿಂಗ್ ಸಂಸ್ಥೆಗಳಲ್ಲಿ ಮೂರು ತಿಂಗಳ ಆಸ್ಪತ್ರೆಯಲ್ಲಿ ತರಬೇತಿ ಕಡ್ಡಾಯವಾಗಿದ್ದು ಇದಕ್ಕೆ ಜಿಲ್ಲಾ ಆರೋಗ್ಯ ಅಧೀಕ್ಷಕರು ಅನುಮತಿ ನೀಡಬೇಕು. ಈ ಅನುಮತಿ ನೀಡಲು ಕೃಷ್ಣಮೂರ್ತಿ ಲಂಚ ಕೇಳಿದ್ದ ಬಗ್ಗೆ ವೆಲ್ಲೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ …

Read More »

ಪರಸ್ಪರ ಹೆಗಲ ಮೇಲೆ ಕೈ ಹಾಕಿ ಫೋಟೋಗೆ ಪೋಸ್ ನೀಡಿದ ಡಿ.ಕೆ.ಶಿವಕುಮಾರ್-ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಖಾಸಗಿ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪರಸ್ಪರ ಹೆಗಲ ಮೇಲೆ ಕೈ ಹಾಕಿಕೊಂಡು ಫೋಟೋಗೆ ಪೋಸ್ ನೀಡಿದ ಆತ್ಮೀಯ ಕ್ಷಣಗಳು ಭಾರಿ ವೈರಲ್ ಆಗಿವೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಪರಸ್ಪರ ಹೆಗಲಮೇಲೆ ಕೈ ಹಾಕಿಕೊಂಡು ಫೋಟೋಗಳಿಗೆ ಪೋಸ್ ನೀಡಿದ್ದಾರೆ. ಈ ಮೂಲಕ ವಿರೋಧಿಗಳಿಗೆ ಒಗ್ಗಟ್ಟಿನ ಸಂದೇಶವನ್ನು ರವಾನಿಸಿದ್ದಾರೆ.

Read More »

PUC Results 2022-23| ವಿಜ್ಞಾನದಲ್ಲಿ ಕೌಶಿಕ್‌, ಸುರಭಿ ರಾಜ್ಯಕ್ಕೇ ಪ್ರಥಮ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಹೊರಬಿದ್ದಿದ್ದು, ವಿಜ್ಞಾನ ವಿಭಾಗದಲ್ಲಿ ಶ್ರೀನಿವಾಸಪುರ ಪಟ್ಟಣದ ಗಂಗೋತ್ರಿ ಪಿಯು ಕಾಲೇಜಿನ ಎಸ್.ಎಂ‌.ಕೌಶಿಕ್ ಮತ್ತು ಬೆಂಗಳೂರಿನ ಆರ್‌.ವಿ ಪಿಯು ಕಾಲೇಜಿನ ಸುರಭಿ ಅವರು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.   ಇಬ್ಬರೂ 600ಕ್ಕೆ 596 ಅಂಕಗಳನ್ನು ಪಡೆದುಕೊಂಡಿದ್ದಾರೆ. ಈ ಬಾರಿ 74.67 ಫಲಿತಾಂಶ ಇದೇ ಮೊದಲ ಬಾರಿಗೆ ಪಿಯುಸಿಯಲ್ಲಿ ಶೇ 74.67 ಫಲಿತಾಂಶ ಲಭ್ಯವಾಗಿದೆ. 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಅವರಲ್ಲಿ 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಫಲಿತಾಂಶದಲ್ಲಿ …

Read More »

ರೌಡಿಗೆ ಕೈ ಮುಗಿತಾರೆ, ಭ್ರಷ್ಟರಿಗೆ ಕರೆ ಮಾಡ್ತಾರೆ: ಮೋದಿ ವಿರುದ್ಧ ಕಾಂಗ್ರೆಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ರೌಡಿಗಳಿಗೆ ಕೈ ಮುಗಿಯುತ್ತಾರೆ ಹಾಗೂ ಭ್ರಷ್ಟಾಚಾರಿಗಳಿಗೆ ಕರೆ ಮಾಡುತ್ತಾರೆ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ಬಿಜೆಪಿ ಹಿರಿಯ ಮುಖಂಡ ಕೆ.ಎಸ್‌.ಈಶ್ವರಪ್ಪ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾತನಾಡಿರುವ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೋದಿ ಅವರು ರೌಡಿಗಳಿಗೆ ಕೈ ಮುಗಿಯುತ್ತಾರೆ. ಭ್ರಷ್ಟಾಚಾರಿಗಳಿಗೆ ಕರೆ ಮಾಡಿ ಪ್ರೋತ್ಸಾಹಿಸುತ್ತಾರೆ. ಆದರೆ, ಭ್ರಷ್ಟಾಚಾರದ ದೂರುಗಳ ಪತ್ರಗಳಿಗೆ ಮಾತ್ರ ಮೌನ ವಹಿಸುತ್ತಾರೆ. ನೆರೆ ಸಂತ್ರಸ್ತರ …

Read More »

ಅಭ್ಯರ್ಥಿಗಳಿಂದ ಹಣ ಪಡೆದ ಆರೋಪ: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಭ್ಯರ್ಥಿಗಳಿಗೆ ಬಿ- ಫಾರಂ ನೀಡುವುದರ ಜತೆಗೆ ಅವರಿಂದ ಹಣವನ್ನೂ ವಸೂಲಿ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.   ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ಬಿ-ಫಾರಂ ನೀಡುವ ಅಧಿಕೃತ ವ್ಯಕ್ತಿಯೂ ಆಗಿದ್ದಾರೆ ಮತ್ತು ಕಾಂಗ್ರೆಸ್‌ ಪಕ್ಷದ ಟಿಕೆಟ್‌ ಆಕಾಂಕ್ಷಿಗಳಿಂದ ಕೆಪಿಸಿಸಿ ಹಣ …

Read More »

ಕಾಂಗ್ರೆಸ್ ಸಮುದ್ರ ಇದ್ದಂತೆ ಬಿಜೆಪಿಯಿಂದ ಹೊರ ಬಂದವರು ಕಾಂಗ್ರೆಸ್ ಸಮುದ್ರಕ್ಕೆ ಎಲ್ಲರೂ ಬಂದು ಸೇರಬೇಕು

ಬೆಂಗಳೂರು: ಕಾಂಗ್ರೆಸ್ ಸಮುದ್ರವಿದ್ದಂತೆ. ಬಿಜೆಪಿಯ ಅಣೆಕಟ್ಟು ಒಡೆದು ಹೋಗಿದ್ದು, ನದಿಯಾಗಿ ಹರಿಯುತ್ತಿರುವ ನೀರು ಕಾಂಗ್ರೆಸ್ ಎಂಬ ಸಮುದ್ರ ಸೇರಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ ಅವರ ನಿವಾಸದಲ್ಲಿ ಲಿಂಗಾಯತ ನಾಯಕರ ಸಭೆ ಹಾಗೂ ಲಿಂಗಾಯತ ಸಿಎಂ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಆಣೆಕಟ್ಟು ಒಡೆದ ನಂತರ ನೀರನ್ನು ನಿಲ್ಲಿಸಲು ಸಾಧ್ಯವಿಲ್ಲ. ಈ ನೀರು ಸಮುದ್ರ ಸೇರಬೇಕು. ಕಾಂಗ್ರೆಸ್ ಸಮುದ್ರ ಇದ್ದಂತೆ …

Read More »

90 ಲಕ್ಷ ರೂ. ಖರ್ಚು ಮಾಡಿ ಕೊಂಡಿದ್ದಾರಂತೆ ! ಒಂದು ಹೊಂಡಾ ಆ್ಯಕ್ಟಿವಾ ಸ್ಕೂಟರ್

ಮಂಡ್ಯ: ಮಾರುಕಟ್ಟೆಯಲ್ಲಿ ಒಂದು ಹೊಂಡಾ ಆ್ಯಕ್ಟಿವಾ ಸ್ಕೂಟರ್ ಬೆಲೆ ಹೆಚ್ಚೆಂದರೆ 70- 80 ಸಾವಿರ ಇರಬಹುದು. ಆದರೆ ಇಲ್ಲೊಬ್ಬ ಕಾಂಗ್ರೆಸ್ ಅಭ್ಯರ್ಥಿ ಇದಕ್ಕೆ 90 ಲಕ್ಷ ರೂ. ಖರ್ಚು ಮಾಡಿ ಕೊಂಡಿದ್ದಾರಂತೆ ! “ಅದೆಂಥ ಸ್ಕೂಟರ್ ಇರಬಹುದು?, ಬೆಳ್ಳಿ ಬಂಗಾರದ ಲೇಪನವೇನಾದರೂ ಇದೆಯಾ?” ಅಂತ ಪ್ರತಿಯೊಬ್ಬರೂ ಪ್ರಶ್ನಿಸುವುದು ಸಾಮಾನ್ಯ. ಆದರೆ ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕದಲೂರು ಉದಯ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ನೀಡಿದ …

Read More »

ಬೆಂಗಳೂರು-ಸೇಲಂ ಮಾರ್ಗದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: 12 ರೈಲುಗಳ ಓಡಾಟದಲ್ಲಿ ವ್ಯತ್ಯಯ

ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವಂತೆ ಮಾಡಿದೆ. ಬೆಂಗಳೂರು: ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ …

Read More »