ಹಾವೇರಿ: ನಗರ ಹೊರವಲಯದ ಅಜ್ಜಯ್ಯನ ಪ್ರದೇಶದ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳು, ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹುಬ್ಬಳ್ಳಿಯಿಂದ ದಾವಣಗೆರೆಯತ್ತ ಸಾಗುತ್ತಿದ್ದ ವಾಹನ ತಡೆದು ಪರಿಶೀಲಿಸಿದಾಗ 11 ಕೆಜಿ ಚಿನ್ನ, 74 ಕೆಜಿ ಬೆಳ್ಳಿ ಹಾಗೂ ತಟ್ಟೆ, ಲೋಟ, ಪೂಜಾ ಪರಿಕರಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಇವುಗಳ ಮೊತ್ತ 6.93 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇವುಗಳ ಸಾಗಾಟ ಮಾಡುತ್ತಿದ್ದವರು ಯಾವುದೇ ಪರವಾನಗಿ …
Read More »ಕೋರ್ಟ್ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಶುಕ್ರವಾರ ಗುಂಡಿನ ದಾಳಿ ನಡೆದಿದೆ.
ಹೊಸದಿಲ್ಲಿ: ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಶುಕ್ರವಾರ ಗುಂಡಿನ ದಾಳಿ ನಡೆದಿದೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗೆ ಆಗಮಿಸಿದ್ದ ಮಹಿಳೆ ಮೇಲೆ ವಕಿಲರ ದಿರಿಸಿನಲ್ಲಿ ಬಂದ ವ್ಯಕ್ತಿಯೊಬ್ಬ ನಾಲ್ಕು ಸುತ್ತು ಗುಂಡು ಹಾರಿಸಿದ್ದಾನೆ. ಅಪಾರ ಸಂಖ್ಯೆಯಲ್ಲಿದ್ದ ವಕಿಲರು, ಕಕ್ಷಿದಾರರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ. ಹೊಟ್ಟೆಗೆ ಗುಂಡು ತಗುಲಿ ನರಳುತ್ತಿದ್ದ ಮಹಿಳೆಯನ್ನು ಕೋರ್ಟ್ ಆವರಣದಲ್ಲಿದ್ದ ಜನರು ಹಾಗೂ ಪೊಲೀಸರು ಸೇರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸಾಗಿಸಿದರು. ಕೌಟುಂಬಿಕ …
Read More »ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹೈಕೋರ್ಟ್
ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು: ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಿಜೆಪಿ …
Read More »ಹೊಲಕ್ಕೆ ಹೊರಟಿದ್ದ ರೈತರ ಮೇಲೆ ಅಪರಿಚಿತ ವಾಹನ ಹರಿದು ಇಬ್ಬರು ರೈತರ ದುರ್ಮರಣ: ಇಬ್ಬರಿಗೆ ಗಾಯ
ಖಾನಾಪುರ: ತಾಲೂಕಿನ ಗೋಧೋಳಿ ಗ್ರಾಮದ ಹೊರವಲಯದ ಧಾರವಾಡ ರಾಮನಗರ ರಾಜ್ಯ ಹೆದ್ದಾರಿಯ ಮೇಲೆ ತಮ್ಮ ಹೊಲಕ್ಕೆ ಹೊರಟಿದ್ದ ನಾಲ್ವರು ರೈತರ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯರಾತ್ರಿ ಸಂಭವಿಸಿದೆ. ಗೊಧೋಳಿಯ ನಾಲ್ವರು ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಕಬ್ಬಿಗೆ ನೀರು ಹಾಯಿಸಲು ಹೊರಟಿದ್ದರು. ಗ್ರಾಮದ ಹೊರವಲಯದಲ್ಲಿ ನಡೆದುಕೊಂಡು ಹೊಲದ ಕಡೆ ಹೊರಟಿದ್ದ ವೇಳೆ ಅಪರಿಚಿತ ವಾಹನವೊಂದು ಹಿಂಬದಿಯಿಂದ ಇವರಿಗೆ ಡಿಕ್ಕಿ …
Read More »ರಾಜ್ಯಾದ್ಯಂತ ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( PUC Exam 2023 ) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ಇಂದು ಬೆಳಗ್ಗೆ 11 ಗಂಟೆಗ ದ್ವಿತೀಯ ಪಿಯುಸಿ ಫಲಿತಾಂಶ ( Karnataka Second PUC Exam Results ) ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ …
Read More »ಹಣ ಪಡೆದು ಮತ ಹಾಕುವುದರಲ್ಲೇ ಜನರಿಗೆ ಆಸಕ್ತಿ; ಹೈಕೋರ್ಟ್ ಕಿಡಿ
ಬೆಂಗಳೂರು, ಏಪ್ರಿಲ್ 21; ಸಾರ್ವಜನಿಕ ಪ್ರಕಟಣೆ ನೀಡಿದ ಹೊರತಾಗಿಯೂ ಇಡೀ ರಾಜ್ಯದ ಯಾವೊಂದು ಭಾಗದಿಂದಲೂ ಸ್ಮಶಾನ ಜಾಗಕ್ಕೆ ಭೂಮಿ ಮಂಜೂರಾತಿ ಕೋರಿ ಸರ್ಕಾರಕ್ಕೆ ಜನರು ಮನವಿ ಸಲ್ಲಿಸದ ಬಗ್ಗೆ ಕರ್ನಾಟಕ ಹೈಕೋರ್ಟ್ ಕಿಡಿ ಕಾರಿದೆ. ಅಲ್ಲದೇ, ನಮ್ಮ ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ ಚುನಾವಣೆ ಬಗ್ಗೆಯೇ ಹೆಚ್ಚು ಆಸಕ್ತಿ, ಅದರಲ್ಲೂ ಹಣ ಪಡೆದು ಮತ ಹಾಕುವುದರಲ್ಲೇ ಮಗ್ನರಾಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದೆ. ರಾಜ್ಯದಲ್ಲಿ ಸ್ಮಶಾನ ಇಲ್ಲದ ಗ್ರಾಮ ಮತ್ತು …
Read More »ವಿಧಾನಸಭೆ ಚುನಾವಣೆ: ಇಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ: ಹಿಂಪಡೆಯಲು ಏ.24 ಕೊನೆಯ ದಿನ
ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ.13 ರಿಂದ ಏ.20 ರ ವರೆಗೆ 224 ವಿಧಾನಸಭಾ ಮತಕ್ಷೇತ್ರಗಳಿಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯ ಏ.21 ರಂದು ಬೆಳಿಗ್ಗೆ 11 ಗಂಟೆಯಿಂದ ಆರಂಭವಾಗಲಿದೆ. ಆಯಾ ಚುನಾವಣಾಧಿಕಾರಿಗಳು ನಾಳೆ ಬೆಳಿಗ್ಗೆ 11 ಗಂಟೆಯಿಂದ ನಾಮಪತ್ರ ಪರಿಶೀಲನೆ ಆರಂಭಿಸುತ್ತಾರೆ. ಈ ಕುರಿತು ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಥವಾ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಗಿದೆ. ನಾಮಪತ್ರ ಹಿಂಪಡೆಯಲು ಏ.24 ಕೊನೆಯ ದಿನವಾಗಿದೆ. ಅಂದು ಬೆಳಿಗ್ಗೆ 11 ಗಂಟೆಯಿಂದ …
Read More »ಆಟೋದಲ್ಲಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ
ವಿಜಯಪುರ: ನಾಗಠಾಣ ಕ್ಷೇತ್ರದ ಅಚ್ಚರಿಯ ಅಭ್ಯರ್ಥಿ, ಪಕ್ಷದ ಸಾಮಾನ್ಯ ಕಾರ್ಯಕರ್ತ ಸಂಜೀವ ಐಹೊಳಿ ಆಟೋದಲ್ಲಿ ಆಗಮಿಸಿ ನಾಮಪತ್ರ ಸಲ್ಲಿಸಿರುವುದು ಮತ್ತೊಂದು ಅಚ್ಚರಿಗೆ ಕಾರಣವಾಗಿದೆ. ಗುರುವಾರ ನಾಮಪತ್ರ ಸಲ್ಲಿಕೆಯ ಅಂತಿಮ ದಿನದಂದು ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಂಜೀವ ಐಹೊಳ್ಳಿ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ತೆರಳಲು ವಾಹನಕ್ಕಾಗಿ ತಡಕಾಡಿದರು. ತೀರ ಸಾಮಾನ್ಯ ಕಾರ್ಯಕರ್ತನಾದ ಸಂಜೀವನ ಹೆಸರಿನಲ್ಲಿ ಸ್ವಂತ ಕಾರು, ಬೈಕ್ ಸಹ ಇಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆ ಕೇಂದ್ರಕ್ಕೆ ಬರಲು ಆಟೋಕ್ಕಾಗಿ …
Read More »ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಜಾಲತಾಣದ ಮಾಹಿತಿಗೆ ಇಲ್ಲಿ ನೋಡಿ
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ನಾಳೆ(ಏಪ್ರಿಲ್ 21) ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಫಲಿತಾಂಶ ಘೋಷಣೆ ಸಂಬಂಧ ನಾಳೆ ಬೆಳಿಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು, 11 ಗಂಟೆ ನಂತರ https://karresults.nic.in ಜಾಲತಾಣದಲ್ಲಿ ಫಲಿತಾಂಶ ಸಿಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ 7,27,387ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು …
Read More »ಟಿಕೆಟ್ ವಂಚಿತರಿಗೆ ಸರ್ಕಾರದಲ್ಲಿ ಸ್ಥಾನಮಾನ: ಸುರ್ಜೇವಾಲಾ
ಸಿಂಧನೂರು (ರಾಯಚೂರು ಜಿಲ್ಲೆ): ‘ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಿಗೆ ಮುಂದಿನ ಲೋಕಸಭಾ ಚುನಾವಣೆ ಹಾಗೂ ಸರ್ಕಾರದಲ್ಲಿ ಮಹತ್ವದ ಸ್ಥಾನಗಳು ಸಿಗಲಿವೆ’ ಎಂದು ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್‍ಸಿಂಗ್ ಸುರ್ಜೇವಾಲಾ ತಿಳಿಸಿದರು. ಸಿಂಧನೂರು ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಕೆಪಿಸಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ಮನವೊಲಿಕೆ ಮಾಡಿದ ಬಳಿಕ ಮಾತನಾಡಿದ ಅವರು, ‘ಬಾದರ್ಲಿ ಅವರಿಗೆ ಇನ್ನೂ 8 ತಿಂಗಳಲ್ಲಿ ಬರುವ ಲೋಕಸಭೆ …
Read More »