ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಭ್ಯರ್ಥಿಗಳಿಗೆ ಬಿ- ಫಾರಂ ನೀಡುವುದರ ಜತೆಗೆ ಅವರಿಂದ ಹಣವನ್ನೂ ವಸೂಲಿ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚುನಾವಣೆಗೆ ಸ್ಪರ್ಧಿಸಲು ಬಿ-ಫಾರಂ ನೀಡುವ ಅಧಿಕೃತ ವ್ಯಕ್ತಿಯೂ ಆಗಿದ್ದಾರೆ ಮತ್ತು ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಹಣ …
Read More »ಕಾಂಗ್ರೆಸ್ ಸಮುದ್ರ ಇದ್ದಂತೆ ಬಿಜೆಪಿಯಿಂದ ಹೊರ ಬಂದವರು ಕಾಂಗ್ರೆಸ್ ಸಮುದ್ರಕ್ಕೆ ಎಲ್ಲರೂ ಬಂದು ಸೇರಬೇಕು
ಬೆಂಗಳೂರು: ಕಾಂಗ್ರೆಸ್ ಸಮುದ್ರವಿದ್ದಂತೆ. ಬಿಜೆಪಿಯ ಅಣೆಕಟ್ಟು ಒಡೆದು ಹೋಗಿದ್ದು, ನದಿಯಾಗಿ ಹರಿಯುತ್ತಿರುವ ನೀರು ಕಾಂಗ್ರೆಸ್ ಎಂಬ ಸಮುದ್ರ ಸೇರಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ ಅವರ ನಿವಾಸದಲ್ಲಿ ಲಿಂಗಾಯತ ನಾಯಕರ ಸಭೆ ಹಾಗೂ ಲಿಂಗಾಯತ ಸಿಎಂ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಆಣೆಕಟ್ಟು ಒಡೆದ ನಂತರ ನೀರನ್ನು ನಿಲ್ಲಿಸಲು ಸಾಧ್ಯವಿಲ್ಲ. ಈ ನೀರು ಸಮುದ್ರ ಸೇರಬೇಕು. ಕಾಂಗ್ರೆಸ್ ಸಮುದ್ರ ಇದ್ದಂತೆ …
Read More »90 ಲಕ್ಷ ರೂ. ಖರ್ಚು ಮಾಡಿ ಕೊಂಡಿದ್ದಾರಂತೆ ! ಒಂದು ಹೊಂಡಾ ಆ್ಯಕ್ಟಿವಾ ಸ್ಕೂಟರ್
ಮಂಡ್ಯ: ಮಾರುಕಟ್ಟೆಯಲ್ಲಿ ಒಂದು ಹೊಂಡಾ ಆ್ಯಕ್ಟಿವಾ ಸ್ಕೂಟರ್ ಬೆಲೆ ಹೆಚ್ಚೆಂದರೆ 70- 80 ಸಾವಿರ ಇರಬಹುದು. ಆದರೆ ಇಲ್ಲೊಬ್ಬ ಕಾಂಗ್ರೆಸ್ ಅಭ್ಯರ್ಥಿ ಇದಕ್ಕೆ 90 ಲಕ್ಷ ರೂ. ಖರ್ಚು ಮಾಡಿ ಕೊಂಡಿದ್ದಾರಂತೆ ! “ಅದೆಂಥ ಸ್ಕೂಟರ್ ಇರಬಹುದು?, ಬೆಳ್ಳಿ ಬಂಗಾರದ ಲೇಪನವೇನಾದರೂ ಇದೆಯಾ?” ಅಂತ ಪ್ರತಿಯೊಬ್ಬರೂ ಪ್ರಶ್ನಿಸುವುದು ಸಾಮಾನ್ಯ. ಆದರೆ ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕದಲೂರು ಉದಯ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ನೀಡಿದ …
Read More »ಬೆಂಗಳೂರು-ಸೇಲಂ ಮಾರ್ಗದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: 12 ರೈಲುಗಳ ಓಡಾಟದಲ್ಲಿ ವ್ಯತ್ಯಯ
ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವಂತೆ ಮಾಡಿದೆ. ಬೆಂಗಳೂರು: ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ …
Read More »ಅಕ್ರಮವಾಗಿ ಸಾಗಾಟವಾಗುತ್ತಿದ್ದ6.93 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, ಪೂಜಾ ಪರಿಕರಗಳು ವಶ
ಹಾವೇರಿ: ನಗರ ಹೊರವಲಯದ ಅಜ್ಜಯ್ಯನ ಪ್ರದೇಶದ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳು, ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹುಬ್ಬಳ್ಳಿಯಿಂದ ದಾವಣಗೆರೆಯತ್ತ ಸಾಗುತ್ತಿದ್ದ ವಾಹನ ತಡೆದು ಪರಿಶೀಲಿಸಿದಾಗ 11 ಕೆಜಿ ಚಿನ್ನ, 74 ಕೆಜಿ ಬೆಳ್ಳಿ ಹಾಗೂ ತಟ್ಟೆ, ಲೋಟ, ಪೂಜಾ ಪರಿಕರಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಇವುಗಳ ಮೊತ್ತ 6.93 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇವುಗಳ ಸಾಗಾಟ ಮಾಡುತ್ತಿದ್ದವರು ಯಾವುದೇ ಪರವಾನಗಿ …
Read More »ಕೋರ್ಟ್ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಶುಕ್ರವಾರ ಗುಂಡಿನ ದಾಳಿ ನಡೆದಿದೆ.
ಹೊಸದಿಲ್ಲಿ: ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಶುಕ್ರವಾರ ಗುಂಡಿನ ದಾಳಿ ನಡೆದಿದೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗೆ ಆಗಮಿಸಿದ್ದ ಮಹಿಳೆ ಮೇಲೆ ವಕಿಲರ ದಿರಿಸಿನಲ್ಲಿ ಬಂದ ವ್ಯಕ್ತಿಯೊಬ್ಬ ನಾಲ್ಕು ಸುತ್ತು ಗುಂಡು ಹಾರಿಸಿದ್ದಾನೆ. ಅಪಾರ ಸಂಖ್ಯೆಯಲ್ಲಿದ್ದ ವಕಿಲರು, ಕಕ್ಷಿದಾರರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ. ಹೊಟ್ಟೆಗೆ ಗುಂಡು ತಗುಲಿ ನರಳುತ್ತಿದ್ದ ಮಹಿಳೆಯನ್ನು ಕೋರ್ಟ್ ಆವರಣದಲ್ಲಿದ್ದ ಜನರು ಹಾಗೂ ಪೊಲೀಸರು ಸೇರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸಾಗಿಸಿದರು. ಕೌಟುಂಬಿಕ …
Read More »ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹೈಕೋರ್ಟ್
ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು: ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಿಜೆಪಿ …
Read More »ಹೊಲಕ್ಕೆ ಹೊರಟಿದ್ದ ರೈತರ ಮೇಲೆ ಅಪರಿಚಿತ ವಾಹನ ಹರಿದು ಇಬ್ಬರು ರೈತರ ದುರ್ಮರಣ: ಇಬ್ಬರಿಗೆ ಗಾಯ
ಖಾನಾಪುರ: ತಾಲೂಕಿನ ಗೋಧೋಳಿ ಗ್ರಾಮದ ಹೊರವಲಯದ ಧಾರವಾಡ ರಾಮನಗರ ರಾಜ್ಯ ಹೆದ್ದಾರಿಯ ಮೇಲೆ ತಮ್ಮ ಹೊಲಕ್ಕೆ ಹೊರಟಿದ್ದ ನಾಲ್ವರು ರೈತರ ಮೇಲೆ ಅಪರಿಚಿತ ವಾಹನ ಹರಿದ ಪರಿಣಾಮ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯರಾತ್ರಿ ಸಂಭವಿಸಿದೆ. ಗೊಧೋಳಿಯ ನಾಲ್ವರು ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಕಬ್ಬಿಗೆ ನೀರು ಹಾಯಿಸಲು ಹೊರಟಿದ್ದರು. ಗ್ರಾಮದ ಹೊರವಲಯದಲ್ಲಿ ನಡೆದುಕೊಂಡು ಹೊಲದ ಕಡೆ ಹೊರಟಿದ್ದ ವೇಳೆ ಅಪರಿಚಿತ ವಾಹನವೊಂದು ಹಿಂಬದಿಯಿಂದ ಇವರಿಗೆ ಡಿಕ್ಕಿ …
Read More »ರಾಜ್ಯಾದ್ಯಂತ ಇಂದು ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು: ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ( PUC Exam 2023 ) ಮುಕ್ತಾಯಗೊಂಡಿದ್ದು, ಇದೀಗ ಉತ್ತರ ಪತ್ರಿಕೆ ಮೌಲ್ಯಮಾಪನ ಕೂಡ ಮುಕ್ತಾಯಗೊಂಡಿದೆ. ಹೀಗಾಗಿ ಏಪ್ರಿಲ್ 21ರ ಇಂದು ಬೆಳಗ್ಗೆ 11 ಗಂಟೆಗ ದ್ವಿತೀಯ ಪಿಯುಸಿ ಫಲಿತಾಂಶ ( Karnataka Second PUC Exam Results ) ಪ್ರಕಟಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2023ರ …
Read More »ಹಣ ಪಡೆದು ಮತ ಹಾಕುವುದರಲ್ಲೇ ಜನರಿಗೆ ಆಸಕ್ತಿ; ಹೈಕೋರ್ಟ್ ಕಿಡಿ
ಬೆಂಗಳೂರು, ಏಪ್ರಿಲ್ 21; ಸಾರ್ವಜನಿಕ ಪ್ರಕಟಣೆ ನೀಡಿದ ಹೊರತಾಗಿಯೂ ಇಡೀ ರಾಜ್ಯದ ಯಾವೊಂದು ಭಾಗದಿಂದಲೂ ಸ್ಮಶಾನ ಜಾಗಕ್ಕೆ ಭೂಮಿ ಮಂಜೂರಾತಿ ಕೋರಿ ಸರ್ಕಾರಕ್ಕೆ ಜನರು ಮನವಿ ಸಲ್ಲಿಸದ ಬಗ್ಗೆ ಕರ್ನಾಟಕ ಹೈಕೋರ್ಟ್ ಕಿಡಿ ಕಾರಿದೆ. ಅಲ್ಲದೇ, ನಮ್ಮ ಜನರಿಗೆ ಮೂಲಭೂತ ಸೌಲಭ್ಯ ಪಡೆಯುವುದಕ್ಕಿಂತ ಚುನಾವಣೆ ಬಗ್ಗೆಯೇ ಹೆಚ್ಚು ಆಸಕ್ತಿ, ಅದರಲ್ಲೂ ಹಣ ಪಡೆದು ಮತ ಹಾಕುವುದರಲ್ಲೇ ಮಗ್ನರಾಗಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದೆ. ರಾಜ್ಯದಲ್ಲಿ ಸ್ಮಶಾನ ಇಲ್ಲದ ಗ್ರಾಮ ಮತ್ತು …
Read More »
Laxmi News 24×7