ಬೆಂಗಳೂರು, ಮೇ 05: ರಾಜ್ಯದಲ್ಲಿ ಮತ್ತೆ ಐಎಂಎಲ್ (IML) ಮೇಲಿನ ದರ ಏರಿಕೆ ಆಗಲಿದೆ. ಈಗಾಗಲೇ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ದರ ಹೆಚ್ಚಳ ಮಾಡಿದೆ. ಇದೀಗ ಮತ್ತೆ ಮೂರನೇ ಬಾರಿ ಮದ್ಯ ದರ ಹೆಚ್ಚಳವಾಗಲಿದ್ದು, ಈ ವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಕಾರಣ 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38600 ಕೋಟಿ ರುಪಾಯಿ ಟಾರ್ಗೆಟ್ ನೀಡಿತ್ತು. ಈ …
Read More »ಸ್ಟೈಪಂಡ್ ಹಗರಣ: ಕಲಬುರಗಿಯ 7 ಕಡೆಗಳಲ್ಲಿ ಇ.ಡಿ ದಾಳಿ
ಕಲಬುರಗಿ: ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಸ್ಟೈಪಂಡ್ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಮಾಜಿ ಅಧ್ಯಕ್ಷ ಭೀಮಾಶಂಕರ್ ಬಿಲ್‌ಗುಂದಿ ಅವರ ಮನೆ ಸೇರಿದಂತೆ ಏಳು ಕಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮಾಡಿದ್ದಾರೆ. ಭೀಮಾಶಂಕರ ಬಿಲಗುಂದಿ, ಎಂಆರ್‌ಎಂಸಿ ವೈದ್ಯಕೀಯ ಕಾಲೇಜಿನ ಮಾಜಿ ಡೀನ್ ಡಾ. ಎಸ್.ಎಂ. ಪಟೇಲ್ ಮತ್ತು ಮಹಾದೇವಪ್ಪ ರಾಂಪುರೆ ವೈದ್ಯಕೀಯ ಕಾಲೇಜು ಲೆಕ್ಕಪರಿಶೋಧಕ ಸುಭಾಷ್ ಚಂದ್ರ ಅವರ ಸಂಬಂಧಿತ ಸ್ಥಳಗಳು ಸೇರಿದಂತೆ ಕಲಬುರಗಿಯ ಜಿಲ್ಲೆಯ …
Read More »ಪಂಚ ಗ್ಯಾರಂಟಿ” ಕಿರುಪುಸ್ತಕ ಬಿಡುಗಡೆ ಜನರ ಜೀವನಮಟ್ಟ ಸುಧಾರಣೆಗೆ “ಗ್ಯಾರಂಟಿ” ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ
ಪಂಚ ಗ್ಯಾರಂಟಿ” ಕಿರುಪುಸ್ತಕ ಬಿಡುಗಡೆ ಜನರ ಜೀವನಮಟ್ಟ ಸುಧಾರಣೆಗೆ “ಗ್ಯಾರಂಟಿ” ಸಹಕಾರಿ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, ಮೇ 5(ಕರ್ನಾಟಕ ವಾರ್ತೆ): ರಾಜ್ಯದ ಸಮಗ್ರ ಅಭಿವೃದ್ಧಿ ಸಾಕಾರಕ್ಕಾಗಿ ರಾಜ್ಯ ಸರಕಾರವು ಜಾರಿಗೆ ತಂದಿರುವ “ಪಂಚ ಗ್ಯಾರಂಟಿ” ಯೋಜನೆಗಳ ಕುರಿತ ಕಿರುಪುಸ್ತಕವನ್ನು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬಿಡುಗಡೆಗೊಳಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರಕಟಿಸಲಾಗಿರುವ ಪಂಚ ಗ್ಯಾರಂಟಿ ಕುರಿತ ಕಿರುಪುಸ್ತಕವನ್ನು …
Read More »ದೇವಲತ್ತಿ ಹಾಗೂ ಕಾಮಸಿನಕೊಪ್ಪ ಗ್ರಾಮಗಳ ಜಮೀನುಗಳಲ್ಲಿ ವಿದ್ಯುತ್ ನ್ನು ಈ ಹಿಂದೆ ನೀಡಲಾಗುತ್ತಿದ್ದ ರೀತಿಯಲ್ಲಿ ಒದಗಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ
ದೇವಲತ್ತಿ ಹಾಗೂ ಕಾಮಸಿನಕೊಪ್ಪ ಗ್ರಾಮಗಳ ಜಮೀನುಗಳಲ್ಲಿ ವಿದ್ಯುತ್ ನ್ನು ಈ ಹಿಂದೆ ನೀಡಲಾಗುತ್ತಿದ್ದ ರೀತಿಯಲ್ಲಿ ಒದಗಿಸಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ ಖಾನಾಪೂರ ತಾಲೂಕಿನ ದೇವಲತ್ತಿ ಹಾಗೂ ಕಾಮಸಿನಕೊಪ್ಪ ಗ್ರಾಮಗಳ ರೈತಾಪಿ ವರ್ಗದವರು ಹಾಗೂ ಸಾರ್ವಜನಿಕರು ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಹೆಸ್ಕಾಂ ಇಲಾಖೆಯು ಇದರ ಮೊದಲು ಗ್ರಾಮಗಳ ಜಮೀನುಗಳಲ್ಲಿಯ ವಿದ್ಯುತ್ ನ್ನು ಹೇಗೆ ನೀಡಲಿಗುತ್ತಿತ್ತು ಹಾಗೆಯೇ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು ತದನಂತರದಲ್ಲಿ ತಹಶೀಲ್ದಾರ್ …
Read More »ಕನ್ನಡದಿಂದ ಬ್ಯಾನ್ ಆದ ಸೋನು ನಿಗಮ್
‘ನಮಸ್ಕಾರ.. ನಾನು ಭಾಷೆ, ಸಂಸ್ಕೃತಿ, ಸಂಗೀತ, ಸಂಗೀತಗಾರರು, ಈ ರಾಜ್ಯ ಮತ್ತು ಜನರ ಮೇಲೆ ಅಪರೂಪದ ಪ್ರೀತಿ ಹರಿಸಿರುವೆ. ಅದು ನಾನು ಕರ್ನಾಟಕದಲ್ಲಿದ್ದಾಗ ಮಾತ್ರವಲ್ಲ, ನಾನು ಜಗತ್ತಿನ ಎಲ್ಲಿ ಇದ್ದರೂ ಸಹ. ನಿಜ ಹೇಳಬೇಕೆಂದರೆ, ನಾನು ನನ್ನ ಕನ್ನಡ ಹಾಡುಗಳನ್ನು ಹಿಂದಿ ಸೇರಿ ಇತರ ಭಾಷೆಗಳ ಹಾಡೆಗಳಿಗಿಂತಲೂ ಹೆಚ್ಚು ಗೌರವದಿಂದ ನೋಡಿದ್ದೇನೆ. ಈ ಮಾತಿಗೆ ಸಾಕ್ಷಿಯಾಗಿ ನೂರಾರು ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ನಾನು ಪ್ರತಿಯೊಂದು ಕರ್ನಾಟಕದ ಕಾರ್ಯಕ್ರಮಕ್ಕಾಗಿಯೂ ಒಂದು …
Read More »ಹಾವೇರಿ ಜಿಲ್ಲೆಯಲ್ಲಿ ಕಳೆದ ವರ್ಷ ಅಪಘಾತದಿಂದ 300 ಮಂದಿ ಸಾವು: ಎಸ್ಪಿ ಅಂಶುಕುಮಾರ್
ಹಾವೇರಿ: ಜಿಲ್ಲೆಯಲ್ಲಿ ಅಪಘಾತದಿಂದ ಮೃತಪಟ್ಟವರ ಸಂಖ್ಯೆ 2023ಕ್ಕೆ ಹೋಲಿಸಿದರೆ, 2024ರಲ್ಲಿ ಹೆಚ್ಚಳ ಕಂಡುಬಂದಿದೆ. 2023ರಲ್ಲಿ ಅಪಘಾತದಲ್ಲಿ 280 ಮಂದಿ ಸಾವನ್ನಪ್ಪಿದ್ದರೆ, 2024ರಲ್ಲಿ 300 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದರು. ನಗರದ ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗಿದೆ. ಅಲ್ಲದೆ, ಮರಣಿಸುವವರ ಸಂಖ್ಯೆಯೂ ಕಡಿಮೆಯಾಗಿದೆ. ಆದರೆ, ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಹೆದ್ದಾರಿಗಳಲ್ಲಿ ಅಪಘಾತಗಳ ಸಂಖ್ಯೆ ಮತ್ತು …
Read More »ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಉದ್ಯೋಗಿ ಬಂಧನ
ಬೆಂಗಳೂರು: ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಬಂದು ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಯನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಮಾರತ್ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯೊಂದರ ಉದ್ಯೋಗಿ ಶ್ರೀಕಾಂತ್ (32) ಬಂಧಿತ ಆರೋಪಿ. ಏಪ್ರಿಲ್ 30ರಂದು ರಾತ್ರಿ 11:30ರ ಸುಮಾರಿಗೆ ಇಕೋ ವರ್ಲ್ಡ್ ಮೇನ್ ಗೇಟ್ ಬಳಿ ಯುವತಿಯನ್ನು ಆರೋಪಿ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಈ ಕುರಿತು 23 ವರ್ಷದ ಯುವತಿ ನೀಡಿದ್ದ ದೂರಿನನ್ವಯ ಮಾರತ್ ಹಳ್ಳಿ ಠಾಣೆಯಲ್ಲಿ ಪ್ರಕರಣ …
Read More »ಸಚಿವ ಶರಣಪ್ರಕಾಶ್ ಪಾಟೀಲ್, ಕಾಂಗ್ರೆಸ್ ಮುಖಂಡನ ನಡುವೆ ಮಾತಿನ ಚಕಮಕಿ
ರಾಯಚೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಹಾಗೂ ಕಾಂಗ್ರೆಸ್ ಮುಖಂಡನ ನಡುವೆ ಲಿಂಗಸುಗೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ತೀವ್ರ ವಾಗ್ವಾದ ನಡೆದಿದೆ. ಮಾನವಿ ತಾಲೂಕಿನ ಉಟಕನೂರು ಗ್ರಾಮದಲ್ಲಿನ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುವ ಮಾರ್ಗಮಧ್ಯೆ ಲಿಂಗಸುಗೂರು ಪಟ್ಟಣದ ಪ್ರವಾಸ ಮಂದಿರದಲ್ಲಿ ಕೆಲ ಮುಖಂಡರೊಂದಿಗೆ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಂಗಿದ್ದರು. ಈ ವೇಳೆ ಕಾಂಗ್ರೆಸ್ ಮುಖಂಡ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ನಾಮನಿರ್ದೇಶನ ಸದಸ್ಯ ಗದ್ದೆನಗೌಡ ಪಾಟೀಲ್ ನಡುವೆ ಮಾತಿನ …
Read More »ನಿಮಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡ್ತೇವೆ: ಆದರೆ, ತೆರಿಗೆ ಸಂಗ್ರಹ ಗುರಿ ಮುಟ್ಟಲೇಬೇಕು – ಸಿಎಂ
ಬೆಂಗಳೂರು: ನಿಮಗೆ ವಾಹನ, ಸಿಬ್ಬಂದಿ ಅಗತ್ಯವಿದ್ದರೆ ಕೊಡುತ್ತೇವೆ. ಆದರೆ, ತೆರಿಗೆ ಸಂಗ್ರಹದ ಗುರಿ ಮುಟ್ಟಲೇಬೇಕು. ಇದರಲ್ಲಿ ರಾಜಿ ಆಗಬಾರದು ಎಂದು ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಶನಿವಾರ ಬ್ಯಾಂಕ್ವೆಂಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಥಿಕ ಇಲಾಖೆ ವತಿಯಿಂದ ಹೊಸ ವಾಹನಗಳಿಗೆ ಚಾಲನೆ ನೀಡಿ, ಅನುಕಂಪ ಆಧಾರಿತ ನೇಮಕಾತಿ ಆದೇಶ ವಿತರಿಸಿ ಮಾತನಾಡಿದ ಅವರು, ವೇತನ ಆಯೋಗ ಶಿಫಾರಸು ಮಾಡಿದ ವೇತನದಲ್ಲಿ ನಯಾಪೈಸೆ ಚೌಕಾಸಿ ಮಾಡದೇ ಅಷ್ಟೂ ವೇತನ ನೀಡಿದ್ದೇವೆ. ಸರ್ಕಾರಿ ನೌಕರರಿಂದಲೂ …
Read More »ಕಿತ್ತೂರು ಚೆನ್ನಮ್ಮ ಮೃಗಾಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ
ಕಿತ್ತೂರು ಚೆನ್ನಮ್ಮ ಮೃಗಾಲಯಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ * ನಿತ್ಯ ಹೆಸರಿನ ಹೆಣ್ಣು ಹುಲಿ-ಬೃಂಗಾ ಹೆಸರಿನ ಹೆಣ್ಣು ಸಿಂಹಿಣಿಯನ್ನು ಪ್ರಾಣಿ ಸಂಗ್ರಹಾಲಯಕ್ಕೆ ಬಿಡುಗಡೆ ಮಾಡಿದ ಸಂಸದೆ ಬೆಳಗಾವಿ: ಭುತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿರುವ ನಿತ್ಯ ಹೆಸರಿನ ಹೆಣ್ಣು ಹುಲಿ ಮತ್ತು ಬೃಂಗಾ ಹೆಸರಿನ ಹೆಣ್ಣು ಸಿಂಹಿಣಿಯನ್ನು ಸಂಸದೆ ಪ್ರಿಯಂಕಾ ಜಾರಕಿಹೊಳಿ ಪ್ರಾಣಿ ಸಂಗ್ರಹಾಲಯಕ್ಕೆ ಬಿಡುಗಡೆ ಮಾಡಿದರು. ಇತ್ತೀಚಿಗೆ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ‘ನಿರುಪಮಾ’ ಎಂಬ …
Read More »
Laxmi News 24×7