Breaking News

ರಾಷ್ಟ್ರೀಯ

B.S.Y. ಅವರು ಬಿಜೆಪಿ ಬಳಸಿ ಬಿಸಾಡುವ ‘ಟಿಶ್ಯೂ’ ಪೇಪರ್ : ಕಾಂಗ್ರೆಸ್‌

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬಿಜೆಪಿ ಅವಮಾನಿಸಿದೆ ಎಂದು ಕಾಂಗ್ರೆಸ್‌ ಹೇಳಿದೆ. ಯಡಿಯೂರಪ್ಪನವರನ್ನು ‘ಟಿಶ್ಯೂ’ ಪೇಪರ್‌ ರೀತಿಯಲ್ಲಿ ಬಳಸಿ ಬಿಜೆಪಿ ನಾಯಕರು ಅವಮಾನ ಮಾಡಿದ್ದಾರೆ ಎಂದು ಹೇಳಿದೆ.   ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವಲ್ಲಿ ಮೀನಾಮೇಷ ಎಣಿಸುತ್ತಿದೆ. ಅಭ್ಯರ್ಥಿಗಳ ಪಟ್ಟಿ ಅಖೈರುಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ …

Read More »

ಜಗದೀಶ್ ಶೆಟ್ಟರ್ ಅವರಿಗೆ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಸುದ್ದಿ ಹಿನ್ನೆಲೆ ತೀವ್ರ ಅಸಮಾಧಾನ

ಬೆಂಗಳೂರು: ಮಾಜಿ ಸಿಎಂ ಹಾಗೂ ಹುಬ್ಬಳ್ಳಿ ಕೇಂದ್ರ ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ ಅವರಿಗೆ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಸುದ್ದಿ ಹಿನ್ನೆಲೆಯಲ್ಲಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ವರಿಷ್ಠರಿಂದ ಬೆಳಗ್ಗೆ ಫೋನ್ ಬಂದಿತ್ತು. ನೀವು ಸೀನಿಯರ್, ಬೇರಿಯವರಿಗೆ ಅವಕಾಶ ಕೊಡಿ ಎಂದು ಹೇಳಿದ್ದಾರೆ. ನಾನು ಮೂವತ್ತು ವರ್ಷಗಳಿಂದ ಪಕ್ಷ ಕಟ್ಟಿ ಬೆಳೆಸಿದ್ದೇನೆ. ನೂರಾರು ಜನರಿಗೆ ಟಿಕೆಟ್ ಕೊಟ್ಟಿದ್ದೇನೆ. ಆರು ಸಾರಿ ಸ್ಪರ್ಧಿಸಿ ಗೆದ್ದು ಬಂದಿದ್ದೇನೆ. …

Read More »

ಸಂತೋಷ್ ಆಟಕ್ಕೆ ಬಿಎಸ್‌ವೈ ಬಲಿ, ಜೋಶಿ ಆಟಕ್ಕೆ ಶೆಟ್ಟರ್ ಗಲಿಬಿಲಿ: ಕಾಂಗ್ರೆಸ್

ಬೆಂಗಳೂರು: ರಾಜ್ಯ ಬಿಜೆಪಿ ಹಿರಿಯ ನಾಯಕರಾದ ಕೆ.ಎಸ್‌.ಈಶ್ವರಪ್ಪ, ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್‌ ನಿರಾಕರಿಸಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಬಿಜೆಪಿ ಟಿಕೆಟ್‌ ಹಂಚಿಕೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಯಡಿಯೂರಪ್, ಈಶ್ವರಪ್ಪ, ಜಗದೀಶ್ ಶೆಟ್ಟರ್.. ಬಿಜೆಪಿ ಎಂಬ ಕಳೆಗೆ ನೀರು ಗೊಬ್ಬರ ಹಾಕಿ ಬೆಳೆಸಿದ ನಾಯಕರನ್ನು ಅಗೌರವದ ನಿರ್ಗಮನ ದಾರಿ ತೋರಿಸಿದೆ ಬಿಜೆಪಿ’ ಲೇವಡಿ ಮಾಡಿದೆ. ‘ನಾವೇ ಎಲ್ಲ’ ಎನ್ನುತ್ತಿದ್ದವರಿಗೆ ‘ನೀವೇನೂ ಅಲ್ಲ’ ಎನ್ನುತ್ತಿದೆ …

Read More »

ಮೊಬೈಲ್ ಹೆಚ್ಚು ನೋಡಲು ಬಿಡಲಿಲ್ಲ ಎಂದಿದಕ್ಕೆ ಕಟ್ಟಡದಿಂದ ಹಾರಿ ಆತ್ಮಹತ್ಯೆ

ಮೊಬೈಲ್ ಹೆಚ್ಚು ನೋಡಲು ಬಿಡಲಿಲ್ಲ ಎಂದು ಮನ ನೊಂದ 15 ವರ್ಷದ ಬಾಲಕಿಯೊಬ್ಬಳು 7 ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.     ಮಂಬೈನ್ ಮಲಾಡ್‌ನ ಉಪನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.     ಆದರೆ ಬಾಲಕಿಯ ಕುಟುಂಬಸ್ಥರು ಬಾಲಕಿಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದರಿಂದ ಆಕೆ ಅಸಮಾಧಾನಗೊಂಡಿದ್ದಳು ಎಂದು ಪೊಲೀಸರು …

Read More »

ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಶಿವಮೊಗ್ಗ : ಶಿವಮೊಗ್ಗ ನಗರದ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಸುಮಾರು 5.83 ಕೋಟಿ ಮೌಲ್ಯದ 9 ಕೆಜಿ 565 ಗ್ರಾಂ ಚಿನ್ನವನ್ನ ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ಜಿಲ್ಲೆಯ ವಿವಿಧೆಡೆ ದಾಖಲೆ ಇಲ್ಲದ ಲಕ್ಷಾಂತರ ಹಣ ಜಪ್ತಿ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹30.64 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read More »

ಸ್ಪೀಕರ್ ಕಾಗೆರಿ ಅವರಿಗು ಕ್ಷೇತ್ರ ಬಿಡಲು ಹೇಳಿತಾ ಹೈ ಕಮಾಂಡ್…?

ಶಿರಸಿ: ಚುನಾವಣೆ ರಾಜಕೀಯದಿಂದ ನಿವೃತ್ತರಾಗುವಂತೆ ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೂ ಹೈಕಮಾಂಡ್ ಸೂಚನೆ ನೀಡಿದೆಯಾ? ಅಂತದ್ದೊಂದು ದಟ್ಟ ಸುದ್ದಿ ರಾಜಕೀಯ ವಲಯದಲ್ಲಿ ಹರಡಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕ್ಷೇತ್ರ ತ್ಯಾಗಕ್ಕೆ ಪಕ್ಷದ ಸೂಚನೆಯ ಬೆನ್ನಲ್ಲೇ ವಿಶ್ವೇಶ್ವರ ಹೆಗಡೆ ಅವರಿಗೂ ಅಂತಹ ಸೂಚನೆ ನೀಡಲಾಗಿದೆ, ಜೊತೆಗೆ, ಸುರೇಶ ಕುಮಾರ ಸೇರಿದಂತೆ 6 -7 ಹಿರಿಯ ನಾಯಕರಿಗೆ ಹೈಕಮಾಂಡ್ ಸೂಚಿಸಿದೆ ಎನ್ನುವ ಸುದ್ದಿ ಹರಡಿದೆ.   …

Read More »

ಇಂತಹ 10 ಅಮೂಲ್ ಬಂದರೂ ಸ್ಪರ್ಧೆ ಮಾಡುವ ಶಕ್ತಿ ನಂದಿನಿಗಿದೆ:ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಅಮೂಲ್ ಜೊತೆ ಕೆಎಂಎಫ್ ವಿಲೀನ ಇಲ್ಲವೇ ಇಲ್ಲ. ಇಂತಹ 10 ಅಮೂಲ್ ಬಂದರೂ ಸ್ಪರ್ಧೆ ಮಾಡುವ ಶಕ್ತಿ ನಂದಿನಿಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕಾಗಿ ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿ, ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು. ಕೆಎಂಎಫ್ ನಲ್ಲಿ 26 ಲಕ್ಷ ರೈತರು ಸದಸ್ಯರಿದ್ದಾರೆ. 10 ಲಕ್ಷ ರೈತರು ಹಾಲು ಹಾಕುತ್ತಾರೆ. 15,200 ಸಂಘಗಳಿವೆ, 28 ಸಾವಿರ …

Read More »

ಬೆಂಗಳೂರು: ಬಿಜೆಪಿ ಪಟ್ಟಿ ಎರಡು ದಿನ ವಿಳಂಬ ಸಾಧ್ಯತೆ

ಬೆಂಗಳೂರು: ಕುಟುಂಬ ಪ್ರಧಾನ ಪಕ್ಷವೆಂದು ಕಾಂಗ್ರೆಸ್‌, ಜೆಡಿಎಸ್‌ ಅನ್ನು ಹೀಯಾಳಿಸುತ್ತಿದ್ದ ಬಿಜೆಪಿ ನಾಯಕರಿಗೆ ಟಿಕೇಟ್‌ ಪಡೆಯಲು ಅದೇ ವಿಚಾರ ಮುಳುವಾಗಿದೆ. ವಿಧಾನಸಭೆ ಚುನಾವಣೆಗೆ ಸಂಬಂಧಿಸಿ ಹಲವು ಘಟಾನುಘಟಿ ನಾಯಕರ ಮಕ್ಕಳಿಗೆ ಟಿಕೇಟ್‌ ನೀಡಲು ಬಿಜೆಪಿ ಹೈಕಮಾಂಡ್‌ ಅಸಮ್ಮತಿ ವ್ಯಕ್ತಪಡಿಸಿದ್ದು, ಯಡಿಯೂರಪ್ಪ ಸೇರಿದಂತೆ ಹಲವು ಹಿರಿಯ ನಾಯಕರಿಗೆ ತಲೆನೋವಾಗಿದೆ.   ಭಾನುವಾರವೇ ಘೋಷಣೆಯಾಗಬೇಕಿದ್ದ ಮೊದಲ ಪಟ್ಟಿಯಲ್ಲಿ ಪ್ರಧಾನಿ ಮೋದಿ ಹಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಮೊದಲ ಪಟ್ಟಿ ಸಿದ್ಧಪಡಿಸಲು ರಾಜ್ಯ ನಾಯಕರು ಮತ್ತೆ ಚರ್ಚೆ …

Read More »

ದೇವೇಗೌಡ ಕುಟುಂಬ ಮುಗಿಸಲು ಶಕುನಿಗಳು ಕಾಯುತ್ತಿದ್ದಾರೆ: H.D.K.

ಹುಬ್ಬಳ್ಳಿ : ದೇವೇಗೌಡ ಕುಟುಂಬ ಮುಗಿಸಲು ಶಕುನಿಗಳು ಇರ್ತಾರೆ‌. ಯಾರ ತಲೆ ಕೆಡಿಸ್ತಾರೆ ಅನ್ನೋ ಮಾಹಿತಿ ಇಲ್ವಾ ಎಂದು ಮಾಜಿ ಸಿಎಂ ಕುಮಾರಸ್ಚಾಮಿ ಹೇಳಿದರು. ನಗರದಲ್ಲಿ ವಿವಿಧ ದೇವಳಗಳಿಗೆ ಭೇಟಿ ನೀಡಿ ಮಾತನಾಡಿದ ಅವರು ನಾನು‌ ಮುಖ್ಯಮಂತ್ರಿ ಆಗಿ ಕೆಲಸ ಮಾಡಿದ್ದೇನೆ. ನನಗೂ ಶಕುನಿಗಳು ಯಾರ ಅನ್ನೋ ಮಾಹಿತಿ ಬರುತ್ತದೆ. ರಾಜಕಾರಣದಲ್ಲಿ ಅವತ್ತಿನ ಕುರುಕ್ಷೇತ್ರ ನಡೀತಿದೆ. ದೇವೆಗೌಡರ ಕುಟುಂಬಕ್ಕೆ ಹಿತೈಷಿಗಳು ಎಂದು ನಾಟಕ ಮಾಡಿದವರಿಗೆ ಹಾಲೆರೆದರೆ ಏನು ಮಾಡಲಿ ಎಂದರು. ಭವಾನಿ …

Read More »

ಬಿಜೆಪಿಯಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ನಿವೃತ್ತಿ ಪರ್ವ ಆರಂಭವಾಗಿದ್ದು, ಘಟಾನುಘಟಿ ನಾಯಕರೇ ರಾಜಕೀಯ ನಿವೃತ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ ರಾಜ್ಯ ಬಿಜೆಪಿಯಲ್ಲಿ ಟಿಕೆಟ್ ಘೋಷಣೆಗೂ ಮುನ್ನವೇ ನಿವೃತ್ತಿ ಪರ್ವ ಆರಂಭವಾಗಿದ್ದು, ಘಟಾನುಘಟಿ ನಾಯಕರೇ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುವ ಭೀತಿಯಲ್ಲಿ ಸಾಲು ಸಾಲು ಬಿಜೆಪಿ ಮುಖಂಡರು ಚುನಾವಣೆಯಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ. ಎಸ್.ಎ.ರವೀಂದ್ರನಾಥ್, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬೆನ್ನಲ್ಲೇ ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಟಿಕೆಟ್ ಘೋಷಣೆಗೂ ಮುನ್ನವೇ ಕೇಸರಿ ಮನೆಯಲ್ಲಿ ಕಂಪನ ಆರಂಭವಾಗಿದೆ. …

Read More »