Breaking News

ರಾಷ್ಟ್ರೀಯ

ಬಿಜೆಪಿ ಶಾಸಕ ಅವಿನಾಶ್ ಜಾಧವ್, ಬೆಂಬಲಿಗರ ಕಾರಿನ ಮೇಲೆ‌ ಕಲ್ಲು‌ ತೂರಾಟ

ಕಲಬುರಗಿ: ಚಿಂಚೋಳಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ‌ ಶಾಸಕ‌ ಅವಿನಾಶ್ ಜಾಧವ್​ ಹಾಗೂ ಅವರ ಬೆಂಬಲಿಗರ ಕಾರು‌ಗಳ ಮೇಲೆ ಕಲ್ಲು ತೂರಾಟ ನಡೆ​ದಿ​ದೆ. ಘಟನೆಯಲ್ಲಿ ಐದು ವಾಹನಗಳು ಜಖಂಗೊಂಡಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಶನಿವಾರ ಸಂಜೆ ಸಂಸದ ಉಮೇಶ ಜಾಧವ್​ ಅವರ ಪುತ್ರ ಚಿಂಚೋಳಿ ಮೀಸಲು ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಹಾಗೂ ಬಿಜೆಪಿ‌ ಅಭ್ಯರ್ಥಿ ಡಾ. ಅವಿನಾಶ್ ಜಾಧವ್​ ಹಾಗೂ ಅವರ ಸಂಗಡಿಗರು ಚಂದನಕೇರಾ ಗ್ರಾಮದ ದಲಿತರ ಓಣಿಯಲ್ಲಿ ಪ್ರಚಾರಕ್ಕೆ ತೆರಳಿದ್ದರು. ಪ್ರಚಾರ‌ …

Read More »

ಗ್ಯಾಂಗ್​ಸ್ಟರ್​ ಅತೀಕ್​ ಅಹ್ಮದ್​ ಹತ್ಯೆಯ ಭಯಾನಕ ವಿಡಿಯೋ

ಗ್ಯಾಂಗ್​ಸ್ಟರ್​, ರಾಜಕಾರಣಿಯಾಗಿದ್ದ ಅತೀಕ್​ ಅಹ್ಮದ್​ನನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯುವಾಗ ನಡೆದ ಹತ್ಯೆ ಘಟನೆಯ ವಿಡಿಯೋ ವೈರಲ್​​ ಆಗಿದೆ.’ ಇದನ್ನು ರಾಷ್ಟ್ರೀಯ ಸುದ್ದಿವಾಹಿನಿಯೊಂದು ಸೆರೆಹಿಡಿದಿದೆ. ಗ್ಯಾಂಗ್​ಸ್ಟರ್​ ಅತೀಕ್​ ಅಹ್ಮದ್​ ಹತ್ಯೆಯ ಭಯಾನಕ ವಿಡಿಯೋಪ್ರಯಾಗ್‌ರಾಜ್ (ಉತ್ತರಪ್ರದೇಶ): ಗ್ಯಾಂಗ್‌ಸ್ಟರ್, ರಾಜಕಾರಣಿಯಾಗಿದ್ದ ಅತೀಕ್ ಅಹ್ಮದ್ ಮತ್ತು ಅವರ ಸಹೋದರನ ಕೊಲೆ ಉತ್ತರಪ್ರದೇಶದಲ್ಲಿ ಸಂಚಲನ ಉಂಟು ಮಾಡಿದೆ. ಮಾಧ್ಯಮಗಳ ಕ್ಯಾಮರಾ ಎದುರೇ ಇಬ್ಬರ ಹತ್ಯೆಯಾಗಿದೆ. ವೈದ್ಯಕೀಯ ತಪಾಸಣೆಗಾಗಿ ಇಬ್ಬರನ್ನೂ ಆಸ್ಪತ್ರೆಗೆ ಕರೆತರುವಾಗಿನ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಹತ್ಯೆ …

Read More »

ರಾಜಶೇಖರ ಕಾರದಗಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ

ಬೆಳಗಾವಿ: ಸವದತ್ತಿ ಪುರಸಭೆಯ ಅಧ್ಯಕ್ಷ ರಾಜಶೇಖರ ಕಾರದಗಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಬಿಜೆಪಿ ಗ್ರಾಮೀಣ ಅಧ್ಯಕ್ಷ ಸಂಜ ಪಾಟೀಲ ಈ ಕುರಿತು ಪ್ರಕಟಣೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯಲ್ಲಿ ಬರುವ ಸವದತ್ತಿ ಪುರಸಭೆಯ ಅಧ್ಯಕ್ಷ ರಾಜಶೇಖರ ಕಾರದಗಿ ಇವರು ಪಕ್ಷದಿಂದ ಆಯೋಜಿಸಿದ ಸಭೆಗಳಿಗೆ ಆವ್ಹಾನ ನೀಡಿದರೂ ಸಭೆಗಳಿಗೆ ಗೈರಾಗಿದ್ದು ಕಂಡುಬಂದಿದೆ. ಸುಮಾರು ೨ ತಿಂಗಳ ಕಾಲದಿಂದ ಕಾಂಗ್ರೆಸ್ ಪಕ್ಷದಲ್ಲಿ ಅವರು ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಿತ್ತದ್ದರು ಎಂದು ಮಂಡಲ ಅಧ್ಯಕ್ಷರು …

Read More »

ಬೆಳಗಾವಿಗೆ ಆಗಮಿಸಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ.

ಬೆಳಗಾವಿ: ಟಿಕೆಟ್ ಹಂಚಿಕೆ ವಿಷಯದಲ್ಲಿ ಬೆಳಗಾವಿ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯಲ್ಲಿ ಉಂಟಾಗಿರುವ ಅಸಮಾಧಾನ ಉಲ್ಬಣವಾಗಿದೆ. ಕರ್ನಾಟಕ ಚುನಾವಣೆ ಉಸ್ತುವಾರಿಯಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ಬೆಳಗಾವಿಗೆ ಆಗಮಿಸಿ ಸಮಾಧಾನಪಡಿಸುವ ಯತ್ನ ಮಾಡಿದರಾದರೂ ಇದರಿಂದ ಯಾವುದೇ ಪ್ರಯೋಜನವಾಗಲಿಲ್ಲ. ಧರ್ಮೇಂದ್ರ ಪ್ರಧಾನ್ ಬೆಳಗಾವಿಯ ಖಾಸಗಿ ಹೊಟೆಲ್ ನಲ್ಲಿ ಅಸಮಾಧಾನಿತರ ಸಭೆ ಕರೆದಿದ್ದರು. ಜಿಲ್ಲೆಯ ಪ್ರಮುಖರೊಂದಿಗೆ ಚರ್ಚಿಸಿದ ನಂತರ ಅಸಮಾಧಾನಿತರನ್ನು ಒಬ್ಬೊಬ್ಬರಾಗಿ ಕರೆಸಿ ಸಮಾಧಾನಪಡಿಸುವ ಯತ್ನ ಮಾಡಿದರು. ಬೆಳಗಾವಿ ಉತ್ತರ ಕ್ಷೇತ್ರದ …

Read More »

ಬೇಸರಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾನುವಾರ ಶಿರಸಿಗೆ ತೆರಳಿ ರಾಜಿನಾಮೆ

ಹುಬ್ಬಳ್ಳಿ – ವಿಧಾನ ಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಟಿಕೆಟ್ ತಪ್ಪಿದ್ದರಿಂದ ತೀವ್ರ ಬೇಸರಗೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಶನಿವಾರ ತಡರಾತ್ರಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ ಜೋಶಿ ಮತ್ತು ಮುಖ್ಯಮಂತ್ರಿ ಬಸವರಾ ಬೊಮ್ಮಾಯಿ ಸಂದಾನ ಯತ್ನ ನಡೆಸಿದ ಬಳಿಕ ಶೆಟ್ಟರ್ ತಮ್ಮ ರಾಜಿನಾಮೆ ನಿರ್ಧಾರ ಪ್ರಕಟಿಸಿದರು. ಭಾನುವಾರ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಲಹೆಗಡೆ ಕಾಗೇರಿ ಅವರಿಗೆ ರಾಜಿನಾಮೆ …

Read More »

ಐತಿಹಾಸಿಕ “ಲೀಡ್” ಆಗಲು ಕಾರ್ಯಕರ್ತರು ಒಂದಾಗಿ, ಒಗ್ಗಟ್ಟಾಗಿ ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಶನಿವಾರದಂದು ಅರಭಾವಿ ಕ್ಷೇತ್ರದ ಎಲ್ಲ ಮತಗಟ್ಟೆಗಳ ಪ್ರಮುಖರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಲೀಡ್ ನೀಡಲು ಪ್ರತಿ ಮತಗಟ್ಟೆಗಳ ಪ್ರಮುಖರು ಹಾಗೂ ಮುಖಂಡರು ಒಗ್ಗಟ್ಟಾಗಿ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಭವನದಲ್ಲಿ ಜರುಗಿದ ಅರಭಾವಿ ಕ್ಷೇತ್ರದ 281 ಮತಗಟ್ಟೆಗಳ ಪ್ರಮುಖರ ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, …

Read More »

ಭೀಕರ ರಸ್ತೆ ಅಪಘಾತ; 13 ಜನರು ದುರ್ಮರಣ

ಮುಂಬೈ: ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿರುವ ಘತನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಖಾಸಗಿ ಬಸ್ ಪಲ್ಟಿಯಾಗಿ 13 ಜನರು ಮೃತಪಟ್ಟಿದ್ದು, 29 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಖೋಪೋಲಿ ನಗರದಲ್ಲಿ ಈ ದುರಂತ ಸಂಭವಿಸಿದೆ.

Read More »

ಸಿಎಂ ರೇಸ್ ನಲ್ಲಿದ್ದವರಿಗೆ ಟಿಕೆಟ್ ಸಿಗದಂತೆ ಮಾಡಿದ್ದು ಜೋಶಿ :ಯು.ಟಿ.ಖಾದರ್,

ಮಂಗಳೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣ ಅಕಣ ರಂಗೇರಿದೆ. ಹಿರಿಯ ನಾಯಕರಿಗೆ ಬಿಜೆಪಿ ಟಿಕೆಟ್ ನೀಡದ ವಿಚಾರವಾಗಿ ಮಾತನಾಡಿರುವ ಪರಿಷತ್ ಉಪನಾಅಕ ಯು.ಟಿ.ಖಾದರ್, ಹಿಂದೆಲ್ಲ ಬಿಜೆಪಿಯಲ್ಲಿ ಮೂರು ಬಾಗಿಲಿತ್ತು, ಈಗ 25 ಬಾಗಿಲುಗಳಾಗಿವೆ ಎಂದು ಟಾಂಗ್ ನೀಡಿದರು. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯು.ಟಿ.ಖಾದರ್, ಈಬಾರಿ ಟಿಕೆಟ್ ಘೋಷಣೆಯಲ್ಲಿಯೇ ಎಲ್ಲವೂ ಗೊತ್ತಾಗುತ್ತದೆ. ಯಾರೆಲ್ಲ ಮುಖ್ಯಮಂತ್ರಿ ರೇಸ್ ನಲ್ಲಿದ್ದರು, ಅವರೆಲ್ಲರಿಗೂ ಟೆಕೆಟ್ ಸಿಗದಂತೆ ಪ್ರಹ್ಲಾದ್ ಜೋಶಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಯಾರೂ ಮುಖ್ಯಮಂತ್ರಿ …

Read More »

ಬೆಂಬಲಿಗರ ಸಭೆ ಕರೆದ ಬೆನ್ನಲ್ಲೇ ಶೆಟ್ಟರ್​ ಅವರ ಮನವೊಲಿಸುವ ಜೋಶಿ ಯತ್ನ

ಹುಬ್ಬಳ್ಳಿ: ವಿಧಾನಾಸಭೆ ಚುನಾವಣೆ ಘೋಷಣೆಯಾಗಿದ್ದರಿಂದ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಈಗಾಗಲೇ ಕೆಲ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ರಿಲೀಸ್​ ಮಾಡಿದ್ದು, ಅನೇಕರಿಗೆ ಪಕ್ಷದಿಂದ ಟಿಕೆಟ್​ ದೊರೆತ್ತಿದೆ. ಇನ್ನು ಕೆಲವರಿಗೆ ಟಿಕೆಟ್​ ದೊರೆತ್ತಿಲ್ಲ. ಇದರ ಮಧ್ಯೆ ಇನ್ನು ಕೆಲ ಕ್ಷೇತ್ರಗಳಿಗೆ ಟಿಕೆಟ್​ ಘೋಷಣೆ ಆಗಿಲ್ಲ. ಹೀಗಾಗಿ ಶೆಟ್ಟರ್ ಟಿಕೆಟ್ ಘೋಷಣೆ ವಿಳಂಬ ಹಿನ್ನೆಲೆ ಬೆಂಬಲಿಗರ ಸಭೆಗೆ ತಯಾರಿ ನಡೆಸಿದ್ದರು. ಇದರ ಮಧ್ಯೆ ಶೆಟ್ಟರ್​ ನಿವಾಸಕ್ಕೆ ಜೋಶಿ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ …

Read More »

ಹಿಡಕಲ್ ಡ್ಯಾಂ ನೀರು ಪೂರೈಕೆ ಪೈಪ್ ಭಗ್ನ; 50 ಅಡಿ ಎತ್ತರ ಪುಟಿದ ನೀರು

ಬೆಳಗಾವಿ: ಹಿಡಕಲ್ ಡ್ಯಾಂನಿಂದ ಬೆಳಗಾವಿ ನಗರಕ್ಕೆ ನೀರು ಪೂರೈಸುವ ಪೈಪ್ ಲೈನ್ ಶನಿವಾರ ಒಡೆದ ಪರಿಣಾಮ ಭಾರೀ ಪ್ರಮಾಣದಲ್ಲಿ ನೀರು ಸೋರಿಕೆಯಾಗಿದೆ. ಖನಗಾಂವ ಬಿ.ಕೆ. ಗ್ರಾಮದ ಬಳಿ ಒತ್ತಡದಿಂದ ಒಡೆದ ಪೈಪ್ ಪೈನ್ ನಿಂದ ನೀರು ಸುಮಾರು 50 ಅಡಿ ಎತ್ತರಕ್ಕೆ ಚಿಮ್ಮಿತ್ತು. ಹಲವರು ಇದನ್ನು ಕಂಡು ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದರೆ ಬಿರು ಬೇಸಿಗೆಯಲ್ಲಿ ನೀರಿನ ಅಪವ್ಯಯವಾಗುತ್ತಿರುವುದಕ್ಕೆ ಮರುಗಿದರು. ಬೆಳಗಾವಿ- ಗೋಕಾಕ್ ರಸ್ತೆಯಲ್ಲಿ ಈ ಭಾರಿ ಪ್ರಮಾಣದ ನೀರಿನ ಹೊರಹೊಮ್ಮುವಿಕೆಯಿಂದ ಕೆಲ ಕಾಲ …

Read More »