ಬೆಳಗಾವಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲೆಗೆ ನಿಯೋಜಿತಗೊಂಡಿರುವ ಎಲ್ಲ 18 ಮತಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜತೆ ಸುವರ್ಣ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಶನಿವಾರ ಸಭೆ ನಡೆಸಿದರು. ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ವೆಚ್ಚ ವೀಕ್ಷಕ ಸುಬೋಧ ಸಿಂಗ್ ಮಾತನಾಡಿ, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಿಯೋಜಿಸಲಾಗಿರುವ ವಿವಿಧ ತಂಡಗಳು …
Read More »ಉತ್ತರ ಕನ್ನಡ ಜಿಲ್ಲೆಯ ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪೂರ್ಣಗೊಳ್ಳದೆ ದಿನನಿತ್ಯ ಸವಾರರು ಪರದಾಡುವಂತಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ – ಕುಮಟಾ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪೂರ್ಣಗೊಳ್ಳದೆ ದಿನನಿತ್ಯ ಸವಾರರು ಪರದಾಡುವಂತಾಗಿದೆ. ಧೂಳುಮಯವಾದ ಹೆದ್ದಾರಿಯ ಸಮಸ್ಯೆಯ ಕುರಿತು ಸ್ಥಳೀಯರು ಹಾಗು ಸವಾರರು ಆರೋಪ ಮಾಡುತ್ತಿರುವುದು.ಕಾರವಾರ: ಅದು ನಿತ್ಯ ಸಾವಿರಾರು ವಾಹನಗಳು ಸಂಚಾರ ಮಾಡುವ ರಾಷ್ಟ್ರೀಯ ಹೆದ್ದಾರಿ. ಇಲ್ಲಿ ಕಾಮಗಾರಿ ಪ್ರಾರಂಭವಾಗಿ ವರ್ಷಗಳೇ ಉರುಳಿದರೂ ಈವರೆಗೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಅರೆ ಬರೆ ಕಾಮಗಾರಿಯಾಗಿರುವ ಹೆದ್ದಾರಿಯಲ್ಲಿ ತಗ್ಗು, ದಿನ್ನೆ, ಧೂಳಿನ ಮಧ್ಯ ಅನಿವಾರ್ಯವಾಗಿ ವಾಹನಗಳು ಸಂಚಾರ ಮಾಡುವಂತಾಗಿದೆ. …
Read More »ಜೆಡಿಎಸ್ ಭರವಸೆ ಪತ್ರ ಬಿಡುಗಡೆ: ಮಾತೃಶ್ರೀ, ಮಹಿಳಾ ಸಬಲೀಕರಣ, ರೈತ ಚೈತನ್ಯ ಸೇರಿ 12 ಭರವಸೆ ನೀಡಿದ ಜೆಡಿಎಸ್
ಬೆಂಗಳೂರು: ಕರುನಾಡ ಜನತೆಗಾಗಿ ಜೆಡಿಎಸ್ 12 ಭರವಸೆಯ ಪತ್ರ ಸಿದ್ದಪಡಿಸಿದ್ದು, ಇಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಬಿಡುಗಡೆ ಮಾಡಿದ್ದಾರೆ. ಪದ್ಮನಾಭನಗರದಲ್ಲಿರುವ ಗೌಡರ ನಿವಾಸದಲ್ಲಿ ಇಂದು ಭರವಸೆ ಪತ್ರ ಬಿಡುಗಡೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು, ಜನತಾ ಪ್ರಣಾಳಿಕೆ ಕರುಡು ರಚನಾ ಸಮಿತಿಯ ಅಧ್ಯಕ್ಷ ಬಿ.ಎಂ.ಫಾರೂಕ್ ಅವರು, ಸದಸ್ಯರಾದ ಕುಪೇಂದ್ರ ರೆಡ್ಡಿ, ಕೆ.ಎನ್. ತಿಪ್ಪೇಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ಜೆಡಿಎಸ್ ಪಕ್ಷ ಅಧಿಕಾರಕ್ಕೆ …
Read More »ಚೆಕ್ ಬೌನ್ಸ್ ಪ್ರಕರಣ-ವೈಎಸ್‌ವಿ ದತ್ತಾಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.
ಬೆಂಗಳೂರು: ಮಾಜಿ ಶಾಸಕ ಹಾಗೂ ಜೆಡಿಎಸ್ ಪಕ್ಷದ ಕಡೂರು ವಿಧಾನ ಸಭಾಕ್ಷೇತ್ರದ ಅಭ್ಯರ್ಥಿ ವೈ.ಎಸ್.ವಿ ದತ್ತಾ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿ ಆದೇಶಿದೆ. ಚೆಕ್ ಬೌನ್ಸ್ ಆರೋಪಕ್ಕೆ ಸಂಬಂಧಿಸಿದಂತೆ ಸಿ.ಎಸ್ ಸೋಮೇಗೌಡ ಇತರರು ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ (42ನೇ ಎಸಿಎಂಎಂ ನ್ಯಾಯಾಲಯ) ನ್ಯಾಯಾಧೀಶರಾದ ಜೆ.ಪ್ರೀತ್ ಅವರು, ಶನಿವಾರ ಬಂಧನ ರಹಿತ ವಾರಂಟ್ ಜಾರಿ …
Read More »ಪರಿಷತ್ ನಲ್ಲಿ ಬಹುಮತ ಕುಸಿತದ ಚಿಂತೆಯಲ್ಲಿ ಬಿಜೆಪಿ
ಬೆಂಗಳೂರು: ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆ ಗೊಂದಲದಲ್ಲಿ ಅತೃಪ್ತಿಯ ಭುಗಿಲೆಬ್ಬಿಸಿಕೊಂಡಿರುವ ಬಿಜೆಪಿ ಇದೀಗ ವಿಧಾನ ಪರಿಷತ್ ನಲ್ಲಿ ಬಹುಮತ ಕಳೆದುಕೊಳ್ಳುವ ಆತಂಕದಲ್ಲಿ ಮುಳುಗಿದೆ. 75 ಸದ್ಯಬಲ ಹೊಂದಿರುವ ವಿಧಾನ ಪರಿಷತ್ ನಲ್ಲಿ ಬಹುಮತಕ್ಕೆ 38 ಸ್ಥಾನಗಳನ್ನು ಹೊಂದುವುದು ಅಗತ್ಯ. ಪ್ರಸ್ತುತ ಕಾಂಗ್ರೆಸ್ 26, ಜೆಡಿಎಸ್ 8 ಸದಸ್ಯರನ್ನು ಹೊಂದಿದ್ದು ಒಬ್ಬ ಪಕ್ಷೇತರ ಸದಸ್ಯರಿದ್ದಾರೆ. ಒಬ್ಬರು ಸಭಾಪತಿ ಇದ್ದು, ಮೂರು ಸ್ಥಾನಗಳು ಖಾಲಿ ಇವೆ. ಹಲವು ವರ್ಷಗಳ ನಂತರ 39 ಸದಸ್ಯಬಲದೊಂದಿಗೆ ಬಹುಮತ …
Read More »16, 17ರಂದು ಬೆಳಗಾವಿಯಲ್ಲಿ 13 ನೇ ಅಖಿಲ ಕರ್ನಾಟಕ ಗಮಕ ಕಲಾ ಸಮ್ಮೇಳನ
ಲೇಖನ: ಕಲಾನಿಧಿ ” ಗಮಕ” ಕರ್ನಾಟಕದ ಅತ್ಯಂತ ಪ್ರಾಚೀನ ಹೆಮ್ಮೆಯ ಕಲೆ. ಸಾಹಿತ್ಯ ಮತ್ತು ಸಂಗೀತ ಎರಡೂ ಸಮ್ಮಿಳಿಸಿದ ಸುಂದರ ಕಲೆ. ಕನ್ನಡದ ಶ್ರೇಷ್ಠ ಕಾವ್ಯಗಳನ್ನು ಕನ್ನಡಿಗರ ಮನೆಮನಕ್ಕೆ ತಲುಪಿಸುವ ಏಕೈಕ ಕಲೆ. ಪಂಪರನ್ನರಿಂದ ಕುಮಾರವ್ಯಾಸ, ಲಕ್ಷ್ಮೀಶರತನಕದ ಕವಿಕಾವ್ಯ ನಮ್ಮ ಕನ್ನಡ ನೆಲದ ಭವ್ಯ ಸಾಹಿತ್ಯ ಪರಂಪರೆಯ ಪ್ರತೀಕ. ಗಮಕದಲ್ಲಿ ಕಾವ್ಯಕ್ಕೆ ಹೆಚ್ಚಿನ ಮಹತ್ವ. ಸಂಗೀತದ ರಾಗಗಳನ್ನು ಬಳಸಿ ಕಾವ್ಯದ ಸೊಗಸನ್ನು , ಭಾಷೆಯ ಸೊಬಗನ್ನು, ಅರ್ಥದ ಸೊಗಡನ್ನು ಕೇಳುಗರಿಗೆ …
Read More »ನಾಳೆ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತ
ಬೆಳಗಾವಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ಕಣಬರ್ಗಿ 110 ಕೆವಿ ಉಪಕೇಂದ್ರದಲ್ಲಿ ಮೊದಲ ತ್ರೈಮಾಸಿಕ ಹಾಗೂ ಇತರ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಏ.16ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವ ಪ್ರದೇಶಗಳಾದ ಮುಚ್ಚಂಡಿ, ಅಷ್ಟೆ, ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಂ.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ದಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ, …
Read More »ಬಿಜೆಪಿ, ಜೆಡಿಎಸ್ ಪಕ್ಷದಿಂದ ಇನ್ನೂ 25 ನಾಯಕರು ಕಾಂಗ್ರೆಸ್ ಸೇರಲಿದ್ದಾರೆ – ಡಿ.ಕೆ ಶಿ.
ಬೆಂಗಳೂರು ಗ್ರಾಮಾಂತರ: ಲಕ್ಷ್ಮಣ್ ಸವದಿ ಸೇರಿದಂತೆ ಬಿಜೆಪಿ, ಜೆಡಿಎಸ್ ಪಕ್ಷದಿಂದ ಇನ್ನೂ 25 ನಾಯಕರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಹಲವು ನಾಯಕರು ಸೇರ್ಪಡೆಗೊಳ್ಳುವ ಒಲವು ತೋರಿಸಿದ್ದಾರೆ. ಶೀಘ್ರವೇ ಅವರೆಲ್ಲಾ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದರು. ಮಾಜಿ ಉಪಮುಖ್ಯಮಂತ್ರಿ, ಬೆಳಗಾವಿಯ ಪ್ರಭಾವಿ ನಾಯಕ ಲಕ್ಷ್ಮಣ ಸವದಿ …
Read More »ಕಲಬುರಗಿಯಲ್ಲಿ ತಡರಾತ್ರಿ ಕಾರು ಅಪಘಾತ : ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಗೆ ಗಂಭೀರ ಗಾಯ
ಕಲಬುರಗಿ : ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಅವರಿದ್ದ ಕಾರು ಅಪಘಾತವಾಗಿದ್ದು, ಅಪಘಾತದಲ್ಲಿ ಬಾಬುರಾವ್ ಚಿಂಚನಸೂರು ಗಾಯಗೊಂಡಿರುವ ಘಟನೆ ನಡೆದಿದೆ. ತಡರಾತ್ರಿ 12.30 ರ ಸುಮಾರಿಗೆ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದ್ದು, ಬಾಬುರಾವ್ ಚಿಂಚನಸೂರು ಕಾಳು, ಮುಖಕ್ಕೆ ಗಾಯವಾಗಿದೆ. ಕೂಡಲೇ ಅವರನ್ನು ಕಲಬುರಗಿಯ ಯನೈಟೆಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾದಗಿರಿಯಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಾರು ಅಪಘಾತವಾಗಿದೆ. ನಿದ್ದೆ ಮಂಪರಿನಲ್ಲಿದ್ದ ಕಾರು …
Read More »ಹೃದಯಾಘಾತದಿಂದ ತಡರಾತ್ರಿ ಕಾಂಗ್ರೆಸ್ ನ ಮಾಜಿ ಶಾಸಕ `ವೆಂಕಟಸ್ವಾಮಿ’ ನಿಧನ|
ಬೆಂಗಳೂರು : ದೇವನಹಳ್ಳಿ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ (53) ಅವರು ತೀವ್ರ ಹೃದಯಾಘಾತದಿಂದ ತಡರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ ನ ಮಾಜಿ ಶಾಸಕ ವೆಂಕಟಸ್ವಾಮಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧರನಾಗಿದ್ದಾರೆ. ವೆಂಕಟಸ್ವಾಮಿಗೆ ಕಳೆದ 1 ತಿಂಗಳಲ್ಲಿ ಮೂರು ಬಾರಿ ಎದೆನೋವು ಕಾಣಿಸಿಕೊಂಡಿತ್ತು. ಎರಡು ಬಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಕಾಂಗ್ರೆಸ್ …
Read More »
Laxmi News 24×7