ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿಯಿದ್ದು, ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕಸರತ್ತು ನಡೆಸಿದೆ. ನವದೆಹಲಿಯಲ್ಲಿ ಬಿಜೆಪಿ ವರಿಷ್ಠರು ಸರಣಿ ಸಭೆಗಳನ್ನು ನಡೆಸಿದರೂ ಕೆಲ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕಂಗಟ್ಟಾಗಿದ್ದು, ಇಂದು ಸಂಜೆ ಮತ್ತೊಂದು ಸುತ್ತಿನ ಸಭೆ ನದೆಸಲು ತೀರ್ಮಾನಿಸಲಾಗಿದೆ. ನವದೆಹಲಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಇಂದು ಸಂಜೆ 4 ಗಂಟೆಗೆ ಬಿಜೆಪಿ ರಾಷ್ತ್ರಾಧ್ಯಕ್ಷ ಜೆ.ಪಿ.ನಡ್ಡಾ ನಿವಸದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ ಎಂದರು. ಇಂದು …
Read More »ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ
ಬೆಳಗಾವಿ: “ವಿಧಾನಸಭಾ ಚುನಾವಣೆ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಅನುಕೂಲವಾಗುವಂತೆ ಎಂಸಿಸಿ ಸೇರಿದಂತೆ ನೇಮಿಸಲಾಗಿರುವ ವಿವಿಧ ನೋಡಲ್ ಅಧಿಕಾರಿಗಳು ತಮಗೆ ವಹಿಸಲಾಗಿರುವ ಕೆಲಸಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು” ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. “ಮಾದರಿ ನೀತಿ ಸಂಹಿತೆ, ತರಬೇತಿ, ಸಾರಿಗೆ ನಿರ್ವಹಣೆ, ಗಣಕೀಕರಣ, ಸೈಬರ್ ಭದ್ರತೆ, ಸ್ವೀಪ್, ಇವಿಎಂ …
Read More »ಹಳ್ಳಿಗಳಲ್ಲಿ ಮತ ಬಹಿಷ್ಕಾರ ಟ್ರೆಂಡ್; 500ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಬಾಯ್ಕಾಟ್ ?
ಬೆಂಗಳೂರು: ಮತದಾನ ಪ್ರಮಾಣ ಹೆಚ್ಚು ಮಾಡಬೇಕು. ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಬೇಕೆಂದು ಚುನಾವಣಾ ಆಯೋಗ ಸಾಕಷ್ಟು ಪ್ರಯತ್ನ ನಡೆಸಿದೆ. ಆದರೆ ರಾಜ್ಯದ ಸುಮಾರು 500ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಜನ ಚುನಾವಣೆ ಬಹಿಷ್ಕಾರದ ಬೆದರಿಕೆ ಹಾಕಿದ್ದಾರೆ. ಇದು ಜಿಲ್ಲಾಡಳಿತಗಳಿಗೆ ದೊಡ್ಡ ತಲೆನೋವಾಗಿದೆ. ಕ್ಷೇತ್ರದ ಶಾಸಕರಿಗಂತೂ ಈ ಬಿಕ್ಕಟ್ಟಿನ ಪರಿಸ್ಥಿತಿ ಗೆಲುವಿಗೆ ದೊಡ್ಡ ಅಡ್ಡಿಯಾಗಿದೆ. ಮುಜುಗರವನ್ನೂ ಉಂಟು ಮಾಡುತ್ತಿದೆ. ಕಾಲು ಸಂಕ, ತೂಗು ಸೇತುವೆ, ವಿದ್ಯುತ್ ದೀಪ, ಚರಂಡಿ, ಕುಡಿಯುವ ನೀರು, ಶಾಲೆಗೆ ಕಾಲುದಾರಿಯಂತಹ ಸಣ್ಣ …
Read More »ವೃದ್ಧರು, ಅಂಗವಿಕಲರಿಗೆ ಮನೆಯಲ್ಲೇ ಮತದಾನ: ಅಂಗನವಾಡಿ ಸಿಬಂದಿಗೆ ಹೆಚ್ಚುವರಿ ಹೊಣೆ
ಉಡುಪಿ: ವಿಧಾನಸಭಾ ಚುನಾವಣೆ ಕರ್ತವ್ಯಕ್ಕೆ ಸಂಬಂಧಿಸಿ ಪ್ರಸ್ತುತ ಜಿಲ್ಲೆಯ ಗ್ರಾಮೀಣ ಭಾಗದ ತಳಮಟ್ಟದಲ್ಲಿ ಪೂರ್ವ ತಯಾರಿ ಕೆಲಸಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗುತ್ತಿದೆ. ಈ ನಡುವೆ ಅಂಗನವಾಡಿ ಸಿಬಂದಿಗೆ ಜವಾಬ್ದಾರಿ ಹೆಚ್ಚಾಗಿದೆ. 80 ವರ್ಷ ಮೇಲ್ಪಟ್ಟವರು, ಅಂಗವಿಕಲರಿಗೆ ಮನೆಯಿಂದಲೇ ವೋಟು ಮಾಡುವ ಈ ವರ್ಷದ ಹೊಸ ಪರಿಕಲ್ಪನೆಯನ್ನು ಚುನಾವಣ ಆಯೋಗ ಜಾರಿಗೊಳಿಸಿದೆ. ದ.ಕ. ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ 46,927 ಹಾಗೂ ಅಂಗವಿಕಲ ಮತದಾರರು 14,007 ಇದ್ದಾರೆ. ಉಡುಪಿ ಜಿಲ್ಲೆಯಲ್ಲಿ 80 ವರ್ಷ …
Read More »ಬರೋಬ್ಬರಿ 200 ಕೋಟಿ ರೂ.! ಅಂಕೆ ಮೀರಿದ ಚುನಾವಣ ಅಕ್ರಮ
ಬೆಂಗಳೂರು: ಬರೋಬ್ಬರಿ 200 ಕೋಟಿ ರೂಪಾಯಿ! ರಾಜ್ಯದಲ್ಲಿ ಒಂದು ತಿಂಗಳಿನಲ್ಲಿ ಬೆಳಕಿಗೆ ಬಂದಿರುವ ಚುನಾವಣ ಅಕ್ರಮಗಳ ಮೊತ್ತ ಇದು. ಹಿಂದಿನ ಚುನಾವಣೆಗೆ ಹೋಲಿಸಿದರೆ ಇದು ಪತ್ತೆಯಾದ ದಾಖಲೆ ಮೌಲ್ಯದ ಅಕ್ರಮ. “ಕರ್ನಾಟಕದಲ್ಲಿ ನಮಗೆ ಹಣಬಲವೇ ಸವಾಲು’ ಎಂದು ಮುಖ್ಯ ಚುನಾವಣ ಆಯುಕ್ತ ರಾಜೀವ್ ಕುಮಾರ್ ಮಾ. 11ರಂದು ಆತಂಕ ವ್ಯಕ್ತಪಡಿಸಿದ್ದರು. ಅದು ಈಗ ನಿಜವಾಗುತ್ತಿದೆ. ಇದು ರಾಜ್ಯದಲ್ಲಿ ಆಮಿಷಮುಕ್ತ ಚುನಾವಣೆಯ ಬಗ್ಗೆ ದೊಡ್ಡ ಪ್ರಶ್ನೆ ಮೂಡಿಸಿದೆ. 2018ರ ವಿಧಾನಸಭೆ ಚುನಾವಣೆ ವೇಳೆ …
Read More »ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ
ಬೆಂಗಳೂರು: ಚುನಾವಣ ಪ್ರಚಾರ ಮಾಡುವ ನಟರ ಚಲನಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಚುನಾವಣ ಆಯೋಗ ತಿಳಿಸಿದೆ. ನಟ ಕಿಚ್ಚ ಸುದೀಪ್ ಮುಖ್ಯ ಮಂತ್ರಿ ಪರ ಚುನಾವಣ ಪ್ರಚಾರ ಮಾಡುವ ವಿಷಯಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು, ಯಾರೇ ಸಿನೆಮಾ ನಟರು ಯಾವುದೇ ಪಕ್ಷ , ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಅಂಥವರ ಚಿತ್ರಗಳನ್ನು ಸರಕಾರದ ವೆಚ್ಚದಲ್ಲಿ ನಡೆಯುವ ಮಾಧ್ಯಮ ಅಥವಾ ಚಾನಲ್‌ಗಳಲ್ಲಿ ಪ್ರಸಾರ …
Read More »18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ತಪ್ಪುವ ಭೀತಿ
ಬೆಂಗಳೂರು: ರಾಜ್ಯದ 18 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ತಪ್ಪುವ ಭೀತಿ ಉಂಟಾಗಿದೆ. ವಯಸ್ಸಿನ ಕಾರಣ ಮತ್ತು ಕ್ಷೇತ್ರದಲ್ಲಿ ವಿರೋಧಿ ಅಲೆಯ ಹಿನ್ನೆಲೆಯಲ್ಲಿ ಕೆಲವರಿಗೆ ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ ಎನ್ನುವ ಸುದ್ದಿ ಬಂದಿದೆ. ಭಾನುವಾರ ರಾತ್ರಿ ಅಥಾ ಸೋಮವಾರ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು ಇದರಲ್ಲಿ ಸುಮಾರು 75 -80 ಹಾಲಿ ಶಾಸಕರ ಹೆಸರು ಇರುವ ಸಾಧ್ಯತೆ ಇದೆ. ವಯಸ್ಸಿನ ಕಾರಣಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಾಮದುರ್ಗದ ಮಹಾದೇವಪ್ಪ ಯಾದವಾಡ, ಕಲಘಟಗಿಯ …
Read More »ಕಿತ್ತೂರನ ಚೆಕ್ ಪೋಸ್ಟ್ ನಲ್ಲಿ 4.5 ಲಕ್ಷ ರೂ. ಮೌಲ್ಯದ ಆಭರಣ ವಶ
ಬೆಳಗಾವಿ: ಕಿತ್ತೂರಿನ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಚುನಾವಣಾ ಸಿಬ್ಬಂದಿ ಮತ್ತು ಪೊಲೀಸರು ಅಪಾರ ಪ್ರಮಾಣದ ಚಿನ್ನ ಮತ್ತು ಬೆಳ್ಳಿ ಆಭರಣ ವಶಪಡಿಸಿಕೊಂಡಿದ್ದಾರೆ. 4.5 ಲಕ್ಷ ರೂ. ಮೌಲ್ಯದ ಆಭರಣಗಳನ್ನು ಕಾರು ಸಮೇತ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಆಭರಣಗಳಿಗೆ ಯಾವುದೇ ದಾಖಲೆಗಳಿಲ್ಲದ್ದರಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ.
Read More »ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಏ.11 ರವರೆಗೆ ಅವಕಾಶ
ಬೆಳಗಾವಿ: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಏ.11 ರವರೆಗೆ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಏ.20 ಕಡೆಯ ದಿನವಾಗಿರುತ್ತದೆ. ಸಾರ್ವಜನಿಕರು ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್(ಎನ್.ವಿ.ಎಸ್.ಪಿ) ಲಾಗಿನ್ ಆಗುವ ಮೂಲಕ ತಮ್ಮ ಹೆಸರು ನೋಂದಾಯಿಸಲು ಅಥವಾ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬಹುದು. ಇದಲ್ಲದೇ ಅರ್ಹ ಮತದಾರರು ವೋಟರ್ ಹೆಲ್ಪ್ ಲೈನ್ ಆ್ಯಪ್ ಮೂಲಕವೂ ನಮೂನೆ-6 …
Read More »ಇಂದು ರಾತ್ರಿಯೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಫೈನಲ್
ಬೆಂಗಳೂರು: ದಿಲ್ಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಇಂದು ರಾತ್ರಿ ಅಥವಾ ನಾಳೆ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಪ್ರಧಾನಿ ನೇತೃತ್ವದ ಈ ಸಭೆಯಲ್ಲಿ 140ಕ್ಕೂ ಹೆಚ್ಚು ಹೆಸರುಗಳನ್ನು ಒಳಗೊಂಡಿರುವ ಮೊದಲ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆಗಳಿದ್ದು, ಪಟ್ಟಿ ಭಾನುವಾರ ರಾತ್ರಿ ಅಥವಾ ಸೋಮವಾರ ಬೆಳಗ್ಗೆ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. …
Read More »