ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಲ್ಲಿರುವುದಿಂದ ಎಲ್ಲೆಡೆ ತಪಾಸಣೆ ಮಾಡಲಾಗುತ್ತಿದೆ. ಆದ್ದರಿಂದ ಅನಗತ್ಯ ಗೊಂದಲವನ್ನು ತಡೆಗಟ್ಟಲು ಬ್ಯಾಂಕುಗಳು ನಗದು ಹಣ ಸಾಗಾಣಿಕೆ ಮಾಡುವ ಸಂದರ್ಭದಲ್ಲಿ ಕೀಮ್ ಆ್ಯಪ್ ನಲ್ಲಿ ಸಂಪೂರ್ಣ ವಿವರವನ್ನು ನಮೂದಿಸಿರಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೀಮ್ (KEEM) ಆ್ಯಪ್ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಏ.12) ನಡೆದ ಜಿಲ್ಲೆಯ ಬ್ಯಾಂಕರುಗಳ ಸಭೆಯ ಅಧ್ಯಕ್ಷತೆ …
Read More »18 ವಿಧಾನ ಸಭಾ ಮತಕ್ಷೇತ್ರಗಳಿಗೆ 12 ಜನ ಚುನಾವಣಾ ವೆಚ್ಚ ವೀಕ್ಷಕರನ್ನು ಚುನಾವಣಾ ಆಯೋಗವು ನಿಯೋಜಿಸಿರುತ್ತದೆ
ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಒಟ್ಟು 18 ವಿಧಾನ ಸಭಾ ಮತಕ್ಷೇತ್ರಗಳಿಗೆ 12 ಜನ ಚುನಾವಣಾ ವೆಚ್ಚ ವೀಕ್ಷಕರನ್ನು ಚುನಾವಣಾ ಆಯೋಗವು ನಿಯೋಜಿಸಿರುತ್ತದೆ. ಭಾರತೀಯ ಕಂದಾಯ ಸೇವೆ(ಐ.ಆರ್.ಎಸ್)ಗೆ ಸೇರಿದ ಅಧಿಕಾರಿಗಳನ್ನು ಚುನಾವಣಾ ವೆಚ್ಚ ವೀಕ್ಷಕರಾಗಿ ನಿಯೋಜಿಸಲಾಗಿದೆ. ಹದಿನೆಂಟು ಕ್ಷೇತ್ರಗಳ ಪೈಕಿ ಕೆಲವು ಕಡೆ ಎರಡು ಕ್ಷೇತ್ರಗಳಿಗೆ ಒಬ್ಬ ಅಧಿಕಾರಿಯನ್ನು ನೇಮಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಮತಕ್ಷೇತ್ರಗಳು ಹಾಗೂ ಚುನಾವಣಾ ವೆಚ್ಚ ವೀಕ್ಷಕರ ವಿವರ: …
Read More »ಅಕ್ರಮವಾಗಿ ಗೋವು ಸಾಗಾಟ ವಾಹನ, ಗೋವುಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ
ವಾಹನದಲ್ಲಿ ಅಕ್ರಮವಾಗಿ ಗೋವು ಸಾಗಾಟ ವೇಳೆ ಪೊಲೀಸರು ದಾಳಿ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ದಾಳಿ ವೇಳೆ ಡ್ರೈವರ್ ಸ್ಥಳದಲ್ಲಿ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ವಾಹನದಲ್ಲಿ 8ಕ್ಕೂ ಹೆಚ್ಚು ಗೋವುಗಳ ರಕ್ಷಣೆ ಮಾಡಲಾಗಿದೆ. ಕೆಎ 28 ಬಿ 0742 ನಂಬರಿನ ವಾಹನದಲ್ಲಿ ಗೋವು ಸಾಗಾಟ ಮಾಡಲಾಗುತ್ತಿತ್ತು. ವಾಹನ, ಗೋವುಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಬಬಲೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಕಳಸಾ ಬಂಡೂರಿ ರೈತರ ಮೇಲೆ ಬಂಧನ ವಾರಂಟ್ ಜಾರಿ
ಕುಡಿಯುವ ನೀರಿಗಾಗಿ ಹೋರಾಟ ಮಾಡಿದ ಕಳಸಾ ಬಂಡೂರಿ ರೈತರ ಮೇಲೆ ಬಂಧನ ವಾರಂಟ್ ಜಾರಿ ಮಾಡಿ ರೈತರ ಮನೆ ಬಾಗಿಲಿಗೆ ವಾರಂಟ್ ನೋಟಿಸ್ ಅಂಟಿಸುವ ಮೂಲಕ ಮತ್ತೆ ರೈತರಿಗೆ ಕಿರುಕುಳ ನೀಡಲು ಪ್ರಾರಂಭಿಸಿದೆ. ಹೌದು 2016 ರಲ್ಲಿ ಮಹದಾಯಿ ಕಳಸಾ ಬಂಡೂರಿ ಹೋರಾಟಗಾರರು ಕುಡಿಯುವ ನೀರಿಗಾಗಿ ನಮ್ಮ ಪಾಲಿನ ನೀರನ್ನ ಹುಬ್ಬಳ್ಳಿ ಧಾರವಾಡಕ್ಕೆ ಹೋಗವುದನ್ನು ತಡೆಯಲು ಅಮ್ಮಿನಭಾವಿ ಗ್ರಾಮದ ಬಳಿವಿರುವ ಜಾಕ್ವಲ್ ಬಂದ್ ಮಾಡಲು ಹೋದಾಗ ರಸ್ತೆ ಪ್ರತಿಭಟನೆ ಹೋರಾಟದಲ್ಲಿ …
Read More »ರಮೇಶ ಜಾರಕಿಹೊಳಿ,BJP ನಾಯಕರು ನಮಗೆ ಅವಕಾಶ ಮಾಡಿ ಕೊಟ್ಟಿದ್ದಕ್ಕೆ ಧನ್ಯವಾದ:ಮಹೇಶ ಕುಮಟಳ್ಳಿ ,
ಪಕ್ಷದ ಮೇಲೆ ಮುನಿಸಿಕೊಂಡು ರಾಜೀನಾಮೆಗೆ ಸವದಿ ನಿರ್ಧಾರ, ಅಥಣಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹೇಶ ಕುಮಟಳ್ಳಿ ಮಾಧ್ಯಮಗಳಿಗೆ ಪ್ರತಿಕ್ರಿಯೇ ನೀಡಿದ್ದಾರೆ. ಅಥಣಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೇ ನೀಡಿದ ಮಹೇಶ ಕುಮಟಳ್ಳಿ ಅಥಣಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹೇಶ ಕುಮಟಳ್ಳಿ , ಇಲ್ಲಿಯವರೆಗೂ ನಾನು ಮಾಡಿದ ಅಭಿವೃದ್ದಿ ಕೆಲಸಗಳು ನನ್ನ ಕೈ ಹಿಡಿಯುತ್ತೆ, ಕಳೆದ ಬಾರಿ ನೀವು ಕಾಂಗ್ರೇಸ್ ನಿಂದ ಬಂದು ಬಿಜೆಪಿಗೆ ಸೇರಿದ್ರಿ,ಈಗ ಸವದಿಯವರು ಬಿಜೆಪಿ ಬಿಟ್ಟು ಕಾಂಗ್ರೇಸ್ ಹೋಗ್ತಿದ್ದಾರೆ ಇದಕ್ಕೆ …
Read More »ಕೇಂದ್ರ ಕಾರಾಗೃಹ ಮೇಲೆ ಪೊಲೀಸ್ ಮಿಂಚಿನ ದಾಳಿ
ಕಲಬುರಗಿ: ಇಲ್ಲಿನ ಕೇಂದ್ರ ಕಾರಾಗೃಹ ( ಜೈಲು)ದ ಮೇಲೆ ಬುಧವಾರ ಬೆಳಗಿನ ಜಾವ ಕಲಬುರಗಿ ಮಹಾನಗರ ಪೊಲೀಸ್ ಉಪ ಆಯುಕ್ತರ ನೇತೃತ್ವದಲ್ಲಿ ಮಿಂಚಿನ ದಾಳಿ ನಡೆದಿದೆ. ಪೊಲೀಸ್ ಆಯುಕ್ತ ಆರ್. ಚೇತನ ಮಾರ್ಗದರ್ಶನದಲ್ಲಿ ಉಪ ಪೊಲೀಸ್ ಆಯುಕ್ತ ಅಡ್ಡೂರು ಶ್ರೀ ನಿವಾಸಲು ನೇತೃತ್ವದಲ್ಲಿ ತಂಡಗಳ ದಾಳಿ ನಡೆಸಿ ವ್ಯಾಪಕ ಶೋಧ ನಡೆಸಲಾಗಿದೆ. ಬೆಳಗಿನ ಜಾವ 5.30ರ ಸುಮಾರಿಗೆ 120 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಒಳಗೊಂಡ ತಂಡ ದಾಳಿ ನಡೆಸಿ …
Read More »ಮಾರಿಕಾಂಬಾ ದೇವಾಲಯದಲ್ಲಿ ಬಿ ಫಾರಂ ಅರ್ಪಿಸಿ ಪೂಜೆ ಸಲ್ಲಿಸಿದ
ಶಿರಸಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಎಲ್ಲ ವಿಧಾನ ಸಭಾ ಕ್ಷೇತ್ರದ ಬಿ ಫಾರಂಗಳನ್ನು ಮಾರಿಕಾಂಬಾ ದೇವಾಲಯದಲ್ಲಿ ಪೂಜೆ ಮಾಡಿಸಿದ ಘಟನೆ ಬುಧವಾರ ನಡೆಯಿತು. ಬುಧವಾರ ನಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಜೆಡಿಎಸ್ ರ‍್ಯಾಲಿಗೆ ಚಾಲನೆ ಕೊಡುವ ಮೊದಲು ದೇವಿ ದರ್ಶನ ಪಡೆದು ಬಿ ಫಾರಂ ಪೂಜೆ ಸಲ್ಲಿಸಿದರು. ಬಳಿಕ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು. ಜೆಡಿಎಸ್ ಕಾರ್ಯಕರ್ತರು 50 ಅಡಿಗೂ ಎತ್ತರದ ಅನಾನಸ್ ಹಾರವನ್ನು ಕ್ರೇನ್ ಮೂಲಕ ಮಾಜಿ …
Read More »ಸಚಿವ ಅಂಗಾರರಿಗೆ ಕೋಕ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನದ ಹೊಗೆ
ಸುಳ್ಯ: ಸಚಿವ ಎಸ್. ಅಂಗಾರರವರಿಗೆ ಚುನಾವಣಾ ಟಿಕೆಟ್ ನೀಡದ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ್ ವಳಲಂಬೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಪಕ್ಷದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ರಾಜೀನಾಮೆ ಸಂದೇಶ ಕಳುಹಿಸಿರುವ ಅವರು, ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ …
Read More »ಬಿಜೆಪಿ ಟಿಕೆಟ್ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ?
ಮಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಲು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ನಿರ್ಧರಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜತೆ ಚರ್ಚಿಸಿ ಘೋಷಣೆ ಮಾಡುತ್ತೇನೆ. ಬಿಜೆಪಿ ಟಿಕೆಟ್ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ ಎಂದು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಅನೇಕ ಪಕ್ಷದ ಮುಖಂಡರು ನನ್ನನ್ನು ಸಂಪರ್ಕ …
Read More »ಯಾದಲಗುಡ್ಡ ಚೆಕಪೋಸ್ಟ್ ನಲ್ಲಿ ಬರೋಬ್ಬರಿ 5 ಕೋಟಿ ರೂ ದಾಖಲೆ ಇಲ್ಲದ ಹಣ ಜಪ್ತಿ
ಬೆಳಗಾವಿ: ಗೋಕಾಕ್- ವಿಧಾನ ಸಭಾ ಕ್ಷೇತ್ರದ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯ ಯಾದಲಗುಡ್ಡ ಚೆಕಪೋಸ್ಟ್ ನಲ್ಲಿ ಬರೋಬ್ಬರಿ 5 ಕೋಟಿ ರೂ ದಾಖಲೆ ಇಲ್ಲದ ಹಣ ಜಪ್ತಿ ಮಾಡಲಾಗಿದೆ. ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (DCC Bank Belagavi) ರವರು ಯಾವುದೇ ಸಕ್ಷಮ ಪ್ರಾಧಿಕಾರ ಅನುಮತಿ ಪಡೆಯದೆ ಮತ್ತು ರಾಜ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲನೆ ಮಾಡದೇ 5 ಕೋಟಿ ಹಣವನ್ನು ವರ್ಗಾವಣೆ ಮಾಡುವಾಗ ಪೊಲೀಸರು ಹಾಗೂ ಎಫ್ ಎಸ್ ಟಿ …
Read More »
Laxmi News 24×7