Breaking News

ರಾಷ್ಟ್ರೀಯ

ಐದು ಬಾರಿಯ ಚಾಂಪಿಯನ್ ವಿರುದ್ಧ ಆರ್​​ಸಿಬಿ ಭರ್ಜರಿ ಜಯ

ಬೆಂಗಳೂರು: ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್​ಸಿಬಿ) ಐಪಿಎಲ್​-16ರ ಆರಂಭದಲ್ಲೇ ಐದು ಬಾರಿಯ ಚಾಂಪಿಯನ್​ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಮೂರು ವರ್ಷಗಳ ಬಳಿಕ ಆರ್​ಸಿಬಿ ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯವಾಡಿದ್ದು, ಈ ಸ್ಟೇಡಿಯಮ್​ಗೂ ಗೆಲುವು ಮರುಕಳಿಸಿದೆ.   ಮಾಜಿ ನಾಯಕ ವಿರಾಟ್​ ಕೊಹ್ಲಿ (82*ರನ್​, 49 ಎಸೆತ, 6 ಬೌಂಡರಿ, 5 ಸಿಕ್ಸರ್​) ಮತ್ತು ನಾಯಕ ಫಾಫ್​ ಡು ಪ್ಲೆಸಿಸ್​ (73 ರನ್​, 43 …

Read More »

ಬಸ್ ನಿಲ್ದಾಣಕ್ಕೆ ಅವರೇ ಹೋಗಿ ಸರ್ಕಾರಿ ಕಾರು ಕೊಟ್ಟು ಬಂದ್ರು; ಡಾ. ಕೇಲಗಾರ ಕಾರ್ಯಕ್ಕೆ ಸಿಬ್ಬಂದಿ ಶ್ಲಾಘನೆ

ರಾಣೆಬೆನ್ನೂರ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಎನ್‌ಡಬ್ಲೂೃಕೆಎಸ್‌ಆರ್‌ಟಿಸಿ ಅಧ್ಯಕ್ಷ ಡಾ. ಬಸವರಾಜ ಕೇಲಗಾರ ತಮಗೆ ನೀಡಿದ ಸರ್ಕಾರದ ಕಾರನ್ನು ತಾವೇ ಸ್ವತಃ ಬಸ್ ನಿಲ್ದಾಣಕ್ಕೆ ತೆಗೆದುಕೊಂಡು ಹೋಗಿ ಸರಿಯಾಗಿ ಬೆಳಗ್ಗೆ 11.30ಕ್ಕೆ ಅಧಿಕಾರಿಗಳಿಗೆ ಹಸ್ತಾಂತರ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.   ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಡಾ. ಬಸವರಾಜ ಕೇಲಗಾರ ಅವರನ್ನು ಆರಂಭದಲ್ಲಿ ಎನ್‌ಡಬ್ಲೂೃಕೆಎಸ್‌ಆರ್‌ಟಿಸಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಕಳೆದ ಎರಡ್ಮೂರು ತಿಂಗಳ ಹಿಂದೆ ಅಧ್ಯಕ್ಷರನ್ನಾಗಿ …

Read More »

ತಮ್ಮ ಕುಟುಂಬದ ಯಾವುದೇ ಸದಸ್ಯ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆ ಇಲ್ಲ:ರಮೇಶ ಕತ್ತಿ

ಹುಕ್ಕೇರಿ: ‘ತಮ್ಮ ಕುಟುಂಬದ ಯಾವುದೇ ಸದಸ್ಯ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆ ಇಲ್ಲ. ನಾನು ಬೇರೆ ಪಕ್ಷ ಸೇರುತ್ತೇನೆ ಎಂಬುದು ಗಾಳಿ ಸುದ್ದಿ. ಜನ ಇದನ್ನು ಗಮನಕ್ಕೆ ತೆಗೆದುಕೊಳ್ಳಬಾರದು’ ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಸ್ಪಷ್ಟ‍ಪಡಿಸಿದರು.   ಪಟ್ಟಣದ ವಿಶ್ವರಾಜ್ ಭವನದಲ್ಲಿ ಹುಕ್ಕೇರಿ ಮಂಡಲ ವತಿಯಿಂದ ಗುರುವಾರ ಆಯೋಜಿಸಿದ್ದ ಬಿಜೆಪಿ ಚುನಾವಣಾ ತಯಾರಿ ಪೂರ್ವಭಾವಿ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಮಾತನಾಡಿದರು.’ತಮ್ಮ ಕುಟುಂಬದಲ್ಲಿ ಟಿಕೆಟ್‌ಗಾಗಿ ಪೈಪೋಟಿ ನಡೆದಿದೆ, …

Read More »

ಪುನೀತ್ ಕೆರೆಹಳ್ಳಿ ವಿರುದ್ಧ ಕೊಲೆ ಆರೋಪ

ರಾಮನಗರ: ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು (Puneeth Kerehalli, Hindu Activist) ಸಾತನೂರು ಪೊಲೀಸರು (Satanuru Police) ಬಂಧಿಸಿರುವ ಮಾಹಿತಿ  ಲಭ್ಯವಾಗಿದೆ. ಸಾತನೂರು ಸಮೀಪ ಜಾನುವಾರುಗಳನ್ನು ರಕ್ಷಣೆ ಮಾಡುವ ವೇಳೆ ಇರ್ದಿಷ್ ಪಾಷಾ ಎಂಬಾತ ಸಾವನ್ನಪ್ಪಿದ್ದನು. ಇರ್ಗಿಷ್ ಮೇಲೆ ಹಲ್ಲೆಗೈದು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಇರ್ದಿಷ್ ಕುಟುಂಬಸ್ಥರು ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು (Complaint) ದಾಖಲಿಸಿದ್ದರು. ದೂರು ದಾಖಲಿಸಿಕೊಂಡಿರುವ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ …

Read More »

ಸುಮಾರು 10 ತಿಂಗಳ ಪಟಿಯಾಲಾ ಕೇಂದ್ರ ಕಾರಾಗೃಹದಿಂದ ಶನಿವಾರ ಜೈಲಿಂದ ಹೊರ ಬಂದ ನವಜೋತ್ ಸಿಂಗ್ ಸಿಧು

ಪಟಿಯಾಲಾ: ಸುಮಾರು 10 ತಿಂಗಳ ಪಟಿಯಾಲಾ ಕೇಂದ್ರ ಕಾರಾಗೃಹದಿಂದ ಶನಿವಾರ ಬಿಡುಗಡೆಯಾದ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಅನರ್ಹಗೊಂಡ ಸಂಸತ್ ಸದಸ್ಯ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಮಾತನಾಡಿದ್ದಾರೆ. ಬಿಡುಗಡೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಾಂಧಿಗೆ ಸಂಬಂಧಿಸಿದ ಬೆಳವಣಿಗೆಗಳಿಗಾಗಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಪರಿಸ್ಥಿತಿಯನ್ನು ಲೆಕ್ಕಿಸದೆ ಪಕ್ಷ ಮತ್ತು ನಾಯಕರನ್ನು ಯಾವಾಗಲೂ ಬೆಂಬಲಿಸುವುದಾಗಿ ಹೇಳಿದ್ದಾರೆ. ರಾಹುಲ್ ಅವರನ್ನು ಕ್ರಾಂತಿಕಾರಿ ನಾಯಕ ಎಂದು ಕರೆದಿರುವ ಸಿಧು, ನಾನು …

Read More »

ಸಿಎಂ ವಿರುದ್ಧ ಕಾಂಗ್ರೆಸ್​ನಿಂದ ಅಚ್ಚರಿಯ ಅಭ್ಯರ್ಥಿ?

ಹಾವೇರಿ :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹ್ಯಾಟ್ರಿಕ್ ಗೆಲುವು ತಂದುಕೊಟ್ಟ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರವನ್ನು ಈ ಬಾರಿ ಹೇಗಾದರೂ ಮಾಡಿ ತನ್ನ ವಶಕ್ಕೆ ಪಡೆಯಬೇಕು ಎಂದು ನಾನಾ ತಂತ್ರಗಳನ್ನು ಹೂಡುತ್ತಿರುವ ಕಾಂಗ್ರೆಸ್ ಈ ಬಾರಿ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಸಾಧ್ಯತೆ ಇದೆ.   ಪಂಚಮಸಾಲಿ ಹಾಗೂ ಮುಸ್ಲಿಂ ಪ್ರಾಬಲ್ಯವುಳ್ಳ ಕ್ಷೇತ್ರದಲ್ಲಿ ನಾಲ್ಕು ಬಾರಿ ಮುಸ್ಲಿಂ ಅಭ್ಯರ್ಥಿಯಾಗಿ ಮಾಜಿ ಶಾಸಕ ಅಜೀಮಪಿರ ಖಾದ್ರಿ ಸ್ಪರ್ಧಿಸಿ ಸೋತಿದ್ದಾರೆ. ‘ವಿನಯ ಕುಲಕರ್ಣಿ ಅಥವಾ …

Read More »

ಮೋದಿ, ಬೊಮ್ಮಾಯಿ ಭಾವಚಿತ್ರಕ್ಕೆ ಬೆಂಕಿ

ಹೊಸಪೇಟೆ (ವಿಜಯನಗರ): ಪರಿಶಿಷ್ಟ ಜಾತಿ ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೊಳಿಸುವ ಸರ್ಕಾರದ ತೀರ್ಮಾನ ವಿರೋಧಿಸಿ ಲಂಬಾಣಿ, ಭೋವಿ, ಕೊರಚ, ಕೊರಮ ಸಮುದಾಯದವರು ಶುಕ್ರವಾರ ಜಿಲ್ಲೆಯ ಹೂವಿನಹಡಗಲಿ ಪಟ್ಟಣ ಹಾಗೂ ಹರಪನಹಳ್ಳಿ ತಾಲ್ಲೂಕಿನ ಮಾಚಿಹಳ್ಳಿ ತಾಂಡಾದಲ್ಲಿ ಪ್ರತಿಭಟನೆ ನಡೆಸಿದರು.   ಹಡಗಲಿ ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಲ್ಲಿ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಸಾವಿರಾರು ಜನರು ರಸ್ತೆ ಮಾರ್ಗ ಬಂದ್ ಮಾಡಿ ಪ್ರತಿಭಟಿಸಿದರು. ದೂಪದಹಳ್ಳಿ ಮರಿಯ್ಮಮದೇವಿ ಮಠದ ಶಿವಪ್ರಕಾಶ್ ಮಹಾರಾಜ್ ಮಾತನಾಡಿ, ‘ಒಳ …

Read More »

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೂ ಟಿಕೆಟ್ ಖಚಿತವಾಗಿಲ್ಲ- ಲಕ್ಷ್ಮಣ್‌ ಸವದಿ

ಗದಗ, ಏಪ್ರಿಲ್‌ 1: ಮುಖ್ಯವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆದಿಯಾಗಿ ಯಾರಿಗೂ ಟಿಕೆಟ್ ಖಚಿತವಾಗಿಲ್ಲ. ಕ್ಷೇತ್ರ ಆಯ್ಕೆ ನಂತರದ ವಿಷಯ ಎಂದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್‌ ಸವದಿ ಹೇಳಿದರು. ಪಕ್ಷದ ಆಂತರಿಕ ಚುನಾವಣೆಯ ಬಳಿಕ ಗದಗನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 224 ಕ್ಷೇತ್ರಗಳಿಗೂ ಸಂಘಟನಾತ್ಮಕ ವೀಕ್ಷಕರಾಗಿ ನಾಯಕರು ಬಂದಿದ್ದಾರೆ. ಗದಗನಲ್ಲಿಯೂ ಮತದಾನದ ಮೂಲಕ ಅಭಿಪ್ರಾಯ ಸಂಗ್ರಹ ಮಾಡಿದ್ದೇವೆ. ಪಕ್ಷದ ಪದಾಧಿಕಾರಿಗಳು 3 ಅಭ್ಯರ್ಥಿಗಳ …

Read More »

ಚುನಾವಣಾ ಅಖಾಡದಿಂದ ಹಿಂದೆ ಸರಿದ ಯತೀಂದ್ರ ಸಿದ್ದರಾಮಯ್ಯ

ಮಂಡ್ಯ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟ ಮೇಲೆ ವರುಣಾ ಹಾಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ಮೂಡಿತ್ತು. ಇದೀಗ ಯತೀಂದ್ರ ಸಿದ್ದರಾಮಯ್ಯ ಚುನಾವಣಾ ಅಖಾಡದಿಂದಲೇ ಹಿಂದೆ ಸರಿಯುವ ಮಾತುಗಳನ್ನಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.   ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಾನು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ವರುಣಾ ಅಥವಾ ಬೇರೆ ಯಾವುದೇ …

Read More »

ಗ್ರಾಹಕರಿಗೆ ಬಿಗ್ ಶಾಕ್ : ಶೀಘ್ರವೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ..!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದ್ದು, ಸಿಲಿಂಡರ್ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಹೌದು, ಗ್ರಾಹಕರು ಹೋಟೆಲ್ ಗಳಲ್ಲಿ ಊಟ, ತಿಂಡಿ ತಿನ್ನಲು ಯೋಚನೆ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಈಗಾಗಲೇ ನಿರಂತರವಾಗಿ ಗ್ಯಾಸ್ ‍ಬೆಲೆ ಹೆಚ್ಚಳವಾಗುತ್ತಿರುವ ಹಿನ್ನೆಲೆ ಹೋಟೆಲ್ ಮಾಲೀಕರು ತಿಂಡಿ, ಬೆಲೆ ಹೆಚ್ಚಳ ಮಾಡಲು ನಿರ್ಧರಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಏರಿಕೆ …

Read More »