ಬೆಂಗಳೂರು: ಮಹಿಳೆಯೊಬ್ಬಳು ತನ್ನ ಮನೆಯ ಕೋಣೆಯಲ್ಲಿ ಶವವಾಗಿ ನೇತಾಡುತ್ತಿದ್ದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದು, ಪತಿಯ ವಿರುದ್ಧ ಆರೋಪ ಹೊರಿಸಲಾಗಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ರಶ್ಮಿ (32) ಸಾವಿಗೀಡಾದ ಮಹಿಳೆ. ಬೆಂಗಳೂರಿನ ಪೂರ್ಣಪ್ರಜ್ಞಾ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಈಕೆ ತಾನು ವಾಸವಿದ್ದ ಮನೆಯ ಕೋಣೆಯಲ್ಲಿ ಶವವಾಗಿ ನೇತಾಡುತ್ತಿದ್ದ ಪರಿಸ್ಥಿತಿಯಲ್ಲಿ ಕಂಡುಬಂದಿದ್ದಾಳೆ. ಈಕೆ ಖಾಸಗಿ ಕಂಪನಿಯ ಇಂಜಿನಿಯರ್ ಅರವಿಂದ್ ಎಂಬಾತನ ಪತ್ನಿ. ಮಂಡ್ಯ ಮೂಲದ …
Read More »ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಮೇ 29ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ರಾಜ್ಯಾದ್ಯಂತ 2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗುತ್ತಿದ್ದು, ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಈ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, ಪಠ್ಯೇತರ …
Read More »ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಸವಾರಿ ಇನ್ನಷ್ಟು ದುಬಾರಿ!
ಬೆಂಗಳೂರು: ದಶಪಥ ಹೆದ್ದಾರಿ ವಾಹನರರಿಗೆ ಮತ್ತೊಮ್ಮೆ ಬರೆ ಬಿದ್ದಿದೆ. ಮೈಸೂರು ಬೆಂಗಳೂರು ಎಕ್ಸ್‌ಪ್ರೆಸ್ ಹೈವೆ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಮತ್ತೆ ಟೋಲ್ ದರ ಹೆಚ್ಚಳವಾಗಿದೆ. ನಾಳೆಯಿಂದ ಶೇಕಡಾ 22ರಷ್ಟು ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ಟೋಲ್ ದರ ಹೆಚ್ಚಳವಾಗಲಿದೆ. ಈ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 1. ಕಾರು/ವ್ಯಾನ್/ಜೀಪ್: ಏಕಮುಖ ಸಂಚಾರ 165 ರೂ(30ರೂ ಹೆಚ್ಚಳ). ದ್ವಿಮುಖ ಸಂಚಾರ – 250 …
Read More »ಸಿಎಂ ಕಾರನ್ನು ಬಿಡದ ಚುನಾವಣಾ ಅಧಿಕಾರಿಗಳು
ದೊಡ್ಡಬಳ್ಳಾಪುರ : ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರನ್ನೂ ತಪಾಸಣೆ ಮಾಡಿದ್ದಾರೆ. ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಬಸವರಾಜ ಬೊಮ್ಮಾಯಿ ಅವರು ಬರುತ್ತಿದ್ದರು. ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಚೆಕ್ ಪೋಸ್ಟ್ ಬಳಿ ಸಿಎಂ ಕಾರು ತಪಾಸಣೆ ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಘಾಟಿ ದೇವಾಲಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ವರುಣಾದಲ್ಲಿ ನಾವು ಖಂಡಿತವಾಗಿ ಪ್ರಭಲವಾದ ಪೈಪೋಟಿ ನೀಡುತ್ತೇವೆ. …
Read More »ಎಸ್ಎಸ್ಎಲ್ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ!
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿದ್ದು, ಪರೀಕ್ಷೆ ಪ್ರಾರಂಭವಾದ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಯಾಗಿರುವ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಯಾವುದೇ ಅಧಿಕಾರಿಗಳು ಖಚಿತಪಡಿಸಿಲ್ಲ. ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಆರಂಭವಾಗಿದ್ದು, ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಇಂದಿನಿಂದ ಆರಂಭವಾದ ಪರೀಕ್ಷೆಗಳು ಏಪ್ರಿಲ್ …
Read More »BJPಗೆ ಗುಡ್ ಬೈ ಹೇಳಿದ ಶಾಸಕ ಗೋಪಾಲಕೃಷ್ಣ
ಶಿರಸಿ: ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಜೋರಾಗಿದ್ದು, ಆಡಳಿತಾರೂಢ ಬಿಜೆಪಿಗೆ ಶಾಸಕರೇ ಶಾಕ್ ನೀಡಿದ್ದಾರೆ. ಬಿಜೆಪಿ ಹಿರಿಯ ಶಾಸಕ ಎನ್.ವೈ.ಗೋಪಾಲಕೃಷ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೂಡ್ಲಿಗಿ ಬಿಜೆಪಿ ಶಾಸಕ ಎನ್.ವೈ.ಗೋಪಾಲಕೃಷ್ಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಚೇರಿಗೆ ಆಗಮಿಸಿದ ಶಾಸಕರು, ಶಾಸಕ ಸ್ಥಾನಕ್ಕೆ …
Read More »ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ ರೂಪಾಯಿ ನಗದನ್ನು ಜಪ್ತಿ ಮಾಡಿದ ಪೊಲೀಸರು.
ಕಲಬುರ್ಗಿ: ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಚುನಾವಣೆ ಅಕ್ರಮ ತಡೆಯಲು ಪೊಲೀಸರು ಎಷ್ಟೇ ಸಜ್ಜಾಗಿದ್ದರೂ ಪೊಲೀಸರ ಕಣ್ತಪ್ಪಿಸು ಹೋಗಿ ಹಲವರು ಸಿಕ್ಕಿ ಬೀಳುತ್ತಿದ್ದಾರೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 1 ಕೋಟಿ ರೂಪಾಯಿ ನಗದನ್ನು ಕಲಬುರ್ಗಿ ಪೊಲೀಸರು ಜಪ್ತಿ ಮಾಡಿದ್ದಾರೆ. ಕಲಬುರ್ಗಿಯ ಫರಹತಾಬಾದ್ ಚೆಕ್ ಪೋಸ್ಟ್ ನಲ್ಲಿ ಕಾರನ್ನು ತಡೆದ ಪೊಲೀಸರು ಪರಿಶೀಲನೆ ನಡೆಸಿದಾಗ 1 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಯಾವುದೇ ಸೂಕ್ತ ದಾಖಲೆಗಳಿಲ್ಲದೇ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಹಣವನ್ನು …
Read More »ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ
ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಮದರಿ ಹತ್ತಿರ ಇರುವ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಯ ಮೇಲೆ ಚುನಾವಣಾ ಅಧಿಕಾರಿಗಳು ಇಂದು ರಾತ್ರಿ ಎರಡನೇ ಬಾರಿ ದಾಳಿ ನಡೆಸಿದ್ದು ದಾಳಿಯ ವೇಳೆ ಬಾಗಲಕೋಟೆ ಜಿಲ್ಲೆಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ, ದೇವರ ಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿ ಎಸ್.ಆರ್.ಪಾಟೀಲ ಅವರಿಗೆ ಸೇರಿದ ಗೋಡೆ ಗಡಿಯಾರ, ಟೀಶರ್ಟ್ ಸೇರಿ ಅಂದಾಜು 40-50 ಲಕ್ಷ ರೂ ಮೌಲ್ಯದ ಸಾಮಗ್ರಿಗಳನ್ನು ಸೀಜ್ ಮಾಡಲಾಗಿದೆ. ಮಾ.27 ಮತ್ತು …
Read More »ನೂತನ ಸಂಸತ್ ಭವನಕ್ಕೆ ಪ್ರಧಾನಿ ದಿಢೀರ್ ಭೇಟಿ; ಕಾಮಗಾರಿಗಳ ಪರಿಶೀಲನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು ಹಾಗೂ ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.ಕಟ್ಟಡದೊಳಗೆ ಪ್ರಧಾನಿ ಒಂದು ಗಂಟೆಗೂ ಹೆಚ್ಚು ಕಾಲ ಕಳೆದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಮೋದಿ ಅವರು ಸಂಸತ್ತಿನ ಉಭಯ ಸದನಗಳಲ್ಲಿನ ಸೌಲಭ್ಯಗಳನ್ನು ವೀಕ್ಷಿಸಿದರು. ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಕಳೆದ ವರ್ಷ …
Read More »ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!
ಮಂಗಳೂರು: ನಗರದ ಕೆ.ಎಸ್.ರಾವ್ ರೋಡ್ ನ ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಗಂಡ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು, ಹಣಕಾಸಿನ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೈಸೂರಿನ ವಿಜಯನಗರದ ನಿವಾಸಿಗಳಾದ 46 ವರ್ಷದ ದೇವೆಂದ್ರ ಅವರು ಪತ್ನಿ ಮತ್ತು ಒಂಭತ್ತು ವರ್ಷ ಪ್ರಾಯದ ಅವಳಿ ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಮತ್ತು ಮಕ್ಕಳಿಗೆ ವಿಷ ಕೊಟ್ಟು …
Read More »