ಬೆಳಗಾವಿ: ಮೋದಿ ಅವರು ನನ್ನ ರಿಮೋಟ್ ಕಟ್ರೋಲ್ ಬೇರೆಯವರ ಬಳಿ ಇದೆ ಎಂದಿದ್ದಾರೆ. ಹಾಗಾದರೆ ನಿಮ್ಮ ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ? ಅದಾನಿ ಅವರ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಶ್ನೆ ಕೇಳಿದರೆ ಅದನ್ನು ಕಡತದಿಂದ ತೆಗೆದು ಹಾಕುತ್ತಾರೆ.ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ, ಜಾತಿವಾದ, ತಾರತಮ್ಯವಿದೆ ಎಂದು ಹೇಳಿದರೆ ಅದು ತಪ್ಪಾ? ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ಸೋಮವಾರ ನಡೆದ ಯುವ …
Read More »ಮಂಗಳೂರು: ಮಾ.21ರಿಂದ ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ
ಮಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾ.21ರಿಂದ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎಲ್ಲೆಲ್ಲಿ ಮಳೆ? ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ. ಕಳೆದ …
Read More »ಬೆಂಗಳೂರು: ಕಾಂಗ್ರೆಸ್ 4 ನೇ ಗ್ಯಾರಂಟಿ ಘೋಷಣೆ, ಯುವನಿಧಿ ಮೂಲಕ ನಿರುದ್ಯೋಗಿಗಳಿಗೆ ಆರ್ಥಿಕ ನೆರವು
ಬೆಂಗಳೂರು: ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದ್ದು, ವಿವಿಧ ಯೋಜನೆಗಳ ಮೂಲಕ ಪ್ರತಿ ವರ್ಗದ ಜನರ ಮನಗೆಲ್ಲಲು ಮುಂದಾಗಿದೆ. ಇದೀಗ ಕಾಂಗ್ರೆಸ್ 4ನೇ ಗ್ಯಾರಂಟಿ ಯೋಜನೆ ಘೋಷಿಸಿದೆ. ನಿರುದ್ಯೋಗಿ ಪದವಿಧರರಿಗೆ 3000 ರೂ. ಹಾಗೂ ಡಿಪ್ಲೊಮಾ ಪ್ರತಿತಿಂಗಳು 1500 ರೂ. ನಿರುದ್ಯೋಗ ಭತ್ಯೆ ಘೋಷಿಸಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಯುವನಿಧಿ ಹೆಸರಿನ ಗ್ಯಾರಂಟಿ ಕಾರ್ಡ್ ಬಿಡುಗಡೆ ಮಾಡಿದರು. ಈಗಾಗಲೇ …
Read More »ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ.
ಬೆಳಗಾವಿ: ಭ್ರಷ್ಟ ಬಿಜೆಪಿ ಸರ್ಕಾರವನ್ನು ತೊಲಗಿಸುವ ಪಣ ತೊಟ್ಟು, ನಾವು ಇದೇ ಭೂಮಿಯಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿದ್ದೆವು. ಇಂದು ಇದೇ ಭೂಮಿಯಲ್ಲಿ ಈ ಯುವಕ್ರಾಂತಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. ಬೆಳಗಾವಿಯ ಯುವಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಈ ಪಕ್ಷ ರೈತರು, ಕಾರ್ಮಿಕರು, ಯುವಕರು, ಮಹಿಳೆಯರ ನಂಬಿಕೆಯನ್ನು ಪಡೆದಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವ ಕೆಲಸ …
Read More »ಬಿಜೆಪಿ ಸರಕಾರ ರಾಷ್ಟ್ರದ ಅತ್ಯಂತ ಭ್ರಷ್ಟ ಸರಕಾರ:ರಾಹುಲ್ ಗಾಂಧಿ
ಬೆಳಗಾವಿ: ಕರ್ನಾಟಕದ ಪ್ರಸ್ತುತ ಸರಕಾರ ದೇಶದ ಅತ್ಯಂತ ಭ್ರಷ್ಟ ಸರಕಾರವಾಗಿದೆ ಎಂದು ಕಾಗ್ರೆಸ್ ನಾಯಕ ರಾಹುಲ್ ಗಾಂಧಿ ನೇರವಾಗಿ ಹರಿಹಾಯ್ದಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಯುವಕ್ರಾಂತಿ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಬಿಜೆಪಿ ಸರಕಾರ 40 ಪರ್ಸೆಂಟ್ ಸರಕಾರ. ಈ ಸರಕಾರದಿಂದ ಜನರು ಬೇಸತ್ತಿದ್ದಾರೆ. ಜನಸಾಮಾನ್ಯರ ಸರಕಾರವನ್ನು ಕರ್ನಾಟಕದ ಜನರು ಬಯಸಿದ್ದಾರೆ. ಹಾಗಾಗಿ ಈ ಬಾರಿ ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿದರು. ಕರ್ನಾಟಕದ ಸರಕಾರ ಭ್ರಷ್ಟ ಸರಕಾರ, …
Read More »ನನ್ನ ಫೋನ್ ಟ್ಯಾಪ್ ಆಗಿಲ್ಲ, ಸಿಡಿಆರ್ ತೆಗೆದುಕೊಳ್ಳುತ್ತಿದ್ದಾರೆ” ಎಂದ ಎಂ.ಬಿ ಪಾಟೀಲ! ಏನಿದು ಸಿಡಿಆರ್?
ವಿಜಯಪುರ: ನನ್ನ ಫೋನ್ ಟ್ಯಾಪ್ ಆಗಿಲ್ಲ. ಫೋನ್ ಸಿಡಿಆರ್ ತಗೆದುಕೊಳ್ಳುತ್ತಿದ್ದಾರೆ ಎಂದು ವಿಜಯಪುರ ನಗರದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಂ ಬಿ ಪಾಟೀಲ ಹೇಳಿದರು. ಸಿಡಿಆರ್ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಬಹಳಷ್ಟು ಜನರಿಗೆ ಸಿಡಿಆರ್ ತೆಗೆಯುವ ಚಾಳಿ ಇದೆ. ಆದ್ರೇ, ಯಾರ ಹೆಸರು ಹೇಳೋದಿಲ್ಲ. ಖಾಸಗಿ ಸಿಡಿಆರ್ ತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ. ಹಾಗೇನಾದರೂ ಆದ್ರೇ, ಸರ್ಕಾರ ಜವಾಬ್ದಾರಿ ಎಂದು ಪತ್ರ ಬರೆದಿದ್ದೇನೆ. ಫೋನ್ ಸಿಡಿಆರ್ ನನ್ನ ವಿರೋಧಿಗಳು ಮಾಡುತ್ತಿದ್ದಾರೆ. …
Read More »ಮನನೊಂದು ನೇಣು ಬಿಗಿದುಕೊಂಡ 13ರ ಬಾಲಕಿ!
ಕೊಡಗು: ಒಂದು ವಾರದಿಂದ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. 13 ವರ್ಷದ ವೈಷ್ಣವಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಕೊಡ್ಲಿಪೇಟೆ ಸಮಿಪದ ಶಿವರಳ್ಳಿ ಗ್ರಾಮದ ಜಿತೇಂದ್ರ-ಅಕ್ಷತ ದಂಪತಿ ಪುತ್ರಿ ವೈಷ್ಣವಿ ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ವ್ಯಾಸಾಂಗ ಮಾಡುತಿದ್ದಳು. ಕಳೆದ ಒಂದು ವಾರದಿಂದ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದಳು. ವಿದ್ಯಾರ್ಥಿನಿ ವೈಷ್ಣವಿ ಶನಿವಾರ ಸಂಜೆ ಮನೆಯಲ್ಲಿ ನೇಣುಬಿಗಿದುಕೊಂಡು …
Read More »78 ಯೋಜನೆಗಳ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಏಕಗವಾಕ್ಷಿ ಸಮಿತಿಯಿಂದ ಅನುಮೋದನೆ; ಸೃಷ್ಟಿಯಾಗಲಿವೆ 13,917 ಉದ್ಯೋಗಗಳು!
ಬೆಂಗಳೂರು: ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನೇತೃತ್ವದಲ್ಲಿ ಏಕಗವಾಕ್ಷಿ ಸಮಿತಿ, ಬಂಡವಾಳ ಹೂಡಿಕೆ ಮತ್ತು ಉದ್ಯೋಗಾವಾಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ 78 ಯೋಜನೆಗಳ 5298.69 ಕೋಟಿ ರೂ. ಬಂಡವಾಳ ಹೂಡಿಕೆಗೆ ಇಂದು (ಮಾ.19) ಅನುಮೋದನೆ ನೀಡಿದೆ. ಒಟ್ಟು 78 ಯೋಜನೆಗಳಿಂದ 5298.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಇದರ ಪರಿಣಾಮವಾಗಿ, 13917 ಜನರಿಗೆ ಉದ್ಯೋಗಗಳು ಲಭಿಸಲಿವೆ. ಅನುಮೋದನೆ …
Read More »ವಿಶ್ವದ ಅತಿ ಉದ್ದದ ರೈಲ್ವೇ ಪ್ಲಾಟ್‌ಫಾರ್ಮ್‌ಗೆ ಭೇಟಿ ನೀಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್*
ಹುಬ್ಬಳ್ಳಿ: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಜವಳಿ ಸಚಿವ ಪಿಯೂಷ್ ಗೋಯಲ್ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಲ್ಲಿ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ಗೆ ಭೇಟಿ ನೀಡಿದರು. ಸೌತ್ ವೆಸ್ಟರ್ನ್ ರೈಲ್ವೇ ಪ್ರಧಾನ ವ್ಯವಸ್ಥಾಪಕರಾದ ಸಂಜೀವ್ ಕಿಶೋರ್ ಅವರು ಸಚಿವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಿಶೋರ್ ಅವರು ಹುಬ್ಬಳ್ಳಿ ಜಂಕ್ಷನ್ ನಲ್ಲಿ ಇತ್ತೀಚಿನ ದಿನಗಳಲ್ಲಿ ಕೈಗೊಂಡ ಪ್ರಮುಖ ಸುಧಾರಣೆಗಳು ಮತ್ತು ಭವಿಷ್ಯದ …
Read More »ಫಕೀರನ ವೇಷದಲ್ಲಿ ಬಂದು ಮನೆಗೆ ಕನ್ನ ಹಾಕುತ್ತಿದ್ದ ಖದೀಮರು ಅಂದರ್; !
ಹೊಸಕೋಟೆ: ಹೊಸಕೋಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಖತರ್ನಾಕ್ಕಳ್ಳರು ಫಕೀರರ ವೇಷ ಹಾಗೂ ಪಾಲಿಶ್ ಮಾಡುವ ನೆಪದಲ್ಲಿ ಮನೆಗಳಿಗೆ ಬಂದು ಕನ್ನ ಹಾಕುತ್ತಿದ್ದವನ್ನು ಬಂಧಿಸಿದ್ದಾರೆ. ಈ ಮೂರು ಜನ ಅಂತರ್ರಾಜ್ಯ ಕುಖ್ಯಾತ ಕಳ್ಳರನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತರಿಂದ ಒಟ್ಟು 32 ಲಕ್ಷ ಮೌಲ್ಯದ 502 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರನ್ನು ಆರೋಪಿಗಳನ್ನು ಸೈಯದ್ ಆಲಿ, ಭರತ್ ಕುಮಾರ್, ಮತ್ತು ಆನಂದ್ ಎಂದು ಗುರುತಿಸಲಾಗಿದೆ. ಈ ಖದೀಮರು ಫಕೀರನ ವೇಶ ಹಾಕಿಕೊಂಡು …
Read More »