Breaking News

ರಾಷ್ಟ್ರೀಯ

ಮಹಾರಾಷ್ಟ್ರ ಮಹಿಳೆಯರಿಗೆ ಬಸ್‌ ಶುಲ್ಕದಲ್ಲಿ ರಿಯಾಯತಿ

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಂಎಸ್‌ಆರ್‌ಟಿಸಿ) ಎಲ್ಲಾ ಬಸ್‌ಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ಶುಲ್ಕದಲ್ಲಿ ಶೇ.50 ರಿಯಾಯತಿ ನೀಡುವ ನಿಯಮವನ್ನು ಮಾ.17ರ ಶುಕ್ರವಾರದಿಂದ ಜಾರಿಗೊಳಿಸಲಾಗಿದೆ. ರಿಯಾಯತಿಯು ಮಹಿಳಾ ಸಮ್ಮಾನ್‌ ಯೋಜನೆಯ ವಿಸ್ತರಣೆಯ ಭಾಗವಾಗಿದ್ದು, ಸಾರಿಗೆ ನಿಗಮಗಳಿಗೆ ರಿಯಾಯತಿ ಹಣವನ್ನು ಸರ್ಕಾರ ಪಾವತಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.   ಮಾರ್ಚ್‌ 9ರಂದು ಉಪಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ದೇವೇಂದ್ರ ಫ‌ಡ್ನವೀಸ್‌ ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ, ಮಹಿಳೆಯರಿಗೆ ಶೇ.50 …

Read More »

1,142 ಕುಕ್ಕರ್ ಬಾಕ್ಸ್‌ಗಳನ್ನು ವಶಕ್ಕೆಪಡೆದ ಪೊಲೀಸರು

ಕುಣಿಗಲ್: ತಾಲ್ಲೂಕಿನ ಅಂಚೇಪಾಳ್ಯದ ಚೆಕ್‌ಪೋಸ್ಟ್ ಬಳಿ ಶುಕ್ರವಾರ ಕಂಟೇನರ್ ತಪಾಸಣೆ ವೇಳೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ಅವರ ಭಾವಚಿತ್ರವಿದ್ದ 1,142 ಕುಕ್ಕರ್ ಬಾಕ್ಸ್‌ಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಕುಣಿಗಲ್ ಪೊಲೀಸರು ವಶಕ್ಕೆಪಡೆದಿದ್ದಾರೆ.   ಕನಕಪುರದಿಂದ ಹೆಬ್ಬೂರಿಗೆ ಕಂಟೇನರ್ ಹೋಗುತ್ತಿತ್ತು. ಕುಕ್ಕರ್‌ಗಳ ಬಿಲ್‌ ಬೇರೆ ವ್ಯಕ್ತಿಯ ಹೆಸರಿನಲ್ಲಿದೆ. ಶಾಸಕರ ಬೆಂಬಲಿಗರು ಖರೀದಿ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಕುಕ್ಕರ್‌ ಬೆಲೆ ₹ …

Read More »

ಸಾಂಸ್ಕೃತಿಕ ಭವನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಅನಿಲ ಬೆನಕೆ

ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರಕ್ಕೆ ಬರುವ ಅಂಬೇಡ್ಕರ್‌ ಉದ್ಯಾನದಲ್ಲಿ ಸುಸಜ್ಜಿತ ಗ್ರಂಥಾಲಯ, ಸಾಂಸ್ಕೃತಿಕ ಭವನ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಐಎಎಸ್‌, ಕೆಎಎಸ್, ಐಪಿಎಸ್ ಕೋಚಿಂಗ್‌ ತರಬೇತಿ ಕೇಂದ್ರ ನಿರ್ಮಾಣಕ್ಕೆ ಶಾಸಕ ಅನಿಲ ಬೆನಕೆ ಶುಕ್ರವಾರ ಚಾಲನೆ ನೀಡಿದರು.   ₹ 1.30 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಮಾಜದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರಿಗೆ ನೀಡಿದ ಮಾತಿನಂತೆ ನಡೆದುಕೊಂಡಿದ್ದೇನೆ. ಸುಸಜ್ಜಿತ ಡಿಜಿಟಲ್ ಗ್ರಂಥಾಲಯ, ಸಾಂಸ್ಕೃತಿಕ ಭವನ, …

Read More »

BJP ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ನಾಯಿಕ ವಿರುದ್ಧ ಶುಕ್ರವಾರ F,I,R, ದಾಖಲ

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂತಿ ಬಸ್ತವಾಡ ಗ್ರಾಮದಲ್ಲಿ ಮಾರ್ಚ್‌ 15ರಂದು ಮಾಂಸಾಹಾರ ಊಟದ ವ್ಯವಸ್ಥೆ ಮಾಡಿದ ಆರೋಪದ ಮೇರೆಗೆ, ಬಿಜೆಪಿ ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ಬಾಳಪ್ಪ ನಾಯಿಕ ಅವರ ವಿರುದ್ಧ ಶುಕ್ರವಾರ ಎಫ್‌ಐಆರ್‌ ದಾಖಲಿಸಲಾಗಿದೆ.   ಮತದಾರರಿಗೆ ಆಮಿಷ ಒಡ್ಡುವ ಉದ್ದೇಶದಿಂದ ಅಂದು ರಾತ್ರಿ 9ಕ್ಕೆ ಸುಮಾರು 3,000 ಮಂದಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣಾ …

Read More »

ಈರಪ್ಪ ಢವಳೇಶ್ವರ ಹಾಗೂ ಗೆಳೆಯರು ಸೇರಿ ಪಾಳು ಬಿದ್ದ ತಂಗುದಾಣಕ್ಕೆ ಪುನೀತ್‌ ರಾಜಕುಮಾರ್‌ ತಂಗುದಾಣವಾಗಿ ಹೊಸ ರೂಪಕೊಟ್ಟಿದ್ದಾರೆ.

ಮೂಡಲಗಿ: ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಬಳಿ ಹಾಳುಬಿದ್ದ ತಂಗುದಾಣಕ್ಕೆ ಶುಕ್ರವಾರ ಸುಣ್ಣ ಬಣ್ಣ ಬಳೆದು ಪುನೀತ್‌ ರಾಜಕುಮಾರ್‌ ತಂಗುದಾಣವಾಗಿ ರೂಪಾಂತರಗೊಂಡು ಎಲ್ಲರ ಕಣ್ಮನ ಸೆಳೆಯಿತು. ಇಲ್ಲಿಯ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಹಾಗೂ ಗೆಳೆಯರು ಸೇರಿ ಪಾಳು ಬಿದ್ದ ತಂಗುದಾಣಕ್ಕೆ ಹೊಸ ರೂಪಕೊಟ್ಟಿದ್ದಾರೆ. ಪುನೀತ್‌ ರಾಜಕುಮಾರ್‌ ಜನ್ಮದಿನದ ಅಂಗವಾಗಿ ಶುಕ್ರವಾರ ನೂರಾರು ಅಭಿಮಾನಗಳೊಂದಿಗೆ ತಂಗುದಾಣದಲ್ಲಿ ಕೇಕ್‌ ಕತ್ತರಿಸಿ ಸಂಭ್ರಮಿಸಿದರು. ತಂಗುದಾಣವ್ನು ಕನ್ನಡ ಧ್ವಜಗಳು, ತಳಿರು ತೋರಣದಿಂದ ಅಲಂಕಾರ ಮಾಡಲಾಗಿತ್ತು. ಶಾಲಾ …

Read More »

ಮಕ್ಕಳೋಂದಿಗೆ ಬಿಸಿಯೂಟ ಸವಿದು ಸರಳತೆ ಮೆರೆದ ಅಥಣಿ ಶಾಸಕ

ಶಾಸಕರೆಂದರೆ ಸಾಮಾನ್ಯವಾಗಿ ನಾವು ತಮ್ಮದೇಯಾದ ದವಲತ್ತು ಹಾಗೂ ವರ್ಚಸ್ಸು ಇರುವವರನ್ನು ನಾವೇಲ್ಲ ನೋಡಿದ್ದೇವೆ ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರದ ಶಾಸಕ ಮಹೇಶ ಕುಮಟಳ್ಳಿ ಅವರು ಶಾಲೆಯಲ್ಲಿ ಚಿಕ್ಕ ಮಕ್ಕಳೋಂದಿಗೆ ಬಿಸಿಯೂಟ ಸವಿದೂರ ಮೂಲಕ ಸರಳತೆ ಮೆರೆದು ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಹೌದು ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರು ತಾಲೂಕಿನ ತಂಗಡಿ ಗ್ರಾಮದಲ್ಲಿರುವ ಕನ್ನಡ ಶಾಲೆಯಲ್ಲಿ 24 ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಲಾ ಕೊಠಡಿ ಕಾಮಗಾರಿಗೆ ಚಾಲನೆ ನೀಡಲು …

Read More »

ಬಳ್ಳಾರಿಯಲ್ಲಿ ರಾಮುಲು ಸ್ಪರ್ಧೆಯಿಂದ ನನಗೆ ಆನೆ ಬಲ

ದಾವಣಗೆರೆ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧೆ ಮಾಡುವುದಾಗಿ ಹೇಳಿರುವುದರಿಂದ ನನಗೆ ಆನೆ ಬಲ ಬಂದಿದೆ. ನನ್ನ ಕ್ಷೇತ್ರದ ಪಕ್ಕದಲ್ಲೇ ಶ್ರೀರಾಮುಲು ಇರುವುದರಿಂದ ಅನುಕೂಲ ಆಗಲಿದೆ ಎಂದು ಬಿಜೆಪಿ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಡೂರಿನಲ್ಲಿ ಸ್ಪರ್ಧಿಸುವುದಾಗಿ ಶ್ರೀರಾಮುಲು ಹೇಳಿರಲಿಲ್ಲ. ಪಕ್ಷವನ್ನು ಇನ್ನಷ್ಟು ಬಲಪಡಿಸಲು ಅಮಿತ್‌ ಶಾ ಕಾರ್ಯಕ್ರಮ ಸಂಡೂರಿನಲ್ಲಿ ಆಯೋಜಿಸಲಾಗಿತ್ತು. ಜನಾರ್ದನ ರೆಡ್ಡಿ ಪಕ್ಷಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ನಮ್ಮದು …

Read More »

ಜಗ್ಗೇಶ್ ‘ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಡೇಟ್ ಫಿಕ್ಸ್

ನವರಸ ನಾಯಕ ಜಗ್ಗೇಶ್ ನಟನೆಯ ಮುಂದಿನ ಬಹುನಿರೀಕ್ಷಿತ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಕೊನೆಗೂ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ಜಗ್ಗೇಶ್ ಹುಟ್ಟುಹಬ್ಬದ ದಿನವಾದ ಇಂದು (ಮಾರ್ಚ್ 17) ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಚಿತ್ರದ ರಿಲೀಸ್ ದಿನಾಂಕ ಘೋಷಣೆ ಮಾಡಿದೆ.   “ನಮ್ಮ ರಾಘವೇಂದ್ರ ಸ್ಟೋರ್ಸ್‌ನ ಖ್ಯಾತ ಬಾಣಸಿಗರಾದ ಜಗ್ಗೇಶ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನವಿರಾಗಿ ಸಿದ್ಧಪಡಿಸಿರುವ ನವರಸದೌತಣವನ್ನು ಏಪ್ರಿಲ್ 28, 2023ರಂದು ನಿಮ್ಮ ಹತ್ತಿರದ ಚಿತ್ರಮಂದಿರಗಳಲ್ಲಿ ಉಣಬಡಿಸಲಿದ್ದೇವೆ. …

Read More »

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಹುತೇಕ ಫೈನಲ್ ಆಗಿದ್ದು, ಇಂದು ಸಂಜೆ ವೇಳೆಗೆ ಬಿಡುಗಡೆ

ನವದೆಹಲಿ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಹುತೇಕ ಫೈನಲ್ ಆಗಿದ್ದು, ಇಂದು ಸಂಜೆ ವೇಳೆಗೆ ಬಿಡುಗಡೆಯಾಗುವ ಸಾಧ್ಯತೆ ಇದೆ. ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಣದೀಪ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ವರಿಷ್ಠರ ನೇತೃತ್ವದಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದ್ದು, ಕೈ ಅಭ್ಯರ್ಥಿಗಳ ಹೆಸರು ಮತ್ತೊಮ್ಮೆ ಫೈನಲ್ ಆಗಲಿದೆ. ಸಭೆ ಬಳಿಕ ಸಂಜೆಯೇ ಅಭ್ಯರ್ಥಿಗಳ ಹೆಸರು ಘೋಷಣೆಯಾದರೂ ಅಚ್ಚರಿ ಇಲ್ಲ. ಕಾಂಗ್ರೆಸ್ …

Read More »

ಶಿಗ್ಗಾವಿಯಿಂದ ಸ್ಪರ್ಧಿಸಲಿದ್ದಾರಾ ವಿನಯ್ ಕುಲ್ಕರ್ಣಿ?

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಎಂ ಬಸವರಾಜ್ ಬೊಮ್ಮಾಯಿ ಕ್ಷೇತ್ರ ಶಿಗ್ಗಾವಿಯಿಂದ ಸ್ಪರ್ಧೆ ಮಾಡುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಧಾರವಾಡ ಜಿಲ್ಲಾಪಂಚಾಯಿತಿ ಸದಸ್ಯ ಯೇಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿರುವ ವಿನಯ್ ಕುಲ್ಕರ್ಣಿ, ಈ ಬಾರಿ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಶಿಗ್ಗಾವಿಯಿಂದ ಸ್ಪರ್ಧೆ ಮಾಡುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ …

Read More »