Breaking News

ರಾಷ್ಟ್ರೀಯ

ಎದೆಹಾಲು ಕುಡಿಸುವಾಗ ಉಸಿರುಗಟ್ಟಿ ಮಗು ಸಾವು: ಮನನೊಂದು ಹಿರಿ ಮಗನ ಜತೆ ಬಾವಿಗೆ ಹಾರಿದ ತಾಯಿ

ಇಡುಕ್ಕಿ: ಎದೆಹಾಲು ಕುಡಿಯುವಾಗ ಉಸಿರುಗಟ್ಟಿ ನವಜಾತ ಶಿಶು ಮರಣ ಹೊಂದಿದರಿಂದ ಮನನೊಂದು ತಾಯಿ ಮತ್ತು ಹಿರಿಯ ಮಗ ಬಾವಿಗೆ ಹಾರಿ ಪ್ರಾಣ ಬಿಟ್ಟಿರುವ ಹೃದಯವಿದ್ರಾವಕ ಘಟನೆ ಇಡುಕ್ಕಿ ಜಿಲ್ಲೆಯ ಉಪ್ಪುಥರಾ ಪಂಚಾಯಿತಿಯ ಕೈಥಪಥಲ ಎಂಬಲ್ಲಿ ನಡೆದಿದೆ.   ಮಗು ಮೃತಪಟ್ಟ ಘಟನೆಯಿಂದ ತಾಯಿ ತುಂಬಾ ಮನನೊಂದಿದ್ದಳು ಎಂದು ಆಕೆಯ ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮದ್ವೆ ಮೆರವಣಿಗೆಯಲ್ಲಿ ಪೊಲೀಸ್​ ಅಧಿಕಾರಿಯನ್ನು ಎಳ್ಕೊಂಡು ಮುತ್ತಿಟ್ಟ ಯುವಕ! ಮುಂದೇನಾಯ್ತು ನೀವೇ ನೋಡಿ. ಮೃತಳನ್ನು ಲಿಜಿ …

Read More »

ತಾಯಿಯನ್ನು ಕೊಂದ ಮಗಳು; ಮೃತದೇಹವನ್ನು 3 ತಿಂಗಳು ಮನೆಯಲ್ಲೇ ಬಚ್ಚಿಟ್ಟಳು!

ಮಹಾರಾಷ್ಟ್ರ: ಕಳೆದ ಡಿಸೆಂಬರ್​ನಲ್ಲಿ ಮಹಿಳೆಯೊಬ್ಬಳ ಕೊಲೆಗೆ ಸಂಬಂಧಿಸಿದಂತೆ ಕಲಾಚೌಕಿ ಪೊಲೀಸರು ಆಕೆಯ ಮಗಳನ್ನು ಬಂಧಿಸಿದ್ದಾರೆ. ವೀಣಾ(55) ಮಗಳಿಂದ ಹತ್ಯೆಗೀಡಾದ ಮಹಿಳೆ. ರಿಂಪಲ್ ಜೈನ್(24) ಕೊಲೆ ಆರೋಪಿಯಾಗಿದ್ದು, ತಾಯಿಯನ್ನೇ ಹತ್ಯೆ ಮಾಡಿದ್ದಾಳೆ.   ತಾಯಿಯನ್ನು ಹತ್ಯೆ ಮಾಡಿದ ಬಳಿಕ ರಿಂಪಲ್ ಜೈನ್, ಮೃತದೇಹವನ್ನು ಹಲವು ತುಂಡುಗಳನ್ನಾಗಿ ಕತ್ತರಿಸಿ, ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದಾಳೆ. ಶವ ಕೊಳೆತು ವಾಸನೆ ಬರಬಾರದೆಂದು 200ಕ್ಕೂ ಅಧಿಕ ಸುಗಂಧದ್ರವ್ಯ ಹಾಗೂ ರೂಂ ಪ್ರಶ್ನರ್​ಗಳನ್ನು ಬಳಸಿದ್ದಾಳೆ. ತನ್ನ ಕೃತ್ಯದ ಬಗ್ಗೆ ಯಾರಿಗೂ …

Read More »

ಚುನಾವಣಾ ವೆಚ್ಚಕ್ಕೆ 210 ಕ್ವಿಂಟಲ್‌ ಕಡಲೆ ಉಡುಗೊರೆ

ಗಜೇಂದ್ರಗಡ (ಗದಗ ಜಿಲ್ಲೆ): ರೋಣ ಮತಕ್ಷೇತ್ರದ ಶಾಸಕ ಕಳಕಪ್ಪ ಜಿ.ಬಂಡಿ ಅವರ ಚುನಾವಣಾ ವೆಚ್ಚಕ್ಕಾಗಿ ತಾಲ್ಲೂಕಿನ ಹಾಲಕೇರಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು 210 ಕ್ವಿಂಟಲ್‌ ಕಡಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಹಾಲಕೇರಿ ಗ್ರಾಮದಿಂದ ಐದು ಟ್ರ್ಯಾಕ್ಟರ್‌ಗಳಲ್ಲಿ ತಂದ ಕಡಲೆಯನ್ನು ಪಟ್ಟಣದ ಬಸ್ ನಿಲ್ದಾಣದಿಂದ ಮೆರವಣಿಗೆ ಮೂಲಕ ನೂರಾರು ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ನಡೆದ ಬಿಜೆಪಿಯ ‘ವಿಜಯ ಸಂಕಲ್ಪ ಯಾತ್ರೆ’ ವೇದಿಕೆ ಕಡೆಗೆ ತಂದರು. ಮೆರವಣಿಗೆಗೆ ಡೊಳ್ಳು ಕುಣಿತ, ಸಂಗೀತ ವಾದ್ಯಗಳು …

Read More »

7.50 ಟನ್ ತೂಕದ ವಾಹನಗಳ ಸಂಚಾರಕ್ಕೆ ಅವಕಾಶ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು

ಬೆಂಗಳೂರು: ನಗರದಲ್ಲಿ 7.50 ಟನ್ ತೂಕದವರೆಗಿನ ವಾಹನಗಳ ಸಂಚಾರಕ್ಕೆ ಅವಕಾಶ ಸಿಕ್ಕಿದ್ದು, ಲಾರಿ ಮಾಲೀಕರು ಹಾಗೂ ಏಜೆಂಟರು ತಾವು ಕರೆ ನೀಡಿದ್ದ ಮುಷ್ಕರವನ್ನು ಕೈ ಬಿಟ್ಟಿದ್ದಾರೆ. ನಗರದಲ್ಲಿ ನಿತ್ಯವೂ ಬೆಳಿಗ್ಗೆ 8ರಿಂದ 11 ಗಂಟೆವರೆಗೆ ಹಾಗೂ ಸಂಜೆ 4ರಿಂದ 8 ಗಂಟೆವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಇದನ್ನು ಖಂಡಿಸಿದ್ದ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘ, ಮಾರ್ಚ್ 16ರಂದು ತಡರಾತ್ರಿಯಿಂದ ಮುಷ್ಕರಕ್ಕೆ ಕರೆ ನೀಡಿತ್ತು. ರಾಜ್ಯ ಸರ್ಕಾರದ ಸೂಚನೆಯಂತೆ …

Read More »

ತನ್ನ 15 ವರ್ಷದ ಮಗನ ಜೀವ ಉಳಿಸಲು ತನ್ನ ಕಿಡ್ನಿಯನ್ನೇ ದಾನಮಾಡಿದ ತಾಯಿ

ಬೆಳಗಾವಿ: ತನ್ನ 15 ವರ್ಷದ ಮಗನ ಜೀವ ಉಳಿಸಲು ತನ್ನ ಕಿಡ್ನಿಯನ್ನೇ ದಾನಮಾಡಿದ ತಾಯಿ ಈಗ ಆರ್ಥಿಕ ನೆರವು ನೀಡುವ ದಾನಿಗಳತ್ತ ಮುಖ ಮಾಡಿದ್ದಾರೆ. ದುಡಿದು ಮಗನನ್ನು ಸಲಹುವ ತಾಯಿಯ ಸಂಕಟಕ್ಕೀಗ ಮಾನವೀಯ ನೆಲೆಯಲ್ಲಿ ನೆರವಿನ ಹಸ್ತ ಚಾಚುವ ಉದಾರ ಹೃದಯಿಗಳ ಅಗತ್ಯ ಬಂದೊದಗಿದೆ. ಅಥಣಿ ತಾಲೂಕಿನ ಮದಬಾವಿಯ ಪ್ರಜ್ವಲ್ ಮಹಾದೇವ ನಿವಾಲಗಿ 9ನೇ ತರಗತಿಯಲ್ಲಿ ಓದುತ್ತಿರುವ ಪ್ರತಿಭಾವಂತ ಬಾಲಕ. ಈತ ಶೋಭಾ- ಮಹಾದೇವ ದಂಪತಿಯ ಏಕಮಾತ್ರ ಪುತ್ರ. ಶೋಭಾ ಅವರು …

Read More »

ಪಂಚಮಸಾಲಿ: ಸದ್ಯಕ್ಕೆ ಮೀಸಲಾತಿ ಸಿಗದು; ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಸುಳಿವು

ಬೆಂಗಳೂರು: “ಲಿಂಗಾಯತ ಪಂಚಮಸಾಲಿ ಮೀಸಲಾತಿ ಕುರಿತು ಗಡಿಬಿಡಿಯಲ್ಲಿ ವರದಿ ನೀಡಲು ಸಾಧ್ಯವಿಲ್ಲ. ಈ ಬಗ್ಗೆ ಸಮಗ್ರ ಮಾಹಿತಿ ಕಲೆಹಾಕಿ, ನಿಯಮಾನುಸಾರ ಅಧ್ಯಯನ ನಡೆಸಿ ಅನಂತರ ಸರಕಾರಕ್ಕೆ ಸಲ್ಲಿಸಬೇಕಾಗುತ್ತದೆ’. – ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಮೀಸಲಾತಿ 2ಎಗೆ ಸೇರಿಸುವ ಸಂಬಂಧದ ಪ್ರಕ್ರಿಯೆಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ನೀಡಿದ ಪ್ರತಿಕ್ರಿಯೆ ಇದು. ಈ ಮೂಲಕ ರಾಜ್ಯದ ಪ್ರಬಲ ಸಮುದಾಯಕ್ಕೆ ಮೀಸಲಾತಿ ಭಾಗ್ಯ ಸದ್ಯಕ್ಕಿಲ್ಲ ಎಂದು ಸುಳಿವು ನೀಡಿದರು. ಲಿಂಗಾಯತ …

Read More »

ತಣಿಯದ ಸೋಮಣ್ಣ ಕೋಪ: ದಿಲ್ಲಿಯಲ್ಲೂ ವಿಜಯೇಂದ್ರ ವಿರುದ್ಧ ಆಕ್ರೋಶ

ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರದಿಂದ ದಿಲ್ಲಿ ಅಂಗಣ ತಲುಪಿದರೂ ವಸತಿ ಸಚಿವ ವಿ. ಸೋಮಣ್ಣ ಅವರ ಆಕ್ರೋಶ ಇನ್ನೂ ಆರಿಲ್ಲ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.   ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಹಾಗೂ ರಾಜ್ಯ ಚುನಾವಣ ಉಸ್ತುವಾರಿ ಧರ್ಮೇಂದ್ರ ಪ್ರಧಾನ್‌ ಅವರನ್ನು ದಿಲ್ಲಿಯಲ್ಲಿ ಬುಧವಾರ ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು. ‘ನಾನು ಬಂದ …

Read More »

ಟಿಕೆಟ್‌ ಕೊಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ:B.S.Y.

ಗಜೇಂದ್ರಗಡ: ಟಿಕೆಟ್‌ ಕೊಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ಟಿಕೆಟ್‌ ಹಂಚಿಕೆ ಹೈಕಮಾಂಡ್‌ ಮಾಡುತ್ತೆ. ಯಾರು ಒಳ್ಳೆಯ ಕೆಲಸ ಮಾಡಿದ್ದಾರೋ, ಜನಾಭಿಪ್ರಾಯ ಯಾರಿಗಿದೆಯೋ ಅಂಥವರಿಗೆ ಅವಕಾಶ ಸಿಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ಪಟ್ಟಣದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯಾರು ಕ್ಷೇತ್ರದಲ್ಲಿ ಉತ್ತಮ ಅಭಿಪ್ರಾಯ ಹೊಂದಿರುತ್ತಾರೋ ಅಂಥವರಿಗೆ ಹೈಕಮಾಂಡ್‌ ಮನ್ನಣೆ ನೀಡುತ್ತದೆ. ಉತ್ತಮ ಕೆಲಸ …

Read More »

ಪಟೇಲ್‌ ಮಾದರಿ ಬಸವ ಮೂರ್ತಿ ಸ್ಥಾಪನೆ: ಸಿಎಂ ಬೊಮ್ಮಾಯಿ

ಬೆಳಗಾವಿ: ನರ್ಮದಾ ತಟದಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಪ್ರತಿಮೆ ಮಾದರಿಯಲ್ಲಿ ಘಟಪ್ರಭಾ ನದಿ ಮಧ್ಯಭಾಗದಲ್ಲಿ 108 ಅಡಿ ಎತ್ತರದ ಜಗಜ್ಯೋತಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸಲಾಗುವುದು. ಅಲ್ಲದೇ ಈ ಪ್ರದೇಶವನ್ನು ವಿಶ್ವಮಟ್ಟದ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.   ನಗರದ ಬಸವೇಶ್ವರ ವೃತ್ತದಲ್ಲಿ 15 ಅಡಿ ಎತ್ತರದ ಬಸವೇಶ್ವರ ಪ್ರತಿಮೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ಹಾಗೂ ಬಸವಾದಿ ಶರಣರ ಮತ್ತು ಅನುಭವ ಮಂಟಪದ ಥೀಮ್‌ ಪಾರ್ಕ್‌ …

Read More »

ರಾಜ್ಯದ ವಿವಿಧೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ರಾಜ್ಯದ ವಿವಿಧೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, …

Read More »