Breaking News

ರಾಷ್ಟ್ರೀಯ

ಲಂಚ ಪ್ರಕರಣ: ಪ್ರಶಾಂತ್‌ ಮಾಡಾಳ್‌ ವಿರುದ್ಧ ಮತ್ತೆರಡು ಎಫ್‌ಐಆರ್‌

ಬೆಂಗಳೂರು: ಖಾಸಗಿ ಕಚೇರಿಯಲ್ಲಿ ₹ 1.62 ಕೋಟಿ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜಲಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್‌ ಮಾಡಾಳ್‌ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆಎಸ್‌ಡಿಎಲ್‌) ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಬುಧವಾರ ಎರಡು ಎಫ್‌ಐಆರ್‌ ದಾಖಲಿಸಿದ್ದಾರೆ.   ಕೆಎಸ್‌ಡಿಎಲ್‌ ಕಚ್ಚಾವಸ್ತು ಖರೀದಿ ಟೆಂಡರ್‌ ಅಂತಿಮಗೊಳಿಸುವ ಸಂಬಂಧ ₹ 40 ಲಕ್ಷ ಲಂಚ ಪಡೆಯುತ್ತಿದ್ದಾಗ ಮಾರ್ಚ್‌ 2ರಂದು ಪ್ರಶಾಂತ್‌ ಮಾಡಾಳ್‌ ಅವರನ್ನು ಬಂಧಿಸಲಾಗಿತ್ತು. ಕೆಎಸ್‌ಡಿಎಲ್‌ ಅಧ್ಯಕ್ಷರೂ …

Read More »

ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ

ಶಿರಸಿ: ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರ ಕೋರಿಕೆಯ ಮೇರೆಗೆ ಅಂಕೋಲಾ ಹಾಗೂ ಭಟ್ಕಳ ನಿಲ್ದಾಣಗಳಲ್ಲಿ ಎಕ್ಸ್ ಪ್ರೆಸ್ ರೈಲುಗಳ ನಿಲುಗಡೆಗೆ ರೈಲ್ವೆ ಇಲಾಖೆ ಅನುಮತಿ ನೀಡಿದೆ. ಅಂಕೋಲಾ ನಿಲ್ದಾಣದಲ್ಲಿ ನಾಳೆ(ಮಾ.9)ಯಿಂದ ಕೊಚುವೆಲಿ- ಮುಂಬೈ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ. ಭಟ್ಕಳ ನಿಲ್ದಾಣದಲ್ಲಿ ತಿರುವಂತನಪುರ-ಪನವೇಲ್ ನೇತ್ರಾವತಿ ಎಕ್ಸ್ ಪ್ರೆಸ್ ರೈಲು ನಿಲುಗಡೆಯಾಗಲಿದೆ. ಈ ಮೂಲಕ ಅಂಕೋಲಾ‌ ಹಾಗೂ ಭಟ್ಕಳ ಭಾಗದ ಜನರ ದೀರ್ಘ ಕಾಲದ ಬೇಡಿಕೆಯನ್ನು ರೈಲ್ವೆ ಇಲಾಖೆ ಈಡೇರಿಸಿದಂತಾಗಿದೆ. …

Read More »

ಡಿಸಿ ಕಚೇರಿಯಲ್ಲಿ ಮೂವರು ಹೆಣ್ಣುಮಕ್ಕಳಿಗೆ ಪಿನಾಯಿಲ್ ಕುಡಿಸಿ, ತಾನೂ ಕುಡಿದ ಮಹಿಳೆ

ಬೆಳಗಾವಿ: ಜೀವನ ನಿರ್ವಹಣೆ ಕಷ್ಟವಾದ ಕಾರಣಕ್ಕೆ ಮಹಿಳೆಯೊಬ್ಬರು ಬುಧವಾರ, ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲೇ ಮೂವರು ಹೆಣ್ಣುಮಕ್ಕಳಿಗೆ ಪಿನೈಲ್‌ ಕುಡಿಸಿ ತಾವೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಕಾರ್ಯ‍ಪ್ರವೃತ್ತರಾದ ಸಿಬ್ಬಂದಿ ನಾಲ್ವರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಿದರು.   ನಗರದ ಅನಗೋಳದ ನಿವಾಸಿ ಸರಸ್ವತಿ ಅದೃಶ್ಯಪ್ಪ ಹಂಪಣ್ಣವರ (40) ಆತ್ಮಹತ್ಯೆಗೆ ಯತ್ನಿಸಿದವರು. ಮಕ್ಕಳಾದ ಸೃಷ್ಟಿ (14), ಸಾಕ್ಷಿ (8) ಹಾಗೂ ಸಾನ್ವಿ (3) ಅವರಿಗೂ ಪಿನೈಲ್‌ ಕುಡಿಸಿದ್ದರಿಂದ ನಾಲ್ವರೂ ಅಸ್ವಸ್ಥಗೊಂಡಿದ್ದಾರೆ. ಬೈಲಹೊಂಗಲ ಜನತಾ ಪ್ಲಾಟ್‌ನಲ್ಲಿ …

Read More »

ಜ್ಞಾನ ಸಂಪಾದನೆಗೆ ಗುರು ಅನಿವಾರ್ಯ’

ರಾಯಬಾಗ: ‘ಇಂದಿನ ದಿನಗಳಲ್ಲಿ ಗುರು- ಶಿಷ್ಯರ ಸಂಬಂಧಗಳು ಕದಡುತ್ತಿವೆ. ಶಿಕ್ಷಕರಿಲ್ಲದೇ ತಂತ್ರಜ್ಞಾನದ ಮುಖಾಂತರ ಜ್ಞಾನ ಸಂಪಾದನೆ ಸಾಧ್ಯ ಎನ್ನುವ ಭಾವನೆಯೇ ಇದಕ್ಕೆ ಕಾರಣ. ಆದರೆ, ವಿದ್ಯಾರ್ಥಿಗಳಲ್ಲಿ ತಾಳ್ಮೆ, ವಿನಯ, ಭಕ್ತಿಭಾವ ಮೂಡಲು ಸಾಧ್ಯವಿಲ್ಲ. ಅದಕ್ಕೆ ಗುರುವೇ ಬೇಕು’ ಎಂದು ವಿಜಯಪುರ ಅಕ್ಕ ಮಹಾದೇವಿ ವಿಶ್ವ ವಿದ್ಯಾಲಯದ ಪ್ರಾಧ್ಯಾಪಕ ವಿಷ್ಣು ಶಿಂಧೆ ಹೇಳಿದರು. ಪ್ರೊ.ಯಲ್ಲಪ್ಪ ಹಿಮ್ಮಡಿ ಅವರ ಸೇವಾ ನಿವೃತ್ತ ಪ್ರಯುಕ್ತ ಪಟ್ಟಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ವಿಚಾರ ಸಮರ್ಪಣೆ, ಗುರುವಿಗೆ ವಂದನೆ, ವಿದ್ಯಾರ್ಥಿಗಳಿಗೆ …

Read More »

ಕಾಂಗ್ರೆಸಿನ ಗ್ಯಾರಂಟಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಬಿಎಸ್‌ವೈ

ಯಾದಗಿರಿ: ಕಾಂಗ್ರೆಸ್‌ನವರು ನೀಡುತ್ತಿರುವ ಗೃಹಜ್ಯೋತಿ, ಗೃಹಲಕ್ಷ್ಮೀ‍, ಅನ್ನಭಾಗ್ಯ ಯೋಜನೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ‌ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.   ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್‌ನವರು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅವರು ಹೇಳಿಕೊಳ್ಳುವುದಕ್ಕೆ ನಾನೇನು ಟೀಕೆ ಮಾಡುವುದಿಲ್ಲ ಎಂದರು. ವಿಜಯಸಂಕಲ್ಪ ಯಾತ್ರೆಯಲ್ಲಿ ಸೇರುವ ಜನರು ನೋಡಿದರೆ ವಿಜಯೋತ್ಸವ ಆಚರಣೆಗೆ ಬರುತ್ತಿದ್ದಾರೆ ಎಂದು ಭಾಸವಾಗುತ್ತದೆ.‌ ಬಿಜೆಪಿಯೇ ಸ್ಪಷ್ಟ …

Read More »

ಈ ಊರಲ್ಲಿ ಹೋಳಿ ಆಚರಿಸಲ್ಲ – ರಂಗಿನಾಟವೂ ಇಲ್ಲ

ಮುಂಡರಗಿ: ನಾಡಿನ ತುಂಬೆಲ್ಲಾ ಬಣ್ಣದ ಹೋಳಿ ಆಚರಣೆ ಮಾಡುತ್ತಾರೆ. ಆದರೆ, ಪಟ್ಟಣದ ಪಶ್ಚಿಮ ದಿಕ್ಕಿನ ಗುಡ್ಡದ ಮೇಲಿರುವ ಶ್ರೀ ಲಕ್ಷ್ಮೀ ಕನಕ ನರಸಿಂಹಸ್ವಾಮಿ ದೇವಸ್ಥಾನ ಇರುವ ಕಾರಣದ ಬಣ್ಣದ ಹಬ್ಬ ಓಕಳಿಯ ರಂಗಿನಾಟವನ್ನು ಜನರು ಆಡುವುದಿಲ್ಲ. ಜೊತೆಗೆ ರತಿ-ಮನ್ಮಥರನ್ನು ಕೂಡಾ ಕೂರಿಸುವುದಿಲ್ಲ. ಕಾಮ ದಹನ ಮಾಡುವುದಿಲ್ಲ. ಹೋಳಿ ಹುಣ್ಣಿಮೆ ಹಬ್ಬದ ಸಂಭ್ರಮ ಆಚರಣೆಯಂತೂ ನಡೆಯುವುದೇ ಇಲ್ಲ. ಪಟ್ಟಣದ ಶ್ರೀ ಲಕ್ಷ್ಮೀ ಕನಕನರಸಿಂಹಸ್ವಾಮಿ ಕಣ್ಣಿಗೆ ಕಾಣುವಷ್ಟು ದೂರದವರೆಗೂ ಬಣ್ಣ ಆಡುವುದಿಲ್ಲ ಎನ್ನುವುದು …

Read More »

ಈ ರೈತನಿಗೆ ಐವರು ‘ಹೆಣ್ಣು ಮಕ್ಕಳು’, ಎಲ್ರೂ ‘IAS’ ಅಧಿಕಾರಿಗಳು, WOMENS DAY SPECIAL STORY

ಈ ರೈತನಿಗೆ ಐವರು ‘ಹೆಣ್ಣು ಮಕ್ಕಳು’, ಎಲ್ರೂ ‘IAS’ ಅಧಿಕಾರಿಗಳು, ಈ ಸ್ಟೋರಿ ಓದಿ, ನಿಮ್ಗೂ ‘ಸ್ಫೂರ್ತಿ’ ಆಗ್ತಾರೆ ಮನುಷ್ಯ ಆಕಾಶವನ್ನ ಮುಟ್ಟುತ್ತಿದ್ರೂ, ಸಾಗರದ ಆಳವನ್ನ ಅಳೆಯುತ್ತಿದ್ರೂ, ಅಸಾಧ್ಯವಾದ್ದನ್ನ ಸಾಧ್ಯ ಮಾಡುವತ್ತ ಹೆಜ್ಜೆ ಹಾಕುತ್ತಿದ್ರೂ, ಇಂದಿಗೂ ಹಲವಾರು ಮೂಢ ನಂಬಿಕೆಗಳನ್ನ ನಂಬುತ್ತಾರೆ. ಅದರಲ್ಲೂ ನಮ್ಮ ದೇಶದಲ್ಲಿ ಹುಡುಗಿ ಅಂದ್ರೆ ಮೈನಸ್, ಹುಡುಗ ಪ್ಲೆಸ್ ಎಂಬ ಕಲ್ಪನೆ ಚಾಲ್ತಿಯಲ್ಲಿದೆ. ಗಂಡು-ಹೆಣ್ಣು ಎಂಬ ಭೇದವಿಲ್ಲ ತಡೆಯಲು ಸರಕಾರ ಎಷ್ಟೇ ಕ್ರಮ ಕೈಗೊಂಡರೂ ಹೆಣ್ಣು …

Read More »

ಆರೋಗ್ಯ ಇಲಾಖೆ’ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ : ವೇತನ ಹೆಚ್ಚಳ, ಸೇವಾ ಭದ್ರತೆ ಕಡತ ಮಂಡಿಸಿ ಸಿಎಂ ಆದೇಶ

ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಮುಷ್ಕರ ನಡೆಸಿ ಒತ್ತಾಯಿಸಿದ್ದರು. ಇಂತಹ ನೌಕರರ ವೇತನ ಹೆಚ್ಚಳ ( Salary Hike ), ಸೇವಾ ಭದ್ರತೆ ಸೇರಿದಂತೆ ವಿವಿಧ ಡಿಕೆ ಈಡೇರಿಕೆಯ ಕಡತವನ್ನು ಮಂಡಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಆದೇಶಿಸಿದ್ದಾರೆ.   ಈ ಕುರಿತಂತೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್ …

Read More »

ಬಡ ಜನರ ಕಲ್ಯಾಣವೇ ರಾಜ್ಯ ಬಿಜೆಪಿ ಸರ್ಕಾರದ ಗುರಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಬಳ್ಳಾರಿ : ಬಡ ಜನರ ಕಲ್ಯಾಣವೇ ಸರ್ಕಾರದ ಗುರಿಯಾಗಿದ್ದು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ನೇರವಾಗಿ ತಲುಪುವಂತೆ ಮಾಡಲಾಗಿದೆ. ಇದು ಬಡಸಮರ್ಪಿತ ಸರ್ಕಾರವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರು ತಿಳಿಸಿದರು.   ನಗರದ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಮಂಗಳವಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. …

Read More »

ಬೆಳಗಾವಿ: ‘ಜನಪದರು ವಿದ್ವಾಂಸರಿಗಿಂತ ಜ್ಞಾನಿಗಳು

ಬೆಳಗಾವಿ: ‘ಜನಪದರು ವಿದ್ವಾಂಸರಿಗಿಂತ ಜ್ಞಾನವಂತರು. ಅವರು ರೂಪಕ, ಪ್ರತಿಮೆಗಳನ್ನು ಬಹು ಸೊಗಸಾಗಿ ದೈನಂದಿನ ಬದುಕಿನಲ್ಲಿ ಬಳಸುತ್ತಲೇ ಬಂದಿರುವರು. ಅವುಗಳನ್ನೇ ನಾವು ನಾಟಕ, ಸಾಹಿತ್ಯ, ಕಲೆಗಳಲ್ಲಿ ಪುನಃ ರಚಿಸಿ ಹಣ, ಪ್ರಶಸ್ತಿಗಳನ್ನು ಪಡೆಯುತ್ತೇವೆ. ಆದರೆ ನಿಜವಾದ ಕಲಾವಿದರಾದ ಅವರು ಮಾತ್ರ ಸರ್ಕಾರದ ಸಹಾಯ ಧನಕ್ಕೆ ಕೈಚಾಚಿ ನಿಲ್ಲುವಂಥ ಪರಿಸ್ಥಿತಿ ಇರುವುದು ದುರಂತ’ ಎಂದು ನಾಟಕಕಾರ ಡಿ.ಎಸ್.ಚೌಗಲೆ ಬೇಸರ ವ್ಯಕ್ತಪಡಿಸಿದರು. ಇಲ್ಲಿಯ ಮಹಿಳಾ ಅಭಿವೃದ್ಧಿ ಮತ್ತು ಸೇವಾ ಸಂಸ್ಥೆ, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ …

Read More »