ದಾವಣಗೆರೆ: ಕರ್ನಾಟಕದಲ್ಲಿ ಯಾವ ಸರ್ಕಾರ ಇದೆಯೆಂದು ದೇಶದಲ್ಲಿ ಕೇಳಿದರೆ 40 ಪರ್ಸೆಂಟ್ ಸರ್ಕಾರ ಎನ್ನುತ್ತಾರೆ. ಬಸವರಾಜ ಬೊಮ್ಮಾಯಿ ಯಾರು ಎಂದು ಕೇಳಿದ್ರೆ ಪೇ ಸಿಎಂ ಎನ್ನುತ್ತಾರೆಂದು ದಾವಣಗೆರೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ ವೇಳೆ ಮಾತನಾಡಿದ ಅವರು, ಪ್ರಧಾನಿ ಮೋದಿ 8 ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಆದರೆ ಎಲ್ಲಿಯೂ 40 ಪರ್ಸೆಂಟ್ ಅರೋಪದ ಬಗ್ಗೆ ಉತ್ತರಿಸಿಲ್ಲ. ಬಿಜೆಪಿ ಕಾರ್ಯಕರ್ತರೇ …
Read More »ಶೇ 39ರಷ್ಟು ದೇಶಗಳಲ್ಲಿ ಮಾತ್ರ ಲೈಂಗಿಕ ಶಿಕ್ಷಣ ಕುರಿತು ರಾಷ್ಟ್ರೀಯ ನೀತಿ- UNESCO
ನವದೆಹಲಿ: ಲೈಂಗಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ವಿಶ್ವದಲ್ಲಿ ಶೇ 20ರಷ್ಟು ದೇಶಗಳು ಮಾತ್ರ ಕಾನೂನುಗಳನ್ನು ಹೊಂದಿದ್ದು, ಶೇ 39ರಷ್ಟು ರಾಷ್ಟ್ರಗಳು ಮಾತ್ರ ರಾಷ್ಟ್ರೀಯ ನೀತಿಯನ್ನು ಹೊಂದಿವೆ ಎಂದು ಯುನೆಸ್ಕೊದ ‘ಗ್ಲೋಬಲ್ ಎಜುಕೇಷನ್ ಮಾನಿಟರಿಂಗ್’ನ ವರದಿ ತಿಳಿಸಿದೆ. ಲೈಂಗಿಕ ಶಿಕ್ಷಣವು ಶೇ 68 ದೇಶಗಳಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ಹಾಗೂ ಶೇ 76ರಷ್ಟು ದೇಶಗಳಲ್ಲಿ ಪ್ರೌಢಶಿಕ್ಷಣದಲ್ಲಿ ಕಡ್ಡಾಯವಾಗಿದೆ ಎಂದೂ ವರದಿ ಹೇಳಿದೆ. ಪ್ರತಿ 10 ದೇಶಗಳ ಪೈಕಿ ಆರಕ್ಕೂ ಹೆಚ್ಚು ದೇಶಗಳಲ್ಲಿ ಹೆಣ್ಣು-ಗಂಡಿನ …
Read More »ತಂದೆಯಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದ: ನಟಿ ಖುಷ್ಬೂ
ಚೆನ್ನೈ: ನಟಿ ಹಾಗೂ ತಮಿಳುನಾಡು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯೊಂದನ್ನು ಬಹಿರಂಗ ಮಾಡಿದ್ದಾರೆ. ‘ನಾನು ಎಂಟು ವರ್ಷದವಳಿದ್ದಾಗ ನನ್ನ ತಂದೆ ನನ್ನ ಮೇಲೆ ಲೈಂಗಿಕ ಶೋಷಣೆ ಮಾಡುತ್ತಿದ್ದರು’ ಎಂದು ಹೇಳಿದ್ದಾರೆ. ಪತ್ರಕರ್ತೆ ಬರ್ಕಾ ದತ್ ಅವರ ದಿ ಮೋಜೊ ಸ್ಟೋರಿಯ ‘ವಿ ದಿ ವುಮನ್’ ಸಂದರ್ಶನದಲ್ಲಿ ಖುಷ್ಬೂ ಈ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ಖುಷ್ಬೂ ಇತ್ತೀಚೆಗಷ್ಟೇ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯಾಗಿ ಅಧಿಕಾರ …
Read More »ಮಾಡಾಳ್ ವಿರುದ್ಧ ಕ್ರಮಕ್ಕೆ ವರದಿ ಸಲ್ಲಿಕೆ: B,S.Y
ಕಲಬುರಗಿ: ‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‌ಡಿಎಲ್) ಅಧ್ಯಕ್ಷರೂ ಆಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ಕ್ರಮಕ್ಕೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ’ ಎಂದು ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಕ್ಷಮಿಸಲಾರದಂತಹ ಅಕ್ರಮ ಎಸಗಿ ತಪ್ಪು ಮಾಡಿದ್ದಾರೆ. ಹೀಗಾಗಿ ಅವರ …
Read More »26ರಂದು ದೇವೇಗೌಡ ರೋಡ್ ಶೋ: H,D,K,
ಬೆಂಗಳೂರು: ಜೆಡಿಎಸ್ ಹಮ್ಮಿಕೊಂಡಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಮಾರ್ಚ್ 26ರಂದು ನಡೆಯಲಿದ್ದು, ಆ ದಿನ ಕುಂಬಳಗೋಡಿನಿಂದ ಆರಂಭವಾಗುವ ರೋಡ್‌ಶೋದಲ್ಲಿ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಭಾಗವಹಿಸಲಿದ್ದಾರೆ. ನಾಗಮಂಗಲ ಕ್ಷೇತ್ರದ ಶಾಸಕ ಸುರೇಶ್ ಗೌಡ ಅವರು ನಗರದಲ್ಲಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕ್ಷೇತ್ರದ ನಿವಾಸಿಗಳ ಸಭೆಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಈ ವಿಷಯ ತಿಳಿಸಿದರು. ‘ಮಂಡ್ಯ ಮತ್ತು ಮೈಸೂರು ನಡುವಿನ ಸ್ಥಳವೊಂದರಲ್ಲಿ ಯಾತ್ರೆಯ ಸಮಾರೋಪ ನಡೆಯಲಿದೆ. ಸಮಾರೋಪದ …
Read More »ಚುನಾವಣಾ ಆಯೋಗವು ಅಧಿಕಾರದಲ್ಲಿರುವ ‘ಗುಲಾಮ’; ಉದ್ಧವ್ ಠಾಕ್ರೆ ಟೀಕೆ
ಮುಂಬೈ: ಪಕ್ಷದ ಚಿಹ್ನೆ ಮತ್ತು ಹೆಸರನ್ನು ಕಳೆದುಕೊಂಡು ಕೆರಳಿರುವ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ, ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಚುನಾವಣಾ ಆಯೋಗವನ್ನು ಅಧಿಕಾರದಲ್ಲಿರುವವರ ‘ಗುಲಾಮ’ ಎಂದು ಕರೆದಿದ್ದಾರೆ. “ನೀವು (ಚುನಾವಣಾ ಆಯೋಗ) ನಮ್ಮಿಂದ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಕಿತ್ತುಕೊಂಡಿದ್ದೀರಿ, ಆದರೆ ನೀವು ನನ್ನಿಂದ ಶಿವಸೇನೆಯನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ” ಎಂದು ರತ್ನಗಿರಿ ಜಿಲ್ಲೆಯ ಖೇಡ್‌ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಉದ್ಧವ್ ಹೇಳಿದರು. ಭಾರತೀಯ ಜನತಾ ಪಕ್ಷವು …
Read More »ಪ್ರಧಾನಿ ಮೋದಿ ವಿದ್ಯಾರ್ಥಿಗಳು ಮತ್ತು ಬಡವರ ಶಾಪ ಎದುರಿಸಲಿದ್ದಾರೆ: ಅರವಿಂದ ಕೇಜ್ರಿವಾಲ್
ಹೊಸದಿಲ್ಲಿ: ದಿಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನವನ್ನು ವಿರೋಧಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಸೋಡಿಯಾ ಅವರನ್ನು ‘ಸಂತ ಮತ್ತು ಮಹಾನ್ ಚೇತನ’ ಎಂದು ಬಣ್ಣಿಸಿರುವ ಕೇಜ್ರಿವಾಲ್, ಜೈಲಿಗೆ ಹಾಕಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳು ಮತ್ತು ಬಡವರ ಶಾಪವನ್ನು ಎದುರಿಸಲಿದ್ದಾರೆ ಎಂದು ಹೇಳಿದ್ದಾರೆ. ಭಾನುವಾರ ಛತ್ತೀಸ್ ಗಢದ ರಾಜಧಾನಿ ರಾಯ್ಪುರದ ಹೊರವಲಯದಲ್ಲಿರುವ ಜೋರಾ ಮೈದಾನದಲ್ಲಿ ಆಪ್ ಕಾರ್ಯಕರ್ತರ …
Read More »ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಶಾಸಕ ಮಾಡಾಳು ವಿರೂಪಾಕ್ಷಪ್ಪ
ಬೆಂಗಳೂರು: ಲಂಚ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ಯಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮಾಡಾಳು ವಿರೂಪಾಕ್ಷಪ್ಪ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ವಕೀಲರು ಮನವಿ ಮಾಡಿದರು. ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠವು ಮಂಗಳವಾರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿದೆ. ರಾಜ್ಯ ಬಂದ್ ಗೆ ಕಾಂಗ್ರೆಸ್ ಕರೆ ಇತ್ತ ವಿರೂಪಾಕ್ಷಪ್ಪ ಅವರ ಬಂಧನ ಮತ್ತು …
Read More »ನಾನೇ ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ: ಸಿದ್ದರಾಮಯ್ಯ
ಮೈಸೂರು: ನಾನು ಲೋಕಾಯುಕ್ತ ಬಂದ್ ಮಾಡಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನಾವು ಲೋಕಾಯುಕ್ತದ ಯಾವ ಅಧಿಕಾರವನ್ನೂ ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತ ಇದ್ದರು. ಎಲ್ಲಾ ಸತ್ಯ ಗೊತ್ತಿದ್ದರು ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ. ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಎಸಿಬಿ ರದ್ದು ಮಾಡಿದ್ದು ಬಿಜೆಪಿ ಸರ್ಕಾರವಲ್ಲ. ನ್ಯಾಯಾಲಯ ಎಸಿಬಿ ರದ್ದು ಮಾಡಿದ್ದು. ಬಿಜೆಪಿಯವರಿಗೆ …
Read More »ಅಸಮರ್ಥರ ವಜಾಗೊಳಿಸಲು ಪೊಲೀಸ್ ಇಲಾಖೆ ದಿಟ್ಟ ನಿರ್ಧಾರ
ಸೇವೆಗೆ ಸೇರಿ 10, 15, 20 ವರ್ಷವಾದರೂ ಪ್ರೊಬೇಷನರಿ ಅವಧಿ ಇತ್ಯರ್ಥಪಡಿಸದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮತ್ತು ಲಿಪಿಕ ಸಿಬ್ಬಂದಿಯನ್ನು (ಕ್ಲರಿಕಲ್ ಸ್ಟಾಫ್) ಸೇವೆಯಿಂದಲೇ ಬಿಡುಗಡೆಗೊಳಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಗರಿಷ್ಠ ಕಾಲಮಿತಿಯ ನಂತರವೂ ದೀರ್ಘ ಕಾಲದವರೆಗೆ ಇಲಾಖಾ ಪರೀಕ್ಷೆಗಳನ್ನು ಪಾಸ್ ಮಾಡದ, ತರಬೇತಿ ಪೂರೈಸಲು ಅಸಮರ್ಥ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕೆಲಸದಿಂದ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಕರ್ನಾಟಕ ಸಿವಿಲ್ ಸೇವೆಗಳ (ಪ್ರೊಬೇಷನ್) ನಿಯಮಗಳು 1977ರ ಅನ್ವಯ ಪ್ರೊಬೇಷನರಿ …
Read More »