ರಾಣೆಬೆನ್ನೂರು: ಕಳೆದ 64 ವರ್ಷಗಳಿಂದ ಇಲ್ಲಿನ ರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸುತ್ತಾ ಬಂದಿರುವ ಜೀವಂತ ರತಿ-ಮನ್ಮಥ ಪ್ರತಿಷ್ಠಾಪನೆ ಕಾರ್ಯಕ್ರಮ ಈ ಬಾರಿ ಮಾ.7ರಂದು ರಾತ್ರಿ 8 ಗಂಟೆಗೆ ಜರಗಲಿದೆ. ರಾಮಲಿಂಗೇಶ್ವರ ದೇವಸ್ಥಾನದದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟಕರು, ರತಿ ಪಾತ್ರಧಾರಿಯಾಗಿ ಕುಮಾರ ಹಡಪದ ಹಾಗೂ ಗದಿಗೆಪ್ಪ ದೊಡ್ಡನವರ ಮನ್ಮಥನ ಪಾತ್ರ ಮಾಡುತ್ತಾ ಬಂದಿದ್ದು, ಈ ಬಾರಿಯೂ ಇವರೇ ಇರಲಿದ್ದಾರೆ. ರತಿ-ಮನ್ಮಥರನ್ನು ನಗಿಸಿದವರಿಗೆ 4.04 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದ್ದಾರೆ
Read More »ಚಿನ್ನಾಭರಣಗಳ ಮೇಲೆ ಎಚ್‌ಯುಐಡಿ ಹಾಲ್‌ಮಾರ್ಕ್ ಕಡ್ಡಾಯ
ಏ.1ರಿಂದ ಆರು ಸಂಖ್ಯೆಯ ಹಾಲ್‌ಮಾರ್ಕ್ ಯೂನಿಕ್ ಐಡೆಂಟಿಫಿಕೇಶನ್ ನಂಬರ್ (ಎಚ್‌ಯುಐಡಿ) ಇರುವ ಚಿನ್ನಾಭರಣ ಮಾರಾಟಕ್ಕೆ ಮಾತ್ರ ಅವಕಾಶವಿದೆ ಎಂದು ಕೇಂದ್ರ ಸರ್ಕಾರ ಆದೇಶಿಸಿದೆ. ಅದರ ಪ್ರಕಾರ, ಎಚ್‌ಯುಐಡಿ ನಂಬರ್ ಇಲ್ಲದ ಹಳೆಯ ಹಾಲ್‌ಮಾರ್ಕ್ ಚಿನ್ನಾಭರಣ ಮಾರಾಟಕ್ಕೆ ಮಾ.31ರ ನಂತರ ಅವಕಾಶವಿರುವುದಿಲ್ಲ. ಏತಕ್ಕಾಗಿ ಈ ನಿರ್ಧಾರ? ಗ್ರಾಹಕರ ಹಿತರಕ್ಷಣೆಯ ದೃಷ್ಟಿಯಿಂದ ಈ ಕ್ಷೇತ್ರದ ಪಾಲುದಾರರ ಸಭೆಯ ಬಳಿಕ ಗ್ರಾಹಕರ ವ್ಯವಹಾರಗಳ ಸಚಿವಾಲಯವು ಜ.18ರಂದು ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಂಡಿತು. …
Read More »ಮೂರೂ ಪಕ್ಷಗಳಲ್ಲಿ ಎಪತ್ತು ವರ್ಷ ದಾಟಿದವರಿಗೆ ಟಿಕೆಟ್ “ಆಪತ್ತು’ ? ಹೊಸ ಮುಖಗಳಿಗೆ ಅವಕಾಶ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮೂರೂ ಪಕ್ಷಗಳಲ್ಲಿ ಎಪತ್ತು ವರ್ಷ ದಾಟಿದವರಿಗೆ ಟಿಕೆಟ್ “ಆಪತ್ತು’ ಎದುರಾಗಿದೆ. ಹೊಸ ಮುಖಗಳಿಗೆ ಅವಕಾಶ ಕೊಡಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ 70 ವರ್ಷ ದಾಟಿದವರನ್ನು “ಮಾರ್ಗದರ್ಶಿ’ ಮಂಡಳಿಗೆ ಸೇರಿಸುವ ಆತಂಕವೂ ಕಾಡುತ್ತಿದೆ. ಟಿಕೆಟ್ ಕೈ ತಪ್ಪುವ ಭೀತಿಯಿಂದ ಕೆಲವರು ಮೊದಲೇ ಶಸ್ತ್ರತ್ಯಾಗ ಮಾಡಿ ಪುತ್ರರಿಗೆ ಪಟ್ಟ ಕಟ್ಟುವ ಘೋಷಣೆ ಮಾಡಿ ಬಚಾವ್ ಆಗಿದ್ದರೆ ಮತ್ತೆ ಕೆಲವರಿಗೆ ಟಿಕೆಟ್ “ಅರ್ಧಚಂದ್ರ’ ಎಂಬಂತಾಗಿದೆ. 90 ವರ್ಷದ …
Read More »ಮೊಬೈಲ್‌ಗೆ ಬಂದ ಲಿಂಕ್ ಕ್ಲಿಕ್ಕಿಸಿ 1 ಲಕ್ಷ ರೂ. ಕಳೆದುಕೊಂಡರು!
ಮೊಬೈಲ್‌ಗೆ ಆಗಂತುಕನೊಬ್ಬ ಕಳುಹಿಸಿದ್ದ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ 1 ಲ.ರೂ.ಕಡಿತಗೊಂಡ ಘಟನೆ ನಡೆದಿದೆ. ಎಚ್‌ಡಿಎಫ್ಸಿ ಬ್ಯಾಂಕ್‌ನ ಕುಂದಾಪುರ ಶಾಖೆಯಲ್ಲಿ ಖಾತೆ ಹೊಂದಿರುವ ಸುಧಾಕರ ಕಾಂಚನ್ ಅವರಿಗೆ ಮಾ.4ರಂದು ಅಪರಿಚಿತನೊಬ್ಬ ಪಾನ್‌ಕಾರ್ಡ್ ಅಪ್‌ಡೇಟ್ ಮಾಡಲು ಲಿಂಕ್ ಕಳುಹಿಸಿದ್ದ. ಅದನ್ನು ಬ್ಯಾಂಕ್‌ನಿಂದ ಕಳುಹಿಸಲಾಗಿದೆ ಎಂದು ನಂಬಿಸಿದ್ದಾನೆ. ಅದನ್ನು ಕ್ಲಿಕ್ ಮಾಡಿದ ಪರಿಣಾಮ ಖಾತೆಯಿಂದ ಹಣ ಕಡಿತವಾಗಿದ್ದು, ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಮಾರ್ಚ್ 9ರಂದು ‘ಕರ್ನಾಟಕ ಬಂದ್’ಗೆ ಕರೆ ನೀಡಿದ ಕಾಂಗ್ರೆಸ್
ತುಮಕೂರು: ಮಾರ್ಚ್ ರಂದು ಕರ್ನಾಟಕದಾದ್ಯಂತ ಬಂದ್ಗೆ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರು ಕರೆ ನೀಡಿದ್ದಾರೆ. ಅವರು ಇಂದು ಕೊರಟಗೆರೆಯಲ್ಲಿ ನಡೆದ ಪಾರ್ಟಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಮಾರ್ಚ್ 9ರಂದು ಬೆಳಗ್ಗೆ 9ರಿಂದ ಬೆಳಗ್ಗೆ 11 ಗಂಟೆಯವರೆಗೆ ರಾಜ್ಯಾದ್ಯಂತ ಬಂದ್ಗೆ (Karnataka Bandh) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. 2 ಗಂಟೆ ಕಾಲ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ಗೆ ಸಹಕರಿಸಲು ಮನವಿ ಮಾಡಿಕೊಂಡಿದ್ದಾರೆ. …
Read More »ಲೋಕಾಯುಕ್ತ’ ವರದಿ ಬಂದ ಬಳಿಕ ‘ಮಾಡಾಳ್ ವಿರೂಪಾಕ್ಷಪ್ಪ’ ವಿರುದ್ಧ ಕ್ರಮ : ಪ್ರಹ್ಲಾದ್ ಜೋಶಿ
ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಪುತ್ರನ ಮನೆ ಮೇಲಿನ ಲೋಕಾಯುಕ್ತ ದಾಳಿ ಪ್ರಕರಣವನ್ನು ಕಾಂಗ್ರೆಸ್ ಖಂಡಿಸಿದೆ. ಮಾಡಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವರದಿ ಬಂದ ಬಳಿಕ ವಿರೂಪಾಕ್ಷಪ್ಪ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಇನ್ನೂ, ಮಂಡ್ಯ ಸಂಸದೆ ಸುಮಲತಾ ( Sumalatha) ಬಿಜೆಪಿ …
Read More »“ಈಗಿನ ಜನರೇಷನ್‌ಗೆ ಲೈಂಗಿಕ ಕ್ರಿಯೆಗೂ ಸೋಮಾರಿತನ”: ಕಂಗನಾ ರನೌತ್
ಬಾಲಿವುಡ್ ಫೈರ್ ಬ್ರಾಂಡ್ ಕಂಗನಾ ರನೌತ್ ವಿವಾದಗಳನ್ನು ಸದಾ ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಪ್ರತಿದಿನ ಒಂದಲ್ಲ ಒಂದು ಟಾಪಿಕ್ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕಂಗನಾ ಕಾಮೆಂಟ್ಸ್ ಸದ್ದು ಮಾಡುತ್ತಿರುತ್ತದೆ. ಇದೀಗ ಮದುವೆ, ಲೈಂಗಿಕ ಕ್ರಿಯೆ ಬಗ್ಗೆ ಕಂಗನಾ ಹಾಕಿರುವ ಇನ್‌ಸ್ಟಾಗ್ರಾಂ ಪೋಸ್ಟ್ ವೈರಲ್ ಆಗ್ತಿದೆ. ಇತ್ತೀಚೆಗೆ ಶೃಂಗಾರಂ, ಮದುವೆಯ ಕಾಮೆಂಟ್ಸ್ ವೈರಲ್ ಆಗುತ್ತಿದೆ. ಬೋಲ್ಡ್ ಸ್ಟೇಟ್‌ಮೆಂಟ್ ಕೊಡುವುದರಲ್ಲಿ ಬಾಲಿವುಡ್ ಕ್ವೀನ್ ಸದಾ ಮುಂದಿರುತ್ತಾರೆ. ತಮ್ಮ ಕಾಮೆಂಟ್ ವಿವಾದ ಸೃಷ್ಟಿಸಿದರು ಅದನ್ನು ಧೈರ್ಯವಾಗಿ …
Read More »ಕರ್ನಾಟಕ ಚುನಾವಣೆಗೆ ಮುಹೂರ್ತ ಫಿಕ್ಸ್..! ಯಾವಾಗ ಚುನಾವಣೆ..?
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೂರು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿವೆ. ಜೆಡಿಎಸ್ ಎಲ್ಲರಿಗಿಂತಲೂ ಮುಂದೆ ಎನ್ನುವಂತೆ ತಿಂಗಳ ಹಿಂದೆಯೇ ಚುನಾವಣಾ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಪ್ರಚಾರ ನಡೆಸುತ್ತಿದೆ. ಕಾಂಗ್ರೆಸ್, ಬಿಜೆಪಿ ಕೂಡ ಪ್ರಚಾರದಲ್ಲಿ ಹಿಂದೆ ಬಿದ್ದಿಲ್ಲ. ಈಗಾಗಲೇ ಒಂದೊಂದು ರೌಂಡ್ ಪ್ರಚಾರ ಮುಗಿಸಿದ್ದು, ಶೀಘ್ರದಲ್ಲೇ ಟಿಕೆಟ್ ಘೋಷಣೆ ಮಾಡುವ ಕಸರತ್ತು ನಡೆಸುತ್ತಿದ್ದಾರೆ. ಈ ನಡುವೆ ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಲು ಮುಹೂರ್ತ ಕೂಡಿ …
Read More »ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರಾ ಮತ್ತೊಬ್ಬ ಸಚಿವ ?
ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಹಲವಾರು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಸಚಿವ ನಾರಾಯಣಗೌಡ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ಕೆ ಆರ್ ಪೇಟೆಯಲ್ಲಿ ಮಾತನಾಡಿದ್ದ ಸಚಿವ ನಾರಾಯಣಗೌಡ, ತಮಗೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ನಿಜ. ಕ್ಷೇತ್ರದ ಜನತೆ ಹಾಗೂ ಅಭಿಮಾನಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದರು. ಇದೀಗ ಮತ್ತೊಬ್ಬ …
Read More »BJP ಅಂದರೆ ಭ್ರಷ್ಟ ಜನತಾ ಪಾರ್ಟಿ: ಮಧು ಬಂಗಾರಪ್ಪ
ಶಿವಮೊಗ್ಗ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಲಂಚ ಪ್ರಕರಣ ಮತ್ತು ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಕೆಪಿಸಿಸಿ ಹಿಂದುಳಿದ ವರ್ಗಗಳ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. ಬಿಜೆಪಿ ಈವರೆಗೆ ಬ್ಯುಸಿನೆಸ್ (ವ್ಯವಹಾರ) ಜನತಾ ಪಕ್ಷವಾಗಿತ್ತು. ಈಗ ಭ್ರಷ್ಟ ಜನತಾ ಪಕ್ಷ ಎಂದು ಸಾಬೀತಾಗಿದೆ. ‘ನಾನು ತಿನ್ನುವುದಿಲ್ಲ; ಬೇರೆಯವರಿಗೂ ತಿನ್ನಲು ಬಿಡುವುದಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿದ್ದರು. ಆದರೆ, …
Read More »