Breaking News

ರಾಷ್ಟ್ರೀಯ

ಮಹಿಳೆಯರಿಗೆ ತುಡಿತ-ಮಿಡಿತಕ್ಕೆ 12ನೇ ಶತಮಾನದಲ್ಲೇ ವೇದಿಕೆ ಕಲ್ಪಿಸಿದ ಶರಣರನ್ನು ಎಷ್ಟು ನೆನೆದರೂ ಸಾಲದು…; ಡಾ. ಗುರುದೇವಿ ಹುಲ್ಲೆಪ್ಪನ್ನವರಮಠ

ಮಹಿಳೆಯರಿಗೆ ತುಡಿತ-ಮಿಡಿತಕ್ಕೆ 12ನೇ ಶತಮಾನದಲ್ಲೇ ವೇದಿಕೆ ಕಲ್ಪಿಸಿದ ಶರಣರನ್ನು ಎಷ್ಟು ನೆನೆದರೂ ಸಾಲದು…; ಡಾ. ಗುರುದೇವಿ ಹುಲ್ಲೆಪ್ಪನ್ನವರಮಠ ಬೆಳಗಾವಿಯಲ್ಲಿ ಶಿವಶರಣೆ ಅಕ್ಕಮಹಾದೇವಿಯ ಜಯಂತಿ ಮಹಿಳೆಯರು ವ್ಯಕ್ತವಾಗಲು ವೇದಿಕೆಯನ್ನು ಕಲ್ಪಿಸಿ, ಇಂದು ಮಹಿಳೆಯರು ಮುಖ್ಯವಾಹಿನಿಗೆ ಬರಲು 12ನೇ ಶತಮಾನದಲ್ಲಿ ಶರಣರು ನೀಡಿದ ಅವಕಾಶವೇ ಕಾರಣವೆಂದು ಡಾ. ಗುರುದೇವಿ ಹುಲ್ಲೆಪ್ಪನ್ನವರಮಠ ಹೇಳಿದರು. ಇಂದು ಬೆಳಗಾವಿಯಲ್ಲಿ ಜಿಲ್ಲಾ ಮಹಿಳಾ ಸಂಘಟನೆಗಳ ಒಕ್ಕೂಟ ಧಾರಿಣಿ ಹಾಗೂ ಕನ್ನಡ ಭವನದ ಸಂಯುಕ್ತಾಶ್ರಯದಲ್ಲಿ ಶಿವಶರಣೆ ಅಕ್ಕಮಹಾದೇವಿಯ ಜಯಂತಿಯನ್ನು ಆಚರಿಸಲಾಯಿತು. …

Read More »

ಗಣಿ ಮಾಲೀಕನಿಂದ ಪ್ರತಿಭಟನಾಕಾರನ ಮೇಲೆ ಫೈರಿಂಗ್​ ಆರೋಪ

ಚಿಕ್ಕಬಳ್ಳಾಪುರ: ಗಣಿಗಾರಿಕೆ ಮಾಡಲು ರಸ್ತೆ ಮಾಡುವ ವಿಚಾರಕ್ಕೆ ನಡೆದ ಎರಡು ಗುಂಪುಗಳ ಗಲಾಟೆಯಲ್ಲಿ ಗಣಿ ಮಾಲೀಕನು ರೈತನ ಮೇಲೆ ಗುಂಡು ಹಾರಿಸಿರುವ ಆರೋಪ ಕೇಳಿಬಂದಿದೆ. ಪ್ರತಿಭಟನಾಕಾರನ ತೊಡೆ ಭಾಗಕ್ಕೆ ಗುಂಡೇಟು ತಗಲಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಚೇನಹಳ್ಳಿ ತಾಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲು ಗಣಿಗಾರಿಕೆ, ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ ಮಾಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಇಂದು ಮಧ್ಯಾಹ್ನ 1:30ರ ಸಮಯದಲ್ಲಿ ಗಲಾಟೆ …

Read More »

ಮನೆ ಹೊಕ್ಕು RSS ಮುಖಂಡನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

ಧಾರವಾಡ, ಏಪ್ರಿಲ್​ 23: ಮನೆ ಹೊಕ್ಕು ರಾಷ್ಟ್ರೀಯ ಸ್ವಯಂಸೇವಕ ಸಂಘಟನೆ (RSS) ಮುಖಂಡನಿಗೆ ನಾಲ್ವರು ಮುಸ್ಲಿಂ ಯುವಕರು ಹಲ್ಲೆ ಮಾಡಿರುವ ಘಟನೆ ಧಾರವಾಡ (Dharwad) ನಗರದ ಹಳೆ ತಹಸೀಲ್ದಾರ್ ಕಚೇರಿ ಓಣಿಯಲ್ಲಿ ನಡೆದಿದೆ. ಸಿರೀಶ್ ಬಳ್ಳಾರಿ ಹಲ್ಲೆಗೊಳಗಾದ ಆರ್​ಎಸ್​ಎಸ್​ ಮುಖಂಡ. ಯುವಕರು ಸಿಗರೇಟ್ ಸೇದುತ್ತಾ ನಿಂತಿದ್ದರು. ಈ ವೇಳೆ, ಸಿರೀಶ್​ ಬಳ್ಳಾರಿಯವರು ದೂರಕ್ಕೆ ಹೋಗಿ ಸಿಗರೇಟು ಸೇದುವಂತೆ ಹೇಳಿದ್ದಾರೆ. ಇಷ್ಟಕ್ಕೆ ಆಕ್ರೋಶಗೊಂಡ ನಾಲ್ವರು ಮುಸ್ಲಿಂ ಯುವಕರು, ಸಿರೀಶ್​ ಬಳ್ಳಾರಿಯವರ ಮನೆಯೊಳಗೆ ಹೊಕ್ಕು …

Read More »

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ

ನವದೆಹಲಿ, (ಏಪ್ರಿಲ್ 23): ಪ್ರವಾಸಕ್ಕೆಂದು ಹೋಗಿ ಕಾಶ್ಮೀರದಲ್ಲಿ (Kashmir) ಸಿಲುಕಿಕೊಂಡಿರುವ ಕರ್ನಾಟಕದ ಜನರಿಗೆ ತವರಿಗೆ ವಾಪಸ್ ಆಗಲು ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ, ಸ್ಥಳೀಯ ಸಚಿವರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಮಾತುಕತೆ ನಡೆಸಿ ಸೂಕ್ತ ವ್ಯವಸ್ಥೆ ಮಾಡಿದ್ದಾರೆ. ಇನ್ನು ಈ ಸಂಬಂಧ ಇಂದು (ಏಪ್ರಿಲ್ 23) ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕಚೇರಿ, ಸ್ಥಳೀಯ ಸಚಿವರ ಜೊತೆ ಕೇಂದ್ರ ಸಚಿವ …

Read More »

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

ಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ ತನ್ನತ್ತ‌ ತಿರುಗಿ ನೋಡಬೇಕೆಂಬ ಅಧಮ್ಯ ವಿಶ್ವಾಸ. ತಂದೆ – ತಾಯಿಗೆ ಮಗನ ಮೇಲೆ ಬೆಟ್ಟದಷ್ಟು ನಿರೀಕ್ಷೆ. ಅದು ಹುಸಿ ಆಗಲಿಲ್ಲ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರ‍್ಯಾಂಕ್ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಹೌದು, ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ …

Read More »

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು. ನಂತರ …

Read More »

ಯುಪಿಎಸ್​​ಸಿ ಪರೀಕ್ಷೆಯಲ್ಲಿ ಹಾಸನದ ಕೆ.ಎಸ್. ಧನ್ಯಗೆ 982ನೇ ರ‍್ಯಾಂಕ್

ಹಾಸನ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​​ಸಿ) ಈ ಸಾಲಿನ ಪರೀಕ್ಷೆಯಲ್ಲಿ ಸಕಲೇಶಪುರ ಪಟ್ಟಣದ ಮಲ್ಲಿಕಾರ್ಜುನನಗರದ ನಿವಾಸಿ ಕೆ.ಎಸ್.ಧನ್ಯ 982ನೇ ರ‍್ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ಅವರು ತಮ್ಮ ಮೂರನೇ ಪ್ರಯತ್ನದಲ್ಲಿ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಧನ್ಯ ಅವರು ಇಲ್ಲಿನ ಸಾಂಬಾರ ಮಂಡಳಿಯ ನಿವೃತ್ತ ಸಹಾಯಕ ನಿರ್ದೇಶಕ ಟಿ. ಸುಬ್ರಹ್ಮಣ್ಯ ಹಾಗೂ ಸಕಲೇಶಪುರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಹಿರಿಯ ಶಿರಸ್ತೇದಾರ್ ಪಿ. ವಿಜಯಕುಮಾರಿ ದಂಪತಿಯ ಪುತ್ರಿಯಾಗಿದ್ದಾರೆ.ಈ ಹಿಂದೆ ಮೂರು ಸಲ …

Read More »

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ

ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಜಾಂಬೋಟ್ಟಿಯ ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿದರು. ಜಾಂಬೋಟ್ಟಿಯ ಅರುಣ ಮಹಾರಾಜರ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿ …

Read More »

ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ

ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕಗ್ಗೋಡದ ಗೋ ಶಾಲೆಯ ದನಗಳನ್ನು ಬೇರೆಡೆ ಸಾಗಾಟ ಮಾಡಲಾಗ್ತಿದೆ ಎಂಬ ಮುಸ್ಲಿಂ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಾನಹಾನಿ ಕೇಸ್ ಹಾಕಲಾಗುತ್ತದೆ. ಸಿದ್ದೇಶ್ವರ ಸಂಸ್ಥೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದೇವೆ. ಪತ್ರಿಕಾಗೋಷ್ಠಿಯಲ್ಲಿ ಇದ್ದವರು ಎಲ್ಲರ ಮೇಲೆ ಮಾನಹಾನಿ ಕೇಸ್ ಹಾಕಲಾಗುತ್ತದೆ. ದಾಖಲೆ ಇಲ್ಲದೇ ಆರೋಪ ಮಾಡಿದ್ದಾರೆ. …

Read More »

ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ

ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ ಬೈಲಹೊಂಗಲ ಪಟ್ಟಣದಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯನ್ನು ರಾಜ್ಯಾಧ್ಯಕ್ಷರಾದ ಸುನೀಲ ಎಂ ಎಸ್ ಹಾಗೂ ರಾಜ್ಯದ ಎಲ್ಲಾ ಕರ್ನಾಟಕ ಯುವ ರಕ್ಷಣಾ ವೇದಿಕೆ ಪದಾಧಿಕಾರಿಗಳ ಮುಂದಾಳತ್ವದಲ್ಲಿ ಬೈಲಹೊಂಗಲ ಪಟ್ಟಣದಲ್ಲಿ ಘಟಕವನ್ನು ಸ್ಥಾಪನೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಕನ್ನಡದ ಹಬ್ಬ ಕನ್ನಡದ ಕಣ್ಮಣಿ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿದ್ದರು ಈ ಕಾರ್ಯಕ್ರಮವನ್ನು ಮೊದಲಿಗೆ ಬೈಲಹೊಂಗಲ ಘಟಕದ ಅಧ್ಯಕ್ಷರಾದ ರಾಚಪ್ಪ ಪಾಟೀಲ್ ಎಲ್ಲರನ್ನೂ …

Read More »