ಯಾದಗಿರಿ: ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಲ್ಬಣಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ. ಸಾವಿತ್ರಮ್ಮ (35) ಮೃತ ಮಹಿಳೆ. ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿರುವ ಪರಿಣಾಮ ಕಲುಷೀತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣಗೊಂಡಿದೆ. ಇದುವರೆಗೆ 30 ಜನರಲ್ಲಿ ಕಾಣಿಸಿಕೊಂಡ ವಾಂತಿ ಭೇದಿ ಕಾಣಿಸಿಕೊಂಡಿದೆ. ನಿನ್ನೆ 24 ,ಇಂದು 6 ಜನರಿಗೆ ಕಾಣಿಸಿಕೊಂಡ ವಾಂತಿ …
Read More »ಬೆಂಕಿ ಮಳೆ ಸುರಿದ್ರೂ ಏನೂ ಆಗಲ್ಲ!: ವಿನೂತನ ಜೀವರಕ್ಷಕ ಜಾಕೆಟ್ ಅಭಿವೃದ್ಧಿ
ಬೆಂಗಳೂರು: ಈ ಜಾಕೆಟ್ ಹಾಕಿಕೊಂಡಾಗ, ನಿಮ್ಮ ಮೇಲೆ ಬೆಂಕಿಯ ಮಳೆಯೇ ಸುರಿದರೂ ನೀವು ಒಳಗೆ “ಕೂಲ್’ ಆಗಿರ್ತೀರಾ. ಒಂದೇ ಒಂದು ಗಾಯ ಕೂಡ ಆಗುವುದಿಲ್ಲ! ವೀರಾ ಎಂಬ ಕಂಪನಿಯು ಈ ವಿನೂ ತನ ಜೀವರಕ್ಷಕ ಜಾಕೆಟ್ ಅಭಿವೃದ್ಧಿಪಡಿಸಿದೆ. ಇದನ್ನು ಧರಿಸಿದರೆ, ನೀವು -200 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಲ್ಲಿರಲಿ ಅಥವಾ 1000 ಡಿಗ್ರಿ ಸೆಲ್ಸಿಯಸ್ ಇರಲಿ ನಿಮ್ಮ ದೇಹದ ತಾಪಮಾನದಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ. ಇದರ ಹೆಸರು “ಟಾರ್ಡಿಗ್ರೇಡ್ ಜಾಕೆಟ್’. ಅತಿ ಎತ್ತರದ …
Read More »ಚುನಾವಣೆ ಪ್ರಾರಂಭ ಆದಾಗ ಐಟಿ ದಾಳಿ ಆಗುತ್ತದೆ: H.D.K.
ಹಾವೇರಿ: ಯಾವ ರಾಜ್ಯದಲ್ಲಿ ಚುನಾವಣೆ ಪ್ರಾರಂಭ ಆಗುತ್ತದೋ, ಆ ರಾಜ್ಯದಲ್ಲಿ ವಿರೋಧ ಪಕ್ಷಗಳ ಮುಖಂಡರ ಮೇಲೆ ದಾಳಿ ನಾಡೆಯುತ್ತವೆ. ಬಿಜೆಪಿ ಸರ್ಕಾರ ಬಂದ ಮೇಲೆ ಇದು ನಡೆದುಕೊಂಡು ಬಂದಿದ್ದು, ಬಿಜೆಪಿಯವರ ಚುನಾವಣೆ ಕ್ರಮವೇ ಅದು. ಗುಜರಾತ್ ಘಟನೆ ನೈಜ ಚಿತ್ರಣ ಮಾಡಿದರು ಅಂತ ಹೇಳಿ ಬಿಬಿಸಿಯವರನ್ನೇ ಬಿಡಲಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ರಾಣೆಬೆನ್ನೂರು ತಾಲೂಕು ಹಲಗೇರಿ ಗ್ರಾಮದಲ್ಲಿ ಮಾತನಾಡಿ, ವಿರೋಧ ಪಕ್ಷಗಳ ಮುಖಂಡರ ಮೇಲೆ ಐಟಿ …
Read More »B,S,Y,ಗೆ ಅರಳುಮರಳು ಎಂದ ಸಿದ್ದರಾಮಯ್ಯ,ಕಾಂಗ್ರೆಸ್ಸಿಗರು ತಲೆ ತಿರುಕರು ಎಂದ B,S,Y,
ಬೆಂಗಳೂರು: ಸರ್ಕಾರದ ಟೆಂಡರ್ ಪ್ರಕ್ರಿಯೆಯಲ್ಲಿ ಗೋಲ್ ಮಾಲ್ ಎಂಬ ಕಾಂಗ್ರೆಸ್ ಆರೋಪಕ್ಕೆ, ಕಿಡಿಕಾರಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಕಾಂಗ್ರೆಸ್ ನಾಯಕರು ತಲೆ ತಿರುಕರು, ಅವರು ಇಲ್ಲಸಲ್ಲದ ಅರೋಪ ಮಾಡುತ್ತಿದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಎಲ್ಲಾ ಟೆಂಡರ್ ರದ್ದುಗೊಳಿಸುವುದಾಗಿ ಡಿ.ಕೆ.ಶಿವಕುಮಾರ್ ಹಾಗು ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ. ಅದಕ್ಕೆ …
Read More »65 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಫ್ಡಿಎ
ವಿಜಯನಗರ: ಎಫ್ಡಿಎ(FDA) ಅಧಿಕಾರಿಯೊಬ್ಬರು 65 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೂವಿನ ಹಡಗಲಿಯ ತಹಶಿಲ್ದಾರರ ಕಚೇರಿಯ ಎಫ್ಡಿಎ ವೆಂಕಟಸ್ವಾಮಿ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ನೌಕರ. ಹಗರನೂರು ಗ್ರಾಮದ ನಿವೃತ್ತ ಶಿಕ್ಷಕ ಲಕ್ಕಪ್ಪ ಎಂಬುವವರು ನಾಲ್ಕು ಎಕರೆ ಜಮೀನಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ಕಲಂ 11 ತೆಗೆದು ಹಾಕಲು ಅರ್ಜಿ ಸಲ್ಲಿಕೆ ಮಾಡಿದ್ದರು. ಈ ವೇಳೆ ವೆಂಕಟಸ್ವಾಮಿ 70 ಸಾವಿರ ರೂ. ಹಣ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಖಚಿತ ಮಾಹಿತಿ …
Read More »ಅಚ್ಚರಿ ತಂದ ಅಪರೂಪದ ನಾಗರಹಾವು
ಕಾರವಾರ: ನಾಗರ ಹಾವಿನ ತಲೆಯ ಹಿಂದೆ ಹೆಡ್ ಫೋನ್ ಮಾದರಿಯ ಚಿನ್ಹೆಯಿರುವುದು ಸಾಮಾನ್ಯ. ಆದರೆ, ಅಂಕೋಲಾದಲ್ಲಿ ಸೋಮವಾರ ಹಿಡಿದ ಹಾವಿನ ತಲೆಯ ಮೇಲೆ ವಿಭಿನ್ನ ರೀತಿಯ ಚಿನ್ಹೆ ಗಮನ ಸೆಳೆದಿದೆ. ಉರಗ ತಜ್ಞ ಮಹೇಶ ನಾಯ್ಕ ಹಿಡಿದ ಹಾವಿನ ತಲೆಯ ಮೇಲೆ ಮನುಷ್ಯನ ಕಣ್ಣು, ಹುಬ್ಬು, ಕೆಳಗೆ ಬಾಯಿ, ಮೂಗು ಮುಂತಾದ ಚಿತ್ರ ಬಿಡಿಸಿದಂತೆ ಇದೆ. ಕೆಲವು ಹಾವುಗಳಲ್ಲಿ ಮಾತ್ರ ಇಂಥ ಚಿತ್ರ ಕಂಡುಬರುತ್ತದೆ ಎನ್ನುತ್ತಾರೆ ಮಹೇಶ ನಾಯ್ಕ.
Read More »ಎಂಇಎಸ್ ನಾಯಕರಿಂದ ಮಹಾರಾಷ್ಟ್ರ ಸಿ.ಎಂ ಏಕನಾಥ ಶಿಂದೆ ಭೇಟಿ
ಬೆಳಗಾವಿ: ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ, ಗಡಿ ಉಸ್ತುವಾರಿ ಸಚಿವರಾದ ಚಂದ್ರಕಾಂತ್ ಪಾಟೀಲ ಹಾಗೂ ಶಂಭುರಾಜ್ ದೇಸಾಯಿ ಅವರನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಮಂಗಳವಾರ ಭೇಟಿಯಾದರು. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬೆಳವಣಿಗೆಗಳು ಹಾಗೂ ಫೆ.28ರಂದು ಎಂಇಎಸ್‌ನಿಂದ ಆಯೋಜಿಸಿರುವ ಮುಂಬೈ ಚಲೋ ಹೋರಾಟದ ಕುರಿತು ಚರ್ಚಿಸಿದರು. ಮಹಾರಾಷ್ಟ್ರ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಕೇಶಕುಮಾರ್, ಎಂಇಎಸ್ ಕಾರ್ಯಾಧ್ಯಕ್ಷ ಮನೋಹರ್ ಕಿಣೇಕರ್ ಇತರರಿದ್ದರು.
Read More »ಹಲ್ಲೆ ಯತ್ನ: ಕ್ರಮಕ್ಕೆ ಆಗ್ರಹಿಸಿ ಮನವಿ
ಬೆಳಗಾವಿ: ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಈಚೆಗೆ ರೈತ ಹೋರಾಟಗಾರ, ಕಬ್ಬು ನಿಯಂತ್ರಣ ಮಂಡಳಿ ಸದಸ್ಯ ಸಿದಗೌಡ ಮೋದಗಿ ಅವರ ಮೇಲೆ ಕೆಲವರು ಹಲ್ಲೆಗೆ ಯತ್ನಿಸಿದ್ದಾರೆ. ಆರೋಪಿಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಕೋರಿ ವಿವಿಧ ಸಂಘಟನೆಗಳು ಸದಸ್ಯರು ಸೋಮವಾರ ನಗರ ಪೊಲೀಸ್ ಕಮಿಷನರ್‌ಗೆ ಮನವಿ ಸಲ್ಲಿಸಿದರು. ‘ಸಿದಗೌಡ ಮೋದಗಿ ಅವರು ಫೆ.4ರಂದು ಕಾರ್ಖಾನೆಗೆ ನಾಮನಿರ್ದೇಶನ ಸಂಬಂಧ ವರದಿ ಮಾಡಿದ ನಂತರ, ಅವರನ್ನು ಕಾರ್ಖಾನೆಯ ಒಂದು ಕೋಣೆಯಲ್ಲಿ ನಾಲ್ಕು …
Read More »ಖಾತೆ ಬದಲಾವಣೆಗೆ ಲಂಚ: ಪ್ರಥಮದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ
ಬಳ್ಳಾರಿ (ಹೂವಿನಹಡಗಲಿ): ಪಹಣಿಯಲ್ಲಿ ಹೆಸರು ಬದಲಾವಣೆ ಮಾಡಿಕೊಡಲು ಸಾವಿರಾರು ರೂ. ಲಂಚ ಕೇಳಿದ್ದ ಹಡಗಲಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ವೆಂಕಟಸ್ವಾಮಿ ಎನ್ನುವವರು ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಹಗರನೂರು ಗ್ರಾಮಾದ ನಿವೃತ್ತ ಶಿಕ್ಷಕ ಲಕ್ಕಪ್ಪಾ ಅಂಗಡಿಯವರ ತಾಯಿಗೆ ಸೇರಿದ 4 ಎಕರೆ ಜಮಿನಿಗೆ ಸಂಬಂಧಿಸಿದಂತೆ ಸರ್ವೆನಂ. 330\ಎ ಪಹಣಿ ಕಲಂ 11 ರಲ್ಲಿ ಸರ್ಕಾರಿ ಜಮಿನು ಎಂದು ಬಂದಿದ್ದು ಇದನ್ನು ತಗೆದು ಹಾಕಲು ಅರ್ಜಿದಾರ ಲಕ್ಕಪ್ಪ ಅಂಗಡಿಯ 2014 …
Read More »ಅಸಮರ್ಪಕ ಸಮವಸ್ತ್ರ, ಶೂ ವಿತರಣೆಗೆ ಹೈಕೋರ್ಟ್ ತರಾಟೆ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಮವಸ್ತ್ರ ಮತ್ತು ಶೂ ವಿತರಿಸಿರುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡದ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಹಿರಿಯ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಎಲ್ಲ ಸರಿಹೋಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲು ಚೀಲ ನೀಡಬೇಕು ಎಂದು …
Read More »